AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಎತ್ತರದ ದಾಖಲೆ ಬರೆದ ಮೌಂಟ್ ಎವೆರೆಸ್ಟ್: ಎತ್ತರ ಎಷ್ಟು ಹೆಚ್ಚಾಗಿದೆ?

2015ರಲ್ಲಿ ನೇಪಾಳದಲ್ಲಿ ಸಂಭವಿಸಿದ ಭಾರಿ ಭೂಕಂಪದ ನಂತರ ಪರ್ವತದ ಎತ್ತರ ಮೊದಲಿನಂತೆ ಇರಲು ಸಾಧ್ಯವಿಲ್ಲ ಎಂದು ವಿಶ್ವದ ಹಲವೆಡೆಗಳಿಂದ ಅಭಿಪ್ರಾಯ ವ್ಯಕ್ತವಾಗಿತ್ತು.

ಹೊಸ ಎತ್ತರದ ದಾಖಲೆ ಬರೆದ ಮೌಂಟ್ ಎವೆರೆಸ್ಟ್: ಎತ್ತರ ಎಷ್ಟು ಹೆಚ್ಚಾಗಿದೆ?
ಮೌಂಟ್ ಎವೆರೆಸ್ಟ್
Ghanashyam D M | ಡಿ.ಎಂ.ಘನಶ್ಯಾಮ
|

Updated on: Dec 08, 2020 | 3:54 PM

Share

ಕಠ್ಮಂಡು: ವಿಶ್ವದ ಅತ್ಯಂತ ಎತ್ತರದ ಪರ್ವತ ಶಿಖರ ಮೌಂಟ್​ ಎವೆರೆಸ್ಟ್​ನ ಎತ್ತರ 8848.86 ಮೀಟರ್ ಎಂದು ನೇಪಾಳ ವಿದೇಶಾಂಗ ಖಾತೆ ಸಚಿವ ಪ್ರದೀಪ್ ಕುಮಾರ್ ಗ್ಯಾವಲಿ ಮಂಗಳವಾರ ಘೋಷಿಸಿದರು.

ಈ ಹಿಂದಿನ ಲೆಕ್ಕಾಚಾರಗಳಿಗೆ ಹೋಲಿಸಿದರೆ ಹೊಸದಾಗಿ ಬೆಳಕಿಗೆ ಬಂದ ಮಾಹಿತಿ ಪ್ರಕಾರ ಮೌಂಟ್ ಎವೆರೆಸ್ಟ್​ನ ಒಟ್ಟು ಎತ್ತರವು 0.86 ಸೆಂಟಿಮೀಟರ್​ ಹೆಚ್ಚಾಗಿದೆ ಎಂದು ಅವರು ತಿಳಿಸಿದರು.

2015ರಲ್ಲಿ ನೇಪಾಳದಲ್ಲಿ ಸಂಭವಿಸಿದ ಭಾರಿ ಭೂಕಂಪದ ನಂತರ ಪರ್ವತದ ಎತ್ತರ ಮೊದಲಿನಂತೆ ಇರಲು ಸಾಧ್ಯವಿಲ್ಲ ಎಂದು ವಿಶ್ವದ ಹಲವೆಡೆಗಳಿಂದ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಊಹಾಪೋಹಗಳಿಗೆ ಇತಿಶ್ರೀ ಹೇಳಲು ಪರ್ವತವನ್ನು ಹೊಸದಾಗಿ ಅಳೆಯಲು ನೇಪಾಳ ಮುಂದಾಯಿತು.

ನೇಪಾಳಿ ಅಧಿಕಾರಿಗಳು ಮತ್ತು ತಜ್ಞರನ್ನು ಈ ಕಾರ್ಯದಲ್ಲಿ ತೊಡಗಿಸಿದ್ದರೂ ಚೀನಾದ ನೆರವನ್ನೂ ನೇಪಾಳ ಸರ್ಕಾರ ಬಳಸಿಕೊಂಡಿತ್ತು. 2019ರಲ್ಲಿ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್​ ನೇಪಾಳ ಭೇಟಿಯ ವೇಳೆ ಮೌಂಟ್ ಎವರೆಸ್ಟ್​ನ ಎತ್ತರವನ್ನು ಜಂಟಿಯಾಗಿ ಘೋಷಿಸುವ ಒಪ್ಪಂದಕ್ಕೆ ಸಹಿಹಾಕಿದ್ದರು.

ಮೌಂಟ್ ಎವೆರೆಸ್ಟ್​ನ ಎತ್ತರ 8,848 ಮೀಟರ್ ಎಂದು ಸರ್ವೆ ಆಫ್ ಇಂಡಿಯಾ 1954ರಲ್ಲಿ ಅಳೆದು ಘೋಷಿಸಿತ್ತು. ಈವರೆಗೆ ಮೌಂಟ್​ ಎವೆರೆಸ್ಟ್​ನ ಅಧಿಕೃತ ಎತ್ತರ ಇದು ಎಂದು ಜಗತ್ತು ನಂಬಿಕೊಂಡಿತ್ತು. ಮೌಂಟ್​ ಎವೆರೆಸ್ಟ್​ಗೆ ನೇಪಾಳದಲ್ಲಿ ಸಾಗರ್​ಮಾತಾ ಎಂದು ಕರೆಯಲಾಗುತ್ತದೆ.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ