Video: ಆಷಾಢ ಮಾಸ ಶಕ್ತಿ ದೇವತೆಗಳ ಆರಾಧನೆಗೆ ಪ್ರಶಸ್ತವಾದ ಮಾಸ: ಡಾ. ಶಶಿಶೇಖರ್ ದೀಕ್ಷಿತ್ ವಿವರಣೆ
ಆಷಾಢ ಮಾಸವು ಶಕ್ತಿ ದೇವತೆಗಳ ಆರಾಧನೆಗೆ ಅತ್ಯಂತ ಪ್ರಶಸ್ತವಾಗಿದೆ. ಈ ಮಾಸದಲ್ಲಿ ದೇವಿಯ ಆರಾಧನೆಯಿಂದ ಸಕಲ ಶುಭಗಳು ಪ್ರಾಪ್ತಿಯಾಗುತ್ತವೆ ಎಂಬುದು ನಂಬಿಕೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಆಷಾಢದ ಪ್ರತಿ ಶುಕ್ರವಾರದಂದು ವಿಶೇಷ ಲಕ್ಷ್ಮೀ ಅಲಂಕಾರ ಮತ್ತು ಅಭಿಷೇಕಗಳು ನಡೆಯುತ್ತವೆ. ಭಕ್ತರು ಈ ಪವಿತ್ರ ಮಾಸದಲ್ಲಿ ದೇವಿಯ ಕೃಪೆಗೆ ಪಾತ್ರರಾಗಬಹುದು.
ಆಷಾಢ ಮಾಸದ ಮೊದಲ ಶುಕ್ರವಾರದಂದು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಿಯ ಸನ್ನಿಧಾನ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ಈ ಕುರಿತು ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ. ಶಶಿಶೇಖರ್ ದೀಕ್ಷಿತ್ ಅವರು ಮಾತನಾಡಿ, ಆಷಾಢ ಮಾಸವು ಶಕ್ತಿ ದೇವತೆಗಳ ಆರಾಧನೆಗೆ ಅತ್ಯಂತ ಪ್ರಶಸ್ತವಾದ ಮಾಸವಾಗಿದೆ. ಈ ಮಾಸದಲ್ಲಿ ಶಕ್ತಿ ದೇವತೆಗಳನ್ನು ಆರಾಧಿಸಿದರೆ ಸಕಲ ಶುಭಗಳು ಲಭಿಸುತ್ತವೆ ಎಂಬುದು ನಂಬಿಕೆಯಾಗಿದೆ ಎಂದರು. ಪ್ರತಿದಿನದಂತೆ ಬೆಳಿಗ್ಗೆ 3:30 ರಿಂದ ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ ಹಾಗೂ ಗರ್ಭಗುಡಿಯಲ್ಲಿರುವ ಉತ್ಸವಮೂರ್ತಿಗೆ ವಿಶೇಷ ಲಕ್ಷ್ಮೀ ಅಲಂಕಾರ ಮಾಡಲಾಗಿತ್ತು ಎಂದು ತಿಳಿಸಿದರು. ಆಷಾಢ ಮಾಸದ ನಾಲ್ಕು ಶುಕ್ರವಾರಗಳಲ್ಲೂ ಲಕ್ಷ್ಮೀ ಅಲಂಕಾರ ಮಾಡಲಾಗುತ್ತದೆ ಎಂಬುದು ವಿಶೇಷ ಎಂದು ಅವರು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 17, 2026 09:52 AM
Follow Us
