ದೀಪಾವಳಿ ಆಚರಣೆಯ ಹಿಂದೆ ಇದೆ ರಾಮಾಯಣದ ನಂಟು!

ಹಿಂದೂ ಧರ್ಮದಲ್ಲಿ ದೀಪಗಳ ಹಬ್ಬ ದೀಪಾವಳಿಗೆ ವಿಶೇಷ ಮಹತ್ವವಿದೆ. ಮನೆ ಹಾಗೂ ಮನದ ಕತ್ತಲೆಯನ್ನು ಹೋಗಲಾಡಿಸಿ ಬೆಳಕನ್ನು ಉಂಟು ಮಾಡುವ ಹಬ್ಬವೇ ದೀಪಾವಳಿ. ಮುಂಗಾರು ಬೆಳೆ ಕೊಯ್ಲಿಗೆ ಬರುವ ಸಮಯದಲ್ಲಿ ಈ ಹಬ್ಬ ಬರುವುದು ವಿಶೇಷ. ಕೆಲವು ಕಡೆ ಆಶ್ವಯುಜ ಮಾಸದ ಕೊನೆಯ ಎರಡು ದಿನಗಳು ಹಾಗೂ ಕಾರ್ತಿಕ ಮಾಸದ ಮೊದಲನೆಯ ದಿನ ಈ ಹಬ್ಬವನ್ನು ಆಚರಿಸಿದರೆ ಇನ್ನು ಕೆಲವು ಕಡೆ ಮುಂದಿನ ಎರಡು ದಿನಗಳನ್ನು ಸೇರಿಸಿ 5 ದಿನ ವಿಜೃಂಭಣೆಯಿಂದ ಹಬ್ಬ ಆಚರಿಸಲಾಗುತ್ತೆ. ದೀಪಾವಳಿ ಹಬ್ಬ […]

ದೀಪಾವಳಿ ಆಚರಣೆಯ ಹಿಂದೆ ಇದೆ ರಾಮಾಯಣದ ನಂಟು!
ಸಾಂದರ್ಭಿಕ ಚಿತ್ರ
Follow us
ಸಾಧು ಶ್ರೀನಾಥ್​
|

Updated on: Oct 29, 2019 | 7:02 AM

ಹಿಂದೂ ಧರ್ಮದಲ್ಲಿ ದೀಪಗಳ ಹಬ್ಬ ದೀಪಾವಳಿಗೆ ವಿಶೇಷ ಮಹತ್ವವಿದೆ. ಮನೆ ಹಾಗೂ ಮನದ ಕತ್ತಲೆಯನ್ನು ಹೋಗಲಾಡಿಸಿ ಬೆಳಕನ್ನು ಉಂಟು ಮಾಡುವ ಹಬ್ಬವೇ ದೀಪಾವಳಿ. ಮುಂಗಾರು ಬೆಳೆ ಕೊಯ್ಲಿಗೆ ಬರುವ ಸಮಯದಲ್ಲಿ ಈ ಹಬ್ಬ ಬರುವುದು ವಿಶೇಷ. ಕೆಲವು ಕಡೆ ಆಶ್ವಯುಜ ಮಾಸದ ಕೊನೆಯ ಎರಡು ದಿನಗಳು ಹಾಗೂ ಕಾರ್ತಿಕ ಮಾಸದ ಮೊದಲನೆಯ ದಿನ ಈ ಹಬ್ಬವನ್ನು ಆಚರಿಸಿದರೆ ಇನ್ನು ಕೆಲವು ಕಡೆ ಮುಂದಿನ ಎರಡು ದಿನಗಳನ್ನು ಸೇರಿಸಿ 5 ದಿನ ವಿಜೃಂಭಣೆಯಿಂದ ಹಬ್ಬ ಆಚರಿಸಲಾಗುತ್ತೆ.

ದೀಪಾವಳಿ ಹಬ್ಬ ಆಚರಣೆಯ ಹಿಂದೆ ರಾಮಾಯಣದ ನಂಟು ಬೆಸೆದುಕೊಂಡಿದೆ. ರಾವಣನನ್ನು ಸಂಹರಿಸಿದ ರಾಮಚಂದ್ರನು ಸೀತೆ, ಲಕ್ಷ್ಮಣ ಹಾಗೂ ಹನುಮಂತನೊಡನೆ ಲಂಕೆಯಿಂದ ಆಯೋಧ್ಯೆಗೆ ಹಿಂದಿರುಗಿದ ದಿನವೇ ದೀಪಾವಳಿ ಎನ್ನಲಾಗುತ್ತೆ. ರಾಮ ಅಯೋಧ್ಯೆಗೆ ಆಗಮಿಸಿದ ಆ ದಿನ ಜನರು ಆನಂದದಿಂದ ದೀಪಗಳನ್ನು ಬೆಳಗಿಸಿ ರಾಮನನ್ನು ಸ್ವಾಗತಿಸಿದ್ದರು ಎನ್ನಲಾಗುತ್ತೆ. ಅಲ್ಲದೇ ಪಾಂಡವರು ಕೂಡ ಇದೇ ದಿನ ತಮ್ಮ ಅಜ್ಞಾತವಾಸವನ್ನು ಮುಗಿಸಿದ್ರು ಎನ್ನಲಾಗುತ್ತೆ.

ಭಾರತದ ಬೇರೆ ಬೇರೆ ಪ್ರದೇಶಗಳಲ್ಲಿ ದೀಪಾವಳಿಗೆ ಅದರದ್ದೇ ಆದ ಮಹತ್ವವಿದೆ. ಹಾಗೂ ಅವರದ್ದೇ ಆದ ಕೆಲವು ಸಂಪ್ರದಾಯಗಳು ಇರುತ್ತವೆ. ಕೆಲವರು ತಮ್ಮ ಸಂಪ್ರದಾಯಕ್ಕೆ ತಕ್ಕಂತೆ ಹಬ್ಬವನ್ನು ಆಚರಿಸ್ತಾರೆ. ದೀಪಾವಳಿ ಅಂದರೆ ದೀಪಗಳ ಸಾಲು ಎಂದರ್ಥ. ಆದ್ದರಿಂದ ದೀಪಗಳು ಈ ಹಬ್ಬದ ಸಮಯದಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸುತ್ತವೆ. ಮಣ್ಣಿನ ಹಣತೆ ಹಚ್ಚಿಡುವುದು ಶುಭ ದೀಪಾವಳಿಯ ಸಂಕೇತ. ಕತ್ತಲೆಯು ನಮ್ಮಲ್ಲಿ ಅಧೈರ್ಯವನ್ನು ತುಂಬುತ್ತೆ. ನಮ್ಮ ಆತ್ಮವಿಶ್ವಾಸವನ್ನು ಕುಗ್ಗಿಸುತ್ತೆ. ಆದ್ದರಿಂದ ಜನರು ಭರವಸೆಯ ಬೆಳಕನ್ನು ಹಣತೆಗಳನ್ನು ಹಚ್ಚಿ ದೀಪಾವಳಿಯನ್ನು ಆಚರಿಸ್ತಾರೆ.

ಇನ್ನು ಒಡಿಶಾ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ ದೀಪಾವಳಿಯ ರಾತ್ರಿಯಂದು ಮಹಾಕಾಳಿ ಅಥವಾ ನಿಶಿ ಪೂಜೆಯನ್ನು ಮಾಡಲಾಗುತ್ತೆ. ಪಾರ್ವತಿದೇವಿಯು ಕಾಳಿ ಅವತಾರವನ್ನು ತಾಳಿ ಅಸುರರ ರುಂಡವನ್ನು ಕತ್ತರಿಸಿ ಚಂಡಾಡಿದ ದಿನವೇ ದೀಪಾವಳಿ ಎಂಬ ನಂಬಿಕೆಯೂ ಇದೆ. ಹೀಗಾಗೇ ತಡರಾತ್ರಿಯಲ್ಲಿ ಕಾಳಿ ಪೂಜೆಯನ್ನು ಆರಂಭಿಸ್ತಾರೆ. ಮತ್ತು ಮುಂಜಾನೆ ಪ್ರಾತಃಕಾಲ ಮಗಿಯುವ ಹೊತ್ತಿಗೆ ಪೂಜೆಯನ್ನು ಮುಗಿಸ್ತಾರೆ. ಹೀಗೆ ದೀಪಾವಳಿ ಆಚರಣೆಯ ಹಿಂದೆ ಒಂದೊಂದು ಕಡೆ ಒಂದೊಂದು ವಿಶಿಷ್ಟ ಸಂಪ್ರದಾಯ ರೂಢಿಯಲ್ಲಿದೆ.

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್