ಶಂಕ್ರಣ್ಣ ಇಂದು ಬದುಕಿದ್ದರೆ.. 66ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ತಿದ್ರು..

ಬೆಂಗಳೂರು: ಕನ್ನಡಿಗರ ಕಣ್ಮಣಿ ಶಂಕರ್ ನಾಗ್ ಇಂದು ಬದುಕಿದ್ದರೆ 66 ನೇ ವಸಂತಕ್ಕೆ ಕಾಲಿಡುತ್ತಿದ್ದರು. ತಮ್ಮ ಬಹುಮುಖಿ ವ್ಯಕ್ತಿತ್ವದಿಂದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ಅವರ ಜನ್ಮದಿನವನ್ನು ನೆನೆದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸಿದರು. ಆಟೋ ರಾಜಾ ಸಿನಿಮಾ ಮೂಲಕ ಶಂಕ್ರಣ್ಣ ಅಸಂಖ್ಯಾತ ಆಟೋ ಚಾಲಕರಲ್ಲಿ ಸ್ವಾಭಿಮಾನದ ಭಾವನೆ ಮೂಡಿಸಿದ್ದರು. 1954ರಲ್ಲಿ ಹೊನ್ನಾವರದಲ್ಲಿ ಜನಿಸಿದ ಶಂಕರ್ ನಾಗ್ ಮರಾಠಿ ನಾಟಕಗಳಿಂದ ಪ್ರಭಾವಿತರಾಗಿ ಕನ್ನಡದಲ್ಲಿ ಹೊಸ ಪ್ರಯೋಗಗಳನ್ನು ಕೈಗೊಂಡಿದ್ದರು. ಒಂದಾನೊಂದು ಕಾಲದಲ್ಲಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅವರು ಮುಂದೆ ಮಾಡಿದ್ದೆಲ್ಲವೂ ಇತಿಹಾಸದಲ್ಲಿ ಅಜರಾಮರವಾಗಿವೆ. […]

ಶಂಕ್ರಣ್ಣ ಇಂದು ಬದುಕಿದ್ದರೆ.. 66ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ತಿದ್ರು..
Follow us
KUSHAL V
|

Updated on: Nov 09, 2020 | 7:38 PM

ಬೆಂಗಳೂರು: ಕನ್ನಡಿಗರ ಕಣ್ಮಣಿ ಶಂಕರ್ ನಾಗ್ ಇಂದು ಬದುಕಿದ್ದರೆ 66 ನೇ ವಸಂತಕ್ಕೆ ಕಾಲಿಡುತ್ತಿದ್ದರು. ತಮ್ಮ ಬಹುಮುಖಿ ವ್ಯಕ್ತಿತ್ವದಿಂದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ಅವರ ಜನ್ಮದಿನವನ್ನು ನೆನೆದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸಿದರು. ಆಟೋ ರಾಜಾ ಸಿನಿಮಾ ಮೂಲಕ ಶಂಕ್ರಣ್ಣ ಅಸಂಖ್ಯಾತ ಆಟೋ ಚಾಲಕರಲ್ಲಿ ಸ್ವಾಭಿಮಾನದ ಭಾವನೆ ಮೂಡಿಸಿದ್ದರು.

1954ರಲ್ಲಿ ಹೊನ್ನಾವರದಲ್ಲಿ ಜನಿಸಿದ ಶಂಕರ್ ನಾಗ್ ಮರಾಠಿ ನಾಟಕಗಳಿಂದ ಪ್ರಭಾವಿತರಾಗಿ ಕನ್ನಡದಲ್ಲಿ ಹೊಸ ಪ್ರಯೋಗಗಳನ್ನು ಕೈಗೊಂಡಿದ್ದರು. ಒಂದಾನೊಂದು ಕಾಲದಲ್ಲಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅವರು ಮುಂದೆ ಮಾಡಿದ್ದೆಲ್ಲವೂ ಇತಿಹಾಸದಲ್ಲಿ ಅಜರಾಮರವಾಗಿವೆ. ಅವರು ನಿರ್ದೇಶಿಸಿದ ಮೊದಲ ಚಿತ್ರ ಆ್ಯಕ್ಸಿಡೆಂಟ್ ಹಲವು ರಾಷ್ಟ್ರ ಪ್ರಶಸ್ತಿಗಳನ್ನು ಬಾಚಿಕೊಂಡಿತು. ದೂರದರ್ಶನಕ್ಕಾಗಿ ಖ್ಯಾತ ಬರಹಗಾರ ಆರ್.ಕೆ. ನಾರಾಯಣ್ ಅವರು ರಚಿಸಿದ ಮಾಲ್ಗುಡಿ ಡೇಸ್​ನ ನಿರ್ದೇಶಿಸುವ ಮೂಲಕ ರಾಷ್ಟ್ರಮಟ್ಟದಲ್ಲಿ ಎಲ್ಲರ ಗಮನ ಸೆಳೆದರು. ಆಗುಂಬೆ, ತೀರ್ಥಹಳ್ಳಿ ಮುಂತಾದೆಡೆ ಚಿತ್ರೀಕರಣಗೊಂಡ ಮಾಲ್ಗುಡಿ ಡೇಸ್ ಮತ್ತು ಸ್ವಾಮಿ ಧಾರಾವಾಹಿ ಸರಣಿಗಳು ಕರ್ನಾಟಕದ ಗರಿಮೆ ಹೆಚ್ಚಿಸಿದ್ದವು.

ಸಾಂಗ್ಲಿಯಾನ, ಸಿಬಿಐ ಶಂಕರ್, ಆಟೋ ರಾಜು, ಗೀತಾ, ಮಿಂಚಿನ ಓಟ, ಒಂದು ಮುತ್ತಿನ ಕಥೆ, ನೋಡಿ ಸ್ವಾಮಿ ನಾವಿರೋದೆ ಹೀಗೆ ಅವರ ಹತ್ತು ಹಲವಾರು ಸಿನಿಮಾಗಳನ್ನು ಕನ್ನಡ ಚಿತ್ರಪ್ರೇಮಿಗಳು ಎಂದಿಗೂ ಮರೆಯಲಾರರು. ಕನ್ನಡ ಚಿತ್ರರಂಗವನ್ನು ಇನ್ನಷ್ಟು ಎತ್ತರಕ್ಕೆ ಒಯ್ಯಬಲ್ಲ ಸಾಮರ್ಥ್ಯ ಅವರಿಗಿತ್ತು. ಅಲ್ಲದೆ ಹಿಂದಿ, ಇಂಗ್ಲೀಷ್ ಭಾಷೆಗಳಲ್ಲೂ ಸಿನಿಮಾ ನಿರ್ದೇಶಿಸಿ ಸೈ ಎನಿಸಿಕೊಂಡಿದ್ದರು. ರಂಗಭೂಮಿ, ಸಾಹಿತ್ಯ ಮತ್ತು ನಿರ್ದೇಶನದಲ್ಲಿ ಅವರದ್ದು ಎತ್ತಿದ ಕೈ. ಬೆಂಗಳೂರು ಮೆಟ್ರೋವನ್ನು ನಿರ್ಮಿಸಲು ಆ ಕಾಲದಲ್ಲೇ ಚಿಂತನೆ ನಡೆಸಿದ್ದರು ನಮ್ಮ ಶಂಕ್ರಣ್ಣ. ಆದರೆ, 1990ರಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಚಂದನವನದ ಈ ಅಭೂತಪೂರ್ವ ತಾರೆ ಹಠಾತ್​ ಆಗಿ ಇಹಲೋಕ ತ್ಯಜಿಸಿತು. ಆದರೂ, ಕನ್ನಡ ನಾಡಿಗೆ ಅವರು ನೀಡಿದ ಕೊಡುಗೆ ಇಂದಿಗೂ ಚಿರಸ್ಮರಣೀಯ. ಅವರ ಹುಟ್ಟುಹಬ್ಬವನ್ನು ಕನ್ನಡದ ಹಬ್ಬವೆಂದೇ ಲಕ್ಷಾಂತರ ಅಭಿಮಾನಿಗಳು ಇಂದಿಗೂ ಆಚರಿಸುತ್ತಿದ್ದಾರೆ.

ಅವರ ಮಡದಿ ಅರುಂಧತಿ ನಾಗ್ ಶಂಕರ್ ಅವರ ನೆನಪಿನಲ್ಲಿ ಬೆಂಗಳೂರಿನ ಜೆ.ಪಿ.ನಗರದಲ್ಲಿ ರಂಗಶಂಕರವನ್ನು ಪ್ರಾರಂಭಿಸಿದರು. ರಂಗಭೂಮಿ,ಕಲೆ ಮತ್ತು ಸಾಹಿತ್ಯ ಚಟುವಟಿಕೆಗಳಿಗೆ ಎಂದೇ ಮೀಸಲಾಗಿರುವ ರಂಗ ಶಂಕರ ಹಲವು ದೇಶಗಳಲ್ಲೂ ಮನೆಮಾತಾಗಿದ್ದು ಈ ಮೂಲಕ ಶಂಕ್ರಣ್ಣರ ಹೆಸರು ಮತ್ತು ಕೆಲಸ ಎಲ್ಲೆಡೆಗೆ ಪಸರಿಸಿದೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್