AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nag Panchami 2023: ನಾಗರ ಪಂಚಮಿ ದಿನದಂದು ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳಾವವು? ಇಲ್ಲಿದೆ ನೋಡಿ

ನಾಗರ ಪಂಚಮಿ 2023: ಪ್ರತಿ ವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನದಂದು ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ಬಾರಿ ನಾಗರ ಪಂಚಮಿಯನ್ನು ಆಗಸ್ಟ್ 21 ರಂದು ಆಚರಿಸಲಾಗುತ್ತದೆ. ಈ ಶುಭ ಹಬ್ಬದಂದು, ಮಹಿಳೆಯರು ಸರ್ಪ ದೇವರನ್ನು ಪೂಜಿಸುತ್ತಾರೆ ಮತ್ತು ಹಾವುಗಳಿಗೆ ಹಾಲನ್ನು ಅರ್ಪಿಸಿ, ಕುಟುಂಬದ ಸುರಕ್ಷತೆಗಾಗಿ ಪ್ರಾರ್ಥಿಸುತ್ತಾರೆ.

Nag Panchami 2023: ನಾಗರ ಪಂಚಮಿ ದಿನದಂದು ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳಾವವು? ಇಲ್ಲಿದೆ ನೋಡಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 20, 2023 | 4:14 AM

Share

ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನದಂದು ನಾಗರ ಪಂಚಮಿ (Nag Panchami) ಹಬ್ಬವನ್ನು ಆಚರಿಸಲಾಗುತ್ತದೆ. ನಾಗರ ಆರಾಧನೆಯ ಈ ಪವಿತ್ರ ಹಬ್ಬವು ಹಿಂದೂ ಧರ್ಮದಲ್ಲಿ ಬಹಳ ಪ್ರಾಮುಖ್ಯವಾಗಿದೆ. ಧಾರ್ಮಿಕ ಗ್ರಂಥಗಳ ಪ್ರಕಾರ, ಈ ದಿನ ನಾಗನನ್ನು ಪೂಜಿಸುವುದರಿಂದ ಆಧ್ಯಾತ್ಮಿಕ ಶಕ್ತಿ, ಅಪಾರ ಸಂಪತ್ತು ಮತ್ತು ಅಪೇಕ್ಷಿತ ಆಸೆಗಳು ಈಡೇರುತ್ತವೆ. ಈ ಬಾರಿ ನಾಗರ ಪಂಚಮಿ ಹಬ್ಬವನ್ನು ಆಗಸ್ಟ್ 21, ಸೋಮವಾರ ಆಚರಿಸಲಾಗುತ್ತದೆ. ಜೊತೆಗೆ ಈ ಹಬ್ಬದಂದು, ಮಹಿಳೆಯರು ಸರ್ಪ ದೇವರನ್ನು ಪೂಜಿಸುತ್ತಾರೆ ಮತ್ತು ಹಾವುಗಳಿಗೆ ಹಾಲನ್ನು ಅರ್ಪಿಸಿ, ಕುಟುಂಬದ ಸುರಕ್ಷತೆಗಾಗಿ ಪ್ರಾರ್ಥಿಸುತ್ತಾರೆ.

ಹಿಂದೂ ಕ್ಯಾಲೆಂಡರ್ ಪ್ರಕಾರ, ನಾಗ ಪಂಚಮಿ ಹಬ್ಬವನ್ನು ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನ ಅಂದರೆ ಪಂಚಮಿ ತಿಥಿಯಂದು ಆಚರಣೆ ಮಾಡಲಾಗುತ್ತದೆ. ಹಾಗಾಗಿ ಈ ಬಾರಿ ಆಗಸ್ಟ್ 21 ರಂದು ಮಧ್ಯಾಹ್ನ 12:21 ಕ್ಕೆ ಪ್ರಾರಂಭವಾಗಿ ಮತ್ತು ಆಗಸ್ಟ್ 22 ರಂದು ಮಧ್ಯಾಹ್ನ 2:00 ಕ್ಕೆ ಕೊನೆಗೊಳ್ಳುತ್ತದೆ. ಅದಲ್ಲದೆ ಶ್ರಾವಣ ಮಾಸದಲ್ಲಿ ಬರುವ ಶುಕ್ಲ ಪಕ್ಷದ ನಾಗಪಂಚಮಿಯು ನಾಗದೇವತೆಯ ಆರಾಧನೆಗೆ ವಿಶೇಷ ಮಹತ್ವವನ್ನು ಹೊಂದಿದೆ. ನಾಗರ ಪಂಚಮಿಯ ಪೂಜಾ ಸಮಯವು ಬೆಳಿಗ್ಗೆ 5.53 ರಿಂದ 8.30 ರವರೆಗೆ. ಆಗಸ್ಟ್ 22 ರ ಬದಲಾಗಿ ಆಗಸ್ಟ್ 21 ರಂದು ಈ ದಿನವನ್ನು ಆಚರಿಸಲಾಗುತ್ತದೆ.

ನಾಗರ ಪಂಚಮಿಯ ಪೂಜಾ ವಿಧಿ ವಿಧಾನ ಬಗ್ಗೆ ತಿಳಿದಿದೆಯಾ?

ನಾಗರ ಪಂಚಮಿಯ ದೇವತೆಗಳನ್ನು ಎಂಟು ದೇವರುಗಳೆಂದು ಪರಿಗಣಿಸಲಾಗಿದೆ. ಈ ದಿನ ಅನಂತ, ವಾಸುಕಿ, ಪದ್ಮ, ಮಹಾಪದ್ಮ, ತಕ್ಷಕ, ಕುಲೀರ, ಕಾರ್ಕತ್ ಮತ್ತು ಶಂಖ ಎಂಬ ಅಷ್ಟನಾಗರನ್ನು ಪೂಜಿಸಲಾಗುತ್ತದೆ. ನಾಗರ ಪಂಚಮಿಯ ಒಂದು ದಿನ ಉಪವಾಸ ಮಾಡಿ. ಬಳಿಕ ಸಂಜೆ ಊಟ, ತಿಂಡಿ ಮಾಡಬಹುದು. ಕೆಲವರ ಮನೆಯಲ್ಲಿ ನಾಗ ಚಿತ್ರ ಅಥವಾ ಜೇಡಿಮಣ್ಣಿನಿಂದ ಮಾಡಿದ ಹಾವಿನ ವಿಗ್ರಹವನ್ನು ಪೂಜಿಸಲಾಗುತ್ತದೆ. ಇನ್ನು ಕೆಲವು ಮನೆಗಳಲ್ಲಿ ನಾಗನ ವಿಗ್ರಹಕ್ಕೆ ಹಾಲೆರೆದು, ಪ್ರಸಾದ ಇಟ್ಟು, ಅರಿಶಿನ, ರೋಲಿ (ಕೆಂಪು ಕುಂಕುಮ), ಅಕ್ಕಿ ಮತ್ತು ಹೂವುಗಳನ್ನು ಅರ್ಪಿಸುವ ಮೂಲಕ, ನಾಗ ದೇವರನ್ನು ಪೂಜಿಸಲಾಗುತ್ತದೆ. ಕೊನೆಯಲ್ಲಿ, ನಾಗರ ಪಂಚಮಿಯ ಕಥೆಯನ್ನು ಕೇಳಲೇಬೇಕು.

ಇದನ್ನೂ ಓದಿ: ನಿಮ್ಮ ಜಾತಕದಲ್ಲಿ ರಾಹುವಿನ ಸ್ಥಾನದ ಪ್ರಕಾರ ನಾಗರ ಪಂಚಮಿ ಪೂಜಾ ವಿಧಾನ ತಿಳಿಯಿರಿ

ನಾಗರ ಪಂಚಮಿಯ ದಿನದಂದು ಈ ಕೆಲಸಗಳನ್ನು ಮಾಡಲು ಮರೆಯಬೇಡಿ ಅಥವಾ ನಾಗರ ಪಂಚಮಿ ದಿನ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳಾವವು?

1. ಈ ದಿನ ಭೂಮಿಯನ್ನು ಅಗೆಯುವುದು ಅಥವಾ ಹೊಲವನ್ನು ಉಳುಮೆ ಮಾಡುವುದು ತುಂಬಾ ಅಶುಭವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ, ಹಾಗೆ ಮಾಡುವುದನ್ನು ಕಟ್ಟುನಿಟ್ಟಾಗಿ ತಪ್ಪಿಸಬೇಕು. ಇದಲ್ಲದೆ, ಗದ್ದೆ ಅಥವಾ ಮನೆಯ ಸುತ್ತ ಮುತ್ತ ಇರುವ ಸೊಪ್ಪುಗಳನ್ನು ಸಹ ಕೀಳಬಾರದು.

2. ನಾಗರ ಪಂಚಮಿಯ ದಿನದಂದು ಚೂಪಾದ ವಸ್ತುಗಳನ್ನು ಬಳಸುವುದನ್ನು ತಪ್ಪಿಸಿ. ಮುಖ್ಯವಾಗಿ ಸೂಜಿ ಮತ್ತು ದಾರವನ್ನು ಬಳಸಬಾರದು. ಹಾಗೆ ಮಾಡುವುದು ಅಶುಭವೆಂದು ಪರಿಗಣಿಸಲಾಗುತ್ತದೆ.

3. ಅಡುಗೆ ಮಾಡಲು ತವಾ ಮತ್ತು ಕಬ್ಬಿಣದ ಪಾತ್ರೆಯನ್ನು ಬಳಸಬಾರದು. ಹೀಗೆ ಮಾಡುವುದರಿಂದ, ಮನೆಗೆ ಒಳಿತಾಗುವುದಿಲ್ಲ ಎಂಬ ನಂಬಿಕೆ ಇದೆ. ಹಾಗಾಗಿ ಈ ಬಗ್ಗೆ ಜಾಗೃತರಾಗಿರಿ.

4. ನಾಗರ ಪಂಚಮಿಯ ದಿನದಂದು, ಯಾರ ಬಗ್ಗೆಯೂ ನಿಮ್ಮ ಬಾಯಿಂದ ಯಾವುದೇ ತಪ್ಪು ಪದವನ್ನು ಆಡಬಾರದು. ಇದನ್ನು ತುಂಬಾ ತಪ್ಪು ಎಂದು ಪರಿಗಣಿಸಲಾಗುತ್ತದೆ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ