AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hasanamba Temple: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಮಹತ್ವವೇನು? ತಿಳಿಯಿರಿ ಇದರ ಇತಿಹಾಸ

ರ್ಭಗುಡಿಯಲ್ಲಿ ಹುತ್ತದೋಪಾದಿಯಲ್ಲಿರುವ ಆದಿಶಕ್ತಿಸ್ವರೂಪಿಣಿ ಹಾಸನಾಂಬೆಗೆ ಹಿಂದಿನ ವರುಷ ಹಚ್ಚಿಟ್ಟಿದ್ದ ದೀಪವು ಆರದೇ, ಮುಡಿಸಿದ ಹೂ ಬಾಡದೇ ಹಾಗೂ ನೈವೇದ್ಯಕ್ಕಿಟ್ಟ ಅಕ್ಕಿಯು ಅನ್ನವಾಗಿರುವ ವಿಸ್ಮಯ ದೃಶ್ಯವನ್ನು ಕಣ್ತುಂಬಿಕೊಳ್ತುವ ಭಕ್ತರು ಪುನೀತರಾಗುತ್ತಾರೆ.

Hasanamba Temple: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಮಹತ್ವವೇನು? ತಿಳಿಯಿರಿ ಇದರ ಇತಿಹಾಸ
ಹಾಸನಾಂಬೆ ದೇವಾಲಯ
TV9 Web
| Edited By: |

Updated on: Oct 27, 2021 | 7:25 AM

Share

ಹಾಸನ: ನಗರದ ಐತಿಹಾಸಿಕ ಹಾಸನಾಂಬೆ ದೇವಾಲಯ ತೆರೆಯಲು ಕ್ಷಣಗಣನೆ ಶುರುವಾಗಿದೆ. ಈ ಹಿಂದೆ ಹಾಸನಕ್ಕೆ ಸಿಂಹಾಸನಪುರ ಎಂಬ ಹೆಸರಿತ್ತು. ಕಾಲಾಂತರದಲ್ಲಿ ಹಾಸನ ಎಂದಾಗಿದೆ. ಹಾಸನಾಂಬೆಯಿಂದಲೇ ಹಾಸನಕ್ಕೆ ಈ ಹೆಸರು ಬಂದಿದೆ. ಹಾಸನಾಂಬೆ ತಾಯಿಯು ವರ್ಷಕ್ಕೊಮ್ಮೆ ದೀಪಾವಳಿಯ ಸಂದರ್ಭದಲ್ಲಿ ವಿಸ್ಮಯಕಾರಿಯಾಗಿ ಭಕ್ತರಿಗೆ ದರ್ಶನ ನೀಡುತ್ತಾಳೆ. ಅಕ್ಟೋಬರ್ 28 ಮತ್ತು ನಂವೆಂಬರ್ 6 ರಂದು ಹೊರತುಪಡಿಸಿ ಉಳಿದ ದಿನಗಳು ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ದರ್ಶನಕ್ಕೆ ಬರುವವರು ಲಸಿಕೆ ಪಡೆದ ಪ್ರಮಾಣ ಪತ್ರ ಹಾಗೂ ಗುರುತಿನ ಚೀಟಿ ತೋರಿಸುವುದು ಕಡ್ಡಾಯ ಎಂದು ಸರ್ಕಾರ ಈ ಬಾರಿ ಹಾಸನಾಂಬೆಯ ದರ್ಶನಕ್ಕೆ ಷರತ್ತು ಬದ್ಧ ಅವಕಾಶ ನೀಡಿದೆ. ಬನ್ನಿ ಈ ಪುಣ್ಯ ಕ್ಷೇತ್ರದ ಇತಿಹಾಸ, ಮಹತ್ವ ತಿಳಿಯೋಣ.

12 ನೇ ಶತಮಾನ, ಹಾಸನದ ಚನ್ನಪಟ್ಟಣ ಪಾಳೆಯಗಾರ ಶ್ರೀ ಕೃಷ್ಣಪ್ಪ ನಾಯಕನ ಕಾಲ. ಕೃಷ್ಣಪ್ಪನಾಯಕ ಕಾರ್ಯನಿಮಿತ್ತ ಪ್ರಯಾಣ ಹೊರಟಾಗ ಮೊಲವೊಂದು ಅಡ್ಡ ಬಂದಿತು. ಆಗ ಅದನ್ನು ಅಪಶಕುನವೆಂದು ಭಾವಿಸುತ್ತಾನೆ. ಈ ವೇಳೆ ಪ್ರತ್ಯಕ್ಷಳಾದ ಆದಿಶಕ್ತಿ ಸ್ವರೂಪಿಣಿ-ಈ ಸ್ಥಳದಲ್ಲಿ ದೇಗುಲ ಕಟ್ಟು, ನಾನು ಹಾಸನಾಂಬೆ ಎಂದೇ ಹೆಸರಾಗಿ ಇಲ್ಲಿ ನೆಲೆಸುವೆ ಎಂದಳಂತೆ. (ಕುದುರು ಗಂಡಿಯಲ್ಲಿ ಇರುವ ಕ್ರಿ.ಶ.114 ವೀರಗಲ್ಲಿನ ಶಾಸನದ ಪ್ರಕಾರ)

ದೇಗುಲದ ಕಥೆ ಕಾಶಿ, ವಾರಣಾಸಿಯಿಂದ ದಕ್ಷಿಣಾಭಿಮುಖವಾಗಿ ವಾಯುವಿಹಾರಕ್ಕೆಂದು ಬಂದ ಸಪ್ತ ಮಾತೃಕೆಯರು ಅಂದರೆ, ಬ್ರಾಹ್ಮೀದೇವಿ, ಮಹೇಶ್ವರಿ, ಕೌಮಾರಿ, ವೈಷ್ಣವಿ, ವಾರಾಹಿ, ಇಂದ್ರಾಣಿ ಮತ್ತು ದುರ್ಗೆ, ಚಾಮುಂಡಿ ಇವರು ಇಲ್ಲಿಗೆ ಬಂದರೆಂದು ಪ್ರತೀತಿ. ಅವರಲ್ಲಿ, ವೈಷ್ಣವಿ, ವಾರಾಹಿ ಮತ್ತು ಇಂದ್ರಾಣಿ ಈ ಮೂವರು ದೇವತೆಗಳು ಹುತ್ತದಲ್ಲಿ ನೆಲೆಸಿದ ಸ್ಥಳವೇ ಹಾಸನಾಂಬೆಯ ದೇಗುಲ. (ದೇವನೊಬ್ಬನೇ ಆದರೂ ಆದಿ ಮಹರ್ಷಿಗಳು ಪುರುಷ ಮತ್ತು ಸ್ತ್ರೀ ಎರಡೂ ಶಕ್ತಿರೂಪಗಳನ್ನು ಒಂದಾಗಿ ಕಂಡಿದ್ದಾರೆ. ಹಾಗೆ ಕಂಡ ಸ್ತ್ರೀ ರೂಪಗಳೆ ಸಪ್ತಮಾತೃಕೆಯರು). ಹಾಸನ ನಗರದ ಹೃದಯಭಾಗದಲ್ಲಿರುವ ದೇವಿಕೆರೆಯಲ್ಲಿ, ಬ್ರಾಹ್ಮಿದೇವಿ, ಕೆಂಚಮ್ಮ ದೇವಿ ಹೊಸಕೋಟೆಯಲ್ಲಿ ನೆಲೆಸಿದ್ದಾರೆ. ಆದಿಶಕ್ತಿ ಸ್ವರೂಪಿಣಿ ಮಾತೃ ಸ್ವರೂಪಿಣಿಯಾಗಿರುವ ಹಾಸನಾಂಬೆ ಸಿಂಹಾಸನಾಪುರಿಯ ಅಧಿದೇವತೆ- ಭವತಾರಿಣಿ, ಅಸುರ ಸಂಹಾರಿಣಿ. ಬೇಡಿದ ವರಕೊಡುವ ಶಕ್ತಿದೇವತೆಯಾಗಿ ಜನಮಾನಸದಲ್ಲಿ ಕಾಣಿಸಿ ಕೊಂಡಿದ್ದಾಳೆ.

ಪ್ರತಿ ವರುಷಕ್ಕೊಮ್ಮೆ ತೆರೆಯುವ ದೇಗುಲದ ಗರ್ಭಗುಡಿ ಕೃಷ್ಣಪ್ಪ ನಾಯಕನ ಕಾಲದಿಂದಲೂ ಆಶ್ವೀಜ ಮಾಸ ಪೌರ್ಣಮಿಯ ನಂತರ ಬರುವ ಗುರುವಾರದಂದು ಹಾಸನಾಂಬೆಯ ದೇವಾಲಯ ತೆರೆಯಲ್ಪಡುತ್ತದೆ. ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತಾದಿಗಳು ಅಂದು ದರ್ಶನಾಕಾಂಕ್ಷಿಗಳಾಗಿ ಬಂದು ದೇವಿಯ ದರ್ಶನ ಪಡೆಯುತ್ತಾರೆ. ಗರ್ಭಗುಡಿಯಲ್ಲಿ ಹುತ್ತದೋಪಾದಿಯಲ್ಲಿರುವ ಆದಿಶಕ್ತಿಸ್ವರೂಪಿಣಿ ಹಾಸನಾಂಬೆಗೆ ಹಿಂದಿನ ವರುಷ ಹಚ್ಚಿಟ್ಟಿದ್ದ ದೀಪವು ಆರದೇ, ಮುಡಿಸಿದ ಹೂ ಬಾಡದೇ ಹಾಗೂ ನೈವೇದ್ಯಕ್ಕಿಟ್ಟ ಅಕ್ಕಿಯು ಅನ್ನವಾಗಿರುವ ವಿಸ್ಮಯ ದೃಶ್ಯವನ್ನು ಕಣ್ತುಂಬಿಕೊಳ್ತುವ ಭಕ್ತರು ಪುನೀತರಾಗುತ್ತಾರೆ.

ಹೀಗೆ ವರ್ಷಕ್ಕೊಮ್ಮೆ ದೇಗುಲದ ಬಾಗಿಲ ಪುರ ಪ್ರಮುಖರಾದ ತಹಸಿಲ್ದಾರರು/ ಕಮೀಷನರ್ ಶಾಸಕರು ಮುಂತಾದವರ ಸಮ್ಮುಖದಲ್ಲಿ ತೆರೆಯಲಾಗುತ್ತದೆಯಲ್ಲದೇ, ಬಲಿಪಾಡ್ಯಮಿಯ ಮಾರನೇ ದಿನ ಅವರೆಲ್ಲರ ಸಮ್ಮುಖದಲ್ಲಿ ದೇವಿಗೆ ದೀಪ, ಅಕ್ಕಿ ನೈವೇದ್ಯ ಇಟ್ಟು ಅಲಂಕಾರವನ್ನು ಮಾಡಿ ಮುಚ್ಚಲಾಗುತ್ತದೆ.

ಹಾಸನಾಂಬೆಯ ದಂತ ಕತೆ ಸೊಸೆಯೊಬ್ಬಳು ಮನೆಗೆಲಸ ಬಿಟ್ಟು ದೇವಿಯನ್ನು ಕುರಿತು ಧ್ಯಾನಮಗ್ನಳಾಗಿರುವಾಗ ಆಕೆಯ ಅತ್ತೆ ದೇವಿಯ ಎದುರಿಗೆ ಇದ್ದ ಚಂದನ ಬಟ್ಟಲನ್ನು ತೆಗೆದು ಸೊಸೆಯ ತಲೆಗೆ ಕುಟ್ಟಿದಳಂತೆ. ಸೊಸೆ ಆರ್ತಳಾಗಿ “ ಅಮ್ಮಾ ಹಾಸನಾಂಬೆ. ಕಾಪಾಡು ತಾಯೆ” ಎಂದು ಕೂಗಿ ಕೊಂಡಳು. ದೇವಿಯು ತನ್ನ ಭಕ್ತೆಯ ಮೊರೆ ಕೇಳಿ ತನ್ನ ಸನ್ನಿಧಿಯಲ್ಲಿ ಕಲ್ಲಾಗಿರು. ಇಲ್ಲಿಗೆ ಬರುವವರೆಲ್ಲರ ಭಕ್ತಿಭಾವಕ್ಕೆ ನೀನು ಸಾಕ್ಷಿಯಾಗಿರು ಎಂದು ಹರಸಿದಳಂತೆ.

ಹಾಸನಾಂಬೆ ದೇವಿ ಮಡಿವಂತಿಕೆ- ನೈರ್ಮಲ್ಯ, ನೇಮ ನಿಷ್ಠೆಗೆ ಒಲಿವಳೆಂಬದು ಆಚಾರ ವಿಚಾರಗಳಿಂದ ತಿಳಿದು ಬಂದಿದೆ. ವರ್ಷಕ್ಕೊಮ್ಮೆ ಮಾತ್ರ ಭಕ್ತಾದಿಗಳು ಭಯಭಕ್ತಿಯಿಂದ ದೇವಿಯ ದರ್ಶನ ಪಡೆಯಲು ಇಲ್ಲಿಗೆ ಬರುತ್ತಾರೆ. ಅಂದು ಹಾಸನದಲ್ಲಿ ಹಾಸನಾಂಬೆಯ ಜಾತ್ರೆ ನಡೆಯುತ್ತದೆ. ಆಸ್ತಿಕರಿಗೆ ನೋಡಲು ನಯನ ಮನೋಹರವಾಗಿದೆ.

ಲೇಖನ:ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ, ವಾಸ್ತು ಶಾಸ್ತ್ರಜ್ಞರು, ಆಧ್ಯಾತ್ಮಿಕ ಚಿಂತಕರು (9972848937)

ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ನೀಡಲು ನಿರ್ಧಾರ: ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು