AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narad Jayanti 2024: ನಾರದ ಜಯಂತಿ ಯಾವಾಗ? ಶುಭ ಸಮಯ ಪೂಜಾ ವಿಧಾನಗಳನ್ನು ತಿಳಿದುಕೊಳ್ಳಿ

 ನಾರದ ಜಯಂತಿಯನ್ನು ಪ್ರತಿ ವರ್ಷ ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ಪ್ರತಿಪಾದ ಅಥವಾ ಪಾಡ್ಯದ ದಿನದಂದು ಆಚರಿಸಲಾಗುತ್ತದೆ. ಬ್ರಹ್ಮರ್ಷಿ ನಾರದ ಮುನಿಗಳ ಜನ್ಮದಿನದ ಪ್ರಯುಕ್ತ ಈ ಜಯಂತಿಯನ್ನು ಆಚರಿಸಲಾಗುತ್ತದೆ. ಈ ದಿನದಂದು ಬ್ರಹ್ಮರ್ಷಿ ನಾರದರ ಜೊತೆಗೆ ಶ್ರೀಹರಿಯನ್ನು ಪೂಜಿಸಲಾಗುತ್ತದೆ. ಈ ದಿನದ ಮಹತ್ವವೇನು? ಇಲ್ಲಿದೆ ಮಾಹಿತಿ.

Narad Jayanti 2024: ನಾರದ ಜಯಂತಿ ಯಾವಾಗ? ಶುಭ ಸಮಯ ಪೂಜಾ ವಿಧಾನಗಳನ್ನು ತಿಳಿದುಕೊಳ್ಳಿ
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 22, 2024 | 6:07 PM

Share

ನಾರದ ಜಯಂತಿಯನ್ನು ಪ್ರತಿ ವರ್ಷ ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ಪ್ರತಿಪಾದ ಅಥವಾ ಪಾಡ್ಯದ ದಿನದಂದು ಆಚರಿಸಲಾಗುತ್ತದೆ. ಬ್ರಹ್ಮರ್ಷಿ ನಾರದ ಮುನಿಗಳ ಜನ್ಮದಿನದ ಪ್ರಯುಕ್ತ ಈ ಜಯಂತಿಯನ್ನು ಆಚರಿಸಲಾಗುತ್ತದೆ. ಈ ದಿನದಂದು ಬ್ರಹ್ಮರ್ಷಿ ನಾರದರ ಜೊತೆಗೆ ಶ್ರೀಹರಿಯನ್ನು ಪೂಜಿಸಲಾಗುತ್ತದೆ. ಭಗವದ್ಗೀತೆಯಲ್ಲಿ, ಶ್ರೀಕೃಷ್ಣನು ಅರ್ಜುನನಿಗೆ ಹೇಳಿರುವ ಪ್ರಕಾರ “ನಾನು ಋಷಿಮುನಿಗಳಲ್ಲಿ ದೇವರ್ಷಿ ನಾರದ” ಎಂದು ಹೇಳಿದ್ದಾನೆ. ಆದ್ದರಿಂದ ನಾರದನನ್ನು ವಿಷ್ಣುವಿನ ಪ್ರತಿರೂಪ ಎಂದು ಪರಿಗಣಿಸಲಾಗಿದೆ. ಜೊತೆಗೆ ಆತ ಬ್ರಹ್ಮಾಂಡದ ಮೊದಲ ಪತ್ರಕರ್ತ ಎಂದರೂ ತಪ್ಪಾಗಲಾರದು, ಏಕೆಂದರೆ ನಾರದ ಮುನಿಗಳು ಮೂರು ಲೋಕದ ಮಾಹಿತಿಯನ್ನು ಕಲೆ ಹಾಕಿ ಅದನ್ನು ವಿನಿಮಯ ಮಾಡುತ್ತಿದ್ದರು.

ದಿನಾಂಕ ಮತ್ತು ಪೂಜೆಗೆ ಶುಭ ಸಮಯ;

ಪಂಚಾಂಗದ ಪ್ರಕಾರ, ನಾರದ ಜಯಂತಿಯು ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ಪಾಡ್ಯ ತಿಥಿಯಂದು ಮೇ 23 ಗುರುವಾರ ಸಂಜೆ 7:22 ಕ್ಕೆ ಪ್ರಾರಂಭವಾಗುತ್ತದೆ. ಮರುದಿನ ಮೇ 24, ಶುಕ್ರವಾರ ಸಂಜೆ 7:24 ಕ್ಕೆ ಕೊನೆಗೊಳ್ಳುತ್ತದೆ. ಆದ್ದರಿಂದ ಉದಯ ತಿಥಿ. ಇದರ ಪ್ರಕಾರ, ನಾರದ ಜಯಂತಿಯನ್ನು ಮೇ 24 ರಂದು ಶುಕ್ರವಾರ ಆಚರಿಸಲಾಗುವುದು.

ನಾರದ ಜಯಂತಿಯಂದು ಈ ರೀತಿ ಪೂಜೆ ಮಾಡಿ;

-ಈ ದಿನ, ಸೂರ್ಯೋದಯಕ್ಕೆ ಮುಂಚಿತವಾಗಿ ಎದ್ದು ನೆಚ್ಚಿನ ದೇವರನ್ನು ನೆನಪಿಸಿಕೊಳ್ಳುವ ಮೂಲಕ ದಿನವನ್ನು ಪ್ರಾರಂಭಿಸಬೇಕು.

-ದೈನಂದಿನ ಚಟುವಟಿಕೆಗಳನ್ನು ಮುಗಿಸಿಕೊಂಡ ನಂತರ, ಮನೆಯನ್ನು ಸ್ವಚ್ಛಗೊಳಿಸಿ, ಸ್ನಾನ ಮಾಡಬೇಕು ಬಳಿಕ ಸ್ವಚ್ಛವಾದ ಬಟ್ಟೆಗಳನ್ನು ಧರಿಸಬೇಕು. ಬಳಿಕ ಪೂಜಾ ಸ್ಥಳವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ.

-ನಾರದರ ವಿಗ್ರಹ ಅಥವಾ ಮೂರ್ತಿಯನ್ನು ಮರದ ಹಲಗೆಯ ಮೇಲೆ ಇಟ್ಟು ತುಪ್ಪದ ದೀಪ ಹಚ್ಚಿ ಧೂಪದ್ರವ್ಯದಿಂದ ಆರತಿ ಮಾಡಿ ಬಳಿಕ ಪೂಜೆ ಮಾಡಿ. ನೈವೇದ್ಯಕ್ಕೆ ಹಣ್ಣುಗಳು ಅಥವಾ ಸಿಹಿತಿಂಡಿಗಳನ್ನು ಅರ್ಪಿಸಿ. ದೇವರ ಆಶೀರ್ವಾದಕ್ಕಾಗಿ ಪ್ರಾರ್ಥಿಸಿ, ಬಳಿಕ ಕುಟುಂಬ ಸದಸ್ಯರಿಗೆ ಪ್ರಸಾದವನ್ನು ವಿತರಿಸಿ.

ಇದನ್ನೂ ಓದಿ: ನರಸಿಂಹ ಜಯಂತಿ ಆಚರಣೆ ಮಾಡುವವರು ಈ ವಿಷಯಗಳನ್ನು ಮರೆಯಬೇಡಿ

ನಾರದ ಜಯಂತಿಯಂದು ಈ ಕೆಲಸವನ್ನು ಮಾಡಿ;

ನಾರದ ಜಯಂತಿಯ ಶುಭ ಸಮಯದಲ್ಲಿ ಕೃಷ್ಣನ ಯಾವುದಾದರೂ ಒಂದು ದೇವಾಲಯಕ್ಕೆ ಹೋಗಿ ಕೊಳಲನ್ನು ಅರ್ಪಿಸಿ ಬನ್ನಿ, ಈ ರೀತಿ ಮಾಡುವುದರಿಂದ ವ್ಯಕ್ತಿಯ ಎಲ್ಲಾ ಆಸೆಗಳು ಈಡೇರುತ್ತವೆ ಎಂಬ ನಂಬಿಕೆ ಇದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ