AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Communal Clashes: ಕವಿತೆ ಅವಿತಿಲ್ಲ; ‘ಇದು ಇನ್ನೂ ಶುರುವಾತು, ದೇವರಿರುವ ಬೀದಿಗಳೆಲ್ಲ ಇನ್ನು ವಿಕೃತಿಯ ಕಪ್ಪೆಬಾವಿ!

Nuggikere Dharwad : ಹೆಗಲಿಗೆ ಹೆಗಲಿಲ್ಲದೆ ಬದುಕ ಬಂಡಿ ಚಲಿಸದೆನ್ನುವ ಸತ್ಯದ ಗಾಲಿಗಳ ಮುರಿದು ಆತ್ಮದ್ರೋಹ ಮಾಡಿಕೊಳ್ಳದಿರಿ; ಮನಸ್ಸು ವಿಷಣ್ಣವಾಗಿದೆ. ಆಕ್ರೋಶ ಅವಡುಗಚ್ಚಿ ಕುಳಿತಿದೆ. ಮಾತು ಸೋಲುತ್ತಿವೆ. ಅದೆಷ್ಟು ಅಗೆಯುತ್ತೀರೋ ಅಗೆಯಿರಿ. ನೀವು ಅಗೆದಷ್ಟೂ ನನ್ನನ್ನೇ ನಾ ಬಗೆದುಕೊಳ್ಳುತ್ತೇನೆ ಎನ್ನುತ್ತಿದೆ ಈ ಹೊತ್ತಿನಲ್ಲಿ ಕವಿತೆ.

Communal Clashes: ಕವಿತೆ ಅವಿತಿಲ್ಲ; ‘ಇದು ಇನ್ನೂ ಶುರುವಾತು, ದೇವರಿರುವ ಬೀದಿಗಳೆಲ್ಲ ಇನ್ನು ವಿಕೃತಿಯ ಕಪ್ಪೆಬಾವಿ!
ಕವಿ ಚೇತನಾ ತೀರ್ಥಹಳ್ಳಿ
ಶ್ರೀದೇವಿ ಕಳಸದ
|

Updated on:Apr 10, 2022 | 2:34 PM

Share

ಕವಿತೆ ಅವಿತಿಲ್ಲ : ನಬೀಸಾಬ್, ಧಾರವಾಡದ ಹಣ್ಣಿನ ವ್ಯಾಪಾರಿ. ಹದಿನೈದು ವರ್ಷಗಳಿಂದಲೂ ಇಲ್ಲಿಯ ನುಗ್ಗೀಕೆರೆ ಹನುಮಂತನಗುಡಿಯ ಪ್ರಾಂಗಣದಲ್ಲಿ ವ್ಯಾಪಾರಕ್ಕೆ ತೊಡಗಿರುವಂಥವರು. ನಿನ್ನೆ ಶ್ರೀರಾಮ ಸೇನೆಯ ತುಕಡಿಯೊಂದು ಅವರ ವ್ಯಾಪಾರಕ್ಕೆ ಅಡ್ಡಪಡಿಸಿ ಬರೋಬರಿ ಐದು ಕ್ವಿಂಟಾಲ್​ ಕಲ್ಲಂಗಡಿಯನ್ನು ಧ್ವಂಸಗೊಳಿಸಿದ ದೃಶ್ಯ ಕಣ್ಣಪಾಪೆಗಂಟಿ ಕುಳಿತಿದೆ. ನಮ್ಮೆಲ್ಲರ ಧಮನಿಗಳಲ್ಲಿ ಹರಿಯುತ್ತಿರುವ ಬಣ್ಣ, ಬಿರಿದ ಆ ಕಲ್ಲಂಗಡಿಯ ಒಡಲು. ಯಾಕೋ ಈ ರೂಪಕ ಇನ್ನೇನೋ ಸೂಚಿಸುಂತಿದೆ. ಯಾವುದೂ ಒಮ್ಮೆಲೇ ಭುಗಿಲೇಳುವುದಿಲ್ಲ, ಅದು ಕೆಟ್ಟದ್ದೇ ಆಗಿರಲಿ ಒಳ್ಳೆಯದೇ ಆಗಿರಲಿ, ಬಿತ್ತದೆ ಬೆಳೆಯುವುದುಂಟೆ?; ಪುಂಡರೇ, ನೀವು ಯಾವ ಧರ್ಮದಲ್ಲಿಯೇ ಹುಟ್ಟಿರಲಿ, ಯಾವ ಜಾತಿಯವರೇ ಆಗಿರಲಿ, ಯಾವ ಭಾಗದವರೇ ಆಗಿರಲಿ, ಯಾವ ಪಕ್ಷದವರೇ ಆಗಿರಲಿ, ಯಾರೇ ನಿಮಗೆ ರೊಕ್ಕ ಮುಕ್ಕಿಸುತ್ತ, ವಿಷ ಕಕ್ಕಿಸುತ್ತಿರಲಿ, ಯಾರೇ ನಿಮ್ಮೊಳಗಿನ ಗೂಳಿತನಕ್ಕೆ ಕೆಂಪು ತೋರಿಸಿ ಇಂಥ ಸಾಲು ಪ್ರಕರಣಗಳೊಳಗೆ ನುಗ್ಗಿಸುತ್ತಿರಲಿ. ಇನ್ನಾದರೂ ಯೋಚಿಸಿ. ನಿಮ್ಮ ಹಿಂದೆ ಹೆತ್ತ ಒಡಲ ಸಂಕಟಗಳ ಮೂಟೆಯಿದೆ. ನಿಮ್ಮ ಮುಂದೆ ನಿಮ್ಮದೇ ಕುಡಿಗಳು ಕನಸು ಕಂಗಳುಗಳಿವೆ. ಹೆಗಲಿಗೆ ಹೆಗಲಿಲ್ಲದೆ ಬದುಕಬಂಡಿ ಚಲಿಸದೆನ್ನುವ ಸತ್ಯದ ಗಾಲಿಗಳನ್ನು ಮುರಿದು ಆತ್ಮದ್ರೋಹ ಮಾಡಿಕೊಳ್ಳದಿರಿ; ಮನಸ್ಸು ವಿಷಣ್ಣವಾಗಿದೆ. ಆಕ್ರೋಶ ಅವಡುಗಚ್ಚಿ ಕುಳಿತಿದೆ. ಮಾತು ಸೋಲುತ್ತಿವೆ. ಅದೆಷ್ಟು ಅಗೆಯುತ್ತೀರೋ ಅಗೆಯಿರಿ. ನೀವು ಅಗೆದಷ್ಟೂ ನನ್ನನ್ನೇ ನಾ ಬಗೆದುಕೊಳ್ಳುತ್ತೇನೆ ಎನ್ನುತ್ತಿದೆ ಈ ಹೊತ್ತಿನಲ್ಲಿ ಕವಿತೆ.

ಬೆಂಗಳೂರಿನಲ್ಲಿ ನೆಲೆಸಿರುವ ಲೇಖಕಿ, ಹೋರಾಟಗಾರ್ತಿ, ಚಿತ್ರಕಲಾವಿದೆ ಚೇತನಾ ತೀರ್ಥಹಳ್ಳಿ ಬರೆದ ಕವಿತೆ ಇಲ್ಲಿದೆ. 

ತಂಪೂಡಬೇಕಿದ್ದ ಕಲ್ಲಂಗಡಿ ಲಾವಾ ಹರಿಸುತ್ತಿದೆ ಕೆಂಪನೆ ತಿರುಳು ರಕ್ತಸಿಕ್ತ ಮಾಂಸದ ಮುದ್ದೆ ಯಂತೆ ರಸ್ತೆ ತುಂಬಾ ಚೆಲ್ಲಾಪಿಲ್ಲಿ. ಗಂಟಲಲ್ಲೇ ಉಳಿದ ಕೂಗಿನಲ್ಲಿ ರಾಮನ ಹೆಸರಿತ್ತೋ ಅಲ್ಲಾಹ್​ನದೋ! ಕಣ್ಣೆದುರು ತೋರಿದ್ದು ಮಾತ್ರ ಹಸಿದ ಒಡಲು ಖಾಲಿ ಬಟ್ಟಲು.

ಕೇಸರಿ ಶಾಲಿನ ತುದಿಯಲ್ಲಿ ಕುತ್ತಿಗೆಯ ಬೆವರುಜ್ಜಿಕೊಳ್ಳುತ್ತ ನಿಂತವರು ನಾಲ್ಕು ಜನ ಮಣ್ಣಲ್ಲಿ ಬೆಳೆದ ಹಣ್ಣು ಒಡೆದೊಡೆದು ದಣಿದಿದ್ದರು ಪಾಪ! ಸುತ್ತ ನಿಂತು ಕಂಡವರು ಹತ್ತಾರು, ಸಂದಿಯಲೇ ತೂರಿ ಹೊತ್ತೊಯ್ದವರು ಮತ್ತಷ್ಟು ಆ ಹೊತ್ತು ಮಂದಿರದ ರಸ್ತೆಯಲಿ ಮನುಷ್ಯತ್ವ ರಜೆ ಹಾಕಿತ್ತೆ?

ಇದು ಇನ್ನೂ ಶುರುವಾತು, ದೇವರಿರುವ ಬೀದಿಗಳೆಲ್ಲ ಇನ್ನು ವಿಕೃತಿಯ ಕಪ್ಪೆಬಾವಿ! ಗೂಡು ಕೆಡವಲು ಕೆಲಸವಿಲ್ಲದ ಪುಂಡ ಗಂಡಸರ ಸಾಲು, ಮರೆಯಬೇಕಲ್ಲ ಖಾಲಿ ಜೇಬು ಅಮ್ಮಂದಿರ ನೀರುಗಣ್ಣು ಅಪ್ಪಂದಿರ ನಿಡುಸುಯ್ತ; ಕಳೆಯಬೇಕಲ್ಲ ದಿನದಿನದ ಮೂರು ಹೊತ್ತೂ?

ಗೂಂಡಾ ಕಟ್ಟೆಯ ಮೇಲೊರಗಿದ ಮಂದಿ, ಪಕ್ಕದಲ್ಲಿ ‘ದಂಡ’ ಹಿನ್ನೆಲೆಯಲ್ಲಿ ಯಾರ ಮನೆಯದೋ ಕಾರವಾನು ಹಾಡುತ್ತಿದೆ; “ಮನ್ ತಡಪತ್ ಹರಿ ದರುಶನ್ ಕೋ…” ಸಾಹಿತ್ಯ ಶಕೀಲ್, ಸಂಗೀತ ನೌಶದ್, ಹಾಡಿದ್ದು ರಫಿ. “ಜೈ ಶ್ರೀ ರಾಮ್!”

*

ಗಮನಿಸಿ : ಪ್ರತಿಕ್ರಿಯಾತ್ಮಕ ಕವನಗಳನ್ನು ಈ ಸರಣಿಗೆ ನೀವೂ ಕಳಿಸಬಹುದು. ಜೊತೆಗೆ ಎರಡು ಸಾಲಿನ ನಿಮ್ಮ ಪರಿಚಯ, ಫೋಟೋ ಇರಲಿ. : tv9kannadadigital@gmail.com

ಇದನ್ನೂ ಓದಿ : Poetry: ಅವಿತಕವಿತೆ; ಕಿತ್ತಳೆ ಇಂದಿನ ಕಿತ್ತಳೆಯಾಗಿರುವುದಿಲ್ಲ, ಮಾರುವವರೂ ಬೇರೆ ಅವರ ಕೂಗೂ ಮೊದಲಿನವರ ಕೂಗಲ್ಲ

Published On - 2:23 pm, Sun, 10 April 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ