ಶಬರಿಮಲೆಯಲ್ಲಿ ನಾಳೆಯಿಂದ ಅಯ್ಯಪ್ಪ ದರ್ಶನ: ವರ್ಚುವಲ್ ಕ್ಯೂ ಮೂಲಕ ಮಾತ್ರ ಪ್ರವೇಶ, ದಿನಕ್ಕೆ ಗರಿಷ್ಠ 1 ಲಕ್ಷ ಜನರಿಗೆ ಅವಕಾಶ

ಈ ವರ್ಷ ಯಾತ್ರಿಗಳಿಗೆ ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ಮಾತ್ರವೇ ಪ್ರವೇಶ ಇರಲಿದೆ. ಒಂದು ದಿನಕ್ಕೆ ಗರಿಷ್ಠ 1.2 ಲಕ್ಷ ಮಂದಿಗೆ ದರ್ಶನ ಸಿಗಲಿದೆ ಎಂದು ಕೇರಳ ಸರ್ಕಾರ ಸ್ಪಷ್ಟಪಡಿಸಿದೆ.

ಶಬರಿಮಲೆಯಲ್ಲಿ ನಾಳೆಯಿಂದ ಅಯ್ಯಪ್ಪ ದರ್ಶನ: ವರ್ಚುವಲ್ ಕ್ಯೂ ಮೂಲಕ ಮಾತ್ರ ಪ್ರವೇಶ, ದಿನಕ್ಕೆ ಗರಿಷ್ಠ 1 ಲಕ್ಷ ಜನರಿಗೆ ಅವಕಾಶ
ಶಬರಿಮಲೆ ಅಯ್ಯಪ್ಪ ಯಾತ್ರೆ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 16, 2022 | 8:08 AM

ತಿರುವನಂತಪುರ: ಶಬರಿಮಲೆಯ ಅಯ್ಯಪ್ಪ ದೇಗುಲವು ಬುಧವಾರದಿಂದ (ನ 16) ತೆರೆಯಲಿದ್ದು, ಗುರುವಾರದಿಂದ (ನ 17) ಎರಡು ತಿಂಗಳ ಅವಧಿಗೆ ಭಕ್ತರ ದರ್ಶನಕ್ಕೆ ಅವಕಾಶ ಇರಲಿದೆ. ವಾರ್ಷಿಕ ಮಂಡಲಂ-ಮಕರವಿಳುಕ್ಕು ಯಾತ್ರೆಗೂ ನಾಳೆಯಿಂದಲೇ ಚಾಲನೆ ಸಿಗಲಿದೆ. ದೇಗುಲದ ಹಾಲಿ ಪ್ರಧಾನ ಅರ್ಚಕರಾದ (ತಂತ್ರಿ) ಕಂಡರಾರು ರಾಜೀವರು ಮತ್ತು ಹಿಂದ ಪ್ರಧಾನ ಅರ್ಚಕರಾದ ಎನ್.ಪರಮೇಶ್ವರನ್ ನಂಬೂದಿರಿ ಅವರ ಸಮಕ್ಷಮದಲ್ಲಿ ದೇಗುಲದ ಗರ್ಭಗೃಹವನ್ನು ಇಂದು ಸಂಜೆ 5 ಗಂಟೆಗೆ ತೆರೆಯಲಾಗುವುದು. ನಂತರ ಅಯ್ಯಪ್ಪ ಮತ್ತು ಮಲಿಕಾಪುರಮ್ ದೇಗುಲಗಳ ಮುಖ್ಯ ಅರ್ಚಕರು ಪೂಜಾ ವಿಧಿಗಳನ್ನು ಆರಂಭಿಸುವ ಮೂಲಕ ಜವಾಬ್ದಾರಿಯನ್ನು ಸ್ವೀಕರಿಸಲಿದ್ದಾರೆ. 41 ದಿನಗಳ ಮಂಡಲ ಪೂಜಾ ವಿಧಿಗಳು ಡಿ 27ಕ್ಕೆ ಮುಕ್ತಾಯವಾಗಲಿದೆ.

ನಂತರ ಮೂರು ದಿನಗಳ ಕಾಲ ದೇಗುಲದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಡಿ 30ರಿಂದ ಮಕರವಿಳುಕ್ಕು ಯಾತ್ರೆಗಾಗಿ ದೇಗುಲವನ್ನು ಮತ್ತೆ ತೆರೆಯಲಾಗುವುದು. ಜನವರಿ 14ರಂದು ಮಕರವಿಳಕ್ಕು ಕಾರ್ಯಕ್ರಮವಿದೆ. ಸಂಕ್ರಾಂತಿ ಜ್ಯೋತಿಯ ದರ್ಶನ ಮತ್ತಿತರರ ಪೂಜಾ ವಿಧಿಗಳ ನಂತರ ಜನವರಿ 20ರಂದು ದೇಗುಲವನ್ನು ಮುಚ್ಚಲಾಗುವುದು. ಅಲ್ಲಿಗೆ ಈ ವರ್ಷದ ಶಬರಿಮಲೆ ಯಾತ್ರೆ ಋತುಮಾನ ಮುಕ್ತಾಯವಾದಂತೆ ಆಗುತ್ತದೆ.

ಕೊವಿಡ್-19ರ ನಿರ್ಬಂಧದ ಕಾರಣ ಕಳೆದ ಎರಡು ವರ್ಷಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವಂತಿಲ್ಲ ಎಂದು ನಿರ್ಬಂಧ ವಿಧಿಸಲಾಗಿತ್ತು. ಈ ಬಾರಿ ನಿರ್ಬಂಧ ಸಡಿಲಿಸಿರುವುದರಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಶಬರಿಮಲೆ ಯಾತ್ರೆ ಕೈಗೊಳ್ಳಬಹುದು ಎಂಬ ನಿರೀಕ್ಷೆಯಿದೆ. ಶಬರಿಮಲೆ ಮಾರ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದ್ದು, ಸುಮಾರು 13,000 ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಈ ವರ್ಷ ಯಾತ್ರಿಗಳಿಗೆ ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ಮಾತ್ರವೇ ಪ್ರವೇಶ ಇರಲಿದೆ. ಒಂದು ದಿನಕ್ಕೆ ಗರಿಷ್ಠ 1.2 ಲಕ್ಷ ಮಂದಿಗೆ ದರ್ಶನ ಸಿಗಲಿದೆ ಎಂದು ಕೇರಳ ಸರ್ಕಾರ ಸ್ಪಷ್ಟಪಡಿಸಿದೆ.

Published On - 8:08 am, Wed, 16 November 22

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್