Jaya Ekadashi 2024: ಜೀವನದಲ್ಲಿ ಯಶಸ್ಸನ್ನು ಪಡೆಯಲು ಜಯ ಏಕಾದಶಿಯಂದು ಈ ರೀತಿ ಮಾಡಿ

ಮಾಘ ಮಾಸದ ಶುಕ್ಲ ಪಕ್ಷದ ಏಕಾದಶಿ ದಿನವನ್ನು ಜಯ ಏಕಾದಶಿ ಎಂದು ಕರೆಯಲಾಗುತ್ತದೆ. ಈ ವರ್ಷ ಜಯ ಏಕಾದಶಿಯನ್ನು ಫೆಬ್ರವರಿ 20 ರಂದು ಮಂಗಳವಾರ ಆಚರಿಸಲಾಗುತ್ತದೆ. ಈ ದಿನದಂದು, ವಿಷ್ಣುವನ್ನು ಪೂಜಿಸಲಾಗುತ್ತದೆ ಮತ್ತು ಉಪವಾಸವನ್ನು ಆಚರಿಸಲಾಗುತ್ತದೆ ಮತ್ತು ವ್ಯಕ್ತಿಯು ಪ್ರೇತಾತ್ಮಗಳ ಕಾಟದಿಂದ ಮುಕ್ತನಾಗುತ್ತಾನೆ ಎಂದು ನಂಬಲಾಗಿದೆ. ಅಲ್ಲದೆ ಈ ವ್ರತವನ್ನು ಭಕ್ತಿಯಿಂದ ಆಚರಿಸುವ ವ್ಯಕ್ತಿಯು ಬ್ರಾಹ್ಮಣ ಹತ್ಯಾ ಪಾಪದಿಂದಲೂ ಮುಕ್ತನಾಗಬಹುದು ಎಂದು ಹೇಳಲಾಗುತ್ತದೆ.

Jaya Ekadashi 2024: ಜೀವನದಲ್ಲಿ ಯಶಸ್ಸನ್ನು ಪಡೆಯಲು ಜಯ ಏಕಾದಶಿಯಂದು ಈ ರೀತಿ ಮಾಡಿ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on:Feb 19, 2024 | 6:28 PM

ವರ್ಷದಲ್ಲಿ ಬರುವ ಎಲ್ಲಾ ಏಕಾದಶಿಗಳಲ್ಲಿ, ಜಯ ಏಕಾದಶಿಯನ್ನು ವಿಶೇಷ ಮಹತ್ವವೆಂದು ಪರಿಗಣಿಸಲಾಗಿದೆ. ಈ ದಿನವನ್ನು ಆಚರಣೆ ಮಾಡುವುದರಿಂದ ಎಲ್ಲಾ ರೀತಿಯ ಪಾಪಗಳು ನಿವಾರಣೆಯಾಗಿ ಪುಣ್ಯ ಫಲ ಪ್ರಾಪ್ತಿಯಾಗುತ್ತದೆ. ಈ ದಿನ, ವಿಷ್ಣುವನ್ನು ಭಕ್ತಿಯಿಂದ ಪೂಜಿಸುವ ಮೂಲಕ ವಿವಿಧ ರೀತಿಯ ಆಚರಣೆಗಳನ್ನು ಪಾಲನೆ ಮಾಡಲಾಗುತ್ತದೆ. ಇನ್ನು ಈ ಬಾರಿ ಜಯ ಏಕಾದಶಿಯು ಫೆ. 20 ರಂದು ಆಚರಣೆ ಮಾಡಲಾಗುತ್ತಿದೆ. ಇನ್ನು ಈ ಏಕಾದಶಿಯ ಬಗ್ಗೆ ಧರ್ಮಗ್ರಂಥಗಳಲ್ಲಿಯೂ ಕೂಡ ವರ್ಣಿಸಲಾಗಿದ್ದು, ಅರಿಯದೆಯೇ ಮಾಡಿದ ತಪ್ಪುಗಳಿಗೂ ಪರಿಹಾರ ಸಿಗುತ್ತದೆ ಎನ್ನಲಾಗುತ್ತದೆ.

ಈ ಏಕಾದಶಿ ಉಪವಾಸವನ್ನು ಆಚರಿಸುವ ಮೂಲಕ, ವ್ಯಕ್ತಿಯು ಪ್ರೇತಾತ್ಮಗಳ ಕಾಟದಿಂದ ಮುಕ್ತನಾಗುತ್ತಾನೆ ಎಂದು ನಂಬಲಾಗಿದೆ. ಅಲ್ಲದೆ ಈ ವ್ರತವನ್ನು ಭಕ್ತಿಯಿಂದ ಆಚರಿಸುವ ವ್ಯಕ್ತಿಯು ಬ್ರಾಹ್ಮಣ ಹತ್ಯಾ ಪಾಪದಿಂದಲೂ ಮುಕ್ತನಾಗಬಹುದು ಎಂದು ಹೇಳಲಾಗುತ್ತದೆ.

ಹಿಂದೂ ಕ್ಯಾಲೆಂಡರ್ ಪ್ರಕಾರ, ಪ್ರತಿ ವರ್ಷ ಜಯ ಏಕಾದಶಿ ಉಪವಾಸವನ್ನು ಮಾಘ ತಿಂಗಳ ಶುಕ್ಲ ಪಕ್ಷದ ಏಕಾದಶಿ ದಿನದಂದು ಆಚರಿಸಲಾಗುತ್ತದೆ. ಈ ಏಕಾದಶಿಯಂದು ಉಪವಾಸ ಮಾಡುವ ಮೂಲಕ, ವಿಷ್ಣುವಿನ ಕೃಪೆಯಿಂದ ಜೀವನದಲ್ಲಿ ಎಲ್ಲಾ ರೀತಿಯ ಸಂತೋಷವನ್ನು ಪಡೆಯುತ್ತಾರೆ. ಪೌರಾಣಿಕ ನಂಬಿಕೆಗಳ ಪ್ರಕಾರ, ಈ ದಿನದಂದು ಪೂಜೆಯ ಜೊತೆಗೆ, ಕೆಲವು ಪರಿಹಾರಗಳನ್ನು ವಿಶೇಷವಾಗಿ ಫಲಪ್ರದವೆಂದು ಪರಿಗಣಿಸಲಾಗುತ್ತದೆ. ಜಯ ಏಕಾದಶಿ ದಿನದಂದು ಈ ಕ್ರಮಗಳನ್ನು ಅಳವಡಿಸಿಕೊಳ್ಳುವುದರಿಂದ ಉದ್ಯೋಗದಲ್ಲಿ ಬಡ್ತಿ ಮತ್ತು ತೊಂದರೆಗಳಿಂದ ಪರಿಹಾರ ಸಿಗುತ್ತದೆ ಎಂದು ಹೇಳಲಾಗುತ್ತದೆ. ಹಾಗಾದರೆ ಈ ಕ್ರಮಗಳ ಬಗ್ಗೆ ತಿಳಿದುಕೊಳ್ಳೋಣ..

ಇದನ್ನೂ ಓದಿ: ವೃಂದಾವನದ ನಿಧಿವನಕ್ಕೆ ಸಂಜೆಯ ನಂತರ ಪ್ರವೇಶ ನಿಷೇಧಿಸಿರುವುದೇಕೆ? ಇಲ್ಲಿದೆ ರಹಸ್ಯ ಮಾಹಿತಿ

-ಜಯ ಏಕಾದಶಿ ದಿನದಂದು, ವಿಷ್ಣುವಿನೊಂದಿಗೆ ಲಕ್ಷ್ಮೀ ದೇವಿಯನ್ನು ಪೂಜಿಸಿ. ಹೀಗೆ ಮಾಡುವುದರಿಂದ ಮನೆಯಲ್ಲಿ ಹಣದ ಕೊರತೆ ಬರುವುದಿಲ್ಲ ಜೊತೆಗೆ ಕೆಲಸದ ಸ್ಥಳದಲ್ಲಿ ಪ್ರಗತಿ ಇರುತ್ತದೆ.

-ಜಯ ಏಕಾದಶಿಯಂದು ವಿಷ್ಣುವನ್ನು ಮೆಚ್ಚಿಸಲು, ಅವನಿಗೆ ಹಳದಿ ಬಣ್ಣದ ಬಟ್ಟೆಗಳು, ಹೂವುಗಳು, ಹೂವಿನ ಹಾರ ಮತ್ತು ಹಣ್ಣುಗಳನ್ನು ಅರ್ಪಿಸಿ.

-ಈ ದಿನದಂದು ಹಸುವಿಗೆ ಮೇವು ನೀಡುವುದು ಬಹಳ ಫಲಪ್ರದವೆಂದು ಪರಿಗಣಿಸಲಾಗಿದೆ.

-ಭಗವಾನ್ ವಿಷ್ಣು ಅರಳಿ ಮರದಲ್ಲಿ ವಾಸಿಸುತ್ತಾನೆ ಎಂಬ ಧಾರ್ಮಿಕ ನಂಬಿಕೆ ಇದೆ. ಹಾಗಾಗಿ ಈ ಏಕಾದಶಿ ದಿನದಂದು, ಅರಳಿ ಮರವನ್ನು ಪೂಜಿಸಿ, ಅದಕ್ಕೆ ನೀರನ್ನು ಅರ್ಪಿಸಿ ಬಳಿಕ ತುಪ್ಪದ ದೀಪವನ್ನು ಬೆಳಗಿಸಿ. ಈ ದಿನ ಹೀಗೆ ಮಾಡುವುದರಿಂದ ಎಲ್ಲಾ ನಿಮ್ಮ ಸುಪ್ತ ಆಸೆಗಳು ಈಡೇರುತ್ತವೆ.

-ಜಯ ಏಕಾದಶಿ ದಿನದಂದು, ತುಳಸಿ ಎಲೆಗಳನ್ನು ಕೆಂಪು ಬಟ್ಟೆಯಲ್ಲಿ ಕಟ್ಟಿ ಮನೆಯಲ್ಲಿ ಸುರಕ್ಷಿತವಾಗಿ ಇರಿಸಿ ಮತ್ತು ನಂತರ ಏಕಾದಶಿ ಪೂಜೆಯ ನಂತರ, ಆ ಎಲೆಗಳನ್ನು ಲಕ್ಷ್ಮೀ ದೇವಿ ಮತ್ತು ವಿಷ್ಣುವಿನ ಪಾದಗಳಿಗೆ ಅರ್ಪಿಸಿ. ಇದರ ನಂತರ, ಈ ತುಳಸಿ ಎಲೆಗಳೊಂದಿಗೆ ಒಂದು ರೂಪಾಯಿ ನಾಣ್ಯವನ್ನು ಕೆಂಪು ಬಟ್ಟೆಯಲ್ಲಿ ಸುತ್ತಿ ಅದನ್ನು ನಿಮ್ಮ ಪರ್ಸ್ ನಲ್ಲಿ ಇರಿಸಿ. ಇದು ಆರ್ಥಿಕ ಲಾಭವನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ.

ಜಯ ಏಕಾದಶಿಯಂದು ಈ ಮಂತ್ರಗಳನ್ನು ಪಠಿಸಿ;

-ಶಾಂತಾಕಾರಂ ಭುಜಗಶಯನಂ ಪದ್ಮನಾಭಂ ಸುರೇಶಂ

ವಿಶ್ವಾಧಾರಂ ಗಗನ ಸದೃಶಂ ಮೇಘವರ್ಣಂ ಶುಭಾಂಗಂ

ಲಕ್ಷ್ಮೀಕಾಂತಂ ಕಮಲನಯನಂ ಯೋಗಿಬಿರ್ಧ್ಯಾನಗಮಯಂ

ವಂದೇ ವಿಷ್ಣುಂ ಭವಭಯಹರಂ ಸರ್ವಲೋಕೈಕನಾಥಂ

-ಓಂ ನಮೋ ನಾರಾಯಣಾಯ

-ಓಂ ನಮೋ ಭಗವತೇ ವಾಸುದೇವಾಯ ಎಂಬ ಮಂತ್ರವನ್ನು ಜಪಿಸಬೇಕು. ಜಯ ಏಕಾದಶಿ ದಿನದಂದು ವಿಷ್ಣುವಿನ ಮಂತ್ರಗಳನ್ನು ಪಠಿಸುವುದು ಶುಭ ಫಲಿತಾಂಶಗಲು ಪ್ರಾಪ್ತಿಯಾಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:27 pm, Mon, 19 February 24

ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ