ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರಲ್ಲಿ ಯಾರೂ ಫ್ಲೆಕ್ಸ್ ಹಾಗೂ ಬ್ಯಾನರ್ ಹಾಕುವಂತಿಲ್ಲ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರಿನ ಟೌನ್ಹಾಲ್ನಲ್ಲಿ ಇಂದು ಗೌರಿಗಣೇಶ ಹಬ್ಬದ ಪ್ರಯುಕ್ತ ನಗರ ಪೊಲೀಸ್ ಆಯುಕ್ತ ದಯಾನಂದ್ ನೇತೃತ್ವದಲ್ಲಿ ಸಾರ್ವಜನಿಕ ಸಭೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಎಲ್ಲೆಲ್ಲಿ ಗಣೇಶ ಮೂರ್ತಿ ಕೂರಿಸಬೇಕು, ಮೆರವಣಿಗೆ, ನಿಯಮ ಪಾಲನೆ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲಾಗಿದೆ. ಸಭೆ ಬಳಿಕ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನಗರದಲ್ಲಿ ಯಾರೂ ಫ್ಲೆಕ್ಸ್ ಹಾಗೂ ಬ್ಯಾನರ್ ಹಾಕುವಂತಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 7: ಗಣೇಶ ಹಬ್ಬದ ಪ್ರಯುಕ್ತ ನಗರದಲ್ಲಿ ಯಾರೂ ಫ್ಲೆಕ್ಸ್ ಹಾಗೂ ಬ್ಯಾನರ್ ಹಾಕುವಂತಿಲ್ಲ. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸೂರಿನಡಿ ಸಬ್ ಡಿವಿಜನ್ ಮೂಲಕ ಅನುಮತಿಗೆ ವ್ಯವಸ್ಥೆ ಕಲ್ಪಿಸಲಾಗುತ್ತೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಹೇಳಿದ್ದಾರೆ. ಗೌರಿಗಣೇಶ ಹಬ್ಬ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ದಯಾನಂದ್ ನೇತೃತ್ವದಲ್ಲಿ ಬೆಂಗಳೂರಿನ ಟೌನ್ಹಾಲ್ನಲ್ಲಿ ನಡೆದ ಸಾರ್ವಜನಿಕ ಸಭೆ ಬಳಿಕ ಮಾತನಾಡಿದ ಅವರು, ಏರಿಯಾದಲ್ಲಿ 10-20 ಫ್ಲೆಕ್ಸ್ಗಳನ್ನು ಹಾಕುವಂತಿಲ್ಲ. ಗಣೇಶ ಕೂರಿಸುವ ಪೆಂಡಾಲ್ನಲ್ಲಿ ಕಾರ್ಯಕ್ರಮದ ಮಾಹಿತಿ ಹಾಕಬಹುದು ಎಂದು ಹೇಳಿದ್ದಾರೆ.
ಬೆಸ್ಕಾಂ, ಪೊಲೀಸ್, BBMP ಅಧಿಕಾರಿಗಳು ಒಂದೇ ಕಡೆ ಇದ್ದು ಅನುಮತಿ ನೀಡಲಾಗುತ್ತೆ. ಬಟ್ಟೆಯಲ್ಲಿ ತಯಾರಿಸುವ ಬ್ಯಾನರ್ ಬಳಸಲು ಸೂಚಿಸಿದ್ದೇವೆ ಎಂದು ತಿಳಿಸಿದರು.
ಮಣ್ಣಿನ ಗಣೇಶ ಕೂರಿಸುವಂತೆ ಮನವಿ
ಮೆರವಣಿಗೆ ವಿಚಾರವಾಗಿ ಮಾತನಾಡಿದ ಅವರು, ದೊಡ್ಡ ಗಣೇಶ ಇಟ್ಟ ಕಡೆ ಈ ಹಿಂದೆ ಇರುವ ರೂಟ್ನಲ್ಲಿ ಸಾಗಲಿದೆ. ಅದೇ ರೀತಿಯಲ್ಲಿ ಈ ವರ್ಷವೂ ಸಾಗಲಿದೆ. ಉಳಿದಂತೆ ವಾರ್ಡ್ನಲ್ಲಿ ಎರಡು ಕಡೆ ಟ್ಯಾಂಕರ್ ಇರಲಿದೆ. ಸಭೆಯಲ್ಲಿ ಪಿಒಪಿ ಗಣೇಶ ಬ್ಯಾನ್ ಮಾಡಲಾಗಿದ್ದು, ಅದರ ಬದಲಾಗಿ ಮಣ್ಣಿನ ಗಣೇಶ ಕೂರಿಸಲು ಮನವಿ ಮಾಡಲಾಗಿದೆ.
ಇದನ್ನೂ ಓದಿ: ಬೆಂಗಳೂರು: ಪಿಒಪಿ ಗಣೇಶ ಮೂರ್ತಿ ಮಾರಾಟಕ್ಕೆ ಅವಕಾಶ ನೀಡುವಂತೆ ಗ್ರಾಹಕರಿಂದ ಪ್ರತಿಭಟನೆ
ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಹೆಚ್ಚುವರಿ ಪೊಲೀಸ್ ಆಯುಕ್ತರಾದ ರಮಣಗುಪ್ತಾ, ಸತೀಶ್ ಕುಮಾರ್, ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಉಪಸ್ಥಿತರಿದ್ದರು.
ಇದನ್ನೂ ಓದಿ: Magh Chaturthi: ಕಾರವಾರದ ಜನ ಮನೆಗಳಲ್ಲಿ ಗಣೇಶನ ವಿಗ್ರಹವಿಟ್ಟು ಪೂಜೆ ಮಾಡಿದರು! ಹಿನ್ನೆಲೆ, ಸಂಪ್ರದಾಯದ ವಿವರ ಹೀಗಿದೆ
ಗಣೇಶ ಚತುರ್ಥಿ ಹಬ್ಬ ಇದೇ ಸೆಪ್ಟೆಂಬರ್ 19ರಂದು ಇರುವಾಗಲೇ ಗಣಪನ ವಿಗ್ರಹಗಳಿಗೆ ಭಾರೀ ಬೇಡಿಕೆ ಹೆಚ್ಚಾಗುತ್ತಿದೆ. ಒಂದಷ್ಟು ಮಂದಿ ಪರಿಸರ ಸ್ನೇಹಿ ವಿಗ್ರಹಕ್ಕಾಗಿ ಮೊರೆ ಹೋಗುತ್ತಿದ್ದು, ಇನ್ನೊಂದಷ್ಟು ಮಂದಿ ಪಿಒಪಿ ಗಣೇಶನ ವಿಗ್ರಹಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಪಿಒಪಿ ಗಣೇಶ ವಿಗ್ರಹಗಳ ಮಾರಾಟಕ್ಕೆ ಕೆಲವೆಡೆ ನಿಷೇಧ ಹೇರಿದ ಹಿನ್ನೆಲೆ ಗ್ರಾಹಕರು ಆಕ್ರೋಶಗೊಂಡು ಪ್ರತಿಭಟನೆ ಸಹ ಮಾಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:09 pm, Thu, 7 September 23