AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahatma Gandhi Death Anniversary: ಮಹಾತ್ಮ ಗಾಂಧಿ ಕುರಿತು ನಿಮಗೆ ತಿಳಿಯದ ಸಂಗತಿ, ಸ್ಪೂರ್ತಿದಾಯಕ ಸಂದೇಶಗಳು

ಇಂದು (ಜ.30) ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 75ನೇ ಪುಣ್ಯಸ್ಮರಣೆ. ಮಹಾತ್ಮ ಗಾಂಧಿ ಅವರ ಬಗ್ಗೆ ನಿಮಗೆ ತಿಳಿಯದ ಕೆಲವು ಸಂಗತಿಗಳು ಇಲ್ಲಿವೆ.

Mahatma Gandhi Death Anniversary: ಮಹಾತ್ಮ ಗಾಂಧಿ ಕುರಿತು ನಿಮಗೆ ತಿಳಿಯದ ಸಂಗತಿ, ಸ್ಪೂರ್ತಿದಾಯಕ ಸಂದೇಶಗಳು
ರಾಷ್ಟ್ರಪಿತ ಮಹಾತ್ಮ ಗಾಂಧಿ
TV9 Web
| Edited By: ವಿವೇಕ ಬಿರಾದಾರ|

Updated on:Jan 30, 2023 | 7:15 AM

Share

ರಾಷ್ಟ್ರಪಿತ ಮಹಾತ್ಮ ಗಾಂಧಿ (Mahatma gandhi death) ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಮುಂಚುವಳಿ ನಾಯಕರಲ್ಲಿ ಇವರು ಒಬ್ಬರು. ಗಾಂಧಿ ಅವರು ಅಕ್ಟೋಬರ್ 2, 1869ರಲ್ಲಿ ಗುಜರಾತ್‌ನ ಪೋರಬಂದರ್‌ನಲ್ಲಿ ಜನಿಸಿದರು. ತಂದೆ ಕರಮಚಂದ್ ಗಾಂಧಿ, ತಾಯಿ ಪುತಲೀಬಾಯಿ. 13 ನೇ ವಯಸ್ಸಿನಲ್ಲಿ ಗಾಂಧೀಜಿ ಕಸ್ತೂರಿ ಬಾ ಅವರನ್ನು ವಿವಾಹವಾದರು. ಇವರಿಗೆ ನಾಲ್ಕು ಮಕ್ಕಳು ಜನಿಸಿದರು, ಹರಿಲಾಲ್ ಗಾಂಧಿ, ಮಣಿಲಾಲ್ ಗಾಂಧಿ, ರಾಮದಾಸ್ ಗಾಂಧಿ ಮತ್ತು ದೇವದಾಸ್ ಗಾಂಧಿ. ಮಹಾತ್ಮ ಗಾಂಧಿ ತಮ್ಮ ಜೀವನದ ಉದ್ದಕ್ಕೂ ಹೋರಾಟಗಳನ್ನೇ ಮಾಡಿಕೊಂಡು ಬಂದಿದ್ದಾರೆ. ಗಾಂಧಿಯವರು ಜನವರಿ 30 1948ರಂದು ನಾಥುರಾಮ್​ ಗೋಡ್ಸೆ ಗುಂಡೇಟಿನಿಂದ ನಿಧನರಾದರು.

ಗಾಂಧಿಜಿ ಕುರಿತಾದ ಆಸಕ್ತಿದಾಯಕ ಸಂಗತಿಗಳು

1. ನೊಬೆಲ್ ಪ್ರಶಸ್ತಿ ವಿಜೇತ ಕವಿ ರವೀಂದ್ರನಾಥ ಠಾಗೋರ್ ಅವರು ಗಾಂಧೀಜಿಗೆ ಮಹಾತ್ಮ ಎಂಬ ಬಿರುದನ್ನು ನೀಡಿದರು.

2. ರಾಷ್ಟ್ರಪಿತ ಎಂದು ಜೂನ್​ 4 1944 ರಂದು ನೇತಾಜಿ ಸುಭಾಷ ಚಂದ್ರ ಬೋಸ್​ ಅವರು ಸಂಭೋದಿಸಿದರು.

3. ಸಂಶೋಧಕ ಆಲ್ಬರ್ಟ್ ಐನ್‌ಸ್ಟೈನ್ ಅವರು ಬಾಪು ಅವರಿಂದ ಬಹಳ ಪ್ರಭಾವಿತರಾಗಿದ್ದರು.

4. 36ನೇ ವಯಸ್ಸಿನಲ್ಲಿ ಗಾಂಧೀಜಿಯವರು ಬ್ರಹ್ಮಚರ್ಯ ವ್ರತವನ್ನು ಸ್ವೀಕರಿಸಿದರು.

5. ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಮೊದಲಾದ ಅಹಿಂಸಾವಾದಿ ಹೋರಾಟಗಾರರು ಗಾಂಧೀಜಿಯವರ ಸತ್ಯಾಗ್ರಹದ ತತ್ವದಿಂದ ಆಳವಾಗಿ ಪ್ರಭಾವಿತರಾದವರು.

ಮಹಾತ್ಮ ಗಾಂಧಿಜಿ ಅವರ ಸ್ಪೂರ್ತಿದಾಯಕ ಸಂದೇಶಗಳು

1. ಮಹಾತ್ಮ ಗಾಂಧಿ ಅವರ ಮುಖ್ಯ ಸಂದೇಶ ಸತ್ಯ ಮತ್ತು ಅಹಿಂಸೆ.

2. ಯಾವುದೇ ಸಂದರ್ಭದಲ್ಲೂ ಸಶಸ್ತ್ರ ಶಕ್ತಿಗಿಂತ ನಿರಾಯುಧ ಅಹಿಂಸೆಯ ಶಕ್ತಿ ಶ್ರೇಷ್ಠವಾಗಿರುತ್ತದೆ.

3. ಕ್ರೌರ್ಯವನ್ನು ಕ್ರೌರ್ಯದಿಂದ ಉತ್ತರಿಸುವುದು ಎಂದರೆ ನಿಮ್ಮ ನೈತಿಕ ಮತ್ತು ಬೌದ್ಧಿಕ ಅವನತಿಯನ್ನು ಒಪ್ಪಿಕೊಳ್ಳುವುದು.

4. ಭಯವು ದೇಹದ ರೋಗವಲ್ಲ, ಅದು ಆತ್ಮವನ್ನು ಕೊಲ್ಲುತ್ತದೆ.

5. ನೀವು ಮಾನವೀಯತೆಯ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳಬಾರದು. ಮಾನವೀಯತೆಯು ಸಾಗರದಂತೆ; ಸಮುದ್ರದ ಕೆಲವು ಹನಿಗಳು ಕೊಳಕಾಗಿದ್ದರೆ, ಸಾಗರವು ಕೊಳಕು ಆಗುವುದಿಲ್ಲ.

Published On - 7:12 am, Mon, 30 January 23

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು