AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vasthu Shastra: ಒಗೆಯದ ಬಟ್ಟೆಗಳನ್ನು ಧರಿಸುವ ಅಭ್ಯಾಸ ನಿಮಗಿದ್ಯಾ? ವಾಸ್ತು ಶಾಸ್ತ್ರ ಹೇಳುವುದೇನು?

ನಾವು ಧರಿಸುವ ಸ್ವಚ್ಛ ಬಟ್ಟೆಗಳು ಕೇವಲ ವ್ಯಕ್ತಿತ್ವವಲ್ಲದೆ ಸಕಾರಾತ್ಮಕ ಶಕ್ತಿಯನ್ನು ತರುತ್ತವೆ. ವಾಸ್ತು ಶಾಸ್ತ್ರದ ಪ್ರಕಾರ, ಕೊಳಕು ಉಡುಪುಗಳು ನಕಾರಾತ್ಮಕ ಶಕ್ತಿ, ಆರೋಗ್ಯ ಸಮಸ್ಯೆ ಹಾಗೂ ಧನ ನಷ್ಟಕ್ಕೆ ಕಾರಣ. ಶುಭ ಕಾರ್ಯಗಳಲ್ಲಿ ಸ್ವಚ್ಛತೆ ಅತಿ ಮುಖ್ಯ. ನಿಯಮಿತವಾಗಿ ಬಟ್ಟೆಗಳನ್ನು ತೊಳೆದು, ಒಣಗಿಸುವುದರಿಂದ ಶಾಂತಿ, ಸಮೃದ್ಧಿ ಮತ್ತು ಉತ್ತಮ ಆರೋಗ್ಯ ದೊರೆಯುತ್ತದೆ.

Vasthu Shastra: ಒಗೆಯದ ಬಟ್ಟೆಗಳನ್ನು ಧರಿಸುವ ಅಭ್ಯಾಸ ನಿಮಗಿದ್ಯಾ? ವಾಸ್ತು ಶಾಸ್ತ್ರ ಹೇಳುವುದೇನು?
ವಾಸ್ತು ಶಾಸ್ತ್ರ
ಅಕ್ಷತಾ ವರ್ಕಾಡಿ
|

Updated on:Aug 19, 2026 | 11:34 AM

Share

ನಾವು ಧರಿಸುವ ಉಡುಪುಗಳು ಕೇವಲ ನಮ್ಮ ವ್ಯಕ್ತಿತ್ವವನ್ನು ಬಿಂಬಿಸುವುದು ಮಾತ್ರವಲ್ಲದೆ, ನಮ್ಮ ಸುತ್ತಲಿನ ನಕಾರಾತ್ಮಕ ಮತ್ತು ಸಕಾರಾತ್ಮಕ ಶಕ್ತಿಗಳ ಮೇಲೆಯೂ ಪ್ರಭಾವ ಬೀರುತ್ತವೆ. ವಾಸ್ತು ಶಾಸ್ತ್ರ ಮತ್ತು ಸಾಂಪ್ರದಾಯಿಕ ನಂಬಿಕೆಗಳ ಪ್ರಕಾರ, ದೇಹದ ಮೇಲೆ ಧರಿಸುವ ಬಟ್ಟೆಗಳ ಶುಚಿತ್ವಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಕೊಳಕು ಅಥವಾ ದೀರ್ಘಕಾಲ ಒಗೆಯದ ಬಟ್ಟೆಗಳನ್ನು ಧರಿಸುವುದರಿಂದ ನಕಾರಾತ್ಮಕ ಶಕ್ತಿ (Negative Energy) ಹೆಚ್ಚಾಗುತ್ತದೆ. ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಮನೆಯಲ್ಲಿ ಮತ್ತು ವ್ಯಕ್ತಿಯ ಜೀವನದಲ್ಲಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸುತ್ತದೆ ಎಂದು ನಂಬಲಾಗಿದೆ.

ಕೊಳಕು ಬಟ್ಟೆಗಳನ್ನು ಧರಿಸುವುದರಿಂದ ಧನಲಕ್ಷ್ಮಿಯು ಮುನಿಸಿಕೊಳ್ಳುತ್ತಾಳೆ. ಇದರಿಂದ ಮನೆಯಲ್ಲಿ ಐಶ್ವರ್ಯ ಮತ್ತು ಸಮೃದ್ಧಿ ಕಡಿಮೆಯಾಗಿ, ಧನ ನಷ್ಟ ಉಂಟಾಗಬಹುದು. ಒಗೆಯದ ಬಟ್ಟೆಗಳಲ್ಲಿ ಬ್ಯಾಕ್ಟೀರಿಯಾಗಳು ಆಶ್ರಯ ಪಡೆಯುತ್ತವೆ. ಇವು ಚರ್ಮ ರೋಗಗಳು, ನವೆ ಹಾಗೂ ದೈಹಿಕ ದೌರ್ಬಲ್ಯಕ್ಕೆ ಕಾರಣವಾಗಬಹುದು.

ಪೂಜೆ-ಪುರಸ್ಕಾರಗಳಲ್ಲಿ ಸ್ವಚ್ಛ ಬಟ್ಟೆಯ ಪ್ರಾಮುಖ್ಯತೆ:

ವಿಶೇಷವಾಗಿ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ಅಥವಾ ಯಾವುದೇ ಶುಭ ಸಮಾರಂಭಗಳಲ್ಲಿ ಸ್ವಚ್ಛವಾದ ಹಾಗೂ ಒಗೆದ ಬಟ್ಟೆಗಳನ್ನು ಧರಿಸುವ ಸಂಪ್ರದಾಯವಿದೆ. ಶುಭ ಕಾರ್ಯಗಳ ಸಮಯದಲ್ಲಿ ನೈರ್ಮಲ್ಯದಿಂದ ಕೂಡಿದ ಬಟ್ಟೆಗಳನ್ನು ಧರಿಸುವುದರಿಂದ ಮನಸ್ಸಿನಲ್ಲಿ ಸಂತೋಷ, ಏಕಾಗ್ರತೆ ಮತ್ತು ಸಕಾರಾತ್ಮಕ ಆಲೋಚನೆಗಳು ಮೂಡುತ್ತವೆ.

ಇದನ್ನೂ ಓದಿ: ಶ್ರಾವಣ ಮಾಸದಲ್ಲಿ ಅಷ್ಟಲಕ್ಷ್ಮಿ ರಾಜಯೋಗ; ಈ 4 ರಾಶಿಗೆ ಒಲಿಯಲಿದೆ ಅಪಾರ ಧನಸಂಪತ್ತು!

ಬಟ್ಟೆಗಳನ್ನು ಯಾವಾಗ ಮತ್ತು ಹೇಗೆ ಬದಲಾಯಿಸಬೇಕು?

ದಿನನಿತ್ಯ ಬಳಸುವ ಬಟ್ಟೆಗಳನ್ನು ನಿಯಮಿತವಾಗಿ ತೊಳೆದು, ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಿ ಧರಿಸುವುದು ಒಳ್ಳೆಯದು. ಬೆವರು ಅಥವಾ ಧೂಳಿನಿಂದ ಕೂಡಿದ ಬಟ್ಟೆಗಳನ್ನು ದೀರ್ಘಕಾಲ ಧರಿಸುವುದರಿಂದ ವಾಸ್ತು ದೋಷ ಮಾತ್ರವಲ್ಲದೆ ನೈರ್ಮಲ್ಯ ಮತ್ತು ಆರೋಗ್ಯದ ದೃಷ್ಟಿಯಿಂದಲೂ ಹಲವು ಸಮಸ್ಯೆಗಳು ಎದುರಾಗಬಹುದು.

ಆದ್ದರಿಂದ ಯಾವಾಗಲೂ ಸ್ವಚ್ಛವಾದ ಮತ್ತು ಒಗೆದ ಬಟ್ಟೆಗಳನ್ನು ಧರಿಸುವುದೇ ಶ್ರೇಯಸ್ಕರ. ಇದು ನಿಮ್ಮ ಸೌಂದರ್ಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಜೀವನದಲ್ಲಿ ಶಾಂತಿ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ನೀಡುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:33 am, Wed, 19 August 26

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು