AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಮಕ್ಕಳು ಮಾತನಾಡುವಾಗ ತೊದಲುತ್ತಿದ್ದಾರಾ? ಜ್ಯೋತಿಷ್ಯ ಪರಿಹಾರ ಇಲ್ಲಿದೆ

ಮಕ್ಕಳು ತೊದಲುತ್ತಿದ್ದರೆ ಅಥವಾ ಮಾತು ತಡವಾಗಿದ್ದರೆ ಪೋಷಕರಿಗೆ ಆತಂಕ ಸಾಮಾನ್ಯ. ವೈದ್ಯಕೀಯ ಸಲಹೆಯ ಜೊತೆಗೆ ಜ್ಯೋತಿಷ್ಯ ಶಾಸ್ತ್ರವು ಇದಕ್ಕೆ ಕೆಲವು ಪರಿಹಾರಗಳನ್ನು ನೀಡುತ್ತದೆ. ಬುಧ ಮತ್ತು ಶುಕ್ರ ಗ್ರಹಗಳ ಪ್ರಭಾವ, ಗಾಯತ್ರಿ ಮಂತ್ರ ಪಠಣ, ಹಯಗ್ರೀವ ಸ್ತೋತ್ರ, ಮತ್ತು ಹಸಿರು ಪರಿಸರ ನಿರ್ಮಿಸುವ ಮೂಲಕ ಮಕ್ಕಳ ಮಾತಿನ ಶಕ್ತಿ ವೃದ್ಧಿಸಲು ಸಾಧ್ಯ ಎಂದು ಡಾ. ಬಸವರಾಜ್ ಗುರೂಜಿ ಸಲಹೆ ನೀಡಿದ್ದಾರೆ.

Daily Devotional: ಮಕ್ಕಳು ಮಾತನಾಡುವಾಗ ತೊದಲುತ್ತಿದ್ದಾರಾ? ಜ್ಯೋತಿಷ್ಯ ಪರಿಹಾರ ಇಲ್ಲಿದೆ
ಜ್ಯೋತಿಷ್ಯ ಪರಿಹಾರ
ಅಕ್ಷತಾ ವರ್ಕಾಡಿ
|

Updated on: Feb 20, 2026 | 10:12 AM

Share

ಮಕ್ಕಳು ಮಾತನಾಡುವಾಗ ತೊದಲುತ್ತಿದ್ದರೆ ಅಥವಾ ಮಾತು ತಡವಾಗಿದ್ದರೆ ಪೋಷಕರಿಗೆ ಇದು ಸಾಮಾನ್ಯವಾಗಿ ಆತಂಕವನ್ನುಂಟು ಮಾಡುವ ಸಂಗತಿಯಾಗಿದೆ. ಸಾಮಾನ್ಯವಾಗಿ ವೈದ್ಯರು “ಏನೂ ತೊಂದರೆ ಇಲ್ಲ, ಸ್ವಲ್ಪ ದಿನ ಕಾಯಿರಿ, ಸರಿಹೋಗುತ್ತದೆ” ಎಂದು ಹೇಳುತ್ತಾರೆ. ಆದರೆ, ಜ್ಯೋತಿಷ್ಯ ಶಾಸ್ತ್ರ ಮತ್ತು ಆಧ್ಯಾತ್ಮಿಕ ದೃಷ್ಟಿಕೋನದಲ್ಲಿ ಇದಕ್ಕೆ ಕೆಲವು ನಿರ್ದಿಷ್ಟ ಕಾರಣಗಳು ಮತ್ತು ಪರಿಹಾರಗಳು ಇವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ಮಕ್ಕಳ ಮಾತಿನ ಸಾಮರ್ಥ್ಯವನ್ನು ವೃದ್ಧಿಸಲು ಕೆಲವು ಆಧ್ಯಾತ್ಮಿಕ ಮತ್ತು ಜ್ಯೋತಿಷ್ಯ ಪರಿಹಾರಗಳನ್ನು ಸೂಚಿಸಲಾಗಿದೆ. ಪುಟ್ಟ ಮಕ್ಕಳಿರುವ ಮನೆಗಳಲ್ಲಿ, ವಿಶೇಷವಾಗಿ ಮೂರರಿಂದ ಐದು ವರ್ಷದೊಳಗಿನ ಮಕ್ಕಳು ಮಲಗುವ ಅಥವಾ ಆಡುವ ಕೋಣೆಯಲ್ಲಿ ಆದಷ್ಟು ಹಸಿರು ಬಣ್ಣ ಹೆಚ್ಚಾಗಿ ಇರುವಂತೆ ನೋಡಿಕೊಳ್ಳಬೇಕು. ಗೋಡೆಯ ಬಣ್ಣ ತಿಳಿ ಹಸಿರಾಗಿರಬಹುದು ಅಥವಾ ವಾಲ್‌ಪೇಪರ್ ಹಸಿರು ಬಣ್ಣದ್ದಾಗಿರಬಹುದು. ಪಾಟ್‌ಗಳಲ್ಲಿ ಗಿಡಗಳನ್ನು ಇಡುವುದು ಸಹ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಹಸಿರು ಬಣ್ಣವು ಬುಧ ಗ್ರಹಕ್ಕೆ ಸಂಬಂಧಿಸಿದ್ದು, ಇದು ಬುದ್ಧಿಶಕ್ತಿ ಮತ್ತು ಸಂವಹನ ಸಾಮರ್ಥ್ಯವನ್ನು ಹೆಚ್ಚಿಸಲು ಸಹಕಾರಿ.

ಐದು ಅಥವಾ ಆರು ವರ್ಷ ವಯಸ್ಸಾದರೂ ಮಕ್ಕಳು ತೊದಲು ಮಾತನಾಡುತ್ತಿದ್ದರೆ, ಡಾಕ್ಟರ್‌ಗಳ ಸಲಹೆಯ ಜೊತೆಗೆ ಜ್ಯೋತಿಷ್ಯ ಪರಿಹಾರಗಳನ್ನು ಅನುಸರಿಸಬಹುದು. ಪ್ರತಿ ಬುಧವಾರ ನೆನೆಸಿದ ಹೆಸರು ಕಾಳನ್ನು ಆ ಮಗುವಿನ ಕೈಯಿಂದ ದಾನ ಮಾಡಿಸುವುದರಿಂದ ಶುಭ ಫಲಗಳು ದೊರೆಯುತ್ತವೆ. ಬುಧವಾರದ ದಿನ ಹೆಸರು ಕಾಳು ದಾನ ಮಾಡುವುದು ಬುಧ ಗ್ರಹದ ಅನುಗ್ರಹಕ್ಕೆ ಕಾರಣವಾಗುತ್ತದೆ.

ವಾಕ್ಚಾತುರ್ಯದ ದೇವತೆ ಸಾಕ್ಷಾತ್ ಸರಸ್ವತಿ. ಮಕ್ಕಳ ಮಾತಿನ ಶಕ್ತಿಯನ್ನು ಹೆಚ್ಚಿಸಲು ಗುರುಗಳ (ಮಠಾಧೀಶರು ಅಥವಾ ಆಧ್ಯಾತ್ಮಿಕ ಶಕ್ತಿ ಹೊಂದಿದ ಮಹನೀಯರು) ಆಶೀರ್ವಾದ ಪಡೆಯಬಹುದು. ಗುರುವಾರದ ದಿನ, ಬೆಳಗಿನ ಸೂರ್ಯೋದಯದ ಸಮಯದಲ್ಲಿ, ಗುರುಗಳಿಗೆ ನಮಸ್ಕಾರ ಮಾಡಿ, ಅವರ ಕೈಯಿಂದ ಬೆಳ್ಳಿಯ ಕಡ್ಡಿಯಿಂದ ಮಗುವಿನ ನಾಲಿಗೆಯ ಮೇಲೆ ಐಂ ಬೀಜಾಕ್ಷರವನ್ನು ಬರೆಸುವುದು ಬಹಳ ಶುಭಕರ. ಇದು ಮಾತಿನ ಅಡೆತಡೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ಗುರೂಜಿ ಹೇಳಿದ್ದಾರೆ.

ಇದನ್ನೂ ಓದಿ: ಮನೆಯ ಹತ್ತಿರ ಪಾರಿಜಾತ ಗಿಡ ಇರುವುದು ಅಶುಭನಾ? ಜ್ಯೋತಿಷ್ಯ ಸಲಹೆ ಇಲ್ಲಿದೆ

ಮನೆಯಲ್ಲಿ ಗಾಯತ್ರಿ ಮಂತ್ರವನ್ನು ಪಠಿಸುವುದು ಅಥವಾ ಫೋನ್‌ನಲ್ಲಿ ಕೇಳಿಸುವುದು ಸಹ ಉತ್ತಮ ಪರಿಹಾರ. ಗಾಯತ್ರಿ ಮಂತ್ರದ ಶಬ್ದ ತರಂಗಗಳು ಮಗುವಿನ ಕಿವಿಗೆ ತಲುಪಿದಾಗ, ಅದು ನಾಲಿಗೆ ಮತ್ತು ಕಂಠದ ಶಕ್ತಿಯನ್ನು ಹೆಚ್ಚಿಸುತ್ತದೆ. ಗಾಯತ್ರಿ ಮಂತ್ರವು ಗ್ರಹಣ ಶಕ್ತಿಯನ್ನು ಹೆಚ್ಚಿಸಿ, ಮೆದುಳನ್ನು ಸಕ್ರಿಯಗೊಳಿಸುತ್ತದೆ ಮತ್ತು ಮನಸ್ಸಿಗೆ ತೀಕ್ಷ್ಣ ಶಕ್ತಿಯನ್ನು ನೀಡುತ್ತದೆ. ಹಯಗ್ರೀವ ಸ್ತೋತ್ರ “ಜ್ಞಾನಾನಂದಮಯಂ ದೇವಂ ನಿರ್ಮಲ ಸ್ಫಟಿಕಾಕೃತಿಂ ಆಧರಂ ಸರ್ವ ವಿದ್ಯಾ ನಾಮ್ ಹಯಗ್ರೀವ ಮುಪಾಸ್ಮಹೇ” ಇದನ್ನು ಪಠಿಸುವುದು ಹಾಗೂ ದಕ್ಷಿಣಾಮೂರ್ತಿ ದರ್ಶನ ಮಾಡಿಸುವುದು ಸಹ ಜ್ಞಾನ ಮತ್ತು ಮಾತಿನ ವೃದ್ಧಿಗೆ ಸಹಕಾರಿ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!