
ಮಹಾಶಿವರಾತ್ರಿ ಹಬ್ಬವನ್ನು ಪ್ರತಿ ವರ್ಷ ಫಾಲ್ಗುಣ ಮಾಸದ ಚತುರ್ದಶಿಯಂದು ಆಚರಿಸಲಾಗುತ್ತದೆ. ಹಿಂದೂ ಧಾರ್ಮಿಕ ಗ್ರಂಥಗಳಲ್ಲಿ ಮಹಾಶಿವರಾತ್ರಿಯ ದಿನವನ್ನು ಬಹಳ ವಿಶೇಷವೆಂದು ಪರಿಗಣಿಸಲಾಗಿದೆ. ಶಿವ ಮತ್ತು ಪಾರ್ವತಿ ದೇವಿಯ ವಿವಾಹ ಈ ದಿನ ನಡೆದಿತ್ತು ಎಂದು ನಂಬಲಾಗಿದೆ. ಈ ದಿನ ಉಪವಾಸ ಆಚರಿಸಿ ಶಿವನನ್ನು ಪೂಜಿಸಲಾಗುತ್ತದೆ. ಮಹಾಶಿವರಾತ್ರಿಯಂದು ಉಪವಾಸ ಮತ್ತು ಪೂಜೆಯು ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ.
ಮಹಾಶಿವರಾತ್ರಿಯ ದಿನದಂದು, ದೇಶಾದ್ಯಂತ ಶಿವ ದೇವಾಲಯಗಳಲ್ಲಿ ಶಿವನ ಪೂಜೆ, ಜಲಾಭಿಷೇಕ ಮತ್ತು ಧಾರ್ಮಿಕ ಆಚರಣೆಗಳನ್ನು ನಡೆಸಲಾಗುತ್ತದೆ. ನಂಬಿಕೆಗಳ ಪ್ರಕಾರ, ಮಹಾಶಿವರಾತ್ರಿಯ ದಿನದಂದು ಶಿವನಿಗೆ ನೀರಿನ ಅಭಿಷೇಕ ಮಾಡುವುದರಿಂದ ಶುಭ ಫಲಿತಾಂಶಗಳನ್ನು ಪಡೆಯಬಹುದು. ಮಹಾಶಿವರಾತ್ರಿಯ ದಿನದಂದು, ಈ ಐದು ದೇವಾಲಯಗಳಿಗೆ ಭೇಟಿ ನೀಡುವುದರಿಂದ ಜೀವನದ ಎಲ್ಲಾ ದುಃಖಗಳು ಮತ್ತು ನೋವುಗಳು ದೂರವಾಗುತ್ತವೆ ಎಂದು ನಂಬಲಾಗಿದೆ.
ಕಾಶಿ ವಿಶ್ವನಾಥ ದೇವಾಲಯವು ವಾರಣಾಸಿಯಲ್ಲಿದೆ. ಹಿಂದೂ ನಂಬಿಕೆಗಳ ಪ್ರಕಾರ, ಕಾಶಿ ನಗರದಲ್ಲಿ ಭಗವಾನ್ ಮಹಾದೇವ ನೆಲೆಸಿದ್ದಾನೆ ಎಂದು ನಂಬಲಾಗಿದೆ. ಅದಕ್ಕಾಗಿಯೇ ಈ ದೇವಾಲಯವು ಹೆಚ್ಚಿನ ಮನ್ನಣೆಯನ್ನು ಹೊಂದಿದೆ. ಇಲ್ಲಿಗೆ ಯಾರಾದರೂ ಭೇಟಿ ನೀಡಿದರೆ ಅವರ ಎಲ್ಲಾ ಪಾಪಗಳು ನಾಶವಾಗುತ್ತವೆ. ಅಲ್ಲದೆ ಮರಣದ ನಂತರ ಮೋಕ್ಷವನ್ನು ಪಡೆಯುತ್ತಾರೆ ಎಂದು ನಂಬಲಾಗಿದೆ.
ಮಹಾಕಾಲೇಶ್ವರ ದೇವಸ್ಥಾನವು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿದೆ. ಮಹಾಕಾಳೇಶ್ವರ ದೇವಸ್ಥಾನವು ಶಿವನ 12 ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದೆ. ಇಲ್ಲಿಗೆ ಭೇಟಿ ನೀಡುವವರ ಎಲ್ಲಾ ಪಾಪಗಳು ನಾಶವಾಗುತ್ತವೆ ಎಂದು ನಂಬಲಾಗಿದೆ.
ಸೋಮನಾಥ ದೇವಾಲಯವು ಗುಜರಾತ್‌ನ ಪ್ರಭಾಸ್ ಪ್ರದೇಶದಲ್ಲಿದೆ. ಮಹಮ್ಮದ್ ಘಜ್ನವಿ ಈ ದೇವಾಲಯದ ಮೇಲೆ ಹಲವಾರು ಬಾರಿ ದಾಳಿ ಮಾಡಿ ಅದನ್ನು ನಾಶಪಡಿಸಿದನು. ಈ ಜ್ಯೋತಿರ್ಲಿಂಗವು ಗಾಳಿಯಲ್ಲಿತ್ತು ಎಂಬ ನಂಬಿಕೆ ಇದೆ. ಮಹಮ್ಮದ್ ಘಜ್ನವಿಯ ದಾಳಿಯಲ್ಲಿ ಅದಕ್ಕೆ ಯಾವುದೇ ಹಾನಿಯಾಗಲಿಲ್ಲ.
ಭೀಮಾಶಂಕರ ದೇವಾಲಯವು ಮಹಾರಾಷ್ಟ್ರದಲ್ಲಿದೆ. ಈ ದೇವಾಲಯವು ನಾಶಿಕ್ ನಿಂದ ಸುಮಾರು 120 ಕಿಲೋಮೀಟರ್ ದೂರದಲ್ಲಿರುವ ಸಹ್ಯಾದ್ರಿ ಪರ್ವತಗಳ ಮೇಲೆ ನೆಲೆಗೊಂಡಿದೆ. ಇಲ್ಲಿಗೆ ಭೇಟಿ ನೀಡಿ ಸೂರ್ಯೋದಯದ ನಂತರ ಪೂಜೆ ಸಲ್ಲಿಸುವುದರಿಂದ ಎಲ್ಲಾ ಪಾಪಗಳಿಂದ ಮುಕ್ತಿ ಸಿಗುತ್ತದೆ ಎಂದು ನಂಬಲಾಗಿದೆ.
ಇದನ್ನೂ ಓದಿ: ಮಹಾಶಿವರಾತ್ರಿ ಈ 5 ರಾಶಿಯವರಿಗೆ ಅದೃಷ್ಟ ತರಲಿದೆ
ನಾಗೇಶ್ವರ ದೇವಸ್ಥಾನ ಗುಜರಾತ್‌ನಲ್ಲಿದೆ. ಈ ದೇವಾಲಯವು ಶಿವನ 12 ಜ್ಯೋತಿರ್ಲಿಂಗಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಮಹಾಶಿವರಾತ್ರಿಯಂದು ಈ ದೇವಾಲಯಕ್ಕೆ ಭೇಟಿ ನೀಡುವುದರಿಂದ ವ್ಯಕ್ತಿಯ ಎಲ್ಲಾ ಪಾಪಗಳು ನಾಶವಾಗುತ್ತವೆ ಎಂಬ ನಂಬಿಕೆಯಿದೆ
ಮುರುಡೇಶ್ವರ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿದೆ. ಇಲ್ಲಿರುವ ಮುರುಡೇಶ್ವರ ಸ್ವಾಮಿಯ ದೇವಸ್ಥಾನವು ಧಾರ್ಮಿಕ ಪುಣ್ಯ ಸ್ಥಳವಾಗಿದ್ದು, ಐತಿಹಾಸಿಕವಾಗಿ ಪ್ರಖ್ಯಾತಿಯನ್ನು ಹೊಂದಿದೆ. ಅರಬ್ಬೀ ಸಮುದ್ರದ ತೀರದಲ್ಲಿರುವ ಈ ಊರು, ಪ್ರಪಂಚದ ಅತ್ಯಂತ ಎತ್ತರದ ಶಿವನ ವಿಗ್ರಹಕ್ಕೆ ಹೆಸರುವಾಸಿ ಯಾಗಿದೆ.
ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:39 am, Sat, 15 February 25