Navratri 2023: ವಿಜಯದಶಮಿಯ ಪೌರಾಣಿಕ ಹಿನ್ನಲೆಯೇನು? ಪೂಜಾ ಮಹತ್ವವೇನು?

ದಕ್ಷಿಣ ಭಾರತದಲ್ಲಿ ವಿಜಯ ದಶಮಿಯನ್ನು ಚಾಮುಂಡೇಶ್ವರಿ ಅಥವಾ ದುರ್ಗಾ ದೇವಿಯ ಆರಾಧನೆ ಮಾಡುವ ಮೂಲಕ ಆಚರಿಸುತ್ತಾರೆ. ಮನೆ ಮನೆಗಳಲ್ಲಿ ಬಣ್ಣ ಬಣ್ಣದ ಬೊಂಬೆಗಳನ್ನು ಕೂರಿಸುತ್ತಾರೆ. ಇದನ್ನು ಕರ್ನಾಟಕದಲ್ಲಿ "ಗೊಂಬೆ ಹಬ್ಬ" ಎಂದು ಕರೆಯುತ್ತಾರೆ. ಇನ್ನು ಕೇರಳದಲ್ಲಿ, ವಿಜಯದಶಮಿಯ ದಿನ ಸರಸ್ವತಿ ದೇವಿಯನ್ನು ಪೂಜಿಸುತ್ತಾರೆ.

Navratri 2023: ವಿಜಯದಶಮಿಯ ಪೌರಾಣಿಕ ಹಿನ್ನಲೆಯೇನು? ಪೂಜಾ ಮಹತ್ವವೇನು?
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 24, 2023 | 6:14 AM

ಹಿಂದೂಗಳಿಗೆ ನವರಾತ್ರಿ ಹಬ್ಬ ವಿಶೇಷವಾಗಿದ್ದು ಸಂಭ್ರಮ ಸಡಗರಗಳಿಂದ ಆಚರಿಸುತ್ತಾರೆ. ಜೊತೆಗೆ ಇದು ಸುಗ್ಗಿಯ ಕಾಲದ ಆರಂಭವನ್ನು ಸೂಚಿಸುತ್ತದೆ. ಭೂದೇವಿಯ ಆಶೀರ್ವಾದವನ್ನು ಪಡೆಯಲು ಮತ್ತು ಉತ್ತಮ ಬೆಳೆಯನ್ನು ನೀಡು, ಸಂಪತ್ತನ್ನು ಕರುಣಿಸು ಎಂದು ಭಕ್ತಾಧಿಗಳು ಈ ಹಬ್ಬದಲ್ಲಿ ದೇವಿಯನ್ನು ಬೇಡಿಕೊಳ್ಳುತ್ತಾರೆ. ವಿಜಯದಶಮಿಯು ನವರಾತ್ರಿಯ ಕೊನೆಯ ದಿನವಾಗಿದ್ದು, ಈ ದಿನವನ್ನು ಶುಂಭ ಮತ್ತು ನಿಶುಂಭರ ಮೇಲೆ ಆದಿ ಶಕ್ತಿಯು ಸಾಧಿಸಿದ ಜಯದ ನೆನಪಿಗಾಗಿಯೂ ಆಚರಿಸಲಾಗುತ್ತದೆ.

ದಕ್ಷಿಣ ಭಾರತದಲ್ಲಿ ವಿಜಯ ದಶಮಿಯನ್ನು ಚಾಮುಂಡೇಶ್ವರಿ ಅಥವಾ ದುರ್ಗಾ ದೇವಿಯ ಆರಾಧನೆ ಮಾಡುವ ಮೂಲಕ ಆಚರಿಸುತ್ತಾರೆ. ಮನೆ ಮನೆಗಳಲ್ಲಿ ಬಣ್ಣ ಬಣ್ಣದ ಬೊಂಬೆಗಳನ್ನು ಕೂರಿಸುತ್ತಾರೆ. ಇದನ್ನು ತಮಿಳು ನಾಡಿನಲ್ಲಿ “ಗೋಲು” ಎಂದು, ಕರ್ನಾಟಕದಲ್ಲಿ “ಗೊಂಬೆ ಹಬ್ಬ” ಎಂದು ಕರೆಯುತ್ತಾರೆ. ಇನ್ನು ಕೇರಳದಲ್ಲಿ, ವಿಜಯದಶಮಿಯ ದಿನ ಸರಸ್ವತಿ ದೇವಿಯನ್ನು ಪೂಜಿಸುತ್ತಾರೆ. ಈ ದಿನ ಎಳೆಯ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುತ್ತಾರೆ. ಈ ದಿನ ವಿದ್ಯಾಭ್ಯಾಸವನ್ನು ಆರಂಭಿಸಲು ಒಳ್ಳೆಯ ಸಂಕೇತ ಎಂದು ನಂಬಲಾಗಿದೆ.

ಈ ದಿನದ ಹಿನ್ನೆಲೆಯೇನು?

ಈ ದಿನ ಹಲವು ವಿಜಯಗಳಿಗೆ ಹೆಸರುವಾಸಿಯಾಗಿದೆ. ಸ್ಕಂದ ಪುರಾಣದ ಪ್ರಕಾರ ಆದಿಶಕ್ತಿಯು ಮಹಿಷಾಸುರನ ಆರ್ಭಟಕ್ಕೆ ಅಂತ್ಯವಾಡಲು ನಿರ್ಧರಿಸಿ. ಅವನೊಂದಿಗೆ ಹೋರಾಟಕ್ಕೆ ಇಳಿದಳು. ಆಗ ಆ ಮಹಾಯುದ್ಧವು ಒಂಬತ್ತು ದಿನಗಳ ಕಾಲ ನಡೆಯಿತು. ಹತ್ತನೆಯ ದಿನ ಆತ ಹತನಾದನು. ಅದೇ ನೆನಪಿಗೆ ವಿಜಯ ದಶಮಿ ಎಂದು ಆಚರಿಸಲಾಗುತ್ತದೆ. ಇನ್ನು ವಿಜಯದಶಮಿಯನ್ನು ರಾವಣನ ಮೇಲೆ ಶ್ರೀರಾಮಚಂದ್ರನು ಸಾಧಿಸಿದ ವಿಜಯದ ನೆನಪಿಗಾಗಿ ಸಹ ಆಚರಿಸಲಾಗುತ್ತದೆ. ಜೊತೆಗೆ ಮಹಾಭಾರತದಲ್ಲಿ ಪಾಂಡವರ ಅಜ್ಞಾತವಾಸವು ಅಂತ್ಯಗೊಂಡ ದಿನವೂ ಕೂಡ ವಿಜಯದಶಮಿಯೇ.

ಇದನ್ನೂ ಓದಿ: ಶೃಂಗೇರಿಯ ಶಾರದಾ ಪೀಠಕ್ಕೆ ಭಕ್ತರು ಸಲ್ಲಿಸಬೇಕಾದ ಪೂಜೆ ಮತ್ತು ಅದರ ಫಲಾಫಲಗಳೇನು?

ಹಬ್ಬದ ಮಹತ್ವವೇನು?

ದಸರಾ ಹಬ್ಬವು ಅಸತ್ಯದ ವಿರುದ್ಧ ಸತ್ಯದ ವಿಜಯ ಮತ್ತು ಅಧರ್ಮದ ವಿರುದ್ಧ ಧರ್ಮದ ವಿಜಯವನ್ನು ಸೂಚಿಸುತ್ತದೆ. ಕೆಟ್ಟದ್ದರ ವಿರುದ್ಧ ಒಳ್ಳೆಯದು ಸಾಧಿಸಿದ ಗೆಲುವನ್ನು ಆಚರಿಸಲು ವಿಜಯ ದಶಮಿಯನ್ನು ಆಚರಿಸಲಾಗುತ್ತದೆ. ಯಾವುದೇ ಧರ್ಮ, ಮತಗಳ ಭೇದವಿಲ್ಲದೆ ಹಲವರು ಈ ಹಬ್ಬವನ್ನು ಆಚರಿಸುತ್ತಾರೆ. ಇದರೊಂದಿಗೆ ಈ ದಿನ ಚಂಡಿ ಪಾಠ ಅಥವಾ ದುರ್ಗಾ ಸಪ್ತಶತಿಯನ್ನು ಪಠಿಸುವುದು ಮತ್ತು ಹವನ ಮಾಡುವುದು ವಿಶೇಷ ಮಹತ್ವವನ್ನು ಹೊಂದಿದೆ. ದಸರಾ ಸಂದರ್ಭದಲ್ಲಿ ಗ್ರಹದೋಷ ನಿವಾರಣೆಗೆ ಶಮಿ ವೃಕ್ಷದ ಕೆಳಗೆ ದೀಪವನ್ನು ಹಚ್ಚಬೇಕು.

ಮತ್ತಷ್ಟು ಆಧ್ಯಾತ್ಮಕ್ಕೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ:

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ