ದಿನಭವಿಷ್ಯ | ಜನವರಿ 4, 2021
ಜನವರಿ 04, 2021ರ ದ್ವಾದಶ ರಾಶಿಗಳ ದಿನಭವಿಷ್ಯ
ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ದಕ್ಷಿಣಾಯನ, ಮಾರ್ಗಶಿರ ಮಾಸ, ಹೇಮಂತ ಋತು, ಕೃಷ್ಣಪಕ್ಷ, ಪಂಚಮಿ, ಸೋಮವಾರ, ಜನವರಿ 04, 2021. ಪುಬ್ಬೆ ನಕ್ಷತ್ರ, ರಾಹುಕಾಲ: ಬೆಳಿಗ್ಗೆ 8.10 ರಿಂದ 9.33. ಬೆಂಗಳೂರಿನಲ್ಲಿ ಸೂರ್ಯೋದಯ: ಬೆಳಿಗ್ಗೆ 6.47. ಸೂರ್ಯಾಸ್ತ: ಸಂಜೆ 5.54
ರಾಶಿ ಭವಿಷ್ಯ
ಮೇಷ: ಕೆಲಸದಲ್ಲಿ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲ ಕೂಡಿ ಬರುವುದು. ವಾದ-ವಿವಾದ, ಹಠ ಸಾಧನೆ ಬೇಡ. ಶುಭ ಸಂಖ್ಯೆ: 3
ವೃಷಭ: ವೃತ್ತಿಪರತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಶುಭಸಂಖ್ಯೆ: 5
ಮಿಥುನ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು. ಶುಭ ಸಂಖ್ಯೆ: 9
ಕಟಕ: ಅಪಮಾನ, ಅಪವಾದದಂತಹ ಸಮಸ್ಸೆಗೆ ಸಿಲುಕದಂತೆ ಜಾಗರೂಕರಾಗಿರಿ. ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವುದು ಉತ್ತಮ. ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು. ಶುಭ ಸಂಖ್ಯೆ: 4
ಸಿಂಹ: ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟ ಸಾಲ ಮರುಪಾವತಿಯಾಗುವುದು. ಶುಭ ಸಂಖ್ಯೆ: 1
ಕನ್ಯಾ: ಅನಿರೀಕ್ಷಿತ ಸಂಚಾರ ಒದಗಿ ಬಂದರೂ ತೃಪ್ತಿದಾಯಕವೆನ್ನಬಹುದು. ವ್ಯಾಪಾರಾದಿ ಉದ್ಯಮಗಳಲ್ಲಿ ಅಪೇಕಿಸಿದಂತೆ ಪ್ರಗತಿ. ಲಾಭ ತೋರಿಬರುತ್ತದೆ. ಹೊಸದಾದ ಆಲೋಚನಾ ಸಿದ್ಧಿ. ವಿಪರೀತ ಖರ್ಚು. ಶುಭ ಸಂಖ್ಯೆ: 7
ತುಲಾ: ಗುರಿ ಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವುದು. ಶುಭ ಸಂಖ್ಯೆ: 7
ವೃಶ್ಚಿಕ: ತಪ್ಪುಗಳನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 6
ಧನು: ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವುದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವುದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವದಿಲ್ಲ. ಶುಭ ಸಂಖ್ಯೆ: 9
ಮಕರ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 5
ಕುಂಭ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿ ಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 4
ಮೀನ: ಎಲ್ಲವೂ ಇದ್ದಂತೆ ಇರಲಿ ಎಂಬ ಮನೋಭಾವನೆ ಇರುವದು. ಕೆಲಸದಲ್ಲಿ ಬದಲಾವಣೆ ತರಲು ಪ್ರಯತ್ನಿಸಿ. ವಿದೇಶ ಪ್ರಯಾಣದ ಯೋಗವಿದೆ. ಉದ್ಯೋಗದಲ್ಲಿ ಪ್ರಗತಿ ಮುಂದುವರೆಯುವುದು. ಶುಭ ಸಂಖ್ಯೆ: 2
(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ:9972848937)