Tv9 Facebook Live | ಬಿಬಿಎಂಪಿ ವಾರ್ಡ್​ಗಳ ಸಂಖ್ಯೆ ಏರಿಕೆ ಎಷ್ಟರ ಮಟ್ಟಿಗೆ ಒಳಿತು..?

ಬಿಬಿಎಂಪಿ ವಾರ್ಡ್​ಗಳ ಸಂಖ್ಯೆಯನ್ನು 198ರಿಂದ 243ಕ್ಕೆ ಏರಿಕೆ ಮಾಡುವ ನಿಟ್ಟಿನಲ್ಲಿ ಸರ್ಕಾರ ವಿಧೆಯಕ ಮಂಡನೆ ಮಾಡಿದೆ. ಆದರೆ ಇದಕ್ಕೆ ವಿರೋಧ ಪಕ್ಷ ಹಾಗೂ ನಾಗರಿಕ ಹಿತರಕ್ಷಣಾ ಸಮಿತಿಗಳ ಸದಸ್ಯರು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ.

Tv9 Facebook Live | ಬಿಬಿಎಂಪಿ ವಾರ್ಡ್​ಗಳ ಸಂಖ್ಯೆ ಏರಿಕೆ ಎಷ್ಟರ ಮಟ್ಟಿಗೆ ಒಳಿತು..?
ಎಂಎಲ್​ಸಿ ರವಿಕುಮಾರ್, ಮಾಜಿ ಕಾರ್ಪೋರೇಟರ್ ಶಿವರಾಜ್ ಹಾಗೂ ಸಾಮಾಜಿಕ ಕಾರ್ಯಕರ್ತ ಮುರಳಿ
Follow us
sandhya thejappa
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 11, 2020 | 7:10 PM

ಬೆಂಗಳೂರು: ಬಿಬಿಎಂಪಿ ವಿಧೇಯಕವು ವಿಧಾನಸಭೆಯಲ್ಲಿ ನಿನ್ನೆಯಷ್ಟೇ (ಡಿ.10) ಅಂಗೀಕಾರ ಪಡೆದುಕೊಂಡಿತು. ಬಿಬಿಎಂಪಿ ವಾರ್ಡ್​ಗಳ ಸಂಖ್ಯೆಯನ್ನು 198ರಿಂದ 243ಕ್ಕೆ ಏರಿಕೆ ಮಾಡುವ ನಿಟ್ಟಿನಲ್ಲಿ ಸರ್ಕಾರ ವಿಧೆಯಕ ಮಂಡನೆ ಮಾಡಿದೆ. ಆದರೆ ಇದಕ್ಕೆ ವಿರೋಧ ಪಕ್ಷ ಹಾಗೂ ನಾಗರಿಕ ಹಿತರಕ್ಷಣಾ ಸಮಿತಿಗಳ ಸದಸ್ಯರು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಈಗ ಇರುವ 198 ವಾರ್ಡ್​ಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ಪೂರೈಸಲು ಆಗುತಿಲ್ಲ. ಅಂಥದ್ದರಲ್ಲಿ ವಾರ್ಡ್​ಗಳ ಸಂಖ್ಯೆ ಹೆಚ್ಚು ಮಾಡುವುದು ಎಷ್ಟರಮಟ್ಟಿಗೆ ಸರಿ? ಎನ್ನುವ ವಿಚಾರವನ್ನು ಕೇಂದ್ರವಾಗಿಸಿಕೊಂಡು ಶುಕ್ರವಾರ ಟಿವಿ9 ಫೇಸ್​ಬುಕ್ ಲೈವ್​ನಲ್ಲಿ ಬಿಜೆಪಿ ಎಂಎಲ್​ಸಿ ರವಿಕುಮಾರ್, ಮಾಜಿ ಕಾರ್ಪೋರೇಟರ್ ಶಿವರಾಜ್ ಹಾಗೂ ಸಾಮಾಜಿಕ ಕಾರ್ಯಕರ್ತ ಮುರಳಿ ಚರ್ಚಿಸಿದರು. ಆ್ಯಂಕರ್ ಆನಂದ್ ಬುರ್ಲಿ ಕಾರ್ಯಕ್ರಮ ನಡೆಸಿಕೊಟ್ಟರು.

ಬಿಜೆಪಿ ಸರ್ಕಾರ ಬಂದಾಗಲೆಲ್ಲ ಬಿಬಿಎಂಪಿ ಚುನಾವಣೆ ಮುಂದಕ್ಕೆ ಹೋಗುತ್ತೆ ಇದು ಕಾಕಾತಾಳಿಯಾ? ಅಥವಾ ಕಾರ್ಪೊರೇಟ್ ಅಧಿಕಾರಿಗಳನ್ನು ಮೊಟಕುಗೊಳಿಸಿ ಅಧಿಕಾರ ಮಾಡಬೇಕೆಂಬ ಇಚ್ಛೆ ಸರ್ಕಾರಕ್ಕೆ ಇದೆಯಾ? ಎಂದು ಕೇಳಿದ ಪ್ರಶ್ನೆಗೆ ಮೇಯರ್ ಹಾಗೂ ಉಪ ಮೇಯರ್ ಅಧಿಕಾರವನ್ನು ಕಸಿದುಕೊಳ್ಳುವ ದುರುದ್ದೇಶ ಸರ್ಕಾರಕ್ಕೆ ಇಲ್ಲ ಎಂದು ರವಿಕುಮಾರ್ ಉತ್ತರಿಸಿದರು.

ದೆಹಲಿ ಇದ್ದಿದ್ದು ನವದೆಹಲಿಯಾಗಿದೆ. ಇದರಂತೆ ಹಿಂದಿನ ಬೆಂಗಳೂರು ಮಹಾನಗರ ಪಾಲಿಕೆ ಈಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಾಗಿದೆ. ಈಗಾಗಲೇ ಬೆಂಗಳೂರು ಹಿಗ್ಗಿದೆ. ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳು ಬೆಂಗಳೂರಿಗೆ ಸೇರಿಕೊಂಡಿವೆ. ಉದ್ದೇಶಪೂರ್ವಕವಾಗಿ ವಾರ್ಡ್​ಗಳ ಸಂಖ್ಯೆ ಹೆಚ್ಚಿಸುತಿಲ್ಲ. ಎಲ್ಲರಿಗೂ ಸೌಲಭ್ಯಗಳು ಸಿಗಬೇಕೆಂಬ ಹಿನ್ನೆಲೆಯಲ್ಲಿ ಬೆಂಗಳೂರಿನ 1 ಕಿ.ಮೀ. ವ್ಯಾಪ್ತಿಯಲ್ಲಿರುವ ಹಳ್ಳಿಗಳನ್ನು ಸೇರಿಸುವ ಮೂಲಕ ವಾರ್ಡ್​ಗಳ ಸಂಖ್ಯೆ ಹೆಚ್ಚಿಸಲಾಗುತ್ತಿದೆ. ಒಟ್ಟಾರೆಯಾಗಿ ಈ ನಿರ್ಧಾರ ನಾಗರಿಕರ ಹಿತದೃಷ್ಟಿಯಿಂದ ಕೂಡಿದೆ ಎಂದರು.

ಮಾಜಿ ಕಾರ್ಪೋರೆಟ್ ಶಿವರಾಜ್ ಮಾತನಾಡಿ, ಚುನಾವಣೆಯನ್ನು ಮುಂದೂಡುವ ಮನಃಸ್ಥಿತಿಯಲ್ಲಿ ಉದ್ದೇಶಪೂರ್ವಕವಾಗಿ ಬೆಂಗಳೂರಿನ ಗಡಿ ವ್ಯಾಪ್ತಿ ವಿಸ್ತರಣೆಗೆ ಬಿಜೆಪಿ ಸರ್ಕಾರ ಮುಂದಾಗಿದೆ. ಬೆಂಗಳೂರು ವಿಸ್ತರಣೆಗೆ ಆಕ್ಷೇಪವಿಲ್ಲ. ಆದರೆ ಈಗಿರುವ ವಾರ್ಡ್​ಗಳ ಪರಿಸ್ಥಿತಿ ಕಡೆಗೆ ಗಮನ ಹರಿಸುತಿಲ್ಲ. ಹಲವು ಹಳ್ಳಿಗಳಲ್ಲಿ ಕುಡಿಯುವ ನೀರು ಹಾಗೂ ರಸ್ತೆಗಳ ವ್ಯವಸ್ಥೆಯಿಲ್ಲದೆ ಜನರ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಇಂತಹ ಸಂಕಷ್ಟದ ನಡುವೆ ಬೆಂಗಳೂರು ವಿಸ್ತರಣೆ ಅನಿವಾರ್ಯವಿರಲಿಲ್ಲ. ಪ್ರತಿ ವಾರ್ಡ್​ಗಳಲ್ಲಿ ಹಲವು ಸಮಸ್ಯೆಗಳಿವೆ. ಯಾವ ಯಾವ ವಾರ್ಡ್​ಗಳಲ್ಲಿ ಏನೇನು ಸಮಸ್ಯೆಗಳಿವೆ ಎಂದು ಪರಿಶೀಲನೆ ಮಾಡದೆ, ಜನರ ಕಷ್ಟಗಳನ್ನು ಆಲಿಸದೇ, ಚರ್ಚೆಮಾಡದೇ ನೆರವಾಗಿ ಈ ನಿರ್ಧಾರ ತೆಗೆದುಕೊಂಡಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ಚರ್ಚೆಯಲ್ಲಿ ಪಾಲ್ಗೊಂಡಿದ್ದ ಸಾಮಾಜಿಕ ಕಾರ್ಯಕರ್ತ ಮುರಳಿ, ಅಭಿವೃದ್ಧಿಯಲ್ಲಿ ಹಿಂದುಳಿದಿರುವ ವಾರ್ಡ್​ಗಳಿಗೆ ಹೆಚ್ಚು ಅನುದಾನ ಒದಗಿಸಬೇಕು. ಆದರೆ ಎಲ್ಲ ವಾರ್ಡ್​ಗಳಿಗೂ ಸಮಾನವಾಗಿ ಅನುದಾನ ಹಂಚಿಕೆ ಮಾಡಲಾಗುತ್ತಿದೆ. ಇದರಿಂದ ಹೆಚ್ಚು ಪ್ರಯೋಜನವಾಗುತ್ತಿಲ್ಲ ಎಂದರು.

ಬೆಂಗಳೂರು ಆಡಳಿತಕ್ಕೆ ಹೊಸ ರೂಪ: ಬಿಬಿಎಂಪಿ ಮಸೂದೆಗೆ ಅಧಿವೇಶನದಲ್ಲಿ ಒಪ್ಪಿಗೆ

Published On - 7:06 pm, Fri, 11 December 20

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ