AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Engineer’s Day 2022: ಇಂದು ಸರ್​ ಎಂ ವಿಶ್ವೇಶ್ವರಯ್ಯ ಜನ್ಮದಿನ; ದೇಶ ಕಟ್ಟಿದ ಎಂಜಿನಿಯರ್​ಗಳನ್ನು ಅಭಿನಂದಿಸೋಣ

Sir M. Visvesvaraya Birth Anniversary: ಭಾರತದಲ್ಲಿ ಎಂಜಿನಿಯರಿಂಗ್ ಕಾಲೇಜುಗಳ ಗುಣಮಟ್ಟ ಹೆಚ್ಚಿಸಲು ನಮ್ಮ ಸರ್ಕಾರವು ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

National Engineer's Day 2022: ಇಂದು ಸರ್​ ಎಂ ವಿಶ್ವೇಶ್ವರಯ್ಯ ಜನ್ಮದಿನ; ದೇಶ ಕಟ್ಟಿದ ಎಂಜಿನಿಯರ್​ಗಳನ್ನು ಅಭಿನಂದಿಸೋಣ
ಸರ್ ಎಂ ವಿಶ್ವೇಶ್ವರಯ್ಯ
TV9 Web
| Updated By: Digi Tech Desk|

Updated on:Sep 15, 2022 | 9:41 AM

Share

ಭಾರತ ರತ್ನ ಸರ್​ ಎಂ ವಿಶ್ವೇಶ್ವರಯ್ಯ ಅವರು ದೇಶಕ್ಕೆ ನೀಡಿದ ಮಹತ್ವದ ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ಅವರ ಜನ್ಮದಿನವಾದ ಸೆಪ್ಟೆಂಬರ್ 15ರಂದು ಪ್ರತಿ ವರ್ಷ ‘ಎಂಜಿನಿಯರ್ಸ್​ ಡೇ’ ಆಗಿ ಆಚರಿಸಲಾಗುತ್ತದೆ. 15ನೇ ಸೆಪ್ಟೆಂಬರ್ 1861ರಂದು ಜನಿಸಿದ ವಿಶ್ವೇಶ್ವರಯ್ಯನವರು ಭಾರತದ ಮೊದಲ ಸಿವಿಲ್ ಎಂಜಿನಿಯರ್. ಮೈಸೂರು ಸಂಸ್ಥಾನದ ದಿವಾನರಾಗಿ ಅವರು ನೀಡಿದ ಹಲವು ಕೊಡುಗೆಗಳಿಂದ ಕರ್ನಾಟಕ ಇಂದಿಗೂ ಲಾಭ ಪಡೆದುಕೊಳ್ಳುತ್ತಿದೆ. 101 ವರ್ಷದ ತುಂಬು ಜೀವನ ನಡೆಸಿದ ವಿಶ್ವೇಶ್ವರಯ್ಯನವರು 14ನೇ ಏಪ್ರಿಲ್ 1962ರಂದು ನಿಧನರಾದರು. ಸೆಪ್ಟೆಂಬರ್ 15, 1968ರಿಂದ ಪ್ರತಿ ವರ್ಷ ಭಾರತದಲ್ಲಿ ವಿಶ್ವೇಶ್ವರಯ್ಯನವರ ಗೌರವಾರ್ಥ ಎಂಜಿನಿಯರ್ಸ್​ ಡೇ ಆಚರಿಸಲಾಗುತ್ತಿದೆ. ಈ ಮೂಲಕ ವಿಶ್ವೇಶ್ವರಯ್ಯನವರ ಜೀವನ ಮತ್ತು ಸಾಧನೆಯನ್ನು ಸರ್ಕಾರ, ಸರ್ಕಾರಿ ಸಂಸ್ಥೆಗಳು, ಎಂಜಿನಿಯರ್​ ಸಂಘಗಳು, ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಜನರು ನೆನಪಿಸಿಕೊಳ್ಳುತ್ತಾರೆ.

ಚಿಕ್ಕಬಳ್ಳಾಪುರ-ದೊಡ್ಡಬಳ್ಳಾಪುರ ರಸ್ತೆಯಲ್ಲಿ ನಂದಿಬೆಟ್ಟದ ಬುಡದಲ್ಲಿರುವ ಮುದ್ದೇನಹಳ್ಳಿಯಲ್ಲಿ 15ನೇ ಸೆಪ್ಟೆಂಬರ್ 1861ರಂದು ಜನಿಸಿದ ವಿಶ್ವೇಶ್ವರಯ್ಯ ಬಾಲ್ಯದಲ್ಲಿ ತೀವ್ರ ಬಡತನ ಎದುರಿಸಿದರು. ಛಲದಿಂದ ಓದಿದ ಅವರು ಪುಣೆಯ ಇಂಜಿನಿಯರಿಂಗ್ ಕಾಲೇಜಿನಿಂದ ಪದವಿ ಪಡೆದರು. ನೀರಾವರಿ ಹಾಗೂ ಪ್ರವಾಹ ತಡೆ ಯೋಜನೆಗಳು ಅವರ ಆಸಕ್ತಿಯ ಕ್ಷೇತ್ರಗಳಾಗಿದ್ದವು.

ಮಂಡ್ಯ ಜಿಲ್ಲೆಯಲ್ಲಿ ನಿರ್ಮಿಸಿರುವ ಕೃಷ್ಣರಾಜಸಾಗರ ಅಣೆಕಟ್ಟು ವಿಶ್ವೇಶ್ವರಯ್ಯನವರ ಕನಸಿನ ಕೂಸು. ಪುಣೆ ಸಮೀಪ 1903ರಲ್ಲಿ ನಿರ್ಮಿಸಿದ ಖಡಕ್ ವಾಸ್ಲಾ ಜಲಾಶಯದಲ್ಲಿ ಅಳವಡಿಸಿರುವ ಅಟೊಮ್ಯಾಟಿಕ್ ಬ್ಯಾರಿಯರ್ ವಾಟರ್ ಫ್ಲಡ್‌ಗೇಟ್‌ಗಳು ವಿಶ್ವೇಶ್ವರಯ್ಯ ಅವರ ಕಲ್ಪನೆ ಮತ್ತು ಚಿಂತನೆಯ ಸಾಮರ್ಥ್ಯವನ್ನು ಸಾರಿ ಹೇಳುತ್ತಿವೆ. 1917ರಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆಯ ಹಿಂದಿನ ಚಾಲಕ ಶಕ್ತಿಯಾಗಿ ವಿಶ್ವೇಶ್ವರಯ್ಯ ಕೆಲಸ ಮಾಡಿದ್ದರು. ಮುಂದಿನ ದಿನಗಳಲ್ಲಿ ಅದು ‘ಯೂನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್‌ ಆಫ್‌ ಎಂಜಿನಿಯರಿಂಗ್’ ಎಂದು ಹೆಸರುವಾಸಿಯಾಯಿತು.

ಬ್ರಿಟಿಷ್ ಸರ್ಕಾರವು ವಿಶ್ವೇಶ್ವರಯ್ಯ ಅವರ ಸೇವೆಯನ್ನು ಗುರುತಿಸಿ, ‘ನೈಟ್‌ ಕಮಾಂಡರ್ ಆಫ್‌ ದಿ ಬ್ರಿಟಿಷ್ ಇಂಡಿಯನ್ ಎಂಪೈರ್’ ಬಿರುದು ನೀಡಿ ಗೌರವಿಸಿತ್ತು. ವಿಶ್ವೇಶ್ವರಯ್ಯ ಅವರಿಗೆ ಸ್ವತಂತ್ರ ಭಾರತದ ಸರ್ಕಾರವು 1955ರಲ್ಲಿ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿತು.

&

ಎಂಜಿನಿಯರ್​ಗಳಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ

ಎಂಜಿನಿಯರ್ಸ್​ ಡೇ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಎಲ್ಲ ಎಂಜಿನಿಯರ್​ಗಳಿಗೆ ಶುಭಾಶಯ ಕೋರಿದ್ದಾರೆ. ನಮ್ಮ ದೇಶವು ಅತ್ಯುತ್ತಮ ಕೌಶಲ ಪಡೆಯುವ ಎಂಜಿನಿಯರ್​ಗಳ ಸೇವೆ ಪಡೆಯುವ ಭಾಗ್ಯ ಹೊಂದಿದೆ. ಭಾರತದಲ್ಲಿ ಎಂಜಿನಿಯರಿಂಗ್ ಕಾಲೇಜುಗಳ ಗುಣಮಟ್ಟ ಹೆಚ್ಚಿಸಲು ನಮ್ಮ ಸರ್ಕಾರವು ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

Published On - 8:56 am, Thu, 15 September 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!