‘ಟೊಟೊ ಅವಾರ್ಡ್ 2021’ ರ ಅಂತಿಮ ಸುತ್ತಿನಲ್ಲಿ ಅಮೂಲ್ಯಾ ಬಿ, ಸಂದೀಪ ಈಶಾನ್ಯ, ಸ್ನೇಹಜಯಾ ಕಾರಂತ

‘ಟೊಟೊ ಪುರಸ್ಕಾರ 2021’ ರ ಅಂತಿಮ ಪಟ್ಟಿ ಬಿಡುಗಡೆಯಾಗಿದ್ದು, ಕನ್ನಡ ಸೃಜನಶೀಲ ಬರೆವಣಿಗೆಯಲ್ಲಿ ಅಮೂಲ್ಯಾ. ಬಿ, ಸಂದೀಪ ಈಶಾನ್ಯ, ಸ್ನೇಹಜಯಾ ಕಾರಂತ್ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದಾರೆ.

‘ಟೊಟೊ ಅವಾರ್ಡ್ 2021’ ರ ಅಂತಿಮ ಸುತ್ತಿನಲ್ಲಿ ಅಮೂಲ್ಯಾ ಬಿ, ಸಂದೀಪ ಈಶಾನ್ಯ, ಸ್ನೇಹಜಯಾ ಕಾರಂತ
Follow us
ಶ್ರೀದೇವಿ ಕಳಸದ
|

Updated on:Jan 02, 2021 | 1:51 PM

‘ಟೊಟೊ ಪುರಸ್ಕಾರ 2021’ ಅಂತಿಮ ಪಟ್ಟಿ ಬಿಡುಗಡೆಯಾಗಿದ್ದು, ಕನ್ನಡ ಸೃಜನಶೀಲ ಬರೆವಣಿಗೆಯಲ್ಲಿ ಅಮೂಲ್ಯಾ. ಬಿ, ಸಂದೀಪ ಈಶಾನ್ಯ, ಸ್ನೇಹಜಯಾ ಕಾರಂತ್ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದಾರೆ.

ಕನ್ನಡದ ಸೃಜನಶೀಲ ಯುವ ಬರಹಗಾರರ ವಿಭಾಗದಲ್ಲಿ ವಿಜೇತರಾದವರಿಗೆ 50,000 ರೂಪಾಯಿಗಳ ನಗದು ಬಹುಮಾನವನ್ನು ನೀಡಲಿದ್ದು, ಫೆಬ್ರವರಿಯಲ್ಲಿ ಅಂತಿಮ ವಿಜೇತರ ಹೆಸರನ್ನು ಘೋಷಿಸಲಾಗುವುದು ಎಂದು ಟೊಟೊ ಸಂಸ್ಥೆ ತಿಳಿಸಿದೆ.

ಸೃಜನಶೀಲ ಯುವ ಬರಹಗಾರರಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಸ್ಥಾಪಿತವಾದ ಟೊಟೊ ಪುರಸ್ಕಾರವು ಹದಿನೈದು ವರ್ಷಗಳಿಂದ ಯುವ ಪ್ರತಿಭೆಗಳಿಗೆ ಪ್ರೊತ್ಸಾಹ ನೀಡುತ್ತಾ ಬಂದಿದೆ. ಕಳೆದ ಹತ್ತು ವರ್ಷಗಳಿಂದ ಕನ್ನಡದ ಯುವಬರಹಗಾರರಿಗೂ ಈ ಪ್ರಶಸ್ತಿ ನೀಡಲಾಗುತ್ತಿದೆ.  ಟಿ.ಎಫ್.ಎ. (Toto Funds the Arts) ಸಂಸ್ಥೆಯು ಆಂಗಿರಸ ‘ಟೊಟೊ’ ವೆಲ್ಲಾನಿಯ ಸ್ಮರಣಾರ್ಥ 2004 ರಲ್ಲಿ ಇದು  ಸ್ಥಾಪಿತವಾಯಿತು. ಕಲೆಗಳ ಬಗ್ಗೆ ಗಾಢವಾದ ಆಸಕ್ತಿಯನ್ನಿರಿಸಿಕೊಂಡಿದ್ದ ಟೊಟೊರವರ ಅಕಾಲಿಕ ಮರಣವು ಅವರ ಕುಟುಂಬ ಮತ್ತು ಸ್ನೇಹಿತರನ್ನು ಈ ಸಂಸ್ಥೆಯ ಸ್ಥಾಪನೆಗೆ ಪ್ರೇರೇಪಿಸಿತು. ಈ ಮೂಲಕ ಯುವ ಪ್ರತಿಭೆಗಳು ತಮ್ಮ ಕಲಾತ್ಮಕ ಅಭಿವ್ಯಕ್ತಿಯನ್ನು ಕಂಡುಕೊಳ್ಳುವಲ್ಲಿ ಉತ್ತೇಜನ ಸಿಗಲಿ ಎನ್ನುವುದು ಇದರ ಆಶಯವಾಗಿದೆ.

2020 Year in Review | ಇಲ್ಲಿದೆ ಜನಮೆಚ್ಚಿದ ಹಾಡುಗಳ ಪಟ್ಟಿ; ಕೇಳಿ ಆನಂದಿಸಿ

Published On - 1:28 pm, Sat, 2 January 21

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ