Chaitra Navratri: ಚೈತ್ರ ನವರಾತ್ರಿಯ ದಿನ ಈ 4 ವಸ್ತುಗಳನ್ನು ಖರೀದಿಸಬೇಡಿ, ಶಾಶ್ವತವಾಗಿ ಬಡವರಾಗುತ್ತೀರಿ!

ಚೈತ್ರ ಮಾಸದ ಶುಕ್ಲ ಪಕ್ಷದ ಪ್ರತಿಪದಾ ಅಂದರೆ ಪಾಡ್ಯ ತಿಥಿಯಂದು ಚೈತ್ರ ನವರಾತ್ರಿಯನ್ನು ಆಚರಣೆ ಮಾಡಲಾಗುತ್ತದೆ. ಈ ಬಾರಿ ಇದು ಎ. 9 ರಂದು ಪ್ರಾರಂಭವಾಗಿ ಎ. 17 ರಂದು ಕೊನೆಗೊಳ್ಳುತ್ತದೆ. ಈ ಸಮಯದಲ್ಲಿ, ಜನರು ಜೀವನದಲ್ಲಿ ಸಂತೋಷ, ಸಮೃದ್ಧಿಯನ್ನು ಪಡೆಯಲು ಮತ್ತು ದುರ್ಗಾ ದೇವಿಯ ಆಶೀರ್ವಾದವನ್ನು ಪಡೆಯಲು ಅನೇಕ ರೀತಿಯ ಕ್ರಮಗಳನ್ನು ಅನುಸರಿಸುತ್ತಾರೆ. ನವರಾತ್ರಿಯ ನಿಯಮಗಳನ್ನು ಹೊರತುಪಡಿಸಿ, ಈ ಅವಧಿಯಲ್ಲಿ ಕೆಲವು ವಸ್ತುಗಳನ್ನು ಖರೀದಿಸುವುದನ್ನು ಸಹ ನಿಷೇಧಿಸಲಾಗಿದೆ.

Chaitra Navratri: ಚೈತ್ರ ನವರಾತ್ರಿಯ ದಿನ ಈ 4 ವಸ್ತುಗಳನ್ನು ಖರೀದಿಸಬೇಡಿ, ಶಾಶ್ವತವಾಗಿ ಬಡವರಾಗುತ್ತೀರಿ!
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 04, 2024 | 4:43 PM

ಹಿಂದೂ ಧರ್ಮದಲ್ಲಿ, ನವರಾತ್ರಿಯ 9 ದಿನಗಳು ಕೂಡ ವಿಶೇಷ ಧಾರ್ಮಿಕ ಮಹತ್ವವನ್ನು ಹೊಂದಿವೆ. ವಾಸ್ತವವಾಗಿ, ನವರಾತ್ರಿಯು ವರ್ಷದಲ್ಲಿ ನಾಲ್ಕು ಬಾರಿ ಬರುತ್ತದೆ, ಇದರಲ್ಲಿ ಮೊದಲನೇಯದು ಚೈತ್ರ ನವರಾತ್ರಿ, ಎರಡನೇಯದು ಶಾರದೀಯ ನವರಾತ್ರಿ ಮತ್ತು ಎರಡು ಗುಪ್ತ ನವರಾತ್ರಿಯನ್ನು ಆಚರಿಸಲಾಗುತ್ತದೆ. ಈ ವರ್ಷ ಚೈತ್ರ ನವರಾತ್ರಿ ಎಪ್ರಿಲ್ 9 ರಂದು ಪ್ರಾರಂಭವಾಗಿ ಇದೇ ತಿಂಗಳು 17 ರಂದು ಕೊನೆಗೊಳ್ಳುತ್ತದೆ. ಈ ಸಮಯದಲ್ಲಿ, ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂಚಿಸಿದ ಕೆಲವು ವಿಶೇಷ ನಿಯಮಗಳನ್ನು ಅನುಸರಿಸುವುದು ಅವಶ್ಯಕ, ಇಲ್ಲದಿದ್ದರೆ ಪೂಜೆ ಮತ್ತು ಉಪವಾಸದ ಪೂರ್ಣ ಫಲಿತಾಂಶ ಪ್ರಾಪ್ತಿಯಾಗುವುದಿಲ್ಲ ಎಂದು ಹೇಳಲಾಗುತ್ತದೆ.

ಚೈತ್ರ ಮಾಸದ ಶುಕ್ಲ ಪಕ್ಷದ ಪ್ರತಿಪದಾ ಅಂದರೆ ಪಾಡ್ಯ ತಿಥಿಯಂದು ಚೈತ್ರ ನವರಾತ್ರಿಯನ್ನು ಆಚರಣೆ ಮಾಡಲಾಗುತ್ತದೆ. ಈ ಬಾರಿ ಇದು ಎ. 9 ರಂದು ಪ್ರಾರಂಭವಾಗಿ ಎ. 17 ರಂದು ಕೊನೆಗೊಳ್ಳುತ್ತದೆ. ಈ ಸಮಯದಲ್ಲಿ, ಜನರು ಜೀವನದಲ್ಲಿ ಸಂತೋಷ, ಸಮೃದ್ಧಿಯನ್ನು ಪಡೆಯಲು ಮತ್ತು ದುರ್ಗಾ ದೇವಿಯ ಆಶೀರ್ವಾದವನ್ನು ಪಡೆಯಲು ಅನೇಕ ರೀತಿಯ ಕ್ರಮಗಳನ್ನು ಅನುಸರಿಸುತ್ತಾರೆ. ನವರಾತ್ರಿಯ ನಿಯಮಗಳನ್ನು ಹೊರತುಪಡಿಸಿ, ಈ ಅವಧಿಯಲ್ಲಿ ಕೆಲವು ವಸ್ತುಗಳನ್ನು ಖರೀದಿಸುವುದನ್ನು ಸಹ ನಿಷೇಧಿಸಲಾಗಿದೆ. ಹಾಗಾಗಿ ಆ ಒಂಬತ್ತು ದಿನಗಳಲ್ಲಿ ಕೆಲವು ವಸ್ತುಗಳನ್ನು ಖರೀದಿಸುವುದು ಶುಭವಲ್ಲ. ಹಾಗಾದರೆ ಈ ಅವಧಿಯಲ್ಲಿ ಏನನ್ನು ಖರೀದಿಸಬಾರದು ಎಂಬುದನ್ನು ವಿವರವಾಗಿ ತಿಳಿದುಕೊಳ್ಳಿ.

ಚೈತ್ರ ನವರಾತ್ರಿಯ ಸಮಯದಲ್ಲಿ ಕಬ್ಬಿಣದ ವಸ್ತುಗಳನ್ನು ಖರೀದಿಸಬೇಡಿ;

ನವರಾತ್ರಿಯ ಸಮಯದಲ್ಲಿ ಕಬ್ಬಿಣದ ವಸ್ತುಗಳನ್ನು ಖರೀದಿಸಬಾರದು. ಏಕೆಂದರೆ ಈ ರೀತಿ ಮಾಡುವುದರಿಂದ ಮನೆಯಲ್ಲಿ ಹಣ ಮತ್ತು ಧಾನ್ಯಗಳ ಕೊರತೆ ಉಂಟಾಗುತ್ತದೆ ಮತ್ತು ಕುಟುಂಬದಲ್ಲಿ ಆರ್ಥಿಕ ಬಿಕ್ಕಟ್ಟು ಕಾಣಿಸಿಕೊಳ್ಳಬಹುದು. ಹಾಗಾಗಿ ಯಾವುದೇ ಕಾರಣಕ್ಕೂ ಕಬ್ಬಿಣದ ವಸ್ತುಗಳನ್ನು ಖರೀದಿಸಬೇಡಿ.

ಈ ಸಮಯದಲ್ಲಿ ಕಪ್ಪು ಬಟ್ಟೆಗಳನ್ನು ಖರೀದಿಸಬೇಡಿ;

ಚೈತ್ರ ನವರಾತ್ರಿಯ ಸಮಯದಲ್ಲಿ ಕಪ್ಪು ಬಣ್ಣದ ಬಟ್ಟೆಗಳನ್ನು ಖರೀದಿಸಬಾರದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನವರಾತ್ರಿಯಲ್ಲಿ ಕಪ್ಪು ಬಟ್ಟೆಗಳನ್ನು ಖರೀದಿಸುವುದು ಮತ್ತು ಧರಿಸುವುದು ಅಶುಭ ಎಂದು ಹೇಳಲಾಗುತ್ತದೆ. ಕಪ್ಪು ಬಟ್ಟೆಗಳು ನಕಾರಾತ್ಮಕ ಶಕ್ತಿಯನ್ನು ಬಹುಬೇಗ ಆಕರ್ಷಿಸುತ್ತದೆ, ಅಲ್ಲದೆ ಇದು ನಿಮ್ಮ ಯಶಸ್ಸನ್ನು ಕುಂಠಿತಗೊಳಿಸುತ್ತದೆ ಮತ್ತು ಕೆಟ್ಟ ಆಲೋಚನೆಗಳು ಬರಲು ಕಾರಣವಾಗುತ್ತದೆ ಎಂದು ಹೇಳಲಾಗುತ್ತದೆ. ಹಾಗಾಗಿ ನವರಾತ್ರಿಯ ಸಮಯದಲ್ಲಿ ಕಪ್ಪು ಬಟ್ಟೆಗಳನ್ನು ಖರೀದಿಸುವುದು ಮತ್ತು ಧರಿಸುವುದನ್ನು ತಪ್ಪಿಸಿ.

ಎಲೆಕ್ಟ್ರಾನಿಕ್ ವಸ್ತುಗಳನ್ನು ಖರೀದಿಸುವುದನ್ನು ತಪ್ಪಿಸಿ;

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಚೈತ್ರ ನವರಾತ್ರಿಯ 9 ದಿನಗಳ ವರೆಗೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳನ್ನು ಖರೀದಿಸಬಾರದು ಏಕೆಂದರೆ ಇದನ್ನು ಆ ಸಮಯದಲ್ಲಿ ಮನೆಗೆ ತರುವುದು ಅಶುಭವೆಂದು ಪರಿಗಣಿಸಲಾಗುತ್ತದೆ. ಹೀಗೆ ಮಾಡುವುದರಿಂದ ಜಾತಕದಲ್ಲಿರುವ ಗ್ರಹ ದೋಷಕ್ಕೆ ಕಾರಣವಾಗಬಹುದು ಎಂದು ನಂಬಲಾಗಿದೆ. ಹಾಗಾಗಿ ಆ ಸಮಯದಲ್ಲಿ ಎಲೆಕ್ಟ್ರಾನಿಕ್ ವಸ್ತುಗಳನ್ನು ಖರೀದಿಸುವುದನ್ನು ತಪ್ಪಿಸಬೇಕು.

ಇದನ್ನೂ ಓದಿ: ಎಪ್ರಿಲ್ ತಿಂಗಳಿನಲ್ಲಿ ಜನಿಸಿದವರ ಸ್ವಭಾವ ಹೇಗಿರುತ್ತೆ ತಿಳಿಯಿರಿ!

ಚೈತ್ರ ನವರಾತ್ರಿಯ ಸಮಯದಲ್ಲಿ ಅಕ್ಕಿ ಖರೀದಿಸಬೇಡಿ;

ನವರಾತ್ರಿಯ ಸಮಯದಲ್ಲಿ ಅಕ್ಕಿಯನ್ನು ಖರೀದಿಸುವುದು ಅಶುಭವೆಂದು ಪರಿಗಣಿಸಲಾಗಿದೆ. ನವರಾತ್ರಿಯ 9 ದಿನದಲ್ಲಿ ಅಕ್ಕಿ ಖರೀದಿಯು ನೀವು ಪಡೆದ ಪುಣ್ಯ ಫಲಗಳನ್ನು ನಾಶಮಾಡುತ್ತದೆ ಎಂದು ಹೇಳಲಾಗುತ್ತದೆ. ಆದ್ದರಿಂದ, ನೀವು ಅಕ್ಕಿ ಖರೀದಿಸಲು ಬಯಸಿದರೆ, ಅದನ್ನು ನವರಾತ್ರಿಯ ಮೊದಲು ಅಥವಾ ನವರಾತ್ರಿಯ ನಂತರ ಖರೀದಿಸಿ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್