AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Makar Sankranti 2025: ಮಕರ ಸಂಕ್ರಾಂತಿಯಂದು ಸ್ನಾನ ಮತ್ತು ದಾನಕ್ಕೆ ಶುಭ ಸಮಯ ಯಾವಾಗ?

ಮಕರ ಸಂಕ್ರಾಂತಿಯು ಹಿಂದೂ ಧರ್ಮದ ಪ್ರಮುಖ ಹಬ್ಬವಾಗಿದೆ. ಸೂರ್ಯ ಧನು ರಾಶಿಯನ್ನು ತೊರೆದು ಮಕರ ರಾಶಿಯನ್ನು ಪ್ರವೇಶಿಸುವ ದಿನವನ್ನು ಮಕರ ಸಂಕ್ರಾಂತಿ ಎಂದು ಆಚರಿಸಲಾಗುತ್ತದೆ. ಈ ವರ್ಷ ಜನವರಿ 14 ರಂದು ಮಕರ ಸಂಕ್ರಾಂತಿ. ಸ್ನಾನ ಮತ್ತು ದಾನಕ್ಕೆ ಶುಭ ಸಮಯ ಬೆಳಿಗ್ಗೆ 9.03 ರಿಂದ ಸಂಜೆ 5.46 ರವರೆಗೆ. ಮಹಾಪುಣ್ಯಕಾಲ ಬೆಳಿಗ್ಗೆ 10.03 ರಿಂದ 10.48 ರವರೆಗೆ. ಈ ದಿನ ಸೂರ್ಯ ಮತ್ತು ವಿಷ್ಣುವಿನ ಪೂಜೆ, ಎಳ್ಳು ದಾನ ಮುಂತಾದವು ಮಂಗಳಕರವೆಂದು ನಂಬಲಾಗಿದೆ.

Makar Sankranti 2025: ಮಕರ ಸಂಕ್ರಾಂತಿಯಂದು ಸ್ನಾನ ಮತ್ತು ದಾನಕ್ಕೆ ಶುಭ ಸಮಯ ಯಾವಾಗ?
Makar Sankranti 2025
Follow us
ಅಕ್ಷತಾ ವರ್ಕಾಡಿ
|

Updated on:Jan 07, 2025 | 9:27 AM

ಮಕರ ಸಂಕ್ರಾಂತಿ ಹಿಂದೂ ಧರ್ಮದ ಪ್ರಮುಖ ಹಬ್ಬವಾಗಿದೆ. ವೈದಿಕ ಪಂಚಾಂಗದ ಪ್ರಕಾರ, ಸೂರ್ಯ ಧನು ರಾಶಿಯನ್ನು ತೊರೆದು ಮಕರ ರಾಶಿಯನ್ನು ಪ್ರವೇಶಿಸುವ ದಿನವನ್ನು ಮಕರ ಸಂಕ್ರಾಂತಿ ಎಂದು ಆಚರಿಸಲಾಗುತ್ತದೆ. ದೇಶದಾದ್ಯಂತ ಈ ಹಬ್ಬವನ್ನು ವಿಭಿನ್ನ ಹೆಸರುಗಳು ಮತ್ತು ವಿಭಿನ್ನ ಸಂಪ್ರದಾಯಗಳಲ್ಲಿ ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ. ಹಿಂದೂ ನಂಬಿಕೆಗಳ ಪ್ರಕಾರ, ಈ ದಿನ ದಾನದ ಜೊತೆಗೆ ಪವಿತ್ರ ನದಿಗಳಲ್ಲಿ ಸ್ನಾನ ಮಾಡುವುದು ಮುಂಬರುವ ದಿನಗಳಲ್ಲಿ ಶುಭವನ್ನು ನೀಡುತ್ತದೆ ಎಂದು ನಂಬಲಾಗಿದೆ.

ಈ ವರ್ಷ ಮಕರ ಸಂಕ್ರಾಂತಿ ಯಾವಾಗ?

ಸೂರ್ಯ ಮಕರ ರಾಶಿಯನ್ನು ಪ್ರವೇಶಿಸಿದಾಗಿನಿಂದ ಉತ್ತರಾಯಣ ಕಾಲ ಪ್ರಾರಂಭವಾಗುತ್ತದೆ. ಈ ವರ್ಷ ಮಕರ ಸಂಕ್ರಾಂತಿಯಂದು ಸ್ನಾನ ಮಾಡಲು ಮತ್ತು ದಾನ ಮಾಡಲು ಉತ್ತಮ ಸಮಯ ಯಾವುದು ಎಂದು ಇಲ್ಲಿ ತಿಳಿದುಕೊಳ್ಳಿ. ವೈದಿಕ ಪಂಚಾಂಗದ ಪ್ರಕಾರ, ಸೂರ್ಯ ಜನವರಿ 14 ಮಂಗಳವಾರ ಬೆಳಿಗ್ಗೆ 9.03 ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಅದಕ್ಕಾಗಿಯೇ ಈ ದಿನ ಮಕರ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ.

ಸ್ನಾನ ಮತ್ತು ದಾನಕ್ಕೆ ಶುಭ ಸಮಯ ಯಾವಾಗ?

ಮಕರ ಸಂಕ್ರಾಂತಿಯನ್ನು ಪೂಜೆ, ಸ್ನಾನ ಮತ್ತು ದಾನಕ್ಕೆ ಮಂಗಳಕರವೆಂದು ಪರಿಗಣಿಸಲಾಗಿದೆ. ಈ ದಿನ ಶುಭ ಮುಹೂರ್ತದಲ್ಲಿ ಮಾತ್ರ ಪೂಜೆ, ಸ್ನಾನ, ದಾನ ಮಾಡಬೇಕು. ಜನವರಿ 14ರಂದು ಬೆಳಗ್ಗೆ 9.03ಕ್ಕೆ ಪುಣ್ಯಕಾಲ ಆರಂಭವಾಗಲಿದೆ. ಈ ಪುಣ್ಯಕಾಲವು ಸಂಜೆ 5.46 ರವರೆಗೆ ಇರುತ್ತದೆ, ಆದರೆ ಈ ದಿನ ಮಹಾ ಪುಣ್ಯಕಾಲವು 45 ನಿಮಿಷಗಳವರೆಗೆ ಇರುತ್ತದೆ. ಈ ಮಹಾಪುಣ್ಯಕಾಲವು ಬೆಳಗ್ಗೆ 10.03ಕ್ಕೆ ಪ್ರಾರಂಭವಾಗುತ್ತದೆ. ರಾತ್ರಿ 10.48ಕ್ಕೆ ಮುಕ್ತಾಯವಾಗುತ್ತದೆ. ಮಕರ ಸಂಕ್ರಾಂತಿಯಂದು ಸ್ನಾನ ಮಾಡಲು ಮತ್ತು ದಾನ ಮಾಡಲು ಇದು ಉತ್ತಮ ಸಮಯವಾದರೂ, ಮಹಾಪುಣ್ಯದ ಸಮಯದಲ್ಲಿ ಸ್ನಾನ ಮತ್ತು ದಾನವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ.

ಇದನ್ನೂ ಓದಿ: Swapna Shastra: ಈ ರೀತಿಯ ಕನಸು ಬೀಳುವುದು ಅಶುಭದ ಸಂಕೇತ!

ಮಕರ ಸಂಕ್ರಾಂತಿಯ ಮಹತ್ವ:

ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಮಕರ ಸಂಕ್ರಾಂತಿಯ ದಿನದಂದು, ಸೂರ್ಯನು ಉತ್ತರಾಯಣದ ಕಡೆಗೆ ಅಂದರೆ ಉತ್ತರದ ಕಡೆಗೆ ಚಲಿಸುತ್ತಾನೆ. ಹಾಗಾಗಿ ಈ ಹಬ್ಬವನ್ನು ಉತ್ತರಾಯಣಿ ಎಂದೂ ಕರೆಯುತ್ತಾರೆ. ಈ ದಿನ ಸೂರ್ಯನನ್ನು ಪೂಜಿಸುವ ಸಂಪ್ರದಾಯವಿದೆ. ಮಕರ ಸಂಕ್ರಾಂತಿಯ ದಿನದಂದು ಸೂರ್ಯನೊಂದಿಗೆ ವಿಷ್ಣುವನ್ನು ಪೂಜಿಸಲಾಗುತ್ತದೆ. ಈ ದಿನ ಎಳ್ಳಿನ ಖಾದ್ಯಗಳು, ವಿವಿಧ ಭಕ್ಷ್ಯಗಳು ಮತ್ತು ಪರಮಾನ್ನಗಳಂತಹ ಸಾಂಪ್ರದಾಯಿಕ ಭಕ್ಷ್ಯಗಳನ್ನು ನೀಡಲಾಗುತ್ತದೆ. ಈ ದಿನ ಎಳ್ಳನ್ನು ದಾನ ಮಾಡುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಈ ದಿನದಂದು ಧಾರ್ಮಿಕ ನಂಬಿಕೆಗಳ ಪ್ರಕಾರ, ಎಳ್ಳನ್ನು ದಾನ ಮಾಡುವುದರಿಂದ ಮತ್ತು ಸೂರ್ಯನಿಗೆ ನೈವೇದ್ಯವಾಗಿ ಪಾಯಸವನ್ನು ಅರ್ಪಿಸಿದರೆ, ಭಗವಾನ್ ವಿಷ್ಣು ಮತ್ತು ಸೂರ್ಯನ ಅನುಗ್ರಹವನ್ನು ಪಡೆಯಲಾಗುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:09 am, Tue, 7 January 25

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ