Bharat Gaurav Darshan: ಕನ್ನಡಿಗರಿಗೆ ಕಾಶಿಯಾತ್ರೆ ಇನ್ನು ಸುಲಭ; ‘ಕರ್ನಾಟಕ-ಭಾರತ್ ಗೌರವ್ ದರ್ಶನ್ ಕಾಶಿ’ ರೈಲಿಗೆ ನಾಳೆ ಮೋದಿ ಚಾಲನೆ

ಈ ಯಾತ್ರೆಗಾಗಿ ವಿಶೇಷ ವಿನ್ಯಾಸದ ರೈಲನ್ನು ಬೆಂಗಳೂರಿನ ಬೈಯಪ್ಪನಹಳ್ಳಿಯ ಸರ್ ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣದಲ್ಲಿ ಸಿದ್ಧಪಡಿಸಲಾಗುತ್ತಿದೆ.

Bharat Gaurav Darshan: ಕನ್ನಡಿಗರಿಗೆ ಕಾಶಿಯಾತ್ರೆ ಇನ್ನು ಸುಲಭ; ‘ಕರ್ನಾಟಕ-ಭಾರತ್ ಗೌರವ್ ದರ್ಶನ್ ಕಾಶಿ’ ರೈಲಿಗೆ ನಾಳೆ ಮೋದಿ ಚಾಲನೆ
ಭಾರತ್ ಗೌರವ್ ರೈಲನ್ನು ವಿಶೇಷ ಚಿತ್ರಗಳಿಂದ ಅಲಂಕರಿಸಲಾಗಿದೆ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 10, 2022 | 1:36 PM

ಬೆಂಗಳೂರು: ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಕರ್ನಾಟಕ-ಭಾರತ್ ಗೌರವ್ ದರ್ಶನ್ ಕಾಶಿ’ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ (ನ 11) ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಿದ್ದಾರೆ. 8 ದಿನಗಳ ಪ್ರವಾಸದಲ್ಲಿ ಈ ರೈಲು ಕಾಶಿ, ಅಯೋಧ್ಯೆ, ಪ್ರಯಾಗ್​ರಾಜ್​ ಕ್ಷೇತ್ರಗಳಿಗೆ ಯಾತ್ರಿಗಳನ್ನು ಕೊಂಡೊಯ್ಯಲಿದೆ. ನ 11ರಂದು ಬೆಂಗಳೂರಿನಿಂದ ಹೊರಡಲಿರುವ ರೈಲು ನ 18ಕ್ಕೆ ಮತ್ತೆ ಬೆಂಗಳೂರಿಗೆ ಬರಲಿದೆ. ಈ ಯಾತ್ರೆಗಾಗಿ ವಿಶೇಷ ವಿನ್ಯಾಸದ ರೈಲನ್ನು ಬೆಂಗಳೂರಿನ ಬೈಯಪ್ಪನಹಳ್ಳಿಯ ಸರ್ ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣದಲ್ಲಿ ಸಿದ್ಧಪಡಿಸಲಾಗುತ್ತಿದೆ. ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಇತ್ತೀಚೆಗಷ್ಟೇ ಬೈಯಪ್ಪನಹಳ್ಳಿ ನಿಲ್ದಾಣಕ್ಕೆ ಭೇಟಿ ನೀಡಿ ರೈಲನ್ನು ಪರಿಶೀಲಿಸಿದ್ದರು. ರೈಲಿನಲ್ಲಿ ಪ್ರಯಾಣಿಸಲು ಪ್ರತಿ ಪ್ರಯಾಣಿಕರಿಗೆ ₹ 20,000 ಟಿಕೆಟ್ ದರ ವಿಧಿಸಲಾಗಿದೆ. ಈ ಪೈಕಿ ಕರ್ನಾಟಕ ಸರ್ಕಾರವು ₹ 5 ಸಾವಿರ ಸಬ್ಸಿಡಿ ಒದಗಿಸುತ್ತದೆ. ಹೀಗಾಗಿ ಪ್ರಸ್ತುತ ಪ್ರಯಾಣಿಕರು ₹ 15,000ದಲ್ಲಿ ಕಾಶಿಯಾತ್ರೆ ಮಾಡಬಹುದಾಗಿದೆ.

ಕಳೆದ ಜುಲೈ ತಿಂಗಳಲ್ಲಿ ಕರ್ನಾಟಕ ಸರ್ಕಾರವು ‘ಕಾಶಿ ಯಾತ್ರಾ’ ಯೋಜನೆಯನ್ನು ಘೋಷಿಸಿತ್ತು. ಈ ಯೋಜನೆಯ ಅನ್ವಯ ಕರ್ನಾಟಕದ 30,000 ಜನರು ಕಾಶಿ ಯಾತ್ರೆಗಾಗಿ ತಲಾ ₹ 5 ಸಾವಿರ ಸಬ್ಸಿಡಿ ಪಡೆಯಲಿದ್ದಾರೆ ಎಂದು ಸರ್ಕಾರವು ಹೇಳಿತ್ತು. ‘ನ 11ರ ಯಾತ್ರೆಯ 547 ಟಿಕೆಟ್​ಗಳು ಈಗಾಗಲೇ ಮಾರಾಟವಾಗಿವೆ. ರೈಲು ತನ್ನ ಮುಂದಿನ ಸಂಚಾರವನ್ನು ನ 23ರಂದು ಆರಂಭಿಸಬಹುದು ಎಂಬ ನಿರೀಕ್ಷೆಯಿದೆ. ಆದರೆ ಈ ವಿಚಾರದ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಆದರೆ ಮುಂದಿನ ಯಾತ್ರೆಯ 100 ಟಿಕೆಟ್​ಗಳು ಮಾರಾಟವಾಗಿವೆ’ ಎಂದು ಸಚಿವರು ತಿಳಿಸಿದ್ದಾರೆ. ‘ವಂದೇ ಭಾರತ್ ಎಕ್ಸ್​ಪ್ರೆಸ್ ಜೊತೆಗೆ ಕಾಶಿ ಗೌರವ್ ಯಾತ್ರೆ ರೈಲು ಸಂಚಾರಕ್ಕೂ ಚಾಲನೆ ನೀಡುವಂತೆ ವಿನಂತಿಸಿದ್ದೇವೆ. ಈ ಬಗ್ಗೆ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳ ಗಮನ ಸೆಳೆಯಲಾಗಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಳೆದ ಮಾರ್ಚ್​ ತಿಂಗಳಲ್ಲಿ ಮಂಡಿಸಿದ್ದ ಬಜೆಟ್​ನಲ್ಲಿ ಈ ರೈಲಿನ ಬಗ್ಗೆ ಪ್ರಸ್ತಾಪಿಸಿದ್ದರು.

ಬೆಂಗಳೂರು ನಗರದ ಜೊತೆಗೆ ಬೀರೂರು, ಹಾವೇರಿ, ಹುಬ್ಬಳ್ಳಿ, ಬೆಳಗಾವಿ ಮತ್ತು ರಾಯಭಾಗ ನಿಲ್ದಾಣಗಳಲ್ಲಿಯೂ ರೈಲಿಗೆ ಜನರು ಹತ್ತಲು ಅವಕಾಶವಿದೆ. ಆದರೆ ಟಿಕೆಟ್​ಗಳನ್ನು ಮೊದಲೇ ಖರೀದಿಸಿರಬೇಕು. 5 ವರ್ಷ ಮೇಲ್ಪಟ್ಟ ಎಲ್ಲರಿಗೂ ಪೂರ್ಣ ಚಾರ್ಜ್ ವಿಧಿಸಲಾಗುವುದು. ಪ್ರಯಾಣಿಕರಿಗೆ ರೈಲಿನಲ್ಲಿಯೇ ಊಟ, ತಿಂಡಿ, ಪಾನೀಯದ ವ್ಯವಸ್ಥೆ ಇರುತ್ತದೆ. ಪ್ರವಾಸಿ ಸ್ಥಳಗಳಲ್ಲಿ ಹೊಟೆಲ್​ನಲ್ಲಿ ಊಟೋಪಚಾರದ ವ್ಯವಸ್ಥೆ ಇರುತ್ತದೆ.

ಪ್ಯಾಕೇಜ್ ವಿವರ

‘ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್’ ಹೆಸರಿನ ರೈಲು ಒಟ್ಟು 8 ಹಗಲು 7 ರಾತ್ರಿಗಳ ಸಂಚಾರವನ್ನು ಒಳಗೊಂಡಿರುತ್ತದೆ. ಬೆಂಗಳೂರಿನಿಂದ ಹೊರಡುವ ರೈಲು ವಾರಾಣಸಿ (ಕಾಶಿ), ಅಯೋಧ್ಯೆ, ಪ್ರಯಾಗ್​ರಾಜ್ ಸಂದರ್ಶಿಸಿ ನಂತರ ಬೆಂಗಳೂರಿಗೆ ಮರಳುತ್ತದೆ.

ಏನೆಲ್ಲಾ ನೋಡಬಹುದು

ವಾರಾಣಸಿಯಲ್ಲಿ ತುಳಸಿ ಮಾನಸ ದೇಗುಲ, ಸಂಕಟಮೋಚನ ಹನುಮಾನ್ ದೇಗುಲ, ಕಾಶಿ ವಿಶ್ವನಾಥ ದೇವಾಲಯ ಮತ್ತು ಗಂಗಾರತಿ. ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ದೇಗುಲ, ಹನುಮಾನ್ ಗಡಿ, ಸರಯೂ ಘಾಟ್. ಪ್ರಯಾಗ್​ರಾಜ್​ನಲ್ಲಿ ಗಂಗಾ-ಯಮುನಾ ಸಂಗಮ, ಹನುಮಾನ್ ದೇಗುಲ.

Published On - 1:36 pm, Thu, 10 November 22

‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ