AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chankya Niti: ಈ ವಿಷಯಗಳನ್ನು ಯಾರಿಗೂ ಹೇಳಬೇಡಿ! ಜೀವನ ಪ್ರಗತಿಗೆ ಅಡ್ಡಿಯಾಗಬಹುದು

ಕೆಲವು ವಿಷಯಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು. ಆ ವ್ಯಕ್ತಿ ನಿಮಗೆ ಎಷ್ಟೇ ಪ್ರೀತಿಪಾತ್ರರಾಗಿದ್ದರೂ ತೊಂದರೆ ಇಲ್ಲ. ಅದು ನಿಮ್ಮ ಸಂಗತಿಯಾದರೂ ಪರವಾಗಿಲ್ಲ ಅಂತಹ ವಿಷಯಗಳನ್ನು ಹೇಳಬಾರದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಈ ನೀತಿಯನ್ನು ಅನುಸರಿಸಿದಲ್ಲಿ ನೀವು ಸಹ ಜೀವನದಲ್ಲಿ ಪ್ರಗತಿಯ ಮೆಟ್ಟಿಲುಗಳನ್ನು ಸುಲಭವಾಗಿ ಏರಬಹುದು, ಜೊತೆಗೆ ಸಂತೋಷದ ಜೀವನವನ್ನು ನಡೆಸಬಹುದು ಎಂದು ಹೇಳಿದ್ದಾರೆ.

Chankya Niti: ಈ ವಿಷಯಗಳನ್ನು ಯಾರಿಗೂ ಹೇಳಬೇಡಿ! ಜೀವನ ಪ್ರಗತಿಗೆ ಅಡ್ಡಿಯಾಗಬಹುದು
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 15, 2024 | 5:40 PM

Share

ನೀವು ಜೀವನದಲ್ಲಿ ಯಶಸ್ವಿ ವ್ಯಕ್ತಿಯಾಗಲು ಬಯಸಿದರೆ, ಕೆಲವು ಪ್ರಮುಖ ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಏಕೆಂದರೆ ಈ ವಿಷಯಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು. ಆ ವ್ಯಕ್ತಿ ನಿಮಗೆ ಎಷ್ಟೇ ಪ್ರೀತಿಪಾತ್ರರಾಗಿದ್ದರೂ ತೊಂದರೆ ಇಲ್ಲ. ಅದು ನಿಮ್ಮ ಸಂಗತಿಯಾದರೂ ಪರವಾಗಿಲ್ಲ ಅಂತಹ ವಿಷಯಗಳನ್ನು ಹೇಳಬಾರದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಈ ನೀತಿಯನ್ನು ಅನುಸರಿಸಿದಲ್ಲಿ ನೀವು ಸಹ ಜೀವನದಲ್ಲಿ ಪ್ರಗತಿಯ ಮೆಟ್ಟಿಲುಗಳನ್ನು ಸುಲಭವಾಗಿ ಏರಬಹುದು, ಜೊತೆಗೆ ಸಂತೋಷದ ಜೀವನವನ್ನು ನಡೆಸಬಹುದು ಅಲ್ಲದೆ ಸಮಾಜದಲ್ಲಿ ಗೌರವವನ್ನು ಪಡೆಯಬಹುದು ಎಂದು ಹೇಳಿದ್ದಾರೆ.

ಈ ವಿಷಯಗಳನ್ನು ಯಾರಿಗೂ ಹೇಳಬೇಡಿ

ಚಾಣಕ್ಯರು ಹೇಳುವ ಪ್ರಕಾರ ಪುರುಷರು ಎಂದಿಗೂ ಕುಟುಂಬ ವಿವಾದಗಳನ್ನು ಅಥವಾ ಮನೆಗೆ ಸಂಬಂಧಿಸಿದ ಯಾವುದನ್ನೂ ಹೊರಗಿನವರಿಗೆ ಹೇಳಬಾರದು ಎಂದಿದ್ದಾರೆ. ಮನೆಯ ವಿಷಯಗಳನ್ನು ಇನ್ನೊಬ್ಬ ವ್ಯಕ್ತಿಯೊಂದಿಗೆ ಹಂಚಿಕೊಂಡರೆ, ಮುಂದಿನ ದಿನಗಳಲ್ಲಿ ಅದರ ಪರಿಣಾಮಗಳನ್ನು ನೀವು ಅನುಭವಿಸಬೇಕಾಗಬಹುದು.

ಯಾರಿಗೂ ಹಣದ ಬಗ್ಗೆ ಹೇಳಬೇಡಿ

ನೀವು ಗಳಿಸುವ ಹಣವು ನಿಮ್ಮನ್ನು ಯೋಗ್ಯ ಮತ್ತು ಸಮರ್ಥರನ್ನಾಗಿ ಮಾಡುತ್ತದೆ. ಇಂದಿನ ಕಾಲದಲ್ಲಿ, ಹಣವು ಪ್ರತಿಯೊಬ್ಬ ವ್ಯಕ್ತಿಯ ಶಕ್ತಿಯಾಗಿದೆ. ಹಾಗಾಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಅಥವಾ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಯಾರಿಗೂ ಹೇಳಬೇಡಿ. ಹೀಗೆ ಮಾಡುವುದರಿಂದ, ಸಮಾಜದಲ್ಲಿ ನಿಮ್ಮ ಗೌರವ ಕಡಿಮೆಯಾಗುತ್ತದೆ. ಜೊತೆಗೆ ನೀವು ಚೆನ್ನಾಗಿ ದುಡಿಯುತ್ತಿದ್ದರೆ ಅದನ್ನು ಹಾಳು ಮಾಡುವುದಕ್ಕೆ ಪ್ರಯತ್ನ ಪಡಬಹುದು.

ಇದನ್ನೂ ಓದಿ: ಸೀತಾ ನವಮಿಯ ದಿನ ಈ ರೀತಿ ಜಾನಕಿ ದೇವಿಯನ್ನು ಪೂಜಿಸಿ

ದೇಣಿಗೆಗಳನ್ನು ಯಾವಾಗಲೂ ರಹಸ್ಯವಾಗಿರಿಸಿಕೊಳ್ಳಿ

ನಿಮ್ಮ ಜೀವನದಲ್ಲಿ ನೀವು ಏನೇ ದಾನ ಮಾಡಿದರೂ, ನೀವು ಅದನ್ನು ಯಾವಾಗಲೂ ರಹಸ್ಯವಾಗಿಡಬೇಕು ಅದರ ಬಗ್ಗೆ ಯಾರಿಗೂ ಹೇಳಬಾರದು. ಈ ರೀತಿ ದಾನ ಮಾಡಿದರೆ ಜೀವನದಲ್ಲಿ ಯಶಸ್ಸನ್ನು ಪಡೆಯುತ್ತೀರಿ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ