AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Good Luck Sign: ಮುಂಜಾನೆ ಅಚಾನಕ್ಕಾಗಿ ಈ ವಸ್ತುಗಳು ಕಾಣುವುದು ಶುಭ ಸೂಚಕ

ಸೂರ್ಯೋದಯ ಸಮಯದಲ್ಲಿ ಮನಸ್ಸು ಬಹಳ ಸೂಕ್ಷ್ಮ ಸ್ಥಿತಿಯಲ್ಲಿರುತ್ತದೆ. ಇಂತಹ ಸಂದರ್ಭದಲ್ಲಿ ಯಾವಾಗಲೂ ಸಕಾರಾತ್ಮಕ ವಿಷಯಗಳನ್ನು ಸ್ವೀಕರಿಸಬೇಕು ಇದರಿಂದ ನಮ್ಮ ಇಡೀ ದಿನ ಉತ್ತಮವಾಗಿರುತ್ತದೆ ಎಂದು ಹೇಳಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಬೆಳಿಗ್ಗೆ ಕೆಲವು ವಸ್ತುಗಳು ಕಂಡು ಬಂದರೆ ಶುಭ ಫಲಗಳು ಪ್ರಾಪ್ತವಾಗುತ್ತದೆ ಎಂಬ ನಂಬಿಕೆ ಇದೆ.

Good Luck Sign: ಮುಂಜಾನೆ ಅಚಾನಕ್ಕಾಗಿ ಈ ವಸ್ತುಗಳು ಕಾಣುವುದು ಶುಭ ಸೂಚಕ
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 17, 2024 | 5:35 PM

Share

ಸೂರ್ಯೋದಯವು ಹೊಸದಿನದ ಆರಂಭವಾಗಿದೆ. ಈ ಸಮಯದಲ್ಲಿ ಮನಸ್ಸು ಬಹಳ ಸೂಕ್ಷ್ಮ ಸ್ಥಿತಿಯಲ್ಲಿರುತ್ತದೆ. ಇಂತಹ ಸಂದರ್ಭದಲ್ಲಿ ಯಾವಾಗಲೂ ಸಕಾರಾತ್ಮಕ ವಿಷಯಗಳನ್ನು ಸ್ವೀಕರಿಸಬೇಕು ಇದರಿಂದ ನಮ್ಮ ಇಡೀ ದಿನ ಉತ್ತಮವಾಗಿರುತ್ತದೆ ಎಂದು ಹೇಳಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಬೆಳಿಗ್ಗೆ ಕೆಲವು ವಸ್ತುಗಳು ಕಂಡು ಬಂದರೆ ಶುಭ ಫಲಗಳು ಪ್ರಾಪ್ತವಾಗುತ್ತದೆ ಎಂಬ ನಂಬಿಕೆ ಇದೆ.

ಈ ವಸ್ತು ಕಂಡುಬಂದರೆ ಒಳ್ಳೆಯದಾಗುತ್ತೆ!

  • ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ಬೆಳಿಗ್ಗೆ ಎದ್ದಾಗ ಮಾಡಬೇಕಾದ ಮೊದಲ ಕೆಲಸವೆಂದರೆ ಅಂಗೈಗಳನ್ನು ನೋಡಿಕೊಳ್ಳುವುದು. ಏಕೆಂದರೆ ತಾಯಿ ಸರಸ್ವತಿ, ಬ್ರಹ್ಮ ಮತ್ತು ದೇವಿ ಲಕ್ಷ್ಮೀ ನಮ್ಮ ಅಂಗೈನಲ್ಲಿ ವಾಸಿಸುತ್ತಾರೆ ಎಂಬ ನಂಬಿಕೆ ಇದೆ. ಜೊತೆಗೆ ಸಂತೋಷ, ಸಮೃದ್ಧಿ ಮತ್ತು ಅದೃಷ್ಟ ಸದಾಕಾಲ ಇರುತ್ತದೆ. ಅಂತೆಯೇ, ಜ್ಯೋತಿಷ್ಯ ಶಾಸ್ತ್ರದಲ್ಲಿ ಇನ್ನು ಕೆಲವು ಚಿಹ್ನೆಗಳನ್ನು ಉಲ್ಲೇಖಿಸಲಾಗಿದೆ.
  • ನೀವು ಬೆಳಿಗ್ಗೆ ಮನೆಯಿಂದ ಹೊರ ಬಂದ ತಕ್ಷಣ ಹಸು ತನ್ನ ಕರುವಿಗೆ ಹಾಲು ನೀಡುವುದನ್ನು ಅಥವಾ ಬಿಳಿ ಹಸು ನಿಮ್ಮ ಮನೆಯ ಬಾಗಿಲಿಗೆ ಬಂದು ಜೋರಾಗಿ ಕೂಗಿದರೆ, ನಿಮ್ಮ ಜೀವನದಲ್ಲಿ ಸಂತೋಷ ಹೆಚ್ಚಾಗುತ್ತದೆ ಎಂದು ನಂಬಲಾಗಿದೆ, ಇದನ್ನು ಅದೃಷ್ಟದ ಅನುಗ್ರಹ ಎನ್ನಲಾಗುತ್ತದೆ.
  • ನೀವು ಬೆಳಿಗ್ಗೆ ಕಣ್ಣು ತೆರೆದ ತಕ್ಷಣ ಶಂಖನಾದ, ದೇವಾಲಯದ ಗಂಟೆಗಳ ಶಬ್ದ ಅಥವಾ ಮಂತ್ರಗಳ ಪಠಣವನ್ನು ಕೇಳಿದರೆ, ಅದು ಮಂಗಳಕರವಾಗಿದೆ. ಈ ರೀತಿ ಘಟನೆ ಬೆಳಗ್ಗಿನ ಸಮಯದಲ್ಲಿ ನಡೆದರೆ ನಿಮಗೆ ಆ ದಿನ ಒಳ್ಳೆಯ ಸುದ್ದಿ ಸಿಗುತ್ತದೆ. ಅರ್ಧಕ್ಕೆ ನಿಂತ ಕೆಲಸವು ಪೂರ್ಣಗೊಳ್ಳುತ್ತದೆ ಎಂದು ನಂಬಲಾಗಿದೆ.
  • ನೀವು ಬೆಳಿಗ್ಗೆ ಎದ್ದಾಗ ಹಾಲು ಅಥವಾ ಮೊಸರನ್ನು ನೋಡಿದರೆ ಅದು ಭವಿಷ್ಯದಲ್ಲಿ ಅದೃಷ್ಟ ಬರುವುದರ ಸೂಚಕವಾಗಿದೆ. ಅಥವಾ ಮುಂಜಾನೆ ಸಮಯದಲ್ಲಿ ನಿಮ್ಮ ಮನೆಯಲ್ಲಿ ಪಕ್ಷಿಗಳ ಚಿಲಿಪಿಲಿ ಕೇಳಿದರೆ ಇದು ಶುಭ ಸೂಚಕವಾಗಿದೆ.
  • ವಿವಾಹಿತ ಮಹಿಳೆ ಸಿಂಗಾರಗೊಂಡು ಪೂಜೆ ಮಾಡುವುದನ್ನು ಅಥವಾ ಪೂಜಾ ತಟ್ಟೆಯನ್ನು ತೆಗೆದುಕೊಂಡು ಹೋಗುತ್ತಿರುವುದನ್ನು ಕಂಡರೆ ಅದನ್ನು ಶುಭವೆಂದು ಪರಿಗಣಿಸಲಾಗುತ್ತದೆ.
  • ಪೊರಕೆಯಿಂದ ಮನೆಯನ್ನು ಸ್ವಚ್ಛಗೊಳಿಸುವುದು ಕಂಡುಬಂದರೆ, ಅದು ಸಂಪತ್ತು ಮರಳಿ ಬರುವ ಅಥವಾ ಹೆಚ್ಚಾಗುವ ಸಂಕೇತವಾಗಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ