ದಿನಭವಿಷ್ಯ | ಜನವರಿ 3, 2021

ಜನವರಿ 3, 2021ರ ದ್ವಾದಶ ರಾಶಿಗಳ ದಿನಭವಿಷ್ಯ.

ದಿನಭವಿಷ್ಯ | ಜನವರಿ 3, 2021
ದಿನ ಭವಿಷ್ಯ
Follow us
ಆಯೇಷಾ ಬಾನು
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 03, 2021 | 11:46 AM

ಜನವರಿ 03,2021ರ ಭಾನುವಾರದ ರಾಶಿ ಭವಿಷ್ಯ

ಮೇಷ ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಶುಭ ಸಂಖ್ಯೆ: 3

ವೃಷಭ ಹೊಟ್ಟೆಕಿಚ್ಚು ಪಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 5

ಮಿಥುನ ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 9

ಕರ್ಕ ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಬಂಧಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 6

ಸಿಂಹ ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವುದು ಒಳ್ಳೆಯದು. ಮಂಗಲಕಾರ್ಯ, ಹೆಸರು, ಕಡಲೆ ದಾನ ಮಾಡಿರಿ. ಶುಭ ಸಂಖ್ಯೆ: 4

ಕನ್ಯಾ ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು. ಶುಭ ಸಂಖ್ಯೆ: 8

ತುಲಾ ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 1

ವೃಶ್ಚಿಕ ವ್ಯವಹಾರಿಕ ಏಳ್ಗೆ ಇರುವುದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ವಿವಿಧ ಸೌಭಾಗ್ಯಪ್ರಾಪ್ತಿ. ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ವಾಹನ, ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ: 3

ಧನು ಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸುವುದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವುದು. ಶಕ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ. ಶುಭ ಸಂಖ್ಯೆ: 7

ಮಕರ ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 2

ಕುಂಭ ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 9

ಮೀನ ಹಣಕಾಸಿನ ವ್ಯವಹಾರದಲ್ಲಿ ಧ್ಯರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಿಸದ ಲಾಭ ಸಂಭವ. ಗಡಿಬಿಡಿಯ ವಾತಾವತರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ. ಶುಭ ಸಂಖ್ಯೆ: 1

ಡಾ.ಬಸವರಾಜ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 99728 48937)

ಹೊಸ ವರ್ಷ 2021ರ ಫಲಾಫಲ: ಯಾವ ರಾಶಿಯವರಿಗೆ ಏನು ಲಾಭ? ವಿವರಿಸಿದ್ದಾರೆ ಎಸ್‌.ಕೆ.ಜೈನ್

Published On - 10:42 am, Sun, 3 January 21

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್