AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swapna Shastra: ಅಕ್ಷಯ ತೃತೀಯದಂದು ಬೀಳುವ ಈ ಕನಸುಗಳು ನಿಮ್ಮ ಅದೃಷ್ಟವನ್ನೇ ಬದಲಿಸಬಲ್ಲವು!

ಅಕ್ಷಯ ತೃತೀಯದಂದು ಬೀಳುವ ಕನಸುಗಳಿಗೆ ಸ್ವಪ್ನ ಶಾಸ್ತ್ರದಲ್ಲಿ ವಿಶೇಷ ಅರ್ಥವಿದೆ. ಈ ದಿನ ಚಿನ್ನ, ಬೆಳ್ಳಿ, ಲಕ್ಷ್ಮಿ, ಕುಬೇರ ಅಥವಾ ಶುದ್ಧ ನೀರು, ಹೂವು, ಸೂರ್ಯನಂತಹ ಪ್ರಕೃತಿಯ ಸಂಕೇತಗಳನ್ನು ಕನಸಿನಲ್ಲಿ ಕಂಡರೆ ಅದು ಅಪಾರ ಸಂಪತ್ತು, ಸುಖ ಮತ್ತು ಅದೃಷ್ಟವನ್ನು ಸೂಚಿಸುತ್ತದೆ. ನಿಮ್ಮ ಜೀವನದಲ್ಲಿ ಧನಲಾಭ, ಯಶಸ್ಸು ಹಾಗೂ ಸಮೃದ್ಧಿ ನೆಲೆಸಲಿದೆ ಎಂದು ಇದು ಸಾರುತ್ತದೆ.

Swapna Shastra: ಅಕ್ಷಯ ತೃತೀಯದಂದು ಬೀಳುವ ಈ ಕನಸುಗಳು ನಿಮ್ಮ ಅದೃಷ್ಟವನ್ನೇ ಬದಲಿಸಬಲ್ಲವು!
ಅಕ್ಷಯ ತೃತೀಯ
ಅಕ್ಷತಾ ವರ್ಕಾಡಿ
|

Updated on: Apr 19, 2026 | 10:16 AM

Share

ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ನಮಗೆ ಬೀಳುವ ಕನಸುಗಳಿಗೂ ವಿಶೇಷ ಅರ್ಥವಿದೆ ಎಂದು ಸ್ವಪ್ನ ಶಾಸ್ತ್ರ ತಜ್ಞರು ಹೇಳುತ್ತಾರೆ. ಈ ದಿನ ಕೆಲವು ನಿರ್ದಿಷ್ಟ ವಸ್ತುಗಳು ಕನಸಿನಲ್ಲಿ ಕಾಣಿಸಿಕೊಂಡರೆ, ಅದು ನಿಮ್ಮ ಜೀವನದಲ್ಲಿ ಬರಲಿರುವ ಸೌಭಾಗ್ಯದ ಮುನ್ಸೂಚನೆಯಾಗಿದೆ. ಅಕ್ಷಯ ತೃತೀಯದಂದು ಯಾವ ಕನಸುಗಳು ಬಿದ್ದರೆ ಶುಭ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಕನಸಿನಲ್ಲಿ ಚಿನ್ನ ಅಥವಾ ಬೆಳ್ಳಿ ಕಾಣುವುದು:

ಅಕ್ಷಯ ತೃತೀಯದಂದು ಚಿನ್ನದ ಮಹತ್ವ ಎಲ್ಲರಿಗೂ ತಿಳಿದಿದೆ. ಒಂದು ವೇಳೆ ಈ ದಿನದಂದು ನಿಮ್ಮ ಕನಸಿನಲ್ಲಿ ಚಿನ್ನ ಅಥವಾ ಬೆಳ್ಳಿ ಕಾಣಿಸಿಕೊಂಡರೆ, ಅದು ಅತ್ಯಂತ ಶುಭ ಸಂಕೇತ. ಇದರರ್ಥ ನಿಮ್ಮ ಸಂಪತ್ತು ವೃದ್ಧಿಯಾಗುವುದಲ್ಲದೆ, ಅನಿರೀಕ್ಷಿತ ಮೂಲಗಳಿಂದ ನಿಮಗೆ ಧನ ಲಾಭವಾಗಲಿದೆ.

ಲಕ್ಷ್ಮಿ ದೇವಿಯ ದರ್ಶನ:

ಕನಸಿನಲ್ಲಿ ತಾಯಿ ಲಕ್ಷ್ಮಿ ದೇವಿಯ ವಿಗ್ರಹ ಅಥವಾ ಫೋಟೋ ಕಾಣಿಸಿಕೊಂಡರೆ, ನೀವು ಶೀಘ್ರದಲ್ಲೇ ಆರ್ಥಿಕ ಸಂಕಷ್ಟಗಳಿಂದ ಮುಕ್ತಿ ಪಡೆಯಲಿದ್ದೀರಿ ಎಂದರ್ಥ. ಲಕ್ಷ್ಮಿ ದೇವಿಯ ಕೃಪೆಯಿಂದ ನಿಮ್ಮ ಅದೃಷ್ಟ ದ್ವಿಗುಣಗೊಳ್ಳಲಿದ್ದು, ಜೀವನದಲ್ಲಿ ಸುಖ-ಸಂತೋಷ ನೆಲೆಸಲಿದೆ.

ಇದನ್ನೂ ಓದಿ: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ

ಕುಬೇರ ದೇವನ ದರ್ಶನ:

ಧನದೇವತೆಯಾದ ಕುಬೇರನು ಕನಸಿನಲ್ಲಿ ಕಾಣಿಸಿಕೊಂಡರೆ, ನಿಮ್ಮ ಬಡತನ ದೂರವಾಗಿ ಶ್ರೀಮಂತಿಕೆ ಒಲಿಯಲಿದೆ ಎಂದು ಜ್ಯೋತಿಷ್ಯ ತಜ್ಞರು ಹೇಳುತ್ತಾರೆ. ಇದು ನಿಮ್ಮ ವೃತ್ತಿ ಅಥವಾ ವ್ಯವಹಾರದಲ್ಲಿ ದೊಡ್ಡ ಮಟ್ಟದ ಯಶಸ್ಸನ್ನು ಸೂಚಿಸುತ್ತದೆ.

ಪ್ರಕೃತಿಯ ಶುಭ ಸಂಕೇತಗಳು:

ಕೇವಲ ದೇವತೆಗಳಷ್ಟೇ ಅಲ್ಲದೆ, ಪ್ರಕೃತಿಯ ಈ ಕೆಳಗಿನ ಅಂಶಗಳು ಕನಸಿನಲ್ಲಿ ಬಂದರೂ ಅದು ಅದೃಷ್ಟವೇ.

  • ಶುದ್ಧ ನೀರು: ಜೀವನದಲ್ಲಿ ಶಾಂತಿ ಮತ್ತು ಸಮೃದ್ಧಿಯ ಸಂಕೇತ.
  • ಹೂವು ಮತ್ತು ಹಣ್ಣುಗಳು: ಹೊಸ ಅವಕಾಶಗಳು ಮತ್ತು ಸಂತೋಷದ ಮುನ್ಸೂಚನೆ.
  • ಸೂರ್ಯನ ಬೆಳಕು: ಸಮಾಜದಲ್ಲಿ ಗೌರವ ಹೆಚ್ಚಾಗುವುದಲ್ಲದೆ, ಹೊಸ ಚೈತನ್ಯದ ಉದಯವನ್ನು ಇದು ಸೂಚಿಸುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ