AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ratha Saptami 2024: ರಥ ಸಪ್ತಮಿಯ ದಿನ ಪಾಲಿಸಬೇಕಾದ ಕೆಲವು ನಿಯಮಗಳು ಇಲ್ಲಿದೆ

Ratha Saptami: ಹಿಂದೂ ಕ್ಯಾಲೆಂಡರ್ ಪ್ರಕಾರ, ರಥ ಸಪ್ತಮಿಯನ್ನು ಮಾಘ ಮಾಸದ ಶುಕ್ಲ ಪಕ್ಷದ ಏಳನೇ ದಿನದಂದು ಆಚರಿಸಲಾಗುತ್ತದೆ. ಈ ದಿನವನ್ನು ಅಚಲ ಸಪ್ತಮಿ ಎಂದೂ ಕರೆಯುತ್ತಾರೆ. ಅಲ್ಲದೆ ಈ ದಿನ ಸೂರ್ಯನನ್ನು ಪೂಜಿಸುವ ಮೂಲಕ ಮತ್ತು ಉಪವಾಸ ಮಾಡುವುದರಿಂದ, ಒಬ್ಬ ವ್ಯಕ್ತಿ ಎಲ್ಲಾ ರೋಗ ಮತ್ತು ತನ್ನ ಜೀವನದಲ್ಲಿ ಮಾಡಿದ ಪಾಪಗಳಿಂದ ಪರಿಹಾರ ಪಡೆದುಕೊಳ್ಳುತ್ತಾನೆ ಎಂದು ನಂಬಲಾಗಿದೆ.

Ratha Saptami 2024: ರಥ ಸಪ್ತಮಿಯ ದಿನ ಪಾಲಿಸಬೇಕಾದ ಕೆಲವು ನಿಯಮಗಳು ಇಲ್ಲಿದೆ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Feb 15, 2024 | 3:24 PM

Share

ಹಿಂದೂ ಕ್ಯಾಲೆಂಡರ್ ಪ್ರಕಾರ, ಮಾಘ ಮಾಸದ ಶುಕ್ಲ ಪಕ್ಷದ ಏಳನೇ ದಿನವನ್ನು ರಥ ಸಪ್ತಮಿ (Ratha Saptami) ಎಂದು ಕರೆಯಲಾಗುತ್ತದೆ. ಈ ದಿನವನ್ನು ಅಚಲ ಸಪ್ತಮಿ ಮತ್ತು ಮಾಘಿ ಸಪ್ತಮಿ ಎಂದೂ ಕೂಡ ಕರೆಯಲಾಗುತ್ತದೆ. ಪೌರಾಣಿಕ ನಂಬಿಕೆಗಳ ಪ್ರಕಾರ, ಈ ದಿನದಂದು ಸೂರ್ಯ ದೇವನು ತನ್ನ ದೈವಿಕ ಬೆಳಕಿನಿಂದ ಇಡೀ ಬ್ರಹ್ಮಾಂಡವನ್ನು ಬೆಳಗಿಸಿದನು. ಹಾಗಾಗಿ ಸಪ್ತಮಿ ತಿಥಿ ಸೂರ್ಯ ದೇವರಿಗೆ ಸಂಬಂಧಿಸಿದೆ ಎಂದು ಹೇಳಲಾಗುತ್ತದೆ. ಈ ದಿನದಂದು ಪವಿತ್ರ ನದಿಗಳಲ್ಲಿ ಸ್ನಾನ ಮಾಡುವುದು ಮತ್ತು ದಾನ ಮಾಡುವ ಮೂಲಕ, ಪಾಪಗಳಿಂದ ಮುಕ್ತಿ ಪಡೆಯಬಹುದಾಗಿದೆ. ಆದರೆ ರಥ ಸಪ್ತಮಿ ವ್ರತವನ್ನು ಆಚರಣೆ ಮಾಡುವವರು ಕೆಲವು ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕಾಗುತ್ತದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ರಥ ಸಪ್ತಮಿ ಯಾವಾಗ ಮತ್ತು ಆ ದಿನದ ಶುಭ ಸಮಯ!

ಪಂಚಾಂಗದ ಪ್ರಕಾರ, ಮಾಘ ಮಾಸದ ಶುಕ್ಲ ಪಕ್ಷದ ಸಪ್ತಮಿ ತಿಥಿಯು ಫೆ. 15 ರಂದು ಬೆಳಿಗ್ಗೆ 10:13 ರಿಂದ ಪ್ರಾರಂಭವಾಗಿ ಫೆ. 16 ರಂದು ಬೆಳಿಗ್ಗೆ 08:54ಕ್ಕೆ ಕೊನೆಗೊಳ್ಳುತ್ತದೆ. ಹಾಗಾಗಿ ಸಪ್ತಮಿ ತಿಥಿಯಲ್ಲಿ ಸೂರ್ಯೋದಯ ಬಂದಿರುವ ದಿನವನ್ನು ಅಂದರೆ ಫೆ. 16 ರಂದು ಆಚರಣೆ ಮಾಡಲಾಗುತ್ತದೆ. ಈ ದಿನ ಸ್ನಾನ ಮಾಡಲು ಶುಭ ಸಮಯ, ಬೆಳಿಗ್ಗೆ 05:17 ರಿಂದ 06:59 ರವರೆಗೆ. ಪೂಜೆಗೆ ಶುಭ ಸಮಯ ಬೆಳಿಗ್ಗೆ 08:23 ರಿಂದ 11.11 ರವರೆಗೆ ಮತ್ತು ಮಧ್ಯಾಹ್ನ 12:35 ರಿಂದ 01:59 ರವರೆಗೆ.

ರಥ ಸಪ್ತಮಿಯ ದಿನದಂದು ಯಾವ ರೀತಿಯ ಆಹಾರವನ್ನು ಸೇವನೆ ಮಾಡಬೇಕು?

ಧರ್ಮಗ್ರಂಥಗಳ ಪ್ರಕಾರ, ಸೂರ್ಯ ದೇವರನ್ನು ಪೂಜಿಸಿದ ನಂತರ, ಉಪ್ಪು ಬಳಸಿದ ಆಹಾರಗಳನ್ನು ಸೇವನೆ ಮಾಡದೆಯೇ ಹಣ್ಣುಗಳನ್ನು ಮಾತ್ರ ತಿನ್ನುತ್ತಾರೋ, ಅವರು ಇಡೀ ವರ್ಷ ಸೂರ್ಯ ದೇವರನ್ನು ಪೂಜಿಸಿದಷ್ಟು ಪುಣ್ಯಗಳನ್ನು ಪಡೆಯುತ್ತಾರೆ. ಅಲ್ಲದೆ, ಜಾತಕದಲ್ಲಿ ಸೂರ್ಯನ ಸ್ಥಾನವು ಬಲವಾಗಿರುತ್ತದೆ, ಮತ್ತು ಜೀವನದಲ್ಲಿ ಶುಭ ಫಲಿತಾಂಶಗಳನ್ನು ನೀಡುತ್ತದೆ. ಒಂಬತ್ತು ಗ್ರಹಗಳ ರಾಜನಾದ ಸೂರ್ಯನ ಬಲವಾದ ಸ್ಥಾನದಿಂದಾಗಿ, ಸರ್ಕಾರಿ ವಲಯ, ಅಧಿಕಾರಿ ವರ್ಗ, ಪ್ರತಿಷ್ಠೆ, ಸಾಮಾಜಿಕ ಸಮೃದ್ಧಿ ಮುಂತಾದ ಕೆಲಸಗಳಲ್ಲಿ ಸೂರ್ಯನಿಂದ ಶುಭ ಫಲಿತಾಂಶಗಳನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ: ಈ ವಾಸ್ತು ಸಲಹೆ ನಿಮಗೆ ಹಣದ ಕೊರತೆ ಬರದಂತೆ ತಡೆಯುತ್ತೆ

ರಥ ಸಪ್ತಮಿಯ ದಿನದಂದು ಏನನ್ನು ತಿನ್ನಬಾರದು?

ಪುರಾಣದಲ್ಲಿ ಹೇಳಿರುವ ಪ್ರಕಾರ ಅಚಲ ಸಪ್ತಮಿಯ ದಿನದಂದು ಉಪ್ಪು ಬಳಸಿದ ಆಹಾರವನ್ನು ಸೇವಿಸುವುದನ್ನು ನಿಷೇಧಿಸಲಾಗಿದೆ. ಏಕೆಂದರೆ ಈ ಉಪವಾಸವು ಅನೇಕ ಪಟ್ಟು ಪ್ರಯೋಜನಕಾರಿಯಾಗಿದೆ. ರಥ ಸಪ್ತಮಿಯ ದಿನ ಉಪವಾಸ ಮಾಡುವುದರಿಂದ ಬದುಕಿನಲ್ಲಿ ಅದೃಷ್ಟ ಒಲಿದು ಬರುತ್ತದೆ. ಜೊತೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸನ್ನು ಕಾಣಬಹುದಾಗಿದೆ. ಈ ಉಪವಾಸವನ್ನು ಕಟ್ಟು ನಿಟ್ಟಾಗಿ ಆಚರಿಸುವ ಮೂಲಕ ಜಾತಕದಲ್ಲಿ ಶುಭ ಫಲಿತಾಂಶಗಳನ್ನು ಪಡೆಯಬಹುದು. ಆದರೆ ಈ ದಿನ ಮಾಂಸ ಮತ್ತು ಮದ್ಯವನ್ನು ಸೇವಿಸಬಾರದು. ಅಲ್ಲದೆ, ಈ ದಿನ, ಸಂಪೂರ್ಣ ಬ್ರಹ್ಮಚರ್ಯವನ್ನು ಅನುಸರಿಸುವುದರ ಜೊತೆಗೆ, ಸಾತ್ವಿಕ ಆಹಾರವನ್ನು ಮಾತ್ರ ಸೇವಿಸಬೇಕು.

ರಥ ಸಪ್ತಮಿಯ ದಿನದಂದು ಏನು ಮಾಡಬೇಕು ಮತ್ತು ಏನು ಮಾಡಬಾರದು?

-ಅಚಲ ಸಪ್ತಮಿ ಅಥವಾ ರಥ ಸಪ್ತಮಿಯಂದು ಉಪ್ಪು ತಿನ್ನುವುದನ್ನು ತಪ್ಪಿಸಬೇಕು. ಆದರೆ ಉಪ್ಪು ದಾನ ಮಾಡಲು ಮರೆಯಬೇಡಿ.

-ಈ ದಿನ, ಹಸುವಿಗೆ ಬೆಲ್ಲವನ್ನು ತಿನ್ನಿಸಬೇಕು. ಇದರಿಂದ ಶುಭ ಫಲಗಳು ಪ್ರಾಪ್ತಿಯಾಗುತ್ತದೆ.

-ರಥ ಸಪ್ತಮಿಯ ದಿನ ಪವಿತ್ರ ನದಿಗಳಲ್ಲಿ ಸ್ನಾನ ಮಾಡಲು ಮರೆಯಬೇಡಿ, ಸಾಧ್ಯವಾಗದಿದ್ದರೆ ಮನೆಯಲ್ಲಿರುವ ಗಂಗಾ ಜಲವನ್ನು ಸ್ನಾನ ಮಾಡುವ ನೀರಿಗೆ ಸಿಂಪಡಿಸಿಕೊಳ್ಳಿ.

-ಅಚಲ ಸಪ್ತಮಿಯಂದು, ತಪ್ಪದೆಯೇ ಆದಿತ್ಯ ಹೃದಯ ಸ್ತೋತ್ರ, ಗಜೇಂದ್ರ ಮೋಕ್ಷ ಮತ್ತು ಸೂರ್ಯ ದೇವರ ಮಂತ್ರವನ್ನು ಪಠಿಸಿ. ‘

-ಹಲವು ವರ್ಷಗಳಾದರೂ ಮಕ್ಕಳ ಭಾಗ್ಯ ಇಲ್ಲದವರು ಈ ದಿನ ಉಪವಾಸ ಮಾಡಿ ಸೂರ್ಯ ದೇವನನ್ನು ಪೂಜಿಸಬೇಕು.

-ರಥ ಸಪ್ತಮಿಯ ದಿನದಂದು ಯಾವುದೇ ಕಾರಣಕ್ಕೂ ಕಪ್ಪು ಬಟ್ಟೆಗಳನ್ನು ಧರಿಸಬೇಡಿ, ಗೋಧಿ ಅಥವಾ ಹಳದಿ ಬಟ್ಟೆಗಳನ್ನು ಧರಿಸಲು ಪ್ರಯತ್ನಿಸಿ.

-ಈ ದಿನ, ಸೂರ್ಯ ದೇವರ ಹೆಸರಿನಲ್ಲಿ ದೀಪದ ಹಣತೆಗಳನ್ನು ದಾನ ಮಾಡಿ, ಒಳ್ಳೆಯದಾಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ