Manglik Dosh: ಜಾತಕದಲ್ಲಿ ಮಂಗಳ ದೋಷವಿದ್ದರೆ ವಿವಾಹದಲ್ಲಿ ಅಡೆತಡೆ ತಪ್ಪಿದ್ದಲ್ಲ! ಇದಕ್ಕೆ ಪರಿಹಾರವೇನು?

ಒಬ್ಬ ವ್ಯಕ್ತಿಯ ಜಾತಕದಲ್ಲಿ ಗ್ರಹಗತಿ ಕೆಟ್ಟದಾಗಿದ್ದರೆ ಆತ ಅನೇಕ ರೀತಿಯ ದೈಹಿಕ, ಮಾನಸಿಕ ಮತ್ತು ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಾನೆ. ಅಂತಹ ದೋಷಗಳಲ್ಲಿ ಮಂಗಳ ದೋಷವು ಒಂದು.ಆ ಸಮಯದಲ್ಲಿ ಮದುವೆಯಾಗುವ ವ್ಯಕ್ತಿಯು ಜೀವನದಲ್ಲಿ ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.

Manglik Dosh: ಜಾತಕದಲ್ಲಿ ಮಂಗಳ ದೋಷವಿದ್ದರೆ ವಿವಾಹದಲ್ಲಿ ಅಡೆತಡೆ ತಪ್ಪಿದ್ದಲ್ಲ! ಇದಕ್ಕೆ ಪರಿಹಾರವೇನು?
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: May 17, 2024 | 6:10 PM

ಯಾವುದೇ ವ್ಯಕ್ತಿಯ ಜೀವನದಲ್ಲಿ ಏರಿಳಿತಗಳನ್ನು ಕಾಣಲು ಅವನ ಜಾತಕದಲ್ಲಿರುವ ಗ್ರಹಗಳು ಮತ್ತು ನಕ್ಷತ್ರಗಳ ಸ್ಥಾನಗಳು ಕಾರಣವಾಗಿರುತ್ತದೆ. ಒಬ್ಬ ವ್ಯಕ್ತಿಯ ಜಾತಕದಲ್ಲಿ ಗ್ರಹಗತಿ ಕೆಟ್ಟದಾಗಿದ್ದರೆ ಆತ ಅನೇಕ ರೀತಿಯ ದೈಹಿಕ, ಮಾನಸಿಕ ಮತ್ತು ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಾನೆ. ಅಂತಹ ದೋಷಗಳಲ್ಲಿ ಮಂಗಳ ದೋಷವು ಒಂದು.ಆ ಸಮಯದಲ್ಲಿ ಮದುವೆಯಾಗುವ ವ್ಯಕ್ತಿಯು ಜೀವನದಲ್ಲಿ ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ಮಂಗಳ ಗ್ರಹದ ಅಶುಭ ಪರಿಣಾಮದಿಂದಾಗಿ ಈ ದೋಷ ಕಂಡುಬರುತ್ತದೆ. ಇದು ಮುಖ್ಯವಾಗಿ ವೈವಾಹಿಕ ಜೀವನದಲ್ಲಿ ಸಮಸ್ಯೆಗಳನ್ನು ಉಂಟುಮಾಡಬಹುದು. ಇದರಲ್ಲಿ ಎಷ್ಟು ವಿಧಗಳಿವೆ ಎಂಬುದರ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಮಂಗಳ ದೋಷದಲ್ಲಿ ಎಷ್ಟು ವಿಧ?

ಮಂಗಳನು ಜಾತಕದ ಮೊದಲ, ಎರಡನೇ, ನಾಲ್ಕನೇ, ಏಳನೇ, ಎಂಟನೇ ಅಥವಾ ಹನ್ನೆರಡನೇ ಮನೆಯಲ್ಲಿದ್ದಾಗ ಈ ದೋಷ ಕಂಡುಬರುತ್ತದೆ. ಇದರಲ್ಲಿ ಭಾಗಶಃ ಮಂಗಳಿಕ ದೋಷವು ಸೌಮ್ಯ ರೂಪವಾಗಿದೆ. ಇದರಿಂದ ಯಾವುದೇ ರೀತಿಯ ಗಂಭೀರ ಪರಿಣಾಮಗಳು ಉಂಟಾಗುವುದಿಲ್ಲ. ಸಾತ್ವಿಕ ಮಂಗಳಿಕ ದೋಷವಿದ್ದಲ್ಲಿ ವೈವಾಹಿಕ ಜೀವನದಲ್ಲಿ ಸವಾಲುಗಳು ಮತ್ತು ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಚಂದ್ರ ಮಂಗಳಿಕ ದೋಷವು ಸಂಗಾತಿಗಳ ನಡುವಿನ ಭಾವನಾತ್ಮಕ ಮತ್ತು ಮಾನಸಿಕ ಹೊಂದಾಣಿಕೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ನಂಬಲಾಗಿದೆ, ಇದು ಸಂಘರ್ಷಗಳು ಅಥವಾ ತಪ್ಪು ತಿಳುವಳಿಕೆಗಳಿಗೆ ಕಾರಣವಾಗಬಹುದು.

ಇದನ್ನೂ ಓದಿ: ಮುಂಜಾನೆ ಅಚಾನಕ್ಕಾಗಿ ಈ ವಸ್ತುಗಳು ಕಾಣುವುದು ಶುಭ ಸೂಚಕ

ಮಂಗಳ ದೋಷದ ಪರಿಣಾಮಗಳೇನು?

ಮಂಗಳ ದೋಷದಿಂದಾಗಿ, ಮದುವೆಯಲ್ಲಿ ವಿಳಂಬವಾಗುವುದರ ಜೊತೆಗೆ ಅನೇಕ ರೀತಿಯ ಅಡೆತಡೆಗಳಿಗೆ ಕಾರಣವಾಗಬಹುದು. ಮದುವೆ ನಡೆದರೂ, ಸಂಗಾತಿಯೊಂದಿಗೆ ಸಾಮರಸ್ಯವಿರುವುದಿಲ್ಲ. ಏಕೆಂದರೆ ಜಾತಕದ ಏಳನೇ ಮನೆಯನ್ನು ಮದುವೆ ಅಥವಾ ವೈವಾಹಿಕ ಜೀವನಕ್ಕೆ ಸಂಬಂಧಿಸಿದೆ ಎಂದು ಪರಿಗಣಿಸಲಾಗುತ್ತದೆ ಮತ್ತು ಈ ಮನೆಯಲ್ಲಿಯೇ ಮಂಗಳನ ಉಪಸ್ಥಿತಿ ಇದ್ದರೆ ಅದು ಅಶುಭ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗುತ್ತದೆ. ಹಾಗಾಗಿ ಮದುವೆಯಾಗುವ ಮಂಗಳ ದೋಷದ ಬಗ್ಗೆ ಸರಿಯಾಗಿ ಅರಿತುಕೊಂಡು ಆ ಬಳಿಕ ಮುಂದಿನ ತಯಾರಿಯನ್ನು ನಡೆಸಿ. ಮಂಗಳದೋಷವನ್ನು ಪರಿಹಾರ ಮಾಡಲು ಸಾಧ್ಯವಿಲ್ಲವಾದರೂ ಕೆಲವೊಂದು ಪರಿಹಾರಗಳನ್ನು ಮಾಡುವ ಮೂಲಕ ದೋಷದ ತೀವ್ರತೆಯನ್ನು ಕಡಿಮೆ ಮಾಡಬಹುದಾಗಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ