AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Navratri 2023: ಶೃಂಗೇರಿಯ ಶಾರದಾ ಪೀಠಕ್ಕೆ ಭಕ್ತರು ಸಲ್ಲಿಸಬೇಕಾದ ಪೂಜೆ ಮತ್ತು ಅದರ ಫಲಾಫಲಗಳೇನು?

ನವರಾತ್ರಿಯ ಸಂದರ್ಭದಲ್ಲಿ ಶೃಂಗೇರಿಯಲ್ಲಿ ವಿಶೇಷ ಅಲಂಕಾರ ಪೂಜೆ, ಬೀದಿ ಉತ್ಸವ, ಜಗದ್ಗುರುಗಳ ದರ್ಬಾರ್‌, ದಿಂಡಿ ದೀಪಾರಾಧನೆ, ಅಷ್ಟಾವಧಾನ ಸೇವೆ, ಸಾಂಸ್ಕೃತಿಕ ಕಾರ್ಯಕ್ರಮ ಹೀಗೆ ಅನೇಕಾನೇಕ ಕಾರ್ಯಕ್ರಮಗಳು ನಡೆಯುತ್ತದೆ ಅದಲ್ಲದೆ ಶಾರದಾ ಪೂಜೆ ವಿಶೇಷವಾಗಿ ನಡೆಯುತ್ತದೆ. ದೂರದ ಊರುಗಳಿಂದ ಬಂದ ಪೋಷಕರು ತಮ್ಮ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುತ್ತಾರೆ.

Navratri 2023: ಶೃಂಗೇರಿಯ ಶಾರದಾ ಪೀಠಕ್ಕೆ ಭಕ್ತರು ಸಲ್ಲಿಸಬೇಕಾದ ಪೂಜೆ ಮತ್ತು ಅದರ ಫಲಾಫಲಗಳೇನು?
Sharda Peetha in SringeriImage Credit source: wikipedia
ಪ್ರೀತಿ ಭಟ್​, ಗುಣವಂತೆ
| Edited By: |

Updated on: Oct 21, 2023 | 5:22 PM

Share

ಸನಾತನ ಧರ್ಮವನ್ನು ಒಗ್ಗೂಡಿಸಲು ಮತ್ತು ಅದೈತ ಸಿದ್ಧಾಂತವನ್ನು ಪ್ರತಿಪಾದಿಸಲು ಆದಿ ಶಂಕರಾಚಾರ್ಯರು ಸ್ಥಾಪಿಸಿದ ಮೊದಲ ಮಠವೇ ಶೃಂಗೇರಿಯ ಶಾರದಾ ವಿದ್ಯಾ ಪೀಠ. ಆದಿ ಶಂಕರಾಚಾರ್ಯರು ಸ್ಥಾಪಿಸಿದ ನಾಲ್ಕು ಪೀಠಗಳಲ್ಲಿ ಮೊದಲನೆಯದು ಶೃಂಗೇರಿಯ ಶ್ರೀ ಶಾರದಾ ವಿದ್ಯಾಪೀಠ. ಇಲ್ಲಿ ನವರಾತ್ರಿಯ ಸಂದರ್ಭದಲ್ಲಿ ವಿಶೇಷ ಅಲಂಕಾರ ಪೂಜೆ, ಬೀದಿ ಉತ್ಸವ, ಜಗದ್ಗುರುಗಳ ದರ್ಬಾರ್‌, ದಿಂಡಿ ದೀಪಾರಾಧನೆ, ಅಷ್ಟಾವಧಾನ ಸೇವೆ, ಸಾಂಸ್ಕೃತಿಕ ಕಾರ್ಯಕ್ರಮ ಹೀಗೆ ಅನೇಕಾನೇಕ ಕಾರ್ಯಕ್ರಮಗಳು ನಡೆಯುತ್ತದೆ ಅದಲ್ಲದೆ ಶಾರದಾ ಪೂಜೆ ವಿಶೇಷವಾಗಿ ನಡೆಯುತ್ತದೆ. ದೂರದ ಊರುಗಳಿಂದ ಬಂದ ಪೋಷಕರು ತಮ್ಮ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುತ್ತಾರೆ. ಇದು ನವರಾತ್ರಿಯಲ್ಲಿ ಮೂಲ ನಕ್ಷತ್ರದಿಂದ ಅಥವಾ ಸಪ್ತಮಿ ತಿಥಿಯಿಂದ ಆರಂಭವಾಗಿ ದಶಮಿ ಯವೆರೆಗೆ ನಡೆಯುತ್ತದೆ.

ಇನ್ನು ದೇವಿಗೆ ಕುಂಕುಮಾರ್ಚನೆ ಮಾಡಿಸುವುದರಿಂದ ಒಳ್ಳೆಯ ಫಲ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಇನ್ನು ಹೂವಿನಾಲಂಕಾರ ಕೂಡ ಇಲ್ಲಿನ ವಿಶೇಷ. ನವರಾತ್ರಿ ಅಂಗವಾಗಿ ಶ್ರೀ ಮಠದ ಯಾಗ ಶಾಲೆಯಲ್ಲಿ ಹೋಮಾದಿಗಳು, ವಿವಿಧ ಪಾರಾಯಣ ನಡೆಯುತ್ತದೆ. ಸುಹಾಸಿನಿ ಪೂಜೆ ಸಹಿತ ಅನೇಕ ಧಾರ್ಮಿಕ ವಿಧಿ ವಿಧಾನಗಳು ಪ್ರತಿ ದಿನವೂ ನಡೆಯುತ್ತದೆ. ಮನೆಯಲ್ಲಿ ಯಾವುದೇ ದುಃಖ ಅಥವಾ ಶುಭ ಕಾರ್ಯಗಳು ನಡೆಯುವಲ್ಲಿ ಅಡಚಣೆ ಬರುತ್ತಿದ್ದರೆ ಮತ್ತು ರೋಗ ರುಜುನೇ ಗಳಿಂದ ಬಳಲುತ್ತಿದ್ದರೆ ಇಲ್ಲಿನ ದೇವಿ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ನೀಡುತ್ತಾಳೆ. ಕೆಲವು ಸೇವೆಗಳಿಗೆ ಮುಂಗಡ ಬುಕಿಂಗ್ ಗಳಿದ್ದು ನೀವು ಆನ್ ಲೈನ್ ಗಳಲ್ಲಿ ಈ ಸೇವೆಗಳನ್ನು ಚೆಕ್ ಮಾಡಬಹುದು.

ಇದನ್ನೂ ಓದಿ: ಅಕ್ಷರಾಭ್ಯಾಸದ ಆರಂಭ ಹೇಗಿರಬೇಕು? ಈ ಸಮಯದಲ್ಲಿ ಯಾಕೆ ಶಾರದೆಯನ್ನು ಪೂಜಿಸಬೇಕು? ಇಲ್ಲಿದೆ ಮಾಹಿತಿ

ನವರಾತ್ರಿಯ ಸಂದರ್ಭದಲ್ಲಿ ಶ್ರೀ ಶಾರದೆಯ ಅಲಂಕಾರ ನಯನ ಮನೋಹರವಾಗಿರುತ್ತದೆ. ಜೊತೆಗೆ ನವರಾತ್ರಿ ಸಂದರ್ಭ ಉಭಯ ಜಗದ್ಗುರುಗಳು ಪ್ರಾತಃ ಕಾಲದ ಆಹ್ನಿಕ ಅನುಷ್ಠಾನ ಮಾಡಿ ಗುರು ಪಾದುಕೆಗಳಿಗೂ ಹಾಗೂ ಶ್ರೀ ಚಕ್ರಕ್ಕೆ ವಿಶೇಷ ಪೂಜೆ ಸಲ್ಲಿಸುತ್ತಾರೆ. ಹಾಗಾಗಿ ನವರಾತ್ರಿಯ ಕೊನೆಯ ಮೂರು ದಿನಗಳು ನಿಮಗೆ ಯಾವ ಸೇವೆ ಮಾಡಲು ಸಾಧ್ಯವೋ ಆ ಸೇವೆ ಮಾಡಿ ಇದರಿಂದ ಮನೆಯ ಕಷ್ಟ, ದುಃಖ ಎಲ್ಲವೂ ಪರಿಹಾರವಾಗಿ ಸುಖ, ಶಾಂತಿ, ನೆಮ್ಮದಿ ನೆಲೆಸುತ್ತದೆ. ನವರಾತ್ರಿಯ ಸಂದರ್ಭದಲ್ಲಿ ಹೋಗಲು ಸಾಧ್ಯವಾಗದಿದ್ದಲ್ಲಿ ನಿಮ್ಮ ಮನೋ ಕಾಮನೆಗಳನ್ನು ನೆನೆದು, ನಿಮ್ಮ ಕೈಲಾಗುವಷ್ಟು ಹಣ ತೆಗೆದಿಟ್ಟು, ಆದಾಗ ಹೋಗಿ ಆ ದುಡ್ಡನ್ನು ದೇವರಿಗೆ ಅರ್ಪಿಸಿ ಬನ್ನಿ.

ಮತ್ತಷ್ಟು ಆಧ್ಯಾತ್ಮಕ್ಕೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ:

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!