Ekadashi in March 2024: ಮಾರ್ಚ್ ತಿಂಗಳಿನಲ್ಲಿ ಬರುವ ಏಕಾದಶಿಯನ್ನು ಯಾವ ದಿನ, ಹೇಗೆ ಆಚರಿಸಬೇಕು ತಿಳಿಯಿರಿ

ಈ ದಿನ ವಿಷ್ಣುವನ್ನು ಭಕ್ತಿಯಿಂದ ಪೂಜಿಸಲಾಗುತ್ತದೆ ಜೊತೆಗೆ ವಿಷ್ಣು ಭಕ್ತರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಕಟ್ಟುನಿಟ್ಟಾದ ಉಪವಾಸವನ್ನು ಆಚರಿಸುತ್ತಾರೆ. ಈ ಉಪವಾಸವು ಸೂರ್ಯೋದಯದಿಂದ ಪ್ರಾರಂಭ ಮಾಡಿ ಮರುದಿನ ಅಂದರೆ ದ್ವಾದಶಿಯಂದು ತಮ್ಮ ಉಪವಾಸವನ್ನು ಅಂತ್ಯಗೊಳಿಸುತ್ತಾರೆ. ಏಕಾದಶಿ ಶುಕ್ಲ ಪಕ್ಷ ಮತ್ತು ಕೃಷ್ಣ ಪಕ್ಷದ ಸಮಯದಲ್ಲಿ ಅಂದರೆ ತಿಂಗಳಿಗೆ ಎರಡು ಬಾರಿ ಬರುತ್ತದೆ.

Ekadashi in March 2024: ಮಾರ್ಚ್ ತಿಂಗಳಿನಲ್ಲಿ ಬರುವ ಏಕಾದಶಿಯನ್ನು ಯಾವ ದಿನ, ಹೇಗೆ ಆಚರಿಸಬೇಕು ತಿಳಿಯಿರಿ
Ekadashi in March 2024
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ

Updated on: Feb 29, 2024 | 3:37 PM

ಏಕಾದಶಿ ವರ್ಷದ ಪ್ರಮುಖ ಆಚರಣೆಗಳಲ್ಲಿ ಒಂದಾಗಿದ್ದು, ಈ ದಿನ ವಿಷ್ಣುವನ್ನು ಭಕ್ತಿಯಿಂದ ಪೂಜಿಸಲಾಗುತ್ತದೆ ಜೊತೆಗೆ ವಿಷ್ಣು ಭಕ್ತರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಕಟ್ಟುನಿಟ್ಟಾದ ಉಪವಾಸವನ್ನು ಆಚರಿಸುತ್ತಾರೆ. ಈ ಉಪವಾಸವು ಸೂರ್ಯೋದಯದಿಂದ ಪ್ರಾರಂಭ ಮಾಡಿ ಮರುದಿನ ಅಂದರೆ ದ್ವಾದಶಿಯಂದು ತಮ್ಮ ಉಪವಾಸವನ್ನು ಅಂತ್ಯಗೊಳಿಸುತ್ತಾರೆ. ಏಕಾದಶಿ ಶುಕ್ಲ ಪಕ್ಷ ಮತ್ತು ಕೃಷ್ಣ ಪಕ್ಷದ ಸಮಯದಲ್ಲಿ ಅಂದರೆ ತಿಂಗಳಿಗೆ ಎರಡು ಬಾರಿ ಬರುತ್ತದೆ. ಹಾಗಾಗಿ ಮಾರ್ಚ್ ತಿಂಗಳಲ್ಲಿ ಆಚರಿಸುವ ಏಕಾದಶಿ ವ್ರತದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದ್ದು, ಸಮಯ? ಮಹತ್ವ ಮತ್ತು ಆಚರಣೆಯ ವಿಧಾನಗಳ ಬಗ್ಗೆ ತಿಳಿಯಿರಿ.

ಏಕಾದಶಿ ದಿನದ ಆಚರಣೆಯ ಸಮಯ?

2024 ಮಾರ್ಚ್ ತಿಂಗಳ ಮೊದಲ ಏಕಾದಶಿ: ವಿಜಯ ಏಕಾದಶಿ (ಕೃಷ್ಣ ಪಕ್ಷ) ತಿಥಿಯು ಮಾ. 6 ರಂದು ಬೆಳಿಗ್ಗೆ 06:30 ಕ್ಕೆ ಪ್ರಾರಂಭವಾಗಿ, ಮಾ. 7 ರಂದು ಬೆಳಿಗ್ಗೆ 04:13ಕ್ಕೆ ತಿಥಿ ಮುಕ್ತಾಯವಾಗುತ್ತದೆ. ಹಾಗಾಗಿ ಮಾರ್ಚ್ 6 ಬುಧವಾರ ದಂದು ವಿಜಯ ಏಕಾದಶಿಯನ್ನು ಆಚರಣೆ ಮಾಡಲಾಗುತ್ತದೆ.

2024 ಮಾರ್ಚ್ ತಿಂಗಳ ಎರಡನೇ ಏಕಾದಶಿ:

ಅಮಲಕಿ ಏಕಾದಶಿ (ಶುಕ್ಲ ಪಕ್ಷ) ತಿಥಿಯು ಮಾ. 20 ರಂದು ಬೆಳಿಗ್ಗೆ 12:21 ಕ್ಕೆ ಪ್ರಾರಂಭವಾಗುತ್ತದೆ. ಮಾ. 21 ರಂದು ಬೆಳಿಗ್ಗೆ 02:22 ಕ್ಕೆ ತಿಥಿ ಮುಕ್ತಾಯವಾಗುತ್ತದೆ. ಹಾಗಾಗಿ ಮಾರ್ಚ್ 20 ರಂದು ಬುಧವಾರ ಅಮಲಕಿ ಏಕಾದಶಿಯನ್ನು ಆಚರಿಸಲಾಗುತ್ತದೆ.

ಏಕಾದಶಿ ದಿನದ ಮಹತ್ವ:

ಏಕಾದಶಿ ಹಿಂದೂಗಳಲ್ಲಿ ಹೆಚ್ಚಿನ ಧಾರ್ಮಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ವಿಷ್ಣು ಭಕ್ತರು ಈ ಉಪವಾಸವನ್ನು ಆಚರಿಸಿಸುತ್ತಾರೆ. ಈ ದಿನ ವಿಷ್ಣು ದೇವರ ಮಂತ್ರಗಳನ್ನು ಪಠಿಸುವ ಮೂಲಕ, ದೇವರಿಗೆ ನೈವೇದ್ಯವನ್ನು ಅರ್ಪಿಸಿ, ಏಕಾದಶಿ ವ್ರತ ಕಥೆಯನ್ನು ಕೇಳುವ ಮೂಲಕ ಭಗವಂತನ ಆಶೀರ್ವಾದವನ್ನು ಪಡೆಯುತ್ತಾರೆ.

ಏಕಾದಶಿ ದಿನದ ಪೂಜಾ ವಿಧಿ:

  1. ಬೆಳಿಗ್ಗೆ ಬೇಗನೆ ಎದ್ದು ಸ್ನಾನ ಮಾಡಿ.
  2. ಪೂಜಾ ಸ್ಥಳವನ್ನು ಸ್ವಚ್ಛಗೊಳಿಸಿ
  3. ವಿಷ್ಣು ಮತ್ತು ಲಕ್ಷ್ಮಿ ದೇವಿಯ ವಿಗ್ರಹ ಅಥವಾ ಫೋಟೋವನ್ನು ಮಣೆಯ ಮೇಲೆ ಇಡಿ.
  4. ದೇವರ ಮುಂದೆ ತುಪ್ಪದಿಂದ ದೀಪವನ್ನು ಬೆಳಗಿಸಿ, ವಿಗ್ರಹಗಳನ್ನು ಹೂವುಗಳಿಂದ ಅಲಂಕರಿಸಿ ಮತ್ತು ಮನೆಯಲ್ಲಿ ತಯಾರಿಸಿದ ನೈವೇದ್ಯಗಳನ್ನು ಅರ್ಪಿಸಿ.
  5. “ಓಂ ನಮೋ ಭಗವತೇ ವಾಸುದೇವಾಯ” ಎಂಬ ಮಂತ್ರವನ್ನು 108 ಬಾರಿ ಪಠಿಸಿ.
  6. ಏಕಾದಶಿ ವ್ರತದ ಕಥೆಯನ್ನು ಪಠಿಸಿ.
  7. ದೇವರಿಗೆ ಆರತಿ ಮಾಡಿ ಪೂಜೆಯನ್ನು ಮುಗಿಸಿ ದೇವರಿಗೆ ಮಾಡಿದ ನೈವೇದ್ಯವನ್ನು ಎಲ್ಲರಿಗೂ ಹಂಚಿ.
  8. ಸಂಜೆ ಸಮಯದಲ್ಲಿಯೂ ಕೂಡ ವಿಷ್ಣುವಿಗೆ ಪೂಜೆ ಮಾಡಿ.
  9. ಈ ದಿನ ತಿನ್ನುವ ಆಹಾರ ಸಾತ್ವಿಕವಾಗಿರಲಿ, ಹಣ್ಣುಗಳನ್ನು ಸೇವಿಸಬಹುದು ಆದರೆ ಅಕ್ಕಿಯನ್ನು ಬಳಸಿದ ಆಹಾರಗಳನ್ನು ಸೇವನೆ ಮಾಡಬೇಡಿ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್