World Day for International Justice 2022: ‘ಅಂತಾರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನ’ದ ಇತಿಹಾಸ, ಮಹತ್ವ ಇಲ್ಲಿದೆ

ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ರಚನೆಗೆ ಕಾರಣವಾದ ರೋಮ್ ಶಾಸನದ ಒಪ್ಪಂದದ ನೆನಪಿಗಾಗಿ ಪ್ರತಿ ವರ್ಷ ಜು.17ರಂದು ಅಂತಾರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನವನ್ನು ಆಚರಿಸಲಾಗುತ್ತದೆ.

World Day for International Justice 2022: 'ಅಂತಾರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನ'ದ ಇತಿಹಾಸ, ಮಹತ್ವ ಇಲ್ಲಿದೆ
ಸಾಂಕೇತಿಕ ಚಿತ್ರ
Follow us
| Updated By: Rakesh Nayak Manchi

Updated on: Jul 17, 2022 | 10:03 AM

ವಿಶ್ವದಲ್ಲಿ ಈ ದಿನಾಂಕವು ವಿಶೇಷ ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತದೆ. ಏಕೆಂದರೆ 1998ರಲ್ಲಿ ಒಪ್ಪಂದವೊಂದು ನಡೆದು ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ರಚನೆಯಾಗುತ್ತದೆ. ಈ ಒಪ್ಪಂದದ ನೆನಪಿಗಾಗಿ ಹಾಗೂ ಅಪರಾಧ ಕೃತ್ಯಗಳಿಂದ ಪ್ರಭಾವಿತರಾದ ಸಂತ್ರಸ್ತರ ಮೂಲಭೂತ ಮಾನವ ಹಕ್ಕುಗಳನ್ನು ರಕ್ಷಿಸಲು ಕೆಲಸ ಮಾಡುವ ವ್ಯಕ್ತಿಗಳನ್ನು ಗೌರವಿಸುವ ನಿಟ್ಟಿನಲ್ಲಿ ಜು.17 ಅನ್ನು ಅಂತಾರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನ (World Day for International Justice) ಎಂದು ಆಚರಿಸಲಾಗುತ್ತದೆ.  ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯಕ್ಕೆ ಬೆಂಬಲ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸಲು, ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯವನ್ನು ಉತ್ತೇಜಿಸಲು ಪ್ರಪಂಚದಾದ್ಯಂತ ಜನರು ಒಟ್ಟುಸೇರುತ್ತಾರೆ. ವಿಶ್ವ ಶಾಂತಿಗೆ ಧಕ್ಕೆ ತರುವ ಅಪರಾಧಗಳನ್ನು ತಡೆಗಟ್ಟಲು ನ್ಯಾಯ ಮತ್ತು ಮಾನವ ಹಕ್ಕುಗಳ ಎಲ್ಲಾ ವಕೀಲರನ್ನು ಒಟ್ಟುಗೋಡಿಸುವ ದಿನವೂ ಇದಾಗಿದೆ. ಈ ದಿನದ ಮಹತ್ವಕ್ಕೂ ಮುನ್ನ ಇತಿಹಾಸವನ್ನು ತಿಳಿಯೋಣ.

ಅಂತಾರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನದ ಇತಿಹಾಸ

1998ರ ಜು.17ರಲ್ಲಿ 139 ದೇಶಗಳು ಒಗ್ಗೂಡಿ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದ ರೋಮ್ ಶಾಸನದ ಶೀರ್ಷಿಕೆಯ ಒಪ್ಪಂದಕ್ಕೆ ಸಹಿ ಹಾಕಿದವು. ಇದು 2022ರ ಜು.1ರಂದು ಜಾರಿಗೆ ಬಂದು ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯ ಎಂದು ಕರೆಯಲ್ಪಟ್ಟಿತು. ರೋಮ್ ಶಾಸನವನ್ನು ಅಳವಡಿಸಿಕೊಂಡ ದಿನವನ್ನು ನೆನಪಿಸಿಕೊಳ್ಳುವ ನಿಟ್ಟಿನಲ್ಲಿ ಜು.17 ಅನ್ನು ಅಂತಾರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನ ಎಂದು ಘೋಷಿಸಲಾಯಿತು ಮತ್ತು ಪ್ರತಿ ವರ್ಷ ಈ ದಿನದಂದು ಒಪ್ಪಂದದ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತದೆ. ಅದಾಗ್ಯೂ ರೋಮ್ ಒಪ್ಪಂದಕ್ಕೆ ಚೀನಾ, ಇಸ್ರೇಲ್, ಯುನೈಟೆಡ್ ಸ್ಟೇಟ್ಸ್, ಇರಾಕ್ ಸೇರಿದಂತೆ ಸುಮಾರು 21 ದೇಶಗಳು ವಿರುದ್ಧವಾಗಿವೆ.

ಅಂತಾರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನದ ಮಹತ್ವ

ಅಂತಾರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನದ ಬಹುಮುಖ್ಯ ಮಹತ್ವ ಎಂದರೆ ನ್ಯಾಯದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಬಲಿಪಶುಗಳ ಹಕ್ಕುಗಳನ್ನು ಉತ್ತೇಜಿಸಿ ನ್ಯಾಯವನ್ನು ಒದಗಿಸುವ ಮಹತ್ವನ್ನು ಸೂಚಿಸುತ್ತದೆ. ನಿರ್ಮೂಲನೆ, ಕೊಲೆ ಇತ್ಯಾದಿ ಮಾನವೀಯತೆಯ ವಿರುದ್ಧದ ಅಪರಾಧಗಳು, ಉದ್ದೇಶಪೂರ್ವಕವಾಗಿ ಒಂದು ಸಮುದಾಯಕ್ಕೆ ಹಾನಿ ಉಂಟುಮಾಡುವಂತಹ ನರಮೇಧ, ಉದ್ದೇಶಪೂರ್ವಕವಾಗಿ ನೀಡುವ ಸಂಕಟ, ಚಿತ್ರಹಿಂಸೆ ಇತ್ಯಾದಿ ಯುದ್ಧ ಅಪರಾಧಗಳು ಮತ್ತು ಮಿಲಿಟರಿ ಆಕ್ರಮವಣ, ಸ್ವಾಧೀನ ಇತ್ಯಾದಿ ಆಕ್ರಮಣದ ಅಪರಾಧಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಗುರಿಯನ್ನು ಇದು ಹೊಂದಿದೆ.

ಆಚರಣೆ ಹೇಗೆ ಮಾಡಲಾಗುತ್ತದೆ?

ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯಕ್ಕೆ ಬೆಂಬಲ ನೀಡುವ ಕಾರ್ಯಕ್ರಮಗಳನ್ನು ಪ್ರಪಂಚದಾದ್ಯಂತ ಆಯೋಜಿಸಿ ಜನರನ್ನು ಒಟ್ಟುಗೂಡಿಸಿ ಮುಖ್ಯ ಕಾಳಜಿಗಳ ಮೇಲೆ ಕೇಂದ್ರೀಕರಿಸಲು ಕರೆ ನೀಡಲಾಗುತ್ತದೆ. ಪ್ರಪಂಚದಾದ್ಯಂತ ವಿವಿಧ ಸಂಘಟನೆಗಳು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಅಪರಾಧ ಬಲಿಪಶುಗಳನ್ನು ನೆನಪಿಸಿಕೊಳ್ಳಲಾಗುತ್ತದೆ ಮತ್ತು ಬಲಿಪಶುಗಳಿಗೆ ಗೌರವ ಸಲ್ಲಿಸಲಾಗುತ್ತದೆ. ವಿವಿಧ ಸುದ್ದಿ ವಾಹಿನಿಗಳು, ರೇಡಿಯೋ ಮತ್ತು ಪತ್ರಿಕೆಗಳು ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಪ್ರಚಾರ ನೀಡಲಾಗುತ್ತದೆ. ಹಲವಾರು ಸಾಂಸ್ಥಿಕ ಗುಂಪುಗಳು ನರಮೇಧ, ಮಹಿಳೆಯರ ಮೇಲಿನ ದೌರ್ಜನ್ಯ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಜನರ ಗಮನ ಸೆಳೆಯಲಾಗುತ್ತದೆ.

ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್