AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TOTO Award 2022 : ಟೊಟೊ ಪುರಸ್ಕಾರ ; ಸೃಜನಶೀಲ ಯುವಬರಹಗಾರರೇ ನಿಮಗಿನ್ನೂ 20 ದಿನಗಳ ಕಾಲಾವಕಾಶವಿದೆ!

Call for Applications : ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾದ 2022 ನೇ ಸಾಲಿನ ಟೊಟೊ ಪುರಸ್ಕಾರಕ್ಕಾಗಿ ‘ಟೊಟೊ ಫಂಡ್ಸ್ ದಿ ಆರ್ಟ್ಸ್’ ಸಂಸ್ಥೆಯು ಪ್ರವೇಶಗಳನ್ನು ಆಹ್ವಾನಿಸಿದ್ದು, ಕೊನೇ ದಿನಾಂಕವನ್ನು ಸೆ.30ರ ತನಕ ವಿಸ್ತರಿಸಿದೆ.

TOTO Award 2022 : ಟೊಟೊ ಪುರಸ್ಕಾರ ; ಸೃಜನಶೀಲ ಯುವಬರಹಗಾರರೇ ನಿಮಗಿನ್ನೂ 20 ದಿನಗಳ ಕಾಲಾವಕಾಶವಿದೆ!
TV9 Web
| Updated By: ಶ್ರೀದೇವಿ ಕಳಸದ|

Updated on:Sep 10, 2021 | 6:05 PM

Share

ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾದ 2022 ನೇ ಸಾಲಿನ ಟೊಟೊ ಪುರಸ್ಕಾರಕ್ಕಾಗಿ ಟೊಟೊ ಫಂಡ್ಸ್ ದಿ ಆರ್ಟ್ಸ್ ಸಂಸ್ಥೆಯು ಪ್ರವೇಶಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ಇದೇ ತಿಂಗಳ 30ರ ತನಕ ವಿಸ್ತರಿಸಲಾಗಿದೆ. ಕಥೆ, ಕವಿತೆ ಮತ್ತು ನಾಟಕ ಈ ಮೂರರಲ್ಲಿ  ಯಾವುದೇ ಪ್ರಕಾರದ ಬರೆವಣಿಗೆಯನ್ನು ಆಸಕ್ತರು ಕಳಿಸಬಹುದಾಗಿದೆ. ಈ ಮೂರು ಪ್ರಕಾರಗಳಿಂದ ಒಬ್ಬರನ್ನು ಪುರಸ್ಕಾರಕ್ಕಾಗಿ ಆಯ್ಕೆ ಮಾಡಲಾಗುತ್ತದೆ. ಈ ಆಯ್ಕೆಯನ್ನು ಕನ್ನಡದ ಹಿರಿಯ ಬರಹಗಾರರ ಸಮಿತಿಯು ಪ್ರತಿ ವರ್ಷದಂತೆ ಮಾಡಲಿದೆ. ಟೊಟೊ ಪುರಸ್ಕಾರವು 50,000 ರೂಪಾಯಿಗಳ ನಗದು ಬಹುಮಾನವನ್ನು ಒಳಗೊಂಡಿದೆ.

ಸೃಜನಶೀಲ ಯುವ ಬರಹಗಾರರಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಸ್ಥಾಪಿತವಾದ ಟೊಟೊ ಪುರಸ್ಕಾರವು ಹದಿನೆಂಟು ವರ್ಷಗಳಿಂದ ಯುವ ಪ್ರತಿಭೆಗಳಿಗೆ ಪ್ರೊತ್ಸಾಹ ನೀಡುತ್ತಾ ಬಂದಿದೆ. ಕಳೆದ ಹನ್ನೊಂದು ವರ್ಷಗಳಿಂದ ಕನ್ನಡಕ್ಕೂ ವಿಸ್ತೃತಗೊಂಡಿದ್ದು, ಹನ್ನೆರಡನೆಯ ವರ್ಷಕ್ಕೆ ಕಾಲಿಡುತ್ತಿದೆ. ಈ ಪ್ರಶಸ್ತಿಯನ್ನು ಟೊಟೊ ಫಂಡ್ಸ್ ದಿ ಆರ್ಟ್ಸ್ (Toto Funds the Arts – TFA) ಸಂಸ್ಥೆಯು ಸ್ಥಾಪಿಸಿ ನಿರ್ವಹಿಸುತ್ತಿದೆ.

ಪುರಸ್ಕಾರಕ್ಕಾಗಿ ಬರಹಗಳನ್ನು ಕಳುಹಿಸುವವರು ಭಾರತೀಯ ನಾಗರಿಕರಾಗಿರಬೇಕು (ಓವರ್ಸೀಸ್ ಸಿಟಿಜೆನ್ ಆಫ್ ಇಂಡಿಯಾ – OCI – ಚೀಟಿ ಉಳ್ಳವರು ಪ್ರವೇಶಕ್ಕೆ ಅರ್ಹರಾಗಿರುವುದಿಲ್ಲ). 18 ರಿಂದ 29 ವರ್ಷ ವಯಸ್ಸಿನವರಾಗಿರಬೇಕು. ಅಂದರೆ, ಜನವರಿ 1, 1992 ರ ನಂತರ ಮತ್ತು ಜನವರಿ 1 , 2004 ನಡುವೆ ಹುಟ್ಟಿದವರಾಗಿದ್ದಲ್ಲಿ ಮಾತ್ರ ಈ ಪುರಸ್ಕಾರಕ್ಕೆ ಪ್ರವೇಶಗಳನ್ನು ಕಳಿಸಲು ಅರ್ಹರು.

ಪ್ರವೇಶಗಳನ್ನು ಕಥೆ, ಕವಿತೆ ಮತ್ತು ನಾಟಕ ಈ ಮೂರರಲ್ಲಿ ಯಾವುದೇ ಪ್ರಕಾರದಲ್ಲಿಯಾದರೂ ಕಳಿಸಬಹುದು. ಈ ಮೂರು ಪ್ರಕಾರಗಳಿಂದ ಒಬ್ಬರನ್ನು ಪುರಸ್ಕಾರಕ್ಕಾಗಿ ಆಯ್ಕೆ ಮಾಡಲಾಗುತ್ತದೆ. ಈ ಆಯ್ಕೆಯನ್ನು ಕನ್ನಡದ ಹಿರಿಯ ಬರಹಗಾರರ ಸಮಿತಿಯು ಪ್ರತಿ ವರ್ಷದಂತೆ ಮಾಡಲಿದೆ. ಟೊಟೊ ಪುರಸ್ಕಾರವು 50,000 ರೂಪಾಯಿಗಳ ನಗದು ಬಹುಮಾನವನ್ನು ಒಳಗೊಂಡಿದೆ.

ಪ್ರವೇಶಗಳನ್ನು ಕಳುಹಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್, 2021 ಪ್ರವೇಶಗಳನ್ನು ಈ ಕೆಳಗಿನ ಈಮೇಲ್ ವಿಳಾಸಕ್ಕೆ ಕಳಿಸಿರಿ: totokannada@gmail.com

ನೀವು ಸಲ್ಲಿಸುವ ಪ್ರತಿ ಪ್ರವೇಶದ ಜೊತೆಗೆ ಅರ್ಜಿಯನ್ನು ಲಗತ್ತಿಸಬೇಕು. ಈ ಅರ್ಜಿಯನ್ನು http://totofundsthearts.blogspot.com ಇಲ್ಲಿಂದ ಪಡೆಯಬಹುದು. ಅರ್ಜಿರಹಿತ ಪ್ರವೇಶಗಳನ್ನು ಪರಿಗಣಿಸುವುದಿಲ್ಲ.

ನಿಯಮಗಳು:

ಪ್ರವೇಶಗಳನ್ನು MS Word ನಲ್ಲಿ ನುಡಿ, ಬರಹ ಅಥವಾ ಯೂನಿಕೋಡ್ ನಲ್ಲಿ ಮಾತ್ರ ಕಳಿಸಬೇಕು. ಮುದ್ರಿತ ಅಥವಾ ಹಸ್ತಪ್ರತಿಗಳನ್ನು ಸ್ವೀಕರಿಸುವುದಿಲ್ಲ. MS Word ಅಲ್ಲದೇ ಬೇರೆ ಯಾವ ಸಾಫ್ಟವೇರ್​ನಲ್ಲಿಯೂ ಪ್ರವೇಶಗಳನ್ನು ಸ್ವೀಕರಿಸುವುದಿಲ್ಲ. ಅರ್ಜಿಯಲ್ಲಿ ನಿಮ್ಮ ಬ್ಯಾಂಕ್ ಖಾತೆಯಲ್ಲಿ ದಾಖಲಾದ ಹೆಸರನ್ನು ನಮೂದಿಸಿ. ಕಾವ್ಯನಾಮ ಇದ್ದಲ್ಲಿ, ನಿಮ್ಮ ಅಸಲಿ ಹೆಸರನ್ನು ಕೂಡ ಅರ್ಜಿಯಲ್ಲಿ ಸೂಚಿಸಬೇಕು. ಪ್ರವೇಶಕ್ಕಾಗಿ ಕಳಿಸುವ ಕತೆ, ಕವಿತೆ, ನಾಟಕಗಳ ಮೇಲೆ ಎಲ್ಲಿಯೂ ನಿಮ್ಮ ಹೆಸರು ಬರೆದಿರಬಾರದು. ಇದನ್ನು ಅರ್ಜಿಯಲ್ಲೇ ಬರೆದು, ಪ್ರವೇಶದ ಜೊತೆ ಕಳಿಸಬೇಕು.

ನಿಮಗೆ ಅರ್ಜಿಯನ್ನು ಪಡೆಯುವಲ್ಲಿ ಅಥವಾ ಇತರ ತೊಂದರೆಗಳಿದ್ದಲ್ಲಿ totokannada@gmail.com ಗೆ ಬರೆದು ಸಹಾಯ ಕೇಳಬಹುದು. ಕವಿತೆಗಳನ್ನು ಕಳುಹಿಸುವವರು 8 ರಿಂದ 12 ಕವಿತೆಗಳನ್ನು ಕಳಿಸಬಹುದು. ಕತೆಗಳನ್ನು ಕಳಿಸುವವರು ಒಂದಕ್ಕಿಂತ ಹೆಚ್ಚು ಕತೆಗಳನ್ನು ಕಳಿಸಬಹುದು, ಆದರೆ ಎಲ್ಲ ಕತೆಗಳೂ ಸೇರಿ 7500 ಶಬ್ದಗಳನ್ನು ಮೀರಬಾರದು. ನಾಟಕಗಳ ಶಬ್ದಮಿತಿ 10,000 ಶಬ್ದಗಳು.

ನೀವು ಎಲ್ಲ ಮೂರು ಪ್ರಕಾರಗಳಲ್ಲಿಯೂ ಪ್ರವೇಶಗಳನ್ನು ಕಳಿಸಬಹುದು. ಆದರೆ ಪ್ರತಿಯೊಂದು ಪ್ರಕಾರಕ್ಕೂ ಪ್ರತ್ಯೇಕವಾದ ಪ್ರವೇಶಗಳನ್ನು ಕಳಿಸಬೇಕು. ಉದಾಹರಣೆಗೆ ನೀವು ಮೂರೂ ಪ್ರಕಾರಗಳಿಗೆ ಪ್ರವೇಶಗಳನ್ನು ಕಳಿಸಬಯಸಿದರೆ, ನಿಮ್ಮ ಕವಿತೆಗಳನ್ನು ಮೊದಲ ಪ್ರವೇಶವಾಗಿಯೂ, ಕತೆಗಳನ್ನು ಎರಡನೆಯ ಪ್ರವೇಶವಾಗಿಯೂ, ನಾಟಕವನ್ನು ಮೂರನೆಯ ಪ್ರವೇಶವಾಗಿಯೂ ಕಳಿಸಬೇಕು. ಪ್ರತಿಯೊಂದು ಪ್ರವೇಶದ ಮಿತಿ 7500 ಶಬ್ದಗಳು. ಒಂದಕ್ಕಿಂತ ಹೆಚ್ಚು ನಾಟಕಗಳಿದ್ದಲ್ಲಿ ಎಲ್ಲ ನಾಟಕಗಳ ಒಟ್ಟೂ ಶಬ್ದಗಳು 10,000 ಮೀರಬಾರದು. ಪ್ರತಿ ಪ್ರತ್ಯೇಕ ಪ್ರವೇಶಕ್ಕೂ ಪ್ರತ್ಯೇಕ ಅರ್ಜಿ ಕಳಿಸಬೇಕು.

ಈಗಾಗಲೇ ಪುಸ್ತಕರೂಪದಲ್ಲಿ ಪ್ರಕಟವಾಗಿರುವ ಕೃತಿಗಳನ್ನು ಪುರಸ್ಕಾರಕ್ಕಾಗಿ ಕಳಿಸುವಂತಿಲ್ಲ. ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಬಿಡಿ ಕತೆ, ಕವಿತೆ, ನಾಟಕಗಳನ್ನು ಕಳಿಸಬಹುದು. ಆದರೆ ಎಲ್ಲವೂ ಈಗಾಗಲೇ ಹೇಳಿದಂತೆ ಈಮೇಲ್ ಮೂಲಕ ಮಾತ್ರ ಕಳಿಸಬೇಕು.

ಇ-ಮೇಲ್ Subject ನಲ್ಲಿ ನಿಮ್ಮ ಕೃತಿಯ ಪ್ರಕಾರವನ್ನು ಸೂಚಿಸಬೇಕು. ಉದಾಹರಣೆಗೆ: ‘ಕನ್ನಡ ಸೃಜನಶೀಲ ಸಾಹಿತ್ಯ – ಕವಿತೆ’, ‘ಕನ್ನಡ ಸೃಜನಶೀಲ ಸಾಹಿತ್ಯ – ನಾಟಕ’ ಅಥವಾ ‘ಕನ್ನಡ ಸೃಜನಶೀಲ ಸಾಹಿತ್ಯ – ಕತೆ’.

ಷರತ್ತುಗಳು:

ನೀವು ಸಲ್ಲಿಸಿದ ಬರಹಗಳನ್ನು ಹಿಂತಿರುಗಿಸಲಾಗುವುದಿಲ್ಲ. ಅಗತ್ಯವಾದಲ್ಲಿ ನೀವು ಸಲ್ಲಿಸಿದ ಬರಹಗಳ ಆಯ್ದ ಭಾಗಗಳನ್ನು ಅಂತರ್ಜಾಲ ತಾಣದಲ್ಲಿ ಅಥವ ಸಂಸ್ಥೆಯ ಬ್ಲಾಗ್’ನಲ್ಲಿ/ಪುರಸ್ಕಾರದ ಪ್ರಚಾಕ್ಕೆ ಬಳಸಿಕೊಳ್ಳುವ ಹಕ್ಕು ಟಿ.ಎಫ್.ಎ.ಗೆ ಇದೆ. ಉಳಿದಂತೆ ಕೃತಿಯ ಪೂರ್ತಿ ಹಕ್ಕುಸ್ವಾಮ್ಯವು ಬರಹಗಾರರದೇ ಆಗಿರುತ್ತದೆ. ಈ ಬಗ್ಗೆ ಯಾವುದೇ ಪತ್ರ ವ್ಯವಹಾರ ಮಾಡಲಾಗುವುದಿಲ್ಲ. ಪುರಸ್ಕಾರದ ಕುರಿತು ಟಿ.ಎಫ್.ಎ ಆಯ್ಕೆ ಸಮಿತಿಯ ನಿರ್ಧಾರವೇ ಅಂತಿಮವಾದುದು ಮತ್ತು ಇದನ್ನು ಯಾವ ಬಗೆಯಲ್ಲೂ ಪ್ರಶ್ನಿಸಲಾಗದು.

ಈ ಪುರಸ್ಕಾರಕ್ಕೆ ಭೂಮಿಜಾ ಟ್ರಸ್ಟ್ ನೆರವು ನೀಡುತ್ತಿದೆ. ಇದು ಪ್ರದರ್ಶನಕಲೆಗಳ ಕಾರ್ಯಕ್ರಮಗಳನ್ನು ಬೆಂಗಳೂರು ಸೇರಿದಂತೆ ವಿಶ್ವಾದ್ಯಂತ ಹಮ್ಮಿಕೊಳ್ಳುವ ಸಂಸ್ಥೆ.

ಇದನ್ನೂ ಓದಿ : ToTo Award 2021; ಪತ್ರಕರ್ತೆ ಅಮೂಲ್ಯಾಳಿಗೆ ಒಂದು ಲಕ್ಷ ಮೊತ್ತದ ಟೊಟೊ ಪುರಸ್ಕಾರ

Published On - 9:29 am, Tue, 20 July 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ