AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಟಿಷ್ ಸಂಸತ್ತಿನಲ್ಲಿ ಮೊದಲ ಬಾರಿ ಹನುಮಾನ್ ಚಾಲೀಸಾ ಪಠಣ; ವಿಡಿಯೋ ವೈರಲ್!

ಬ್ರಿಟಿಷ್ ಸಂಸತ್ತಿನ ಮೇಲ್ಮನೆಯಾದ 'ಹೌಸ್ ಆಫ್ ಲಾರ್ಡ್ಸ್'ನಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಪವಿತ್ರ ಹನುಮಾನ್ ಚಾಲೀಸಾವನ್ನು ಪಠಿಸಲಾಗಿದೆ. ಲೇಬರ್ ಏಷ್ಯನ್ಸ್ ಸೊಸೈಟಿ ಆಯೋಜಿಸಿದ್ದ ದೀಪಾವಳಿ ಆಚರಣೆಯ ಸಂದರ್ಭದಲ್ಲಿ ಈ ಐತಿಹಾಸಿಕ ಕ್ಷಣಕ್ಕೆ ಸಂಸತ್ತು ಸಾಕ್ಷಿಯಾಯಿತು. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಭಾರತೀಯ ಸಂಸ್ಕೃತಿಗೆ ಅಂತರರಾಷ್ಟ್ರೀಯ ಮನ್ನಣೆ ದೊರೆತಿರುವುದನ್ನು ಸಾರುತ್ತದೆ. ವಿಡಿಯೋ ಇಲ್ಲಿದೆ ನೋಡಿ.

ಬ್ರಿಟಿಷ್ ಸಂಸತ್ತಿನಲ್ಲಿ ಮೊದಲ ಬಾರಿ ಹನುಮಾನ್ ಚಾಲೀಸಾ ಪಠಣ; ವಿಡಿಯೋ ವೈರಲ್!
ಹನುಮಾನ್ ಚಾಲೀಸಾ
ಅಕ್ಷತಾ ವರ್ಕಾಡಿ
|

Updated on:Nov 13, 2026 | 8:59 AM

Share

ಲಂಡನ್: ಬ್ರಿಟಿಷ್ ಸಂಸತ್ತಿನ ಮೇಲ್ಮನೆಯಾದ ‘ಹೌಸ್ ಆಫ್ ಲಾರ್ಡ್ಸ್’ನಲ್ಲಿ (House of Lords) ಇತಿಹಾಸದಲ್ಲೇ ಮೊದಲ ಬಾರಿಗೆ ಪವಿತ್ರ ಹನುಮಾನ್ ಚಾಲೀಸಾವನ್ನು ಪಠಿಸಲಾಗಿದೆ. ನವೆಂಬರ್ 9 ರಂದು ‘ಲೇಬರ್ ಏಷ್ಯನ್ಸ್ ಸೊಸೈಟಿ’ (Labour Asians Society) ವತಿಯಿಂದ ಆಯೋಜಿಸಲಾಗಿದ್ದ ದೀಪಾವಳಿ ಆಚರಣೆಯ ಸಂದರ್ಭದಲ್ಲಿ ಈ ಅಪರೂಪದ ಹಾಗೂ ಐತಿಹಾಸಿಕ ಕ್ಷಣಕ್ಕೆ ಸಂಸತ್ತು ಸಾಕ್ಷಿಯಾಯಿತು. ಈ ಭಕ್ತಿಪೂರ್ವಕ ಪಠಣದ ವಿಡಿಯೋ ನವೆಂಬರ್ 11 ರಂದು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿದ್ದು, ಸದ್ಯ ಭಾರೀ ವೈರಲ್ ಆಗುತ್ತಿದೆ.

ವೆಸ್ಟ್‌ಮಿನಿಸ್ಟರ್ ಅರಮನೆಯಲ್ಲಿ ಭಕ್ತಿಗೀತೆಯ ಇಂಪು:

ವೆಸ್ಟ್‌ಮಿನಿಸ್ಟರ್ ಅರಮನೆಯ ಚೋಲ್ಮೊಂಡೆಲಿ ಕೊಠಡಿ ಮತ್ತು ಟೆರೇಸ್‌ನಲ್ಲಿ (Cholmondeley Room and Terrace) ಈ ವಿಶೇಷ ದೀಪಾವಳಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ‘ಹಿಯರ್ ಅಂಡ್ ನೌ 365’ (Here & Now 365) ಸಂಸ್ಥೆಯ ಸಂಸ್ಥಾಪಕ ಮನೀಶ್ ತಿವಾರಿ ಅವರು ಆಚರಣೆಯ ನೇತೃತ್ವ ವಹಿಸಿದ್ದರೆ, ಲೇಬರ್ ಏಷ್ಯನ್ಸ್ ಸೊಸೈಟಿಯ ಪೋಷಕರಾದ ಲಾರ್ಡ್ ಉದಯ್ ನಾಗರಾಜು (Lord Uday Nagaraju) ಅವರು ಕಾರ್ಯಕ್ರಮದ ಆತಿಥ್ಯ ವಹಿಸಿದ್ದರು.

ತಬಲಾ ಮತ್ತು ಹಾರ್ಮೋನಿಯಂ ವಾದ್ಯಗಳ ಸುಮಧುರ ಪಕ್ಕವಾದ್ಯದೊಂದಿಗೆ ಹನುಮಾನ್ ಚಾಲೀಸಾವನ್ನು ಅತ್ಯಂತ ಭಕ್ತಿಯಿಂದ ಹಾಡಲಾಯಿತು. ಬ್ರಿಟನ್‌ನಲ್ಲಿ ನೆಲೆಸಿರುವ ಭಾರತೀಯ ಮೂಲದವರು ಮಾತ್ರವಲ್ಲದೆ, ಹಲವಾರು ಬ್ರಿಟಿಷ್ ಸಂಸತ್ ಸದಸ್ಯರು ಹಾಗೂ ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

ಇದನ್ನೂ ಓದಿ: ಶನಿ ಸಾಡೇ ಸಾತಿ ಮುಗಿದ ತಕ್ಷಣ ಜೀವನದಲ್ಲಿ ನಡೆಯುವ 5 ಪ್ರಮುಖ ಬದಲಾವಣೆಗಳಿವು!

ದೀಪಾವಳಿ ಎಂಬುದು ಏಕತೆಯ ಸಂಕೇತ:

ಕಾರ್ಯಕ್ರಮದಲ್ಲಿ ಹನುಮಾನ್ ಚಾಲೀಸಾದ ಮಹತ್ವವನ್ನು ವಿವರಿಸಿ ಮಾತನಾಡಿದ ಮನೀಶ್ ತಿವಾರಿ ಅವರು, “ದೀಪಾವಳಿ ಕೇವಲ ಒಂದು ಹಬ್ಬವಲ್ಲ, ಬದಲಾಗಿ ವಿವಿಧ ಸಮುದಾಯಗಳ ನಡುವೆ ಏಕತೆಯನ್ನು ಬೆಸೆಯುವ ಬೆಳಕಿನ ಹಬ್ಬವಾಗಿದೆ. ಹಿಂದೂಗಳು, ಸಿಖ್ಖರು, ಜೈನರು ಮತ್ತು ಬೌದ್ಧರು ಆಚರಿಸುವ ಈ ಹಬ್ಬದಲ್ಲಿ ಇಂದು ಬ್ರಿಟನ್‌ನ ಎಲ್ಲಾ ಹಿನ್ನೆಲೆಯ ಜನರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಹೌಸ್ ಆಫ್ ಲಾರ್ಡ್ಸ್‌ನಲ್ಲಿ ಮೊದಲ ಬಾರಿಗೆ ಹನುಮಾನ್ ಚಾಲೀಸಾ ಪಠಣವಾಗಿರುವುದು ನಮ್ಮ ಸಮುದಾಯವು ದೀರ್ಘಕಾಲದವರೆಗೆ ಹೆಮ್ಮೆಯಿಂದ ನೆನಪಿನಲ್ಲಿಟ್ಟುಕೊಳ್ಳುವ ವಿಶೇಷ ಕ್ಷಣವಾಗಿದೆ” ಎಂದು ಹರ್ಷ ವ್ಯಕ್ತಪಡಿಸಿದರು.

ಬ್ರಿಟಿಷ್ ಸಂಸತ್ತಿನಂತಹ ಪ್ರತಿಷ್ಠಿತ ವೇದಿಕೆಯಲ್ಲಿ ಮೊದಲ ಬಾರಿಗೆ ಹನುಮಾನ್ ಚಾಲೀಸಾ ಮೊಳಗಿರುವುದು, ಭಾರತೀಯ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ಸಂಪ್ರದಾಯಗಳಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ದೊರೆಯುತ್ತಿರುವ ಗೌರವ ಹಾಗೂ ಮನ್ನಣೆಗೆ ಸಾಕ್ಷಿಯಾಗಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:58 am, Fri, 13 November 26

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಸದ್ಯ ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ರಾಜಕೀಯ, ಕ್ರೈಂ ಸುದ್ದಿಗಳನ್ನು ಬರೆಯುತ್ತಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಇಂದು ಈ ರಾಶಿಯವರು ಅತಿಯಾಗಿ ನಂಬಿದವರಿಂದ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಅತಿಯಾಗಿ ನಂಬಿದವರಿಂದ ಮೋಸ ಹೋಗುವ ಸಾಧ್ಯತೆ
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?
ಲೀಲಾವತಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ವಿನೋದ್ ರಾಜ್ ಬೇಸರ
ಲೀಲಾವತಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ವಿನೋದ್ ರಾಜ್ ಬೇಸರ
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್