ದಿನಭವಿಷ್ಯ | ಜನವರಿ 10, 2021
ಜನವರಿ 10, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನಭವಿಷ್ಯ.

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ದಕ್ಷಿಣಾಯನ, ಮಾರ್ಗಶಿರ ಮಾಸ, ಹೇಮಂತ ಋತು, ಕೃಷ್ಣಪಕ್ಷ, ದ್ವಾದಶಿ, ಭಾನುವಾರ, ಜನವರಿ 10,2021. ಅನೂರಾಧ ನಕ್ಷತ್ರ, ರಾಹುಕಾಲ: ಸಂಜೆ 4.34ರಿಂದ ಸಂಜೆ 5.57ರ ವರೆಗೆ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.48. ಸೂರ್ಯಾಸ್ತ: ಸಂಜೆ 5.58.
ತಾ.10-01-2021 ರ ಭಾನುವಾರದ ರಾಶಿಭವಿಷ್ಯ
ಮೇಷ: ವ್ಯಾಪಾರದಲ್ಲಿ ಅದೃಷ್ಟ ಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಶುಭ ಸಂಖ್ಯೆ: 1
ವೃಷಭ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವದು. ಶುಭ ಸಂಖ್ಯೆ: 4
ಮಿಥುನ: ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವದು. ವ್ಯವಹಾರಗಳಲ್ಲಿ ಹಾನಿಯಾಗುವ ಭಯ ಇರುವದು. ಪರಿಣಿತರ ಅಥವಾ ಹಿರಿಯರ ಸಲಹೆಯಂತೆ ಮುಂದುವರೆಯಿರಿ. ವಿದ್ಯಾರ್ಥಿಗಳಿಗೆ ಒಳ್ಳೆಯ ಫಲವಿದೆ. ಶುಭ ಸಂಖ್ಯೆ: 8
ಕಟಕ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರವೃದ್ಧಿಯಾಗುವದು. ಆರ್ಥಿಕ ಸಂಕಷ್ಟ ದೂರಾಗುವದು. ಶುಭ ಸಂಖ್ಯೆ: 9
ಸಿಂಹ: ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವದು. ಮಾನಸಿಕ ಉತ್ಸಾಹ ಕಂಡುಬರುವದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವದು. ಕಾರಣಾಂತರ ಅಧಿಕ ಖರ್ಚುಬರಬಹುದು. ಶುಭ ಸಂಖ್ಯೆ: 2
ಕನ್ಯಾ: ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವದು. ಶ್ರಮಿಕವರ್ಗಕ್ಕೆ ಉನ್ನತಿ ಇರುವದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವದು. ಶುಭ ಸಂಖ್ಯೆ: 3
ತುಲಾ: ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ. ಶುಭ ಸಂಖ್ಯೆ: 5
ವೃಶ್ಚಿಕ: ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಅಗೌರವ ಆಗುವ ಸಂಭವ ಇರುವದರಿಂದ ಸೂಕ್ಷ್ಮವಾಗಿರುವದು ಉತ್ತಮ. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವದು. ಶುಭ ಸಂಖ್ಯೆ: 7
ಧನು: ತಾಪತ್ರಯಗಳೆಲ್ಲ ದೂರವಾಗಿದ್ದು ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತದೆ. ವ್ಯಾಪಾರಾದಿ ಉದ್ಯಮಗಳು ಇಷ್ಟದಂತೆ ನಡೆಯುತ್ತದೆ. ಕೆಲವೊಮ್ಮೆ ಸಣ್ಣ ವಿಷಯಗಳಿಗೂ ಭಯ ತೋರಿದರೂ ಹಾನಿಯಿಲ್ಲ. ಶುಭ ಸಂಖ್ಯೆ: 6
ಮಕರ: ವ್ಯವಹಾರಿಕ ಏಳ್ಗೆ ಇರುವದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ವಿವಿಧ ಸೌಭಾಗ್ಯಪ್ರಾಪ್ತಿ. ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ವಾಹನ, ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ: 8
ಕುಂಭ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 4
ಮೀನ: ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ. ಶುಭ ಸಂಖ್ಯೆ: 1

ಬಸವರಾಜ ಗುರೂಜಿ
(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)