AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshaya Tritiyay 2024: ಈ ವರ್ಷದ ಅಕ್ಷಯ ತೃತೀಯ ಯಾವಾಗ? ಈ ದಿನದಂದು ಏನನ್ನು ತಿನ್ನಬಾರದು

ಈ ದಿನ ಪೂಜಿಸುವುದರಿಂದ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಬರುತ್ತದೆ ಮತ್ತು ಮನೆಯಲ್ಲಿ ಸಮೃದ್ಧಿ ಇರುತ್ತದೆ ಎಂಬ ಧಾರ್ಮಿಕ ನಂಬಿಕೆ ಇದೆ. ಈ ವರ್ಷ ಅಕ್ಷಯ ತೃತೀಯ ಯಾವಾಗ ಮತ್ತು ಈ ದಿನದ ಮಹತ್ವವನ್ನು ತಿಳಿಯೋಣ.

Akshaya Tritiyay 2024: ಈ ವರ್ಷದ ಅಕ್ಷಯ ತೃತೀಯ ಯಾವಾಗ? ಈ ದಿನದಂದು ಏನನ್ನು ತಿನ್ನಬಾರದು
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 04, 2024 | 6:26 PM

Share

ಪ್ರತಿ ವರ್ಷ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯಂದು ಅಕ್ಷಯ ತೃತೀಯವನ್ನು ಆಚರಿಸಲಾಗುತ್ತದೆ. ಸಂಪತ್ತಿನ ದೇವತೆಯಾದ ಲಕ್ಷ್ಮೀ ದೇವಿಯ ಆರಾಧನೆ ಮಾಡಲು ಸಮರ್ಪಿತವಾದ ಈ ದಿನವು ಬಹಳ ವಿಶೇಷ ಎನಿಸಿಕೊಂಡಿದೆ. ಧಾರ್ಮಿಕ ದೃಷ್ಟಿಕೋನದಿಂದ ಈ ದಿನವನ್ನು ಬಹಳ ಮಂಗಳಕರವೆಂದು ಪರಿಗಣಿಸಲಾಗಿದೆ. ಅಲ್ಲದೆ ನೀವು ಯಾವುದೇ ರೀತಿಯ ಪುಣ್ಯ ಕಾರ್ಯವನ್ನು ಮಾಡಿದರೂ ಕೂಡ ಅದಕ್ಕೆ ತಕ್ಕ ಪ್ರತಿಫಲ ಖಂಡಿತ ಸಿಗುತ್ತದೆ ಎಂದು ಶ್ರೀಕೃಷ್ಣನು ಯುಧಿಷ್ಠಿರನಿಗೆ ಹೇಳಿದ್ದನು. ಜೊತೆಗೆ ಅಕ್ಷಯ ತೃತೀಯದಂದು ಯಾವ ವಸ್ತು ಖರೀದಿಸಿದರೂ ಕೂಡ ಅದು ಮತ್ತೆ ಮತ್ತೆ ಖರೀದಿ ಮಾಡುವ ಹಾಗಾಗುತ್ತದೆ ಅಂದರೆ ಅದು ನಿಮ್ಮ ಮನೆಯಲ್ಲಿ ಅಕ್ಷಯವಾಗುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಈ ದಿನ ಚಿನ್ನವನ್ನು ಖರೀದಿ ಮಾಡುವ ಪದ್ಧತಿ ಹುಟ್ಟುಕೊಂಡಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಅಕ್ಷಯ ತೃತೀಯವನ್ನು ಸ್ವಯಂಸಿದ್ಧ ಮುಹೂರ್ತ ಎಂದೂ ಕರೆಯಲಾಗುತ್ತದೆ, ಅಂದರೆ ಅಕ್ಷಯ ತೃತೀಯದಂದು ಯಾವುದೇ ಶುಭ ಕಾರ್ಯವಾಗಲಿ ಅದನ್ನು ಮುಹೂರ್ತವನ್ನು ನೋಡದೆಯೇ ಮಾಡಬಹುದು. ಹಾಗಾದರೆ ಈ ವರ್ಷ ಅಕ್ಷಯ ತೃತೀಯವನ್ನು ಯಾವಾಗ ಆಚರಣೆ ಮಾಡಲಾಗುತ್ತದೆ? ಈ ದಿನ ಯಾವ ದೇವರನ್ನು ಪೂಜಿಸಬೇಕು? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಕ್ಷಯ ತೃತೀಯ ಯಾವಾಗ?

ಪಂಚಾಂಗದ ಪ್ರಕಾರ, ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯು ಮೇ. 10 ರಂದು ಬೆಳಿಗ್ಗೆ 4:17 ಕ್ಕೆ ಪ್ರಾರಂಭವಾಗಿ ಮರುದಿನ ಅಂದರೆ ಮೇ. 11 ರಂದು ಮುಂಜಾನೆ 2:49 ಕ್ಕೆ ಕೊನೆಗೊಳ್ಳುತ್ತದೆ. ಹಾಗಾಗಿ ಉದಯ ತಿಥಿಯ ಪ್ರಕಾರ ಮೇ 10 ರಂದು ಅಕ್ಷಯ ತೃತೀಯವನ್ನು ಆಚರಿಸಲಾಗುತ್ತದೆ. ಅಕ್ಷಯ ತೃತೀಯ ಶುಭ ಮುಹೂರ್ತ; ಈ ದಿನ ಪೂಜೆ ಮಾಡಲು ಶುಭ ಸಮಯವು ಬೆಳಿಗ್ಗೆ 5.34 ರಿಂದ ಮಧ್ಯಾಹ್ನ 12.17 ರವರೆಗೆ ಇರುತ್ತದೆ. ಅಕ್ಷಯ ತೃತೀಯದಂದು ಚಿನ್ನವನ್ನು ಖರೀದಿಸಲು ಶುಭ ಸಮಯವು ದಿನವಿಡೀ ಇರುತ್ತದೆ.

ಅಕ್ಷಯ ತೃತೀಯದಂದು ಶುಭ ಯೋಗ;

ಈ ಬಾರಿ ಅಕ್ಷಯ ತೃತೀಯದಂದು ಸುಕರ್ಮ ಯೋಗವಿದ್ದು, ಇದು ಮಧ್ಯಾಹ್ನ 12:08 ರಿಂದ ಆರಂಭವಾಗಿ ಮರುದಿನ ಅಂದರೆ ಮೇ 11 ರಂದು ಬೆಳಿಗ್ಗೆ 10:03 ರವರೆಗೆ ಇರುತ್ತದೆ. ಇದಲ್ಲದೆ ಈ ದಿನ ರವಿ ಯೋಗವು ಇದೆ. ಇದು ದಿನವಿಡೀ ಇರುತ್ತದೆ. ಅಕ್ಷಯ ತೃತೀಯದಂದು, ಅಭಿಜಿತ್ ಮುಹೂರ್ತವು ಬೆಳಿಗ್ಗೆ 11:13 ರಿಂದ ಮಧ್ಯಾಹ್ನ 12:45 ರವರೆಗೆ ಇರುತ್ತದೆ.

ಅಕ್ಷಯ ತೃತೀಯದ ಪೂಜಾ ವಿಧಾನ;

ಈ ದಿನ ಬೆಳಿಗ್ಗೆ ಬೇಗನೆ ಎದ್ದು ಸ್ನಾನ ಮಾಡಿ, ಸ್ವಚ್ಛವಾದ ಬಟ್ಟೆಗಳನ್ನು ಧರಿಸಿ. ನಂತರ, ಮನೆಯ ದೇವರ ಕೋಣೆಯಲ್ಲಿ ತುಪ್ಪದ ದೀಪ ಹಚ್ಚಿ. ಬಳಿಕ ವಿಷ್ಣು ಮತ್ತು ಲಕ್ಷ್ಮೀ ದೇವಿಯನ್ನು ಶ್ರದ್ದಾ, ಭಕ್ತಿಯಿಂದ ಪೂಜಿಸಿ. ಇದಾದ ಬಳಿಕ ದೇವರಿಗೆ ಆರತಿ ಮಾಡಿ, ನೈವೇದ್ಯ ಅರ್ಪಿಸುವ ಮೂಲಕ ಪೂಜೆಯನ್ನು ಮುಗಿಸಿ. ಭೋಗ ಅಥವಾ ನೈವೇದ್ಯವನ್ನು ನೀವು ತಿನ್ನಿ, ನಿಮ್ಮ ಕುಟುಂಬ ಸದಸ್ಯರಿಗೂ ಕೊಡಿ.

ಇದನ್ನೂ ಓದಿ: ಪಾಪಮೋಚನಿ ಏಕಾದಶಿ ದಿನ ಏನು ಮಾಡಬೇಕು, ಮಾಡಬಾರದು

ಅಕ್ಷಯ ತೃತೀಯದಂದು ಏನನ್ನು ತಿನ್ನಬಾರದು?

ನೀವು ಲಕ್ಷ್ಮೀ ದೇವಿ ಮತ್ತು ವಿಷ್ಣುವನ್ನು ಮೆಚ್ಚಿಸಲು ಬಯಸಿದಲ್ಲಿ, ಅಕ್ಷಯ ತೃತೀಯದಂದು, ಮೀನು, ಮಾಂಸ, ಮದ್ಯ, ಬೆಳ್ಳುಳ್ಳಿ, ಈರುಳ್ಳಿ ಸೇರಿದಂತೆ ತಾಮಸ ಆಹಾರವನ್ನು ಸೇವಿಸಬಾರದು.

ಅಕ್ಷಯ ತೃತೀಯದಂದು ಏನನ್ನು ದಾನ ಮಾಡಬೇಕು?

ಈ ದಿನ ಅಕ್ಕಿ, ಹಿಟ್ಟು, ಬೇಳೆಕಾಳುಗಳು, ಬೆಲ್ಲ, ಕಡಲೆ, ತುಪ್ಪ, ಉಪ್ಪು, ಎಳ್ಳು, ಸೌತೆಕಾಯಿ ಇತ್ಯಾದಿಗಳನ್ನು ದಾನ ಮಾಡಬಹುದು. ಈ ವಸ್ತುಗಳನ್ನು ದಾನ ಮಾಡುವುದರಿಂದ ಮನೆಯಲ್ಲಿ ಸಂತೋಷ, ಸಮೃದ್ಧಿ ಮತ್ತು ಶಾಂತಿ ಎಲ್ಲವೂ ಸದಾ ಕಾಲವಿರುತ್ತದೆ ಎನ್ನುವ ನಂಬಿಕೆ ಇದೆ.

ಅಕ್ಷಯ ತೃತೀಯದಂದು ಉಪ್ಪನ್ನು ಏಕೆ ದಾನವಾಗಿ ನೀಡಬೇಕು?

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ದಿನದಂದು ಉಪ್ಪನ್ನು ದಾನ ಮಾಡುವುದರಿಂದ ಪೂರ್ವಜರು ಸಂತುಷ್ಟರಾಗುತ್ತಾರೆ. ಜೊತೆಗೆ ಜೀವನದಲ್ಲಿರುವ ಎಲ್ಲಾ ರೀತಿಯ ಸಮಸ್ಯೆಗಳು ನಿವಾರಣೆಯಾಗುತ್ತದೆ. ಈ ಕಾರಣದಿಂದಾಗಿ ಅಕ್ಷಯ ತೃತೀಯದಂದು ಉಪ್ಪನ್ನು ದಾನವಾಗಿ ನೀಡಲಾಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ