Guru Purnima 2023: ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ: ಗುರುಪೂರ್ಣಿಮೆ ಮಹತ್ವ, ಆಚರಣೆ ಹೇಗೆ?

ಹಿಂದೂ ಧರ್ಮದಲ್ಲಿ ಗುರು ಪೂರ್ಣಿಮೆಗೆ ವಿಶೇಷ ಮಹತ್ವವಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ಆಷಾಢ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯ ದಿನದಂದು ಗುರು ಪೂರ್ಣಿಮಾ ಹಬ್ಬವನ್ನು ಆಚರಿಸಲಾಗುತ್ತದೆ. ಇನ್ನು ಮಹತ್ವ, ಆಚರಣೆ ಹೇಗೆ? ಗುರು ಪೂರ್ಣಿಮೆಯ ಪೂಜಾ ಸಮಯದ ವಿವರ ಈ ಕೆಳಗಿನಂತಿದೆ.

Guru Purnima 2023: ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ: ಗುರುಪೂರ್ಣಿಮೆ ಮಹತ್ವ, ಆಚರಣೆ ಹೇಗೆ?
ಗುರು ಪೂರ್ಣಿಮಾ 2023
Follow us
Rakesh Nayak Manchi
| Updated By: ರಮೇಶ್ ಬಿ. ಜವಳಗೇರಾ

Updated on:Jul 03, 2023 | 6:58 AM

ಗುರುಗಳ ಆಶೀರ್ವಾದ ಪಡೆದು ಧನ್ಯರಾಗುವ ಗುರು ಪೂರ್ಣಿಮೆಯನ್ನು  (Guru Purnima 2023) ಸಂಭ್ರಮದಿಂದ ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯಂದು ಆಚರಿಸುವ ಈ ಹಬ್ಬವನ್ನು ಹಿಂದೂ ಧರ್ಮದಲ್ಲಿ ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಈ ದಿನದಂದು ಗುರುವನ್ನು ಪೂಜಿಸುವುದರಿಂದ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಉಂಟಾಗುತ್ತದೆ ಎಂಬುದು ನಂಬಿಕೆಯಾಗಿದೆ. ಅದಾಗ್ಯೂ, ಈ ಬಾರಿ ಎರಡು ದಿನಗಳ ಕಾಲ ಗುರು ಪೂರ್ಣಿಮಾ ಹಬ್ಬ ಇರಲಿದೆ. ಆದರೆ ಯಾವ ದಿನದಂದು ಆಚರಿಸಿದರೆ ಉತ್ತಮ ಎಂಬುದು ಹಲವರಲ್ಲಿ ಗೊಂದಲ ಉಂಟಾಗಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ಆಷಾಢ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯ ದಿನದಂದು ಗುರು ಪೂರ್ಣಿಮಾ ಹಬ್ಬವನ್ನು ಆಚರಿಸಲಾಗುತ್ತದೆ. ಈ ದಿನವನ್ನು ವ್ಯಾಸ ಪೂರ್ಣಿಮೆ ಎಂದೂ ಕರೆಯುತ್ತಾರೆ. ಏಕೆಂದರೆ ಮಹಾಭಾರತ ಮಹಾಕಾವ್ಯವನ್ನು ರಚಿಸಿದ ಮಹರ್ಷಿ ವೇದವ್ಯಾಸರು ಈ ದಿನ ಜನಿಸಿದ್ದರು. ಈ ಬಾರಿ ಜುಲೈ 2 ಮತ್ತು ಜುಲೈ 3 ರಂದು ಗುರು ಪೂರ್ಣಿಮಾ ಹಬ್ಬ ಬಂದಿದೆ.

ಗುರು ಪೂರ್ಣಿಮೆಯ ಪೂಜಾ ಸಮಯ

ಹಿಂದೂ ಪಂಚಾಂಗದ ಪ್ರಕಾರ, ಆಷಾಢ ಶುಕ್ಲ ಪಕ್ಷದ ಹುಣ್ಣಿಮೆಯ ದಿನಾಂಕವು ಜುಲೈ 02 ರಂದು ರಾತ್ರಿ 08:21 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಹುಣ್ಣಿಮೆಯ ದಿನಾಂಕವು ಜುಲೈ 03 ರಂದು ಸಂಜೆ 05:08 ಕ್ಕೆ ಕೊನೆಗೊಳ್ಳುತ್ತದೆ. ಉದಯ ತಿಥಿಯ ಪ್ರಕಾರ, ಗುರು ಪೂರ್ಣಿಮಾ ಹಬ್ಬವನ್ನು ಜುಲೈ 03 ರ ಸೋಮವಾರದಂದು ಸಂಭ್ರಮದಿಂದ ಆಚರಿಸಲಾಗುತ್ತದೆ.

ಇದನ್ನೂ ಓದಿ: ಜೀವನದಲ್ಲಿ ನೀವು ಈ ರಹಸ್ಯಗಳನ್ನು ಇತರರೊಂದಿಗೆ ಹಂಚಿಕೊಂಡರೆ ಅಡೆತಡೆಗಳು, ಅಡ್ಡಿ ಆತಂಕಕಗಳು ಗ್ಯಾರಂಟಿ!

ಗುರು ಪೂರ್ಣಿಮೆಯ ಮೂಲ ಕಥೆ

ಗುರು ಪೂರ್ಣಿಮೆಯ ಹಿಂದಿನ ಕಥೆಯು ಹಿಂದೂ ಪುರಾಣಗಳಲ್ಲಿ ಶ್ರೇಷ್ಠ ಗುರುಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟ ಋಷಿ ವ್ಯಾಸರ ಜನ್ಮದೊಂದಿಗೆ ಸಂಬಂಧಿಸಿದೆ. ದಂತಕಥೆಗಳ ಪ್ರಕಾರ, ವ್ಯಾಸರು ಈ ಶುಭ ದಿನದಂದು ಜನಿಸಿದರು. ಅವರು ಪವಿತ್ರ ಹಿಂದೂ ಮಹಾಕಾವ್ಯವಾದ ಮಹಾಭಾರತ ಕಾವ್ಯ ರಚಿಸಿದ್ದಾರೆ. ಗುರು ಪೂರ್ಣಿಮೆಯು ವ್ಯಾಸರ ಬುದ್ಧಿವಂತಿಕೆ, ಆಧ್ಯಾತ್ಮಿಕ ಮತ್ತು ಸಾಹಿತ್ಯಿಕ ಜ್ಞಾನಕ್ಕೆ ಅವರು ನೀಡಿದ ಕೊಡುಗೆಗಳನ್ನು ಗೌರವಿಸುವ ದಿನವಾಗಿದೆ. ಜ್ಞಾನವನ್ನು ನೀಡುವ ಮತ್ತು ತಮ್ಮ ಶಿಷ್ಯರನ್ನು ಜ್ಞಾನದ ಹಾದಿಯಲ್ಲಿ ಮಾರ್ಗದರ್ಶನ ಮಾಡುವ ಎಲ್ಲಾ ಗುರುಗಳು ಮತ್ತು ಶಿಕ್ಷಕರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ಸಮಯವೂ ಇದು.

ಬೌದ್ಧ, ಜೈನ ಧರ್ಮಗಳಲ್ಲೂ ಗುರು ಪೂರ್ಣಿಮೆ ಆಚರಣೆ

ಸನಾತನ ಧರ್ಮದಲ್ಲಿ (ಹಿಂದೂ) ಆಚರಿಸುವಂತೆ ಬೌದ್ಧ ಮತ್ತು ಜೈನ ಧರ್ಮಗಳಲ್ಲೂ ಗುರು ಪೂರ್ಣಿಮೆಯನ್ನು ಹಬ್ಬವಾಗಿ ಆಚರಿಸಲಾಗುತ್ತದೆ. ಈ ದಿನದಂದು ಬೌದ್ಧ ಧರ್ಮದ ಅನುಯಾಯಿಗಳು ಗೌತಮ ಬುದ್ಧನನ್ನು ಪೂಜಿಸಿದರೆ, ಜೈನ ಧರ್ಮದ ಅನುಯಾಯಿಗಳು ಮಹಾವೀರನನ್ನು ಗುರು ಎಂದು ಪೂಜಿಸುತ್ತಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:42 pm, Sat, 1 July 23

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ