AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಡಿಮಠದ ಸ್ವಾಮೀಜಿ ನುಡಿದರು ಹೊಸ ಭವಿಷ್ಯ! ಒಂದೆರಡು ಪ್ರಧಾನಿಗಳಿಗೆ ಸಾವಾಗುವ ಲಕ್ಷಣವಿದೆಯಂತೆ

Kodimath Swamiji Prediction 2024: ಗದಗ: ಕೋಡಿಮಠದ ಡಾ. ಶ್ರೀ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಅವರು ತಾಜಾ ಆಗಿ ಇಂದು ಶುಕ್ರವಾರ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ. 2024 ರಲ್ಲಿ ಅಕಾಲಿಕ ಮಳೆಯಾಗಲಿದ್ದು, ಜಗತ್ತಿಗೆ ಒಳ್ಳೆಯ ದಿನಗಳಿಲ್ಲ ಎಂದು ಹೇಳಿದ್ದಾರೆ.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Jan 26, 2024 | 6:24 PM

Share

ಗದಗ, ಜನವರಿ 26: ಕೋಡಿಮಠದ ಡಾ. ಶ್ರೀ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ (Kodi Mutt Swamiji) ಅವರು ತಾಜಾ ಆಗಿ ಇಂದು ಶುಕ್ರವಾರ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ. 2024 ರಲ್ಲಿ ಅಕಾಲಿಕ ಮಳೆಯಾಗಲಿದ್ದು, ಜಗತ್ತಿಗೆ ಒಳ್ಳೆಯ ದಿನಗಳಿಲ್ಲ ಎಂದು ಹೇಳಿದ್ದಾರೆ. ಬಾಂಬ್ ಸಿಡಿಯುವ ಸಂಭವವಿದ್ದು, ಯುದ್ಧ ಭೀತಿ ಆವರಿಸಲಿದೆ. ಭೂಕಂಪ.. ಜಲ ಕಂಟಕವೂ ಇದೆ. ಜನರು ತಲ್ಲಣವಾಗುತ್ತಾರೆ ಎಂದು ಭವಿಷ್ಯ ತಿಳಿಸಿದ್ದಾರೆ.

ಕೋಡಿಮಠ ಶ್ರೀ ಇನ್ನೂ ಏನೆಲ್ಲಾ ಭವಿಷ್ಯ ನುಡಿದಿದ್ದಾರೆ:

ಜಗತ್ತಿನ ದೊಡ್ಡ ಸಂತರು ಕೊಲೆಯಾಗುತ್ತಾರೆ, ಜಗತ್ತಿನಲ್ಲಿ ಒಂದೆರಡು ಪ್ರಧಾನಿಗಳಿಗೆ ಸಾವಾಗುವ ಲಕ್ಷಣ.. ಅಸ್ಥಿರತೆ, ಯುದ್ಧ ಭೀತಿ.. ಅಣು ಬಾಂಬ್ ಸ್ಫೋಟವಾಗುವ ಸಾಧ್ಯತೆಗಳಿವೆ. ಜಗತ್ತಿಗೆ ವಿನಾಶ ಕಾದಿದೆ.. ರೋಗ, ಸುನಾಮಿ ಸಂಭವಿಸಲಿದೆ. ಮತೀಯ ಸಮಸ್ಯೆಯಿಂದ ಜನರು ದುಃಖ ಅನುಭವಿಸುತ್ತಾರೆ. ದೈವ ನಂಬುವುದೊಂದೆ ಪರಿಹಾರ.. ದೈವ ಮೊರೆ ಹೋಗ್ಬೇಕು ಎಂದು ಕಳಕಳಿ ವ್ಯಕ್ತಪಡಿಸಿದ್ದಾರೆ.

Also Read: ಮತ್ತೊಂದು ಆಘಾತಕಾರಿ ಭವಿಷ್ಯ ನುಡಿದ ಕೋಡಿಮಠ ಶ್ರೀ: ಸಿದ್ದರಾಮಯ್ಯ ಸರ್ಕಾರಕ್ಕೆ ಶುಭ ಸೂಚನೆ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:13 pm, Fri, 26 January 24