ಬೆಂಗಳೂರು, ಸೆಪ್ಟೆಂಬರ್ 11: ಗೌರಿ ಗಣೇಶ ಹಾಗೂ ಗಣೇಶ ಚತುರ್ಥಿ (Ganesh Chaturthi 2023) ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) 1200 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ವಾರಾಂತ್ಯ ದಿನಗಳಾದ ಸೆಪ್ಟೆಂಬರ್ 15, 16 ಮತ್ತು ಗೌರಿ ಗಣೇಶ ಹಬ್ಬದ ಪ್ರಯುಕ್ತ 18ರಂದು ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಹಲವು ಸ್ಥಳಗಳಿಗೆ 1200 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ರಾಜ್ಯದ ಮತ್ತು ಹೊರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಸೆಪ್ಟೆಂಬರ್ 18ರಂದು ಹೆಚ್ಚುವರಿ ಬಸ್ಗಳನ್ನು ಹೊರಡಿಸಲಾಗುವುದು ಎಂದು ಕೆಎಸ್ಆರ್ಟಿಸಿ ತಿಳಿಸಿದೆ.
ಬೆಂಗಳೂರಿನಿಂದ ಯಾವ ಸ್ಥಳಗಳಿಗೆ ಮತ್ತು ಎಲ್ಲೆಲ್ಲಿಂದ ಬೆಂಗಳೂರಿಗೆ ಕೆಎಸ್ಆರ್ಟಿಸಿ ಹೆಚ್ಚುವರಿ ಬಸ್ಗಳು ಕಾರ್ಯಾಚರಿಸಲಿವೆ ಎಂಬ ವಿವರ ಇಲ್ಲಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇ-ಟಿಕೆಟ್ ಬುಕಿಂಗ್ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.
ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕಿಂಗ್ ಕೌಂಟರ್ಗಳ ಮೂಲಕವೂ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ದೊರೆಯಲಿದೆ. ಹೋಗುವ & ಬರುವ ಪ್ರಯಾಣದ ಟಿಕೆಟ್ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್ಆರ್ಟಿಸಿ ತಿಳಿಸಿದೆ.
ಇದನ್ನೂ ಓದಿ: KSET-2023: ನ. 26ರಂದು ಕೆಸೆಟ್ ಪರೀಕ್ಷೆ ನಿಗದಿ: ಕೆಇಎಯಿಂದ ಅಧಿಸೂಚನೆ
ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್ಗಳು ಇದ್ದು ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ ಎಂದು ಕೆಎಸ್ಆರ್ಟಿಸಿ ಮಾಧ್ಯಮ ಪ್ರಕಟಣೆ ತಿಳಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:03 pm, Mon, 11 September 23