AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಗಣೇಶ ಹಬ್ಬಕ್ಕೆ ವಾ.ಕ.ರ. ಸಾರಿಗೆ ಸಂಸ್ಥೆಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ; ಇಲ್ಲಿದೆ ವಿವರ

ಗಣೇಶ ಹಬ್ಬದ ಆಚರಣೆಗಾಗಿ ದೂರದ ಸ್ಥಳಗಳಿಂದ ತಮ್ಮ ಸ್ವಂತ ಊರುಗಳಿಗೆ ಬರುವ ಹಾಗೂ ಹಬ್ಬ ಮುಗಿಸಿ ಹಿಂದಿರುಗುವ ಸಾರ್ವಜನಿಕ ಪ್ರಯಾಣಿಕರಿಗೆ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.

ಹುಬ್ಬಳ್ಳಿ: ಗಣೇಶ ಹಬ್ಬಕ್ಕೆ ವಾ.ಕ.ರ. ಸಾರಿಗೆ ಸಂಸ್ಥೆಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ; ಇಲ್ಲಿದೆ ವಿವರ
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
ಶಿವಕುಮಾರ್ ಪತ್ತಾರ್
| Edited By: |

Updated on:Sep 12, 2023 | 10:45 AM

Share

ಹುಬ್ಬಳ್ಳಿ, ಸೆ.09: ಗಣೇಶ ಹಬ್ಬದ ಆಚರಣೆಗಾಗಿ ದೂರದ ಸ್ಥಳಗಳಿಂದ ತಮ್ಮ ಸ್ವಂತ ಊರುಗಳಿಗೆ ಬರುವ ಹಾಗೂ ಹಬ್ಬ ಮುಗಿಸಿ ಹಿಂದಿರುಗುವ ಸಾರ್ವಜನಿಕ ಪ್ರಯಾಣಿಕರಿಗೆ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (North West Karnataka Road Transport Corporation) ಯಿಂದ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 16 (ಶನಿವಾರ)ರಂದು ವಾರಾಂತ್ಯ, ಭಾನುವಾರ ಮತ್ತು ಸೋಮವಾರ ಸ್ವರ್ಣಗೌರಿ ವ್ರತ ಹಾಗೂ ಗಣೇಶ ಚತುರ್ಥಿ ಇದೆ. ಹಬ್ಬ ಆಚರಿಸಲು ಸೆ. 15 ಮತ್ತು 16 ರಂದು ಬೆಂಗಳೂರು, ಮಹಾರಾಷ್ಟ್ರದ ಪುಣೆ ಸೇರಿದಂತೆ ರಾಜ್ಯದ ಮತ್ತು ಅಂತರ್‌ರಾಜ್ಯದ ವಿವಿಧ ಪ್ರದೇಶಗಳಿಂದ ಹೆಚ್ಚಿನ ಪ್ರಯಾಣಿಕರು ಹಬ್ಬಕ್ಕಾಗಿ ಸ್ವಂತ ಊರುಗಳಿಗೆ ತೆರಳುವ ನಿರೀಕ್ಷೆ ಇದೆ.

ಹೀಗಾಗಿ ಹಬ್ಬಕ್ಕೆ ಬರುವವರಿಗೆ ಅನುಕಲವಾಗುವಂತೆ ಬೆಂಗಳೂರು ಮತ್ತಿತರ ಸ್ಥಳಗಳಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ಬಸ್ಸುಗಳು ಸಂಚರಿಸಲಿವೆ. ವೋಲ್ವೊ, ಸ್ಲೀಪರ್, ರಾಜಹಂಸ ಮುಂತಾದ 50 ಪ್ರತಿಷ್ಠಿತ ಐಶಾರಾಮಿ ಬಸ್ಸುಗಳು ಹಾಗೂ 200 ವೇಗದೂತ ಸಾರಿಗೆ ಸೇರಿದಂತೆ 250ಕ್ಕೂ ಹೆಚ್ಚು ಹೆಚ್ಚುವರಿ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ. ಅಲ್ಲದೇ ಸ್ಥಳೀಯ ಬಸ್ ನಿಲ್ದಾಣಗಳಿಂದ ಜಿಲ್ಲೆಯೊಳಗೆ ಹಾಗೂ ನೆರೆಯ ಜಿಲ್ಲೆಗಳಿಗೆ ಅವಶ್ಯಕತೆಗೆ ತಕ್ಕಂತೆ ಹೆಚ್ಚುವರಿ ಬಸ್ ಗಳನ್ನು ಓಡಿಸಲಾಗುತ್ತದೆ.

ಇದನ್ನೂ ಓದಿ:ಶಕ್ತಿ ಯೋಜನೆ ಅಡ್ಡ ಪರಿಣಾಮ, ಕುಂಟುತ್ತಿದೆ ವಾಯವ್ಯ ಸಾರಿಗೆ ಸಂಸ್ಥೆ ಆದಾಯ: ಸಂಬಳ ಕೊಡಲು ಆರ್ಥಿಕ ನೆರವು ಬೇಕಿದೆ- ಸರ್ಕಾರಕ್ಕೆ ಎಂಡಿ ಪತ್ರ

ಹಬ್ಬ ಮುಗಿಸಿಕೊಂಡು ಸ್ವಂತ ಊರುಗಳಿಂದ ಮರಳಿ ಬೆಂಗಳೂರು, ಮಂಗಳೂರು, ಹೈದ್ರಾಬಾದ್​, ಪುಣೆ ಇನ್ನಿತರೆ ಪ್ರಮುಖ ಸ್ಥಳಗಳಿಗೆ ತೆರಳುವ ಪ್ರಯಾಣಿಕರಿಗಾಗಿ 19ರಿಂದ‌ 24ರವರೆಗೆ ಸಂಸ್ಥೆಯ ಎಲ್ಲಾ ವಿಭಾಗಗಳ ಪ್ರಮುಖ ಬಸ್ ನಿಲ್ದಾಣಗಳಿಂದ ಜನ ದಟ್ಟಣೆಗೆ ಅನುಗುಣವಾಗಿ 250 ಕ್ಕೂ ಹೆಚ್ಚು ವಿಶೇಷ ಹೆಚ್ಚುವರಿ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.

ಹಬ್ಬದ ವಿಶೇಷ ಬಸ್ಸುಗಳಿಗೆ KSRTC Mobile App, ಮುಂಗಡ ಬುಕ್ಕಿಂಗ್ ಕೌಂಟರ್‌ಗಳು ಅಥವಾ ಸಂಸ್ಥೆಯ ವೆಬ್ ಸೈಟ್ www.ksrtc.in ಮೂಲಕ ಮುಂಗಡ ಬುಕ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಕೊನೆಯ ಕ್ಷಣದ ರಷ್ ನಿಂದ ತಪ್ಪಿಸಿಕೊಳ್ಳಲು ಕೂಡಲೆ ಮುಂಗಡ ಬುಕ್ಕಿಂಗ್ ಮಾಡಿಕೊಳ್ಳುವುದು ಸೂಕ್ತ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:42 pm, Sat, 9 September 23

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್