AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shravana Masa 2022: ಶ್ರಾವಣ ಮಾಸವನ್ನೇಕೆ ಪವಿತ್ರ ಮಾಸ ಎನ್ನಲಾಗುತ್ತೆ? ಶ್ರಾವಣ ಮಾಸದ ಮಹತ್ವವೇನು?

ಈ ತಿಂಗಳಲ್ಲೇ ಹೆಚ್ಚಾಗಿ ಸಾಲು ಸಾಲು ಧಾರ್ಮಿಕ ಪೂಜೆ, ಹಬ್ಬ-ಹರಿ ದಿನಗಳು ಬರುತ್ತವೆ. ಜೊತೆಗೆ ಒಳ್ಳೆಯ ಕಾರ್ಯಗಳನ್ನು ಆರಂಭಿಸಲು ಈ ತಿಂಗಳು ಹೆಚ್ಚು ಪ್ರಶಸ್ತವಾಗಿದೆ. ಆಷಾಡ ಮಾಸದ ಬಳಿಕ ಬರುವ ಹುಣ್ಣಿಮೆಯ ನಂತರ ಶ್ರವಣ ಎನ್ನವ ನಕ್ಷತ್ರ ಆಕಾಶವನ್ನು ಆಳುತ್ತದೆ.

Shravana Masa 2022: ಶ್ರಾವಣ ಮಾಸವನ್ನೇಕೆ ಪವಿತ್ರ ಮಾಸ ಎನ್ನಲಾಗುತ್ತೆ? ಶ್ರಾವಣ ಮಾಸದ ಮಹತ್ವವೇನು?
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Jul 25, 2022 | 3:50 PM

ಹಿಂದೂಗಳಿಗೆ ಶ್ರಾವಣ ಮಾಸ(Shravana Masa) ಅತ್ಯಂತ ಪವಿತ್ರವಾದದ್ದು. ವರ್ಷಪೂರ್ತಿ ಇರುವ ಹಲವು ಹಬ್ಬಗಳಲ್ಲಿ ಹೆಚ್ಚಿನ ಹಬ್ಬಗಳು ಈ ತಿಂಗಳಲ್ಲೇ ಬರುತ್ತವೆ. ಈ ತಿಂಗಳಿನಲ್ಲಿ ಅಧ್ಯಾತ್ಮಕ್ಕೆ ಹೆಚ್ಚಿನ ಒತ್ತು ನೀಡಲಾಗಿತ್ತೆ. ಅಲ್ಲದೆ ಶ್ರಾವಣದಲ್ಲಿ ಏನೇ ಮಾಡಿದರೂ ಅದಕ್ಕೆ ಒಳ್ಳೆಯ ಫಲ ಸಿಗುತ್ತದೆ ಎನ್ನಲಾಗಿದೆ. ಹಿಂದೂ ಪಂಚಾಂಗದ 5ನೇ ಮಾಸವಾದ ಶ್ರಾವಣ ಮಾಸವು (ಜುಲೈ 29ರಿಂದ ಆಗಸ್ಟ್ 27) ಶಿವನಿಗೆ ಸಮರ್ಪಿಸಲಾಗಿದೆ. ಶ್ರಾವಣ ಮಾಸದಲ್ಲಿ ಶಿವನ ಆರಾಧನೆ ಮಾಡುವುದರಿಂದ ಮೋಕ್ಷ ಪ್ರಾಪ್ತಿಯಾಗುತ್ತದೆ. ಹಾಗೂ ಶಿವ ಒಲಿದು ಬೇಡಿದನ್ನು ನೀಡುತ್ತಾನೆ ಎಂಬ ನಂಬಿಕೆ ಇದೆ. ಈ ತಿಂಗಳಲ್ಲಿ ಬರುವ ಹಬ್ಬ ಹಾಗೂ ವ್ರತಗಳು ಬಹುತೇಕವಾಗಿ ಶಿವ-ಪಾರ್ವತಿಗೆ ಮೀಸಲು.

ಶ್ರಾವಣ ಎಂದರೇನು?

ಈ ತಿಂಗಳಲ್ಲೇ ಹೆಚ್ಚಾಗಿ ಸಾಲು ಸಾಲು ಧಾರ್ಮಿಕ ಪೂಜೆ, ಹಬ್ಬ-ಹರಿ ದಿನಗಳು ಬರುತ್ತವೆ. ಜೊತೆಗೆ ಒಳ್ಳೆಯ ಕಾರ್ಯಗಳನ್ನು ಆರಂಭಿಸಲು ಈ ತಿಂಗಳು ಹೆಚ್ಚು ಪ್ರಶಸ್ತವಾಗಿದೆ. ಆಷಾಡ ಮಾಸದ ಬಳಿಕ ಬರುವ ಹುಣ್ಣಿಮೆಯ ನಂತರ ಶ್ರವಣ ಎನ್ನವ ನಕ್ಷತ್ರ ಆಕಾಶವನ್ನು ಆಳುತ್ತದೆ. ಆದ್ದರಿಂದ ಈ ಮಾಸಕ್ಕೆ ಶ್ರಾವಣ ಮಾಸ ಎಂಬ ಹೆಸರು ಬಂದಿದೆ ಎಂದು ಹೇಳಲಾಗುತ್ತದೆ. ಹಿಂದೂ ಧರ್ಮದಲ್ಲಿ ಶ್ರಾವಣ ಎಂದರೆ ಆಲಿಸುವುದು ಎಂದರ್ಥ. ಹೀಗಾಗಿ ಈ ಶ್ರಾವಣ ಮಾಸದಲ್ಲಿ ಹೆಚ್ಚಾಗಿ ಪುರಾಣ ಪ್ರವಚನಗಳನ್ನು ಆಲಿಸಬೇಕು. ಶಿವನ ಕುರಿತಾದ ಸ್ತೋತ್ರ ಪಠನೆ, ಧ್ಯಾನ ಮಾಡಬೇಕು.

ಶ್ರಾವಣ ತಿಂಗಳಲ್ಲಿ ಪ್ರಕೃತಿಯಲ್ಲೂ ಕೆಲ ಬದಲಾವಣೆಗಳು ಆಗುತ್ತವೆ. ಈ ತಿಂಗಳಲ್ಲಿ ಹೂಗಳು ಜಾಸ್ತಿ ಬೆಳೆಯುವುದರಿಂದ ಈ ಮಾಸದಲ್ಲಿಯೇ ಚೂಡಿಪೂಜೆ (ಹೂವಿನ ಪೂಜೆ) ನಡೆಯುತ್ತದೆ. ಈ ಪೂಜೆಗೆ 11 ಬಗೆಯ ಹೂಗಳನ್ನು ಬಳಸುತ್ತಾರೆ. ಶ್ರಾವಣ ಮಾಸದಲ್ಲಿ ಈ ಚೂಡಿಯ ತುಳಸಿಗೆ ಪೂಜೆ ಮಾಡುವುದರಿಂದ ಸರ್ವ ಕಷ್ಟವೂ ದೂರವಾಗುತ್ತದೆ, ಸರ್ವರೋಗ ನಿವಾರಣೆಯಾಗುತ್ತದೆ ಅನ್ನೋ ನಂಬಿಕೆ ಇದೆ.

ಶ್ರಾವಣ ಮಾಸದಲ್ಲಿ ಶಿವನಿಗೇಕೆ ಆಧ್ಯತೆ?

ಸಮುದ್ರ ಮಂಥನದ ಸಂದರ್ಭದಲ್ಲಿ ಅಮೃತಕ್ಕಾಗಿ ದೇವತೆಗಳು ಮತ್ತು ದಾನವರು ಕಾದಾಡುವಾಗ 14 ಬೇರೆ ಬೇರೆ ರತ್ನಗಳು ಬರುತ್ತವೆ. ಈ ಪೈಕಿ 13 ರತ್ನಗಳನ್ನು ದೇವತೆಗಳು, ದಾನವರು ಹಂಚಿಕೊಳ್ಳುತ್ತಾರೆ. ಉಳಿದ ಒಂದು ರತ್ನವೇ ಹಾಲಾಹಲ. ಜಗತ್ತನ್ನೇ ನಾಶ ಮಾಡುವ ಶಕ್ತಿ ಇದ್ದ ಹಾಲಾಹಲವನ್ನು ಲೋಕದ ಕಲ್ಯಾಣಕ್ಕಾಗಿ ಭಗವಾನ್ ಶಿವನು ಹಲಾಹಲಾ ವಿಷವನ್ನು ಕುಡಿಯುತ್ತಾನೆ. ಪಾರ್ವತಿ ದೇವಿ ಗಂಟಲನ್ನು ಒತ್ತಿ ಹಿಡಿದ ಕಾರಣ ಹಾಲಾಹಲವು ಗಂಟಲಲ್ಲೇ ಉಳಿದುಕೊಳ್ಳುತ್ತದೆ. ಹೀಗಾಗಿ ಶಿವ ನೀಲಕಂಠನಾಗುತ್ತಾನೆ. ಜಗತ್ತಿನ ಉಳಿವಿಗಾಗಿ ಶಿವ ಹಾಲಾಹಲವನ್ನು ಕುಡಿದದ್ದು ಇದೇ ಶ್ರಾವಣ ಮಾಸದಲ್ಲಿ. ಹೀಗಾಗಿ ಈ ಮಾಸಕ್ಕೆ ಹೆಚ್ಚಿನ ಶಕ್ತಿ ಇದೆ.

ಶಿವನ ಮುಡಿ ಏರಿದ ಚಂದ್ರ ಪ್ರಜಾಪತಿ ದಕ್ಷನ ಶಾಪದಂತೆ ಚಂದ್ರ ದೇವನ ದೇಹ ವಿಷವಾಗುತ್ತೆ, ಆರೋಗ್ಯ ಹದಗೆಡುತ್ತೆ. ಈ ವೇಳೆ ವಿಷದ ಬಲವಾದ ಪರಿಣಾಮ ಕಡಿಮೆ ಮಾಡಲು ಶಿವನು ಅರ್ಧ ಚಂದ್ರವನ್ನು ತನ್ನ ತಲೆಯ ಮೇಲೆ ಧರಿಸುತ್ತಾನೆ. ನಂತರ ಎಲ್ಲಾ ದೇವರುಗಳು ಶಿವನಿಗೆ ಗಂಗಾ ನೀರನ್ನು ಅರ್ಪಿಸುತ್ತಾರೆ. ಅಂದಿನಿಂದಲೇ ಶ್ರಾವಣ ಮಾಸ ಸಂಭವಿಸಿತ್ತು. ಹೀಗಾಗಿ ಭಕ್ತರು ಶಿವನಿಗೆ ಈ ತಿಂಗಳಲ್ಲಿ ಗಾಂಗಾ ನೀರನ್ನು ಎರೆದು ಭಕ್ತಿಯನ್ನು ತೋರಿಸುತ್ತಾರೆ. ಅಲ್ಲದೆ ವಾಲ್ಮಿಕಿಯ ಅವತಾರವೆನ್ನುವ ಹನುಮಾನ್ ಚಾಲೀಸ ರಚಿಸಿದ ತುಲಸೀದಾಸರು ಕೂಡ ಹುಟ್ಟಿದ ತಿಂಗಳು ಇದುವೇ.

ರುದ್ರಾಕ್ಷಿ ಧರಿಸಿದ್ರೆ ಶುಭವಾಗುತ್ತೆ ಇನ್ನು ಶ್ರಾವಣದಲ್ಲಿ ರುದ್ರಾಕ್ಷಿಯ ಹಾರ, ಓಲೆ ಧರಿಸುವುದು ಅತ್ಯಂತ ಶುಭ ಎನ್ನಲಾಗಿದೆ. ಶ್ರಾವಣ ಸೋಮವಾರದ ವ್ರತ ಮಾಡುವುದು. ರುದ್ರಾಕ್ಷಿಯ ಹಾರ ಧರಿಸುವುದು ಅತ್ಯಂತ ಶ್ರೇಷ್ಠ.

ಶ್ರಾವಣದಲ್ಲಿ ಆಚರಿಸುವ ವ್ರತಗಳು

1) ಏಕ ಭುಕ್ತವ್ರತ. 2) ಮಂಗಳ ಗೌರಿ ವ್ರತ. 3) ಬುಧ,ಭ್ರಹಸ್ಪತಿ ವ್ರತ. 4) ಜೀವಂತಿಕಾ ವ್ರತ. 5) ಶನೇಶ್ವರ ವ್ರತ. 6) ರೋಟಿಕಾ ವ್ರತ. 7) ದೂರ್ವಾಗಣಪತಿ ವ್ರತ. 8) ಅನಂತ ವ್ರತ. 9) ನಾಗಚತುರ್ಥಿ 10) ನಾಗ ಪಂಚಮಿ 11) ಗರುಡ ಪಂಚಮಿ. 12) ಸಿರಿಯಾಳ ಷಷ್ಟಿ. 13) ಅವ್ಯಂಗ ವೃತ. 14) ಶೀತಲಾಸಪ್ತಮಿ ವ್ರತ. 15) ಪುತ್ರದಾ ಏಕಾದಶಿ ವ್ರತ. 16) ಪವಿತ್ರಾರೋಪಣವೃತ 17) ದುರ್ಗಾಷ್ಟಮಿ. 18) ಕೃಷ್ಣಾಷ್ಟಮಿ. 19) ವಾಮನ ಜಯಂತಿ. 20) ಅಗಸ್ತ್ಯಾರ್ಘ್ಯ 21) ಮಹಾಲಕ್ಷ್ಮೀವ್ರತ.

Published On - 6:30 am, Wed, 20 July 22

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್