AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Holi 2024: ಹೋಳಿ ಹಬ್ಬಕ್ಕೆ ಮುಂಚಿತವಾಗಿಯೇ ಈ ವಸ್ತುಗಳನ್ನು ಮನೆಯಿಂದ ಎಸೆಯಿರಿ!

ನೀವು ಹೋಳಿ ಆಚರಿಸಲು ತಯಾರಿ ನಡೆಸುತ್ತಿದ್ದರೆ, ಈ ಸಂದರ್ಭದಲ್ಲಿ ನೀವು ಕೆಲವು ಪ್ರಮುಖ ವಿಷಯಗಳನ್ನು ಪಾಲಿಸುವುದು ಮುಖ್ಯವಾಗುತ್ತದೆ. ಮನೆಯನ್ನು ಸ್ವಚ್ಛಗೊಳಿಸಿ, ಮನೆಯಲ್ಲಿ ಇರಿಸಲಾದ ಕೆಲವು ವಸ್ತುಗಳನ್ನು ಎಸೆಯುವುದು ಒಳ್ಳೆಯದು ಎಂದು ಹೇಳಲಾಗುತ್ತದೆ. ಏಕೆಂದರೆ ಇದರಿಂದಾಗಿ ಆರ್ಥಿಕ ಬಿಕ್ಕಟ್ಟು ಉಂಟಾಗಬಹುದು. ಹಾಗಾದರೆ ಯಾವ ವಸ್ತುಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

Holi 2024: ಹೋಳಿ ಹಬ್ಬಕ್ಕೆ ಮುಂಚಿತವಾಗಿಯೇ ಈ ವಸ್ತುಗಳನ್ನು ಮನೆಯಿಂದ ಎಸೆಯಿರಿ!
ಪ್ರೀತಿ ಭಟ್​, ಗುಣವಂತೆ
| Edited By: |

Updated on: Mar 20, 2024 | 11:52 AM

Share

ಹೋಳಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳಿವೆ. ಈ ವರ್ಷ ಬಣ್ಣಗಳ ಹಬ್ಬ ಹೋಳಿಯನ್ನು ಮಾ. 25 ರಂದು ಸೋಮವಾರ ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ. ಹೋಳಿ ಆಚರಿಸುವ ಮೊದಲು, ಕೆಲವು ಪ್ರಮುಖ ವಿಷಯಗಳನ್ನು ಪಾಲಿಸುವುದು ಅವಶ್ಯಕ ಎಂದು ನಂಬಲಾಗಿದೆ. ಅದು ಅಲ್ಲದೆ ಹಿಂದೂ ಧರ್ಮದಲ್ಲಿ ಈ ಹಬ್ಬವನ್ನು ಆಚರಿಸುವ ಮೊದಲು, ಮನೆಯನ್ನು ಸ್ವಚ್ಛಗೊಳಿಸಬೇಕು ಎಂಬ ನಂಬಿಕೆ ಇದೆ. ಹೀಗೆ ಮಾಡುವುದರಿಂದ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಯಾವಾಗಲೂ ಇರುತ್ತದೆ ಎನ್ನುವ ನಂಬಿಕೆ ಇದೆ. ಇದಕ್ಕಾಗಿ, ಹೋಳಿ ಹಬ್ಬಕ್ಕೆ ಮುಂಚಿತವಾಗಿ ಮನೆಯಲ್ಲಿ ಇರುವ ಕೆಲವು ವಸ್ತುಗಳನ್ನು ಎಸೆಯುವುದು ಒಳ್ಳೆಯದು ಎಂದು ಹೇಳಲಾಗುತ್ತದೆ. ಏಕೆಂದರೆ ಇದರಿಂದ ಆರ್ಥಿಕ ಬಿಕ್ಕಟ್ಟು ಉಂಟಾಗಬಹುದು. ಹಾಗಾದರೆ ಯಾವ ವಸ್ತುಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

ಹೋಳಿ ಹಬ್ಬದ ಸಂದರ್ಭದಲ್ಲಿ ವಾಸ್ತುವಿಗೆ ಸಂಬಂಧ ಪಟ್ಟ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡು ವಿಶೇಷ ಕಾಳಜಿ ವಹಿಸುವುದು ಮುಖ್ಯವಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಸಂತೋಷ, ಸಮೃದ್ಧಿ ಯಾವಾಗಲೂ ಇರಲು ಹೋಳಿ ಹಬ್ಬದ ಮುಂಚಿತವಾಗಿ ಮನೆಯನ್ನು ಸ್ವಚ್ಛಗೊಳಿಸುವುದು ಬಹಳ ಮುಖ್ಯವಾಗುತ್ತದೆ. ಆದ್ದರಿಂದ, ಮನೆಯಲ್ಲಿ ಬಹಳ ಸಮಯದಿಂದ ಬಳಸದೆಯೇ ಇಟ್ಟಿರುವ ಹಳೆಯ ಬೂಟು ಮತ್ತು ಚಪ್ಪಲಿಗಳನ್ನು ಎಸೆಯಿರಿ. ಮುರಿದ ಬೂಟು ಮತ್ತು ಚಪ್ಪಲಿಗಳನ್ನು ಮನೆಯಲ್ಲಿ ಇಡುವುದು ಶುಭವಲ್ಲ. ಈ ಕಾರಣದಿಂದಾಗಿ ಕುಟುಂಬ ಸದಸ್ಯರು ಆರ್ಥಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಒಣಗಿದ ತುಳಸಿ ಗಿಡವನ್ನು ಮನೆಯಲ್ಲಿ ಇಟ್ಟುಕೊಳ್ಳಬೇಡಿ

ನಿಮ್ಮ ಮನೆಯಲ್ಲಿ ತುಳಸಿ ಗಿಡವು ಒಣಗಿದ್ದರೆ, ಓಕುಳಿ ಅಥವಾ ಹೋಳಿ ಹಬ್ಬದ ಮೊದಲು ಅದನ್ನು ತೆಗೆದು ಮನೆಯಲ್ಲಿ ಹೊಸ ಸಸ್ಯವನ್ನು ನೆಡಿ. ಇದು ಜೀವನದಲ್ಲಿ ಸಂತೋಷ, ಸಮೃದ್ಧಿಯನ್ನು ತರುತ್ತದೆ. ಆರ್ಥಿಕ ನಷ್ಟವನ್ನು ತಪ್ಪಿಸುತ್ತದೆ.

ಬಳಸದೆಯೇ ಇಟ್ಟ ಹಳೆಯ ಬಟ್ಟೆಗಳನ್ನು ಬಳಸಬೇಡಿ

ವಾಸ್ತು ಪ್ರಕಾರ, ಹೋಳಿ ಹಬ್ಬದ ಮೊದಲು ಮನೆಯಲ್ಲಿ ಬಳಸದೆಯೇ ಇಟ್ಟ ಹಳೆಯ ಬಟ್ಟೆಗಳನ್ನು ಅಗತ್ಯವಿರುವವರಿಗೆ ಅಥವಾ ಬಡವರಿಗೆ ನೀಡಿ. ಜೊತೆಗೆ ಅನೇಕ ಬಾರಿ ಜನರು ತಿಳಿದೋ ತಿಳಿಯದೆಯೋ ಕಳೆದ ವರ್ಷ ಹೋಳಿ ಆಡಿದ ಬಟ್ಟೆಯಲ್ಲಿ ಈ ವರ್ಷವೂ ಓಕುಳಿ ಆಡುತ್ತಾರೆ. ಆದರೆ ಇದನ್ನು ಮಾಡಬೇಡಿ.

ಇದನ್ನೂ ಓದಿ: ಹೋಳಿ ದಿನ ಬಿಳಿ ಬಟ್ಟೆಗಳನ್ನು ಏಕೆ ಧರಿಸಬೇಕು? ಇಲ್ಲಿದೆ ಸೂಕ್ತ ಕಾರಣ

ಮುರಿದ ಗಾಜು ಮತ್ತು ಫೋಟೋವನ್ನು ಎಸೆಯಿರಿ

ವಾಸ್ತು ಪ್ರಕಾರ, ಮುರಿದ ಕನ್ನಡಿಯನ್ನು ಮನೆಯಲ್ಲಿ ಇಡುವುದು ಶುಭವಲ್ಲ. ಆದ್ದರಿಂದ, ಹೋಳಿ ಹಬ್ಬದ ಮೊದಲು ಮನೆಯನ್ನು ಸ್ವಚ್ಛ ಗೊಳಿಸಿ ಬಿರುಕು ಬಂದ ಗಾಜಿನ ಬಾಟಲಿ ಮತ್ತು ಗ್ಲಾಸ್ ಗಳನ್ನು ಮನೆಯಲ್ಲಿ ಇಟ್ಟು ಕೊಳ್ಳಬೇಡಿ. ಮುರಿದ ವರ್ಣಚಿತ್ರಗಳು ಮತ್ತು ದೇವರ ಮುರಿದ ವಿಗ್ರಹವನ್ನು ಹರಿಯುವ ನೀರಿನಲ್ಲಿ ಬಿಡಿ. ಇದಲ್ಲದೆ, ಮುರಿದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದು ಸಹ ಅಶುಭವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಈ ವಸ್ತುಗಳನ್ನು ಕೂಡ ಮನೆಯಲ್ಲಿ ಇಟ್ಟುಕೊಳ್ಳಬೇಡಿ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More