AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬರೋಬ್ಬರಿ 4 ಕೋಟಿ ರೂ. ಮೌಲ್ಯದ ನೋಟುಗಳಿಂದ ದೇವಿಗೆ ವಿಶೇಷ ಅಲಂಕಾರ

Video: ಬರೋಬ್ಬರಿ 4 ಕೋಟಿ ರೂ. ಮೌಲ್ಯದ ನೋಟುಗಳಿಂದ ದೇವಿಗೆ ವಿಶೇಷ ಅಲಂಕಾರ

ಅಕ್ಷತಾ ವರ್ಕಾಡಿ
|

Updated on:Sep 27, 2025 | 11:43 AM

Share

ನವರಾತ್ರಿ ಹಬ್ಬದ ಪ್ರಯುಕ್ತ ಆಂಧ್ರಪ್ರದೇಶದ ಕೋಣಸೀಮಾ ಜಿಲ್ಲೆಯ ಶ್ರೀ ವಾಸವಿ ಕನ್ಯಕಾ ಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ದೇವಿಗೆ 4 ಕೋಟಿ ರೂಪಾಯಿ ಮೌಲ್ಯದ ನೋಟುಗಳಿಂದ ಅಲಂಕಾರ ಮಾಡಲಾಗಿದೆ. 5 ರಿಂದ 500 ರೂ.ವರೆಗಿನ ವಿವಿಧ ಮುಖಬೆಲೆಯ ನೋಟುಗಳಿಂದ ದೇವಾಲಯದ ಆವರಣವನ್ನು ಸಿಂಗರಿಸಿದ್ದು, ಈ ವೈಭವದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನವರಾತ್ರಿ ಹಬ್ಬ ಈಗಾಗಲೇ ಆರಂಭವಾಗಿದ್ದು, ಎಲ್ಲೆಡೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ಈ ಮಧ್ಯೆ ಆಂಧ್ರಪ್ರದೇಶದ ಕೋಣಸೀಮಾ ಜಿಲ್ಲೆಯಲ್ಲಿರುವ ದೇವಾಲಯವೊಂದರ ದೇವಿಯ ಅಲಂಕಾರ ಎಲ್ಲೆಡೆ ಭಾರೀ ಸದ್ದು ಮಾಡುತ್ತಿದೆ. ಹೌದು ಇಲ್ಲಿನ ಶ್ರೀ ವಾಸವಿ ಕನ್ಯಕಾ ಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ಬರೋಬ್ಬರಿ 4 ಕೋಟಿ ರೂ. ಮೌಲ್ಯದ ನೋಟುಗಳಿಂದ ದೇವಿಯನ್ನು ಅಲಂಕರಿಸಲಾಗಿದೆ. ದೇವಾಲಯದ ಆವರಣವನ್ನು 5, 10,20,50,100,200,500 ರೂಪಾಯಿ ನೋಟುಗಳ ಕಟ್ಟುಗಳೊಂದಿಗೆ ಅಲಂಕಾರ ಮಾಡಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Sep 27, 2025 11:41 AM
Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More