Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಒಪಿ ಗಣೇಶ ತಯಾರಿಕೆ ಮೇಲೆ ಹದ್ದಿನ ಕಣ್ಣಿಟ್ಟ ಬಿಬಿಎಂಪಿ, ನಿಯಮ ಉಲ್ಲಂಘಿಸಿದರೆ ಬೀಳುತ್ತೆ ಭಾರೀ ದಂಡ

ಬೆಂಗಳೂರಿನಲ್ಲಿ ಪಿಒಪಿ ಗಣೇಶಗಳನ್ನು ನಿಷೇಧಿಸಲಾಗಿದ್ದು ಪಿಒಪಿ ಗಣೇಶ ತಯಾರಿಕೆ ಮತ್ತು ಮಾರಾಟದ ಮೇಲೆ ಬಿಬಿಎಂಪಿ ಹದ್ದಿನ ಕಣ್ಣಿಟ್ಟಿದೆ. ನಿಯಮಗಳನ್ನು ಉಲ್ಲಂಘಿಸಿದರೆ ತಯಾರಕರಿಗೆ ಭಾರಿ ದಂಡವನ್ನು ವಿಧಿಸಲು ಮುಂದಾಗಿದೆ. ಪರಿಸರ ಸ್ನೇಹಿಯಾಗಿ ಉತ್ಸವ ನಡೆಯುವಂತೆ ನೋಡಿಕೊಳ್ಳಲಾಗುವುದು ಮತ್ತು ಆಚರಣೆಗಳು ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ.

ಪಿಒಪಿ ಗಣೇಶ ತಯಾರಿಕೆ ಮೇಲೆ ಹದ್ದಿನ ಕಣ್ಣಿಟ್ಟ ಬಿಬಿಎಂಪಿ, ನಿಯಮ ಉಲ್ಲಂಘಿಸಿದರೆ ಬೀಳುತ್ತೆ ಭಾರೀ ದಂಡ
ಪಿಒಪಿ ಗಣೇಶ
Follow us
TV9 Web
| Updated By: Digi Tech Desk

Updated on:Sep 12, 2023 | 10:46 AM

ಬೆಂಗಳೂರು, ಸೆ.04: ಗಣೇಶ ಚತುರ್ಥಿ ಸಮೀಪಿಸುತ್ತಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ನಿಂದ ತಯಾರಿಸಿದ ಗಣೇಶ ವಿಗ್ರಹಗಳ ಮಾರಾಟ ಮತ್ತು ತಯಾರಿಕೆಯ ಮೇಲೆ ಕಟ್ಟುನಿಟ್ಟಿನ ನಿಷೇಧವನ್ನು ವಿಧಿಸಿದೆ. ನಿಯಮಗಳನ್ನು ಉಲ್ಲಂಘಿಸಿದರೆ ತಯಾರಕರಿಗೆ ಭಾರಿ ದಂಡವನ್ನು ವಿಧಿಸಲು ಮುಂದಾಗಿದೆ.

ಬಿಬಿಎಂಪಿ ಮುಖ್ಯಸ್ಥ ತುಷಾರ್ ಗಿರಿನಾಥ್ ಅವರು ಗಣೇಶ ಹಬ್ಬದ ವೇಳೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಗರದ ವಿವಿಧೆಡೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತೆ. ರಸ್ತೆಗಳಲ್ಲಿ ಗೊಂದಲ ರಹಿತವಾಗಿ ಆಚರಣೆಗೆ ಬಿಬಿಎಂಪಿ ನಿರ್ದೇಶನ ನೀಡಿದೆ. ಪರಿಸರ ಸ್ನೇಹಿಯಾಗಿ ಉತ್ಸವ ನಡೆಯುವಂತೆ ನೋಡಿಕೊಳ್ಳಲಾಗುವುದು ಮತ್ತು ಆಚರಣೆಗಳು ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಬಿಎಂಪಿ ಖಡಕ್ ಎಚ್ಚರಿಕೆ ಕೊಟ್ಟಿದೆ.

ಇದನ್ನೂ ಓದಿ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸುವಂತೆ ಸಾರ್ವಜನಿಕರಿಗೆ ಬಿಬಿಎಂಪಿ ಸಲಹೆ

ಹಬ್ಬದ ಸಂದರ್ಭದಲ್ಲಿ ನಗರದಾದ್ಯಂತ ಬ್ಯಾನರ್ ಮತ್ತು ಫ್ಲೆಕ್ಸ್‌ಗಳಿಗೆ ಕಟ್ಟುನಿಟ್ಟಾದ ನಿಷೇಧವನ್ನು ವಿಧಿಸಲಾಗಿದೆ. ಬೆಂಗಳೂರಿನಲ್ಲಿ ಈಗಾಗಲೇ ಅನಧಿಕೃತ ಫ್ಲೆಕ್ಸ್‌ಗಳು, ಬ್ಯಾನರ್‌ಗಳು ಮತ್ತು ಹೋರ್ಡಿಂಗ್‌ಗಳನ್ನು ನಿಷೇಧಿಸಲಾಗಿದೆ. ಗಣೇಶ ವಿಗ್ರಹಗಳ ವಿಸರ್ಜನೆ ವೇಳೆ ಸರಿಯಾದ ವ್ಯವಸ್ಥೆ ಮಾಡಲು ಬಿಬಿಎಂಪಿ ವಿವಿಧ ಇಲಾಖೆಗಳಿಗೆ ನಿರ್ದೇಶನ ನೀಡಿದೆ. ಸಾಮಾನ್ಯವಾಗಿ ಮನೆಗಳಲ್ಲಿ ಇಡುವ ಸಣ್ಣ ವಿಗ್ರಹಗಳಿಗೆ ಮೊಬೈಲ್ ಟ್ಯಾಂಕ್ ವ್ಯವಸ್ಥೆ ಮಾಡಲಾಗಿದೆ. ಇನ್ನು ದೊಡ್ಡ ಮೂರ್ತಿಗಳ ವಿಸರ್ಜನೆಗೆ ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಅಗರ ಕೆರೆ, ಹೆಬ್ಬಾಳ ಕೆರೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪಟಾಕಿ ಸಿಡಿಸುವುದನ್ನು ಸಹ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:23 pm, Mon, 4 September 23

ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್