Video: ಬರೋಬ್ಬರಿ 4 ಕೋಟಿ ರೂ. ಮೌಲ್ಯದ ನೋಟುಗಳಿಂದ ದೇವಿಗೆ ವಿಶೇಷ ಅಲಂಕಾರ
ನವರಾತ್ರಿ ಹಬ್ಬದ ಪ್ರಯುಕ್ತ ಆಂಧ್ರಪ್ರದೇಶದ ಕೋಣಸೀಮಾ ಜಿಲ್ಲೆಯ ಶ್ರೀ ವಾಸವಿ ಕನ್ಯಕಾ ಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ದೇವಿಗೆ 4 ಕೋಟಿ ರೂಪಾಯಿ ಮೌಲ್ಯದ ನೋಟುಗಳಿಂದ ಅಲಂಕಾರ ಮಾಡಲಾಗಿದೆ. 5 ರಿಂದ 500 ರೂ.ವರೆಗಿನ ವಿವಿಧ ಮುಖಬೆಲೆಯ ನೋಟುಗಳಿಂದ ದೇವಾಲಯದ ಆವರಣವನ್ನು ಸಿಂಗರಿಸಿದ್ದು, ಈ ವೈಭವದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನವರಾತ್ರಿ ಹಬ್ಬ ಈಗಾಗಲೇ ಆರಂಭವಾಗಿದ್ದು, ಎಲ್ಲೆಡೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ಈ ಮಧ್ಯೆ ಆಂಧ್ರಪ್ರದೇಶದ ಕೋಣಸೀಮಾ ಜಿಲ್ಲೆಯಲ್ಲಿರುವ ದೇವಾಲಯವೊಂದರ ದೇವಿಯ ಅಲಂಕಾರ ಎಲ್ಲೆಡೆ ಭಾರೀ ಸದ್ದು ಮಾಡುತ್ತಿದೆ. ಹೌದು ಇಲ್ಲಿನ ಶ್ರೀ ವಾಸವಿ ಕನ್ಯಕಾ ಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ಬರೋಬ್ಬರಿ 4 ಕೋಟಿ ರೂ. ಮೌಲ್ಯದ ನೋಟುಗಳಿಂದ ದೇವಿಯನ್ನು ಅಲಂಕರಿಸಲಾಗಿದೆ. ದೇವಾಲಯದ ಆವರಣವನ್ನು 5, 10,20,50,100,200,500 ರೂಪಾಯಿ ನೋಟುಗಳ ಕಟ್ಟುಗಳೊಂದಿಗೆ ಅಲಂಕಾರ ಮಾಡಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್ ಆಗುತ್ತಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Sep 27, 2025 11:41 AM