ಶಿವನ ಇಷ್ಟದ ಎಲೆ ಬಳಕೆಯಿಂದಲೇ ಆರೋಗ್ಯ-ಸೌಂದರ್ಯ ಪಡೆಯಬಹುದಂತೆ!

ಕಲವೊಂದು ವಸ್ತುಗಳಿಗೆ ಧಾರ್ಮಿಕವಾಗಿ ತುಂಬಾ ಮಹತ್ವವಿರುತ್ತೆ. ಅದನ್ನು ಜನ ಭಕ್ತಿಯಿಂದ ಹಣೆಗೊತ್ತಿಕೊಳ್ತಾರೆ. ಅಂಥ ಒಂದು ವಸ್ತು ಬಿಲ್ವಪತ್ರೆ. ಈ ಎಲೆ ಬಗ್ಗೆ ತಿಳಿದುಕೊಂಡವರೆಲ್ಲಾ ಇದು ಪೂಜೆಗೆ ಪ್ರಶಸ್ತವಾದುದು ಅಂತಾರೆ. ಆದ್ರೆ, ಅದಕ್ಕೆ ಸೌಂದರ್ಯ ಹೆಚ್ಚಿಸುವ ಗುಣವಿದೆಯೆಂದು ಎಲ್ಲರಿಗೂ ಗೊತ್ತಿಲ್ಲ. ಆ ಬಗ್ಗೆ ಒಂದಿಷ್ಟು ಮಾಹಿತಿಯಿದೆ ಗಮನಿಸಿ. ದೇಹದ ದುರ್ಗಂಧವನ್ನು ನಿವಾರಿಸಲು ತಾಜಾ ಬಿಲ್ವಪತ್ರೆ ರಸವನ್ನು ಪ್ರತಿದಿನ ಮೈಗೆ ಚೆನ್ನಾಗಿ ಲೇಪಿಸಿಕೊಂಡು ಅರ್ಧಗಂಟೆಯ ನಂತರ ಸ್ನಾನ ಮಾಡಬೇಕು. ದೇಹದ ಮೇಲೆ ಗಾಯಗಳು ಇದ್ದಾಗ ಬಿಲ್ವ ವೃಕ್ಷದ ಬೇರನ್ನು ನಿಂಬೆರಸದಲ್ಲಿ […]

ಶಿವನ ಇಷ್ಟದ ಎಲೆ ಬಳಕೆಯಿಂದಲೇ ಆರೋಗ್ಯ-ಸೌಂದರ್ಯ ಪಡೆಯಬಹುದಂತೆ!
Follow us
ಸಾಧು ಶ್ರೀನಾಥ್​
|

Updated on:Oct 01, 2019 | 5:21 PM

ಕಲವೊಂದು ವಸ್ತುಗಳಿಗೆ ಧಾರ್ಮಿಕವಾಗಿ ತುಂಬಾ ಮಹತ್ವವಿರುತ್ತೆ. ಅದನ್ನು ಜನ ಭಕ್ತಿಯಿಂದ ಹಣೆಗೊತ್ತಿಕೊಳ್ತಾರೆ. ಅಂಥ ಒಂದು ವಸ್ತು ಬಿಲ್ವಪತ್ರೆ. ಈ ಎಲೆ ಬಗ್ಗೆ ತಿಳಿದುಕೊಂಡವರೆಲ್ಲಾ ಇದು ಪೂಜೆಗೆ ಪ್ರಶಸ್ತವಾದುದು ಅಂತಾರೆ. ಆದ್ರೆ, ಅದಕ್ಕೆ ಸೌಂದರ್ಯ ಹೆಚ್ಚಿಸುವ ಗುಣವಿದೆಯೆಂದು ಎಲ್ಲರಿಗೂ ಗೊತ್ತಿಲ್ಲ. ಆ ಬಗ್ಗೆ ಒಂದಿಷ್ಟು ಮಾಹಿತಿಯಿದೆ ಗಮನಿಸಿ.

ದೇಹದ ದುರ್ಗಂಧವನ್ನು ನಿವಾರಿಸಲು ತಾಜಾ ಬಿಲ್ವಪತ್ರೆ ರಸವನ್ನು ಪ್ರತಿದಿನ ಮೈಗೆ ಚೆನ್ನಾಗಿ ಲೇಪಿಸಿಕೊಂಡು ಅರ್ಧಗಂಟೆಯ ನಂತರ ಸ್ನಾನ ಮಾಡಬೇಕು. ದೇಹದ ಮೇಲೆ ಗಾಯಗಳು ಇದ್ದಾಗ ಬಿಲ್ವ ವೃಕ್ಷದ ಬೇರನ್ನು ನಿಂಬೆರಸದಲ್ಲಿ ತೇಯ್ದು ಲೇಪಿಸುತ್ತಿರಬೇಕು. ತಲೆನೋವು ಸಮಸ್ಯೆ ಇದ್ದಾಗ ಬಿಲ್ವದ ಮರದ ಒಣ ಬೇರನ್ನು ಅರೆದು ಹಣೆಗೆ ಲೇಪಿಸಬೇಕು. ಇದರಿಂದ ತಲೆನೋವು ಕಡಿಮೆಯಾಗುತ್ತೆ.

ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ನಂತರ ಅದರ ತಿರುಳನ್ನು ತೆಗೆದು ನುಣ್ಣಗೆ ಅರೆದು ತಲೆಗೆ ಲೇಪಿಸಿಕೊಂಡು ಅರ್ಧ ಗಂಟೆಯ ನಂತರ ತೊಳೆಯಬೇಕು. ಇದನ್ನು ದಿನಕ್ಕೊಮ್ಮೆಯಂತೆ ಹದಿನೈದು ದಿನಗಳ ಕಾಲ ಮಾಡುವುದರಿಂದ ತಲೆಹೊಟ್ಟಿನ ಸಮಸ್ಯೆ ನಿವಾರಣೆಯಾಗುತ್ತದೆ. ಹಾಗೆ ಅಕಾಲ ನರೆಕೂದಲು ಸಮಸ್ಯೆ ನಿವಾರಣೆಯಾಗುತ್ತದೆ.

ನಿದ್ರಾಹೀನತೆಯಿಂದ ಬಳಲುತ್ತಿರುವವರು ಬಿಲ್ವದ ಎಲೆಯನ್ನು ನೀರು ಸೇರಿಸದೆ ಅರೆದು ಹಣೆಗೆ ಲೇಪಿಸಿಕೊಳ್ಳಬೇಕು. ಇದರಿಂದ ಒಳ್ಳೆಯ ನಿದ್ದೆ ಬರುತ್ತದೆ. ಬಿಲ್ವಪತ್ರೆಯ ರಸವನ್ನು ಪ್ರತಿದಿನ 2 ರಿಂದ 3 ಚಮಚ ಸೇವಿಸುತ್ತಿದ್ದರೆ ನಿಶ್ಯಕ್ತಿ ದೂರವಾಗುತ್ತದೆ. ನಿಶ್ಯಕ್ತಿ , ಆಯಾಸದಿಂದ ಬಳಲುತ್ತಿರುವವರು ದಿನದಲ್ಲಿ ಮೂರು ಬಾರಿ ಸೇವಿಸಬೇಕು. ಕಣ್ಣಿನಲ್ಲಿ ಉರಿ , ತುರಿಕೆ ಇದ್ದಾಗ ಬಿಲ್ವಪತ್ರೆಯನ್ನು ನುಣ್ಣಗೆ ಅರೆದು ಕಣ್ಣಿನ ಮೇಲೆ ಲೇಪಿಸಿಕೊಳ್ಳಬೇಕು. ಕಣ್ಣಿನ ಸೋಂಕು ಇದ್ದಾಗ ಅಥವಾ ಕಣ್ಣು ಕೆಂಪಾದಾಗ ಮಾಡಬಹುದಾದ ಚಿಕಿತ್ಸೆ ಇದು.

ಬಾಯಿಯಲ್ಲಿ ಹುಣ್ಣಾಗಿದ್ದಾಗ ಬಿಲ್ವಪತ್ರೆ ಹಣ್ಣಿನ ತಿರುಳಿಗೆ ಸ್ವಲ್ಪ ಬೆಲ್ಲ ಸೇರಿಸಿ ದಿನದಲ್ಲಿ ಒಂದು ಬಾರಿ ಸೇವಿಸಬೇಕು.. ಅಜೀರ್ಣ ಸಮಸ್ಯೆಯಿಂದ ಅಥವಾ ಹೊಟ್ಟೆ ಹುಣ್ಣಿನ ಸಮಸ್ಯೆ ಯಿಂದ ವಾಂತಿ ಆಗುತ್ತಿದ್ದರೆ ಎರಡು ಚಮಚೆ ಬಿಲ್ವಪತ್ರೆ ರಸಕ್ಕೆ ಒಂದು ಚಮಚೆ ಜೇನುತುಪ್ಪ ಸೇರಿಸಿ ದಿನದಲ್ಲಿ ೨೩ ಬಾರಿ ಸೇವಿಸಬೇಕು. ನೆಗಡಿ , ಇದ್ದಾಗ ಬಿಲ್ವಪತ್ರೆ ಎಲೆಯ ರಸವನ್ನು ಸ್ವಲ್ಪ ನೀರಿಗೆ ಬೆರೆಸಿ, ಈ ನೀರನ್ನು ಮೂಗಿಗೆ ಹನಿಸಬೇಕು. ನೆಗಡಿ, ಕೆಮ್ಮು , ದಮ್ಮು , ಶ್ವಾಸಕೋಶದ ಸಮಸ್ಯೆಗಳಿಂದ ಬಳಲುತ್ತಿರುವವರು 40 ದಿನಗಳವರೆಗೆ ಊಟದ ನಂತರ ಬಿಲ್ವದ ಹಣ್ಣಿಗೆ ಸ್ವಲ್ಪ ಸಕ್ಕರೆ ಮತ್ತು ಜೀನುತುಪ್ಪ ಸೇರಿಸಿ ತಿನ್ನಬೇಕು. ನೆಗಡಿಯಾದಾಗ ಬಿಲ್ವಪತ್ರೆಯ ರಸವನ್ನು ಸ್ವಲ್ಪ ಸ್ವಲ್ಪ ಕುಡಿಯುತ್ತಿದ್ದರೆ ಪ್ರಯೋಜನವಾಗುತ್ತದೆ. ಅಸ್ತಮಾ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಮುಂಜಾನೆ ಎದ್ದಕೂಡಲೇ ಒಂದು ಬಿಲ್ವದ ಎಲೆಯನ್ನು 2-3 ಕಾಳುಮೆಣಸಿನೊಂದಿಗೆ ಬಾಯಿಗೆ ಹಾಕಿಕೊಂಡು ಚೆನ್ನಾಗಿ ಅಗಿದು ತಿನ್ನಬೇಕು. ಇದನ್ನು 30-40 ದಿನಗಳ ಕಾಲ ಮಾಡಬೇಕು.

ಆಗಾಗ ಹೃದಯದ ಬಡಿತ ತಪ್ಪುವ ಪಾಲ್ಪಿಟೇಶನ್ ಹೆಸರಿನ ಸಮಸ್ಯೆ ಇರುವವರು ಬಿಲ್ವ ಮರದ ಬೇರಿನ ತೊಗಟೆಯ ಕಷಾಯವನ್ನು ಕುಡಿಯುತ್ತಿರಬೇಕು.. ಬಿಲ್ವದ ಎಲೆಗಳನ್ನು ಚೆನ್ನಾಗಿ ಒಣಗಿಸಿ ಚೂರ್ಣ ಮಾಡಿ ಸಂಗ್ರಹಿಸಿಡಬೇಕು.. ರಕ್ತದ ಅಧಿಕ ಒತ್ತಡ ಇರುವವರು ಅರ್ಧದಿಂದ ಒಂದು ಚಮಚೆಯ ಈ ಚೂರ್ಣವನ್ನು ಒಂದು ಬಟ್ಟಲು ನೀರಿಗೆ ಸೇರಿಸಿ ಕುದಿಸಿ, ತಣಿಸಿ ದಿನದಲ್ಲಿ 2 ರಿಂದ 3 ಬಾರಿ ಕುಡಿಯುತ್ತ್ತಿದ್ದರೆ ಪ್ರಯೋಜನವಾಗುತ್ತದೆ.

ದೇಹದ ಮೇಲೆ ಗಾಯವಾಗಿ ಅದು ಕೊಳೆಯುವ ಸ್ಥಿತಿ ತಲಪಿದಾಗ ಆ ಜಾಗದಲ್ಲಿ ಬಿಲ್ವಪತ್ರೆಯನ್ನು ಅರೆದು ಅದರ ಪೇಸ್ಟನ್ನು ಕಟ್ಟಿದರೆ ಬೇಗ ಗುಣವಾಗುತ್ತದೆ. ಸುಟ್ಟ ಗಾಯದ ಮೇಲೆ ಬಿಲ್ವಪತ್ರೆ ರಸವನ್ನು ಲೇಪಿಸುತ್ತಿದ್ದರೆ ಬೇಗ ಮಾಯುತ್ತದೆ.

ಕಾಲು ಅಥವಾ ದೇಹದ ಬೇರಾವುದೇ ಭಾಗದಲ್ಲಿ ಊತ ಇದ್ದಾಗ ಬಿಲ್ವಪತ್ರೆ ರಸಕ್ಕೆ ಕಾಳುಮೆಣಸು ಪುಡಿ ಸೇರಿಸಿ ಕುಡಿಯುತ್ತಿದ್ದರೆ ಪ್ರಯೋಜನವಾಗುತ್ತದೆ.. ಬಿಲ್ವದ ತಿರುಳಿಗೆ ಸಾಸಿವೆ ಎಣ್ಣೆ ಸೇರಿಸಿ ಕಲೆಸಿ ಬಿಸಿ ಮಾಡಿ ಊತ, ಬಾವು ಇರುವಲ್ಲಿ ಇಟ್ಟರೆ ಪ್ರಯೋಜನವಾಗುತ್ತದೆ.

ಬಿಲ್ವಪತ್ರೆಯ ಎಲೆಗಳನ್ನು ನೆರಳಿನಲ್ಲಿ ಒಣಗಿಸಿ ನಂತರ ಹುರಿದು ಚೂರ್ಣ ಮಾಡಬೇಕು. ಅರ್ಧ ಚಮಚ ಜೇನುತುಪ್ಪದಲ್ಲಿ ಈ ಚೂರ್ಣವನ್ನು ನಾಲ್ಕು ಚಮಚ ಸೇರಿಸಿ ಕಲೆಸಿ ಮಕ್ಕಳಿಗೆ ಕೊಟ್ಟರೆ ಶೀತ, ಕೆಮ್ಮು, ಗಂಟಲುನೋವು ನಿವಾರಣೆಯಾಗುತ್ತವೆ.ಯಾವುದೇ ಬಗೆಯ ಜ್ವರವಿದ್ದಾಗ ಬಿಲ್ವಪತ್ರೆಯ ರಸವನ್ನು ಸ್ವಲ್ಪ ಸ್ವಲ್ಪ ಕುಡಿಯುತ್ತಿದ್ದರೆ ಪ್ರಯೋಜನವಾಗುತ್ತದೆ. ಮಲೇರಿಯಾ ಸಮಸ್ಯೆ ಇದ್ದಾಗ ಬಿಲ್ವದ ಬೇರಿನ ತೊಗಟೆಯ ಕಷಾಯವನ್ನು ಮಾಡಿ ಕುಡಿಯುತ್ತಿರಬೇಕು.

Published On - 5:19 pm, Tue, 1 October 19

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?