Naraka Chaturdashi 2024: ನರಕ ಚತುರ್ದಶಿಯಂದು ಅಭ್ಯಂಗ ಸ್ನಾನ ಮಾಡುವುದು ಏಕೆ? ಇದರ ಮಹತ್ವವೇನು?

ದೀಪಾವಳಿಯ ಚತುರ್ದಶಿಯಂದು ಅಭ್ಯಂಗ ಸ್ನಾನ ಮಾಡುವ ಪದ್ದತಿಯಿದೆ. ಈ ವಿಶೇಷ ದಿನ ಅಂದರೆ ನರಕ ಚತುರ್ದಶಿಯಂದು ಮುಂಜಾನೆ ಎದ್ದು ಎಣ್ಣೆ ಸ್ನಾನ ಮಾಡಿ, ಹೊಸ ಬಟ್ಟೆ ತೊಡುವ ಸಂಪ್ರದಾಯವಿದೆ. ಈ ಅಭ್ಯಂಗ ಸ್ನಾನವನ್ನು ಮಾಡುವುದೇಕೇ? ಅದರ ಮಹತ್ವವೇನು? ಈ ಬಾರಿ ಅಭ್ಯಂಗ ಸ್ನಾನಕ್ಕೆ ಶುಭ ಮುಹೂರ್ತ ಯಾವುದು ಇವೆಲ್ಲದರ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

Naraka Chaturdashi 2024: ನರಕ ಚತುರ್ದಶಿಯಂದು ಅಭ್ಯಂಗ ಸ್ನಾನ ಮಾಡುವುದು ಏಕೆ? ಇದರ ಮಹತ್ವವೇನು?
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 31, 2024 | 5:35 AM

ನಾವೆಲ್ಲರೂ ಬಹಳ ಕಾತುರದಿಂದ ಕಾಯುತ್ತಿದ್ದ ದೀಪಾವಳಿ ಹಬ್ಬ ಬಂದೇ ಬಿಡ್ತು. ಈ ಬೆಳಕಿನ ಹಬ್ಬ ದೀಪಾವಳಿಯ ಮೊದಲ ದಿನದಂದು ನರಕ ಚತುರ್ದಶಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ದಿನ ವಿಶೇಷವಾಗಿ ದಕ್ಷಿಣ ಭಾರತದ ಹಲವೆಡೆ ಅಭ್ಯಂಗ ಸ್ನಾನವನ್ನು ಮಾಡುವ ಸಂಪ್ರದಾಯವಿದೆ. ಈ ದಿನ ಸೂರ್ಯೋದಯಕ್ಕೂ ಮುಂಚೆ ಎದ್ದು ಎಣ್ಣೆ ಸ್ನಾನ ಮಾಡಿ, ಹೊಸ ಬಟ್ಟೆ ತೊಟ್ಟು ದೇವರನ್ನು ಭಕ್ತಿ ಪೂರ್ವಕವಾಗಿ ಪೂಜಿಸುವ ಪದ್ದತಿಯಿದೆ. ಈ ಬಾರಿ ಅಕ್ಟೋಬರ್‌ 31 ಅಂದರೆ ನಾಳೆ ನರಕ ಚತುರ್ದಶಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ಅಭ್ಯಂಗ ಸ್ನಾನವನ್ನು ಮಾಡುವುದೇಕೇ? ಅದರ ಮಹತ್ವವೇನು? ಈ ಬಾರಿ ಅಭ್ಯಂಗ ಸ್ನಾನಕ್ಕೆ ಶುಭ ಮುಹೂರ್ತ ಯಾವುದು ಇವೆಲ್ಲದರ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಶುಭ ಮುಹೂರ್ತ ಯಾವಾಗ:

ಅಭ್ಯಂಗ ಸ್ನಾನದ ಶುಭ ಸಮಯ ಅಥವಾ ಮುಹೂರ್ತವು ಅಕ್ಟೋಬರ್‌ 31 ರಂದು ಬೆಳಗ್ಗೆ 5.19 ರಿಂದ 6.32 ರ ವರೆಗೆ ಇರಲಿದೆ. ಈ ಶುಭ ಸಮಯದಲ್ಲಿ ಅಭ್ಯಂಗ ಸ್ನಾನ ಮಾಡಿದರೆ ತುಂಬಾನೇ ಒಳ್ಳೆಯದು.

ಅಭ್ಯಂಗ ಸ್ನಾನದ ಮಹತ್ವ ಮತ್ತು ಹಿನ್ನೆಲೆ:

ಹಿಂದೂ ಧರ್ಮದಲ್ಲಿನ ಪ್ರತಿಯೊಂದು ಆಚರಣೆಯ ಹಿಂದೆಯೂ ಅದರದ್ದೇ ಆದ ಕಥೆ, ಮಹತ್ವ ಇರುವಂತೆ ಅಭ್ಯಂಗ ಸ್ನಾನಕ್ಕೂ ಅದರದ್ದೇ ಆದ ಮಹತ್ವವಿದೆ. ನರಕ ಚತುರ್ದಶಿಯ ಶುಭ ದಿನ ಕೆಟ್ಟದರ ವಿರುದ್ಧ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ. ಈ ದಿನ ಸೂರ್ಯೋದಯಕ್ಕೂ ಮೊದಲೇ ಎದ್ದು ಅಭ್ಯಂಗ ಸ್ನಾನ ಮಾಡಿದರೆ ಪವಿತ್ರ ಗಂಗಾ ಸ್ನಾನ ಮಾಡಿದಷ್ಟೇ ಪುಣ್ಯ ಸಿಗುತ್ತದೆ ಎಂಬ ನಂಬಿಕೆಯೂ ಇದೆ. ಅಷ್ಟೇ ಅಲ್ಲದೇ ಅಭ್ಯಂಗ ಸ್ನಾನವು ಮನುಷ್ಯನಲ್ಲಿರುವ ಅಹಂಕಾರ, ಕೋಪ, ನಕರಾತ್ಮಕ ಆಲೋಚನೆಗಳನ್ನು ಶುದ್ಧೀಕರಣ ಮಾಡಿ ಹೊಸ ಭರವಸೆಯೊಂದಿಗೆ ದೇಹ ಮತ್ತು ಮನಸ್ಸಿನ ಶುದ್ಧತೆಯನ್ನು ಸೂಚಿಸುತ್ತದೆ.

ಅಭ್ಯಂಗ ಸ್ನಾನವನ್ನು ಏಕೆ ಆಚರಿಸಲಾಗುತ್ತದೆ ಎಂಬುದರ ಬಗ್ಗೆ ನೋಡುವುದಾದರೆ, ಪುರಾಣದ ಒಂದು ಕಥೆಯ ಪ್ರಕಾರ ಬ್ರಹ್ಮನಿಂದ ವರ ಪಡೆದ ನರಕಾಸುರ ನನಗೆ ಯಾರಿಂದಲೂ ತೊಂದರೆಯಾಗುವುದಿಲ್ಲ, ನನಗೆ ಯಾರು ತೊಂದರೆ ಮಾಡಲು ಸಾಧ್ಯವೇ ಇಲ್ಲ ಎಂದು ಅಹಂನಿಂದ ಬೀಗುತ್ತಾನೆ. ಇದೇ ದುರಹಂಕಾರ, ಮದದಿಂದ ಆತ ದೇವತೆಗಳಿಗೆ ತೊಂದರೆ ಕೊಡಲು ಶುರು ಮಾಡುತ್ತಾನೆ. ನರಕಾಸುರನ ಕಾಟ ತಾಳಲಾರದೆ ದೇವತೆಗಳು ಶ್ರೀ ಕೃಷ್ಣನ ಮೊರೆ ಹೋಗುತ್ತಾರೆ. ಇವರ ಪ್ರಾರ್ಥನೆಗೆ ಮನಸೋತ ಶ್ರೀಕೃಷ್ಣನು ನರಕಾಸುರನನ್ನು ಸಂಹಾರ ಮಾಡಲು ನಿರ್ಧರಿಸಿದನು. ಆದರೆ ತನಗೆ ಸ್ತ್ರೀಯರಿಂದಲೇ ಮರಣ ಎಂಬ ವರ ಪಡೆದಿದ್ದ ಕಾರಣ ನರಕಾಸುರನನ್ನು ಕೊಲ್ಲುವುದು ಶ್ರೀಕೃಷ್ಣನಿಗೆ ಅಷ್ಟು ಸುಲಭವಾಗಿರಲಿಲ್ಲ. ಹಾಗಾಗಿ ಸತ್ಯಭಾಮೆಯ ಮುಖಾಂತರ ಶ್ರೀಕೃಷ್ನ ಆಶ್ವಯುಜ ಮಾಸದ ಕೃಷ್ಣಪಕ್ಷದಂದು ನರಕಾಸುರನನ್ನು ಸಂಹರಿಸಿದನು. ಆ ಸಮಯದಲ್ಲಿ ತನ್ನ ಮೇಲೆ ಹಾರಿದ ನರಕಾಸುರನ ರಕ್ತವನ್ನು ತೊಡೆದು ಹಾಕಲು ಕೃಷ್ಣ ಎಣ್ಣೆ ಸ್ನಾನವನ್ನು ಮಾಡುತ್ತಾನೆ. ಇದೇ ಕಾರಣಕ್ಕೆ ನರಕ ಚತುರ್ದಶಿಯ ದಿನ ಎಣ್ಣೆ ಸ್ನಾನ ಮಾಡುವ ಸಂಪ್ರದಾಯ ನಡೆದುಕೊಂಡು ಬಂದಿದೆ.

ಇನ್ನೊಂದು ಕಥೆಯ ಪ್ರಕಾರ, ನರಕಾಸುರನು 16 ಸಾವಿರ ಗೋಪಿಕಾ ಸ್ತ್ರೀಯರನ್ನು ಬಂಧನದಲ್ಲಿಟ್ಟಿದ್ದನು ಮತ್ತು ಅವರಿಗೆ ಅತೀವ ಕಿರುಕುಳವನ್ನು ನೀಡುತ್ತಿದ್ದನು. ಅಂತಹ ಪರಿಸ್ಥಿತಿಯಲ್ಲಿ ಗೋಪಿಕಾ ಸ್ತ್ರೀಯರೆಲ್ಲರು ಸೇರಿ ಶ್ರೀಕೃಷ್ಣನನ್ನು ಪ್ರಾರ್ಥಿಸಿದಾಗ, ಕೃಷ್ಣನು ಗೋಪಿಕಾ ಸ್ತ್ರೀಯರಿಗಾಗಿ ಸತ್ಯಭಾಮೆಯ ಮುಖಾಂತರ ನರಕಾಸುರನ ವಧೆ ಮಾಡಿದನು. ಈ ಬಳಿಕ ಗೋಪಿಕಾ ಸ್ತ್ರೀಯರೆಲ್ಲಾ ಅಭ್ಯಂಗ ಸ್ನಾನ ಮಾಡಿ ಪವಿತ್ರಪಾವನರಾದರು ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ನರಕ ಚತುರ್ದಶಿಯಂದು ಪ್ರೀತಿ ಪಾತ್ರರಿಗೆ ಶುಭ ಕೋರಲು ಇಲ್ಲಿದೆ ಶುಭಾಶಯಗಳು

ಅಭ್ಯಂಗ ಸ್ನಾನದ ಸರಿಯಾದ ವಿಧಾನ ಮತ್ತು ಇದರ ಪ್ರಯೋಜನಗಳು:

ನರಕ ಚತುರ್ದಶಿಯ ಮುನ್ನಾ ದಿನ ಅಂದರೆ ತ್ರಯೋದಶಿಯ ದಿನ ಸ್ನಾನದ ಹಂಡೆಗಳಿಗೆ ನೀರು ತುಂಬುವ ಮೂಲಕ ಹಬ್ಬಕ್ಕೆ ಚಾಲನೆ ನೀಡಲಾಗುತ್ತದೆ. ಅಂದು ನೀರಿನ ಪಾತ್ರೆ ಅಥವಾ ಹಂಡೆಯನ್ನು ಶುದ್ಧೀಕರಿಸಿ, ಪೂಜಿಸಿ ಬಳಿಕ ಅದಕ್ಕೆ ನೀರು ತುಂಬಬೇಕು. ಮರು ದಿನ ಅಂದರೆ ನರಕ ಚತುರ್ದಶಿಯ ದಿನದಂದು ಸೂರ್ಯೋದಯಕ್ಕೂ ಮುಂಚೆ ಎದ್ದು ಶುಭ ಮುಹೂರ್ತದಲ್ಲಿ ಎಳ್ಳೆಣ್ಣೆ ಅಥವಾ ತೆಂಗಿನ ಎಣ್ಣೆಯನ್ನು ಸಂಪೂರ್ಣ ದೇಹ ಹಾಗೂ ತಲೆಗೂದಲಿಗೆ ಹಚ್ಚಿ ನಂತರ ಬಿಸಿ ನೀರಿನಲ್ಲಿ ಸ್ನಾನ ಮಾಡಬೇಕು. ಅಭ್ಯಂಗ ಸ್ನಾನಕ್ಕೆ ಎಳ್ಳೆಣ್ಣೆಯೇ ಶ್ರೇಷ್ಠ ಎಂದು ಹೇಳುತ್ತಾರೆ. ಆದ್ರೆ ಕೆಲವು ಕಡೆ ಕೊಬ್ಬರಿ ಎಣ್ಣೆಯನ್ನು ಸಹ ಬಳಸುತ್ತಾರೆ. ಧಾರ್ಮಿಕ ಪ್ರಾಮುಖ್ಯತೆಯ ಹೊರತಾಗಿ ಈ ಎಣ್ಣೆ ಸ್ನಾನವು ಹಲವಾರು ಆರೋಗ್ಯ ಪ್ರಯೋಜನಗಳನ್ನು ಕೂಡಾ ಹೊಂದಿದೆ. ಹೌದು ಈ ಎಣ್ಣೆಯನ್ನು ದೇಹಕ್ಕೆ ಹಚ್ಚಿ ಮಸಾಜ್‌ ಮಾಡುವುದರಿಂದ ದೇಹದಲ್ಲಿ ರಕ್ತದ ಹರಿವು ಸುಧಾರಿಸುತ್ತದೆ. ಅಷ್ಟೇ ಅಲ್ಲದೆ ಇದು ಮೂಲೆಗಳನ್ನು ಬಲಪಡಿಸುವುದರ ಜೊತೆಗೆ ಚರ್ಮಕ್ಕೂ ತುಂಬಾನೇ ಪ್ರಯೋಜನಕಾರಿಯಾಗಿದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ಹುಲಿ ಹಿಂಸ್ರಪಶುವಾದರೂ ತನ್ನ ಮರಿಗಳ ವಿಷಯದಲ್ಲಿ ಮಮತಾಮಯಿ
ಹುಲಿ ಹಿಂಸ್ರಪಶುವಾದರೂ ತನ್ನ ಮರಿಗಳ ವಿಷಯದಲ್ಲಿ ಮಮತಾಮಯಿ
ಐಶ್ವರ್ಯಾಗೆ ಲೈನ್ ಹೊಡೀತಿದ್ರಾ ಧನರಾಜ್? ಪತ್ನಿಗೆ ಮೂಡಿದೆ ಅನುಮಾನ
ಐಶ್ವರ್ಯಾಗೆ ಲೈನ್ ಹೊಡೀತಿದ್ರಾ ಧನರಾಜ್? ಪತ್ನಿಗೆ ಮೂಡಿದೆ ಅನುಮಾನ
ಹೊಸ ವರ್ಷದ ಎರಡನೇ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಹೊಸ ವರ್ಷದ ಎರಡನೇ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!