AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Navratri 2025: ನವರಾತ್ರಿಯ ಸಮಯದಲ್ಲಿ ಅಪ್ಪಿತಪ್ಪಿಯೂ ಈ 4 ಕೆಲಸ ಮಾಡಬೇಡಿ

ನವರಾತ್ರಿ ಹಬ್ಬ ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದಾಗಿದ್ದು, ಅತ್ಯಂತ ನಿಷ್ಠೆ- ಭಕ್ತಿಯಿಂದ ನವ ದುರ್ಗೆಯರನ್ನು ಪೂಜಿಸಲಾಗುತ್ತದೆ. ಈ ಸಮಯದಲ್ಲಿ ಭಕ್ತಿಯಿಂದ ದುರ್ಗೆಯನ್ನು ಪೂಜಿಸುವುದರ ಜೊತೆಗೆ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಕೂಡ ಅಗತ್ಯ. ನವರಾತ್ರಿಯ ಸಮಯದಲ್ಲಿ ನೀವು ತಿಳಿದೋ ತಿಳಿಯದೆಯೋ ಮಾಡುವ ತಪ್ಪುಗಳು ನಿಮ್ಮ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರಬಹುದು. ಆದ್ದರಿಂದ ಅಂತಹ ತಪ್ಪುಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Navratri 2025: ನವರಾತ್ರಿಯ ಸಮಯದಲ್ಲಿ ಅಪ್ಪಿತಪ್ಪಿಯೂ ಈ 4 ಕೆಲಸ ಮಾಡಬೇಡಿ
ನವರಾತ್ರಿ
ಅಕ್ಷತಾ ವರ್ಕಾಡಿ
|

Updated on:Sep 26, 2025 | 2:12 PM

Share

ನವರಾತ್ರಿ ಆರಂಭವಾಗಿದೆ. ಇಂದು ನವರಾತ್ರಿಯ ಐದನೇ ದಿನವಾಗಿದ್ದು, ಸ್ಕಂದಮಾತೆಯನ್ನು ಪೂಜಿಸಲಾಗುತ್ತದೆ. ಈ ಬಾರಿ ನವರಾತ್ರಿಯನ್ನು 9 ದಿನಗಳ ಬದಲು 10 ದಿನಗಳ ಕಾಲ ಆಚರಿಸಲಾಗುತ್ತದೆ. ನವರಾತ್ರಿಯ ಸಮಯದಲ್ಲಿ ಭಕ್ತಿಯಿಂದ ನವದುರ್ಗೆಯನ್ನು ಪೂಜಿಸುವುದರ ಜೊತೆಗೆ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಕೂಡ ಅಗತ್ಯ. ಆದ್ದರಿಂದ, ಈ ನವರಾತ್ರಿಯ ಸಮಯದಲ್ಲಿ ಈ 5 ತಪ್ಪುಗಳನ್ನು ಮಾಡುವುದನ್ನು ತಪ್ಪಿಸಿ.

ಈ ವಸ್ತುಗಳನ್ನು ಮುಟ್ಟಲೇಬೇಡಿ:

ನವರಾತ್ರಿಯ ಸಮಯದಲ್ಲಿ ನೀವು ಎಲ್ಲಿಯಾದರೂ ಕೆಂಪು ಬಟ್ಟೆ, ನಿಂಬೆಹಣ್ಣು, ಸೂಜಿ ಅಥವಾ ತೆಂಗಿನಕಾಯಿಯನ್ನು ನೋಡಿದರೆ, ಅವುಗಳನ್ನು ತಪ್ಪಾಗಿಯೂ ಕೂಡ ಮುಟ್ಟಬೇಡಿ. ನವರಾತ್ರಿಯ ಸಮಯದಲ್ಲಿ ತಾಂತ್ರಿಕ ಆಚರಣೆಗಳು ಬಹಳ ಸಕ್ರಿಯವಾಗಿರುತ್ತವೆ. ಅವುಗಳನ್ನು ಮುಟ್ಟುವುದರಿಂದ ನಿಮಗೆ ಹಾನಿಯಾಗಬಹುದು. ಆದ್ದರಿಂದ ಎಚ್ಚರದಿಂದಿರಿ.

ಮಹಿಳೆಯರನ್ನು ಅವಮಾನಿಸಬೇಡಿ:

ನವರಾತ್ರಿಯ ಸಮಯದಲ್ಲಿ, ದೇವಿಯ ಒಂಬತ್ತು ಅವತಾರಗಳನ್ನು ಪೂಜಿಸಲಾಗುತ್ತದೆ. ಆದ್ದರಿಂದ ಈ ಸಮಯದಲ್ಲಿ ಮಹಿಳೆಯರನ್ನು ಅವಮಾನಿಸಿದರೆ ನೀವು ದೇವಿಯ ಕೋಪಕ್ಕೆ ಗುರಿಯಾಗುತ್ತೀರಿ. ವಿಶೇಷವಾಗಿ ದೇವಿಯನ್ನು ಪೂಜಿಸುವವರು ಕೋಪವನ್ನು ತಪ್ಪಿಸಬೇಕು.

ಅಪರಿಚಿತರಿಂದ ಆಹಾರ ಸ್ವೀಕರಿಸಬೇಡಿ:

ನವರಾತ್ರಿಯ ಸಮಯದಲ್ಲಿ ಅಪರಿಚಿತರಿಂದ ಪ್ರಸಾದ ಅಥವಾ ಸಿಹಿತಿಂಡಿಗಳನ್ನು ಸ್ವೀಕರಿಸಬೇಡಿ. ನೀವು ಅಪರಿಚಿತರಿಂದ ಏನನ್ನಾದರೂ ಸ್ವೀಕರಿಸಿದರೆ, ಅದನ್ನು ಪರೀಕ್ಷಿಸಿದ ನಂತರವೇ ತಿನ್ನಿರಿ. ಕೆಲವೊಮ್ಮೆ ನೀವು ನಕಾರಾತ್ಮಕ ಶಕ್ತಿಗಳಿಗೆ ಪ್ರಭಾವಿತರಾಗುವ ಸಾಧ್ಯತೆ ಹೆಚ್ಚಿರುತ್ತದೆ.

ಇದನ್ನೂ ಓದಿ: ಪಾದಗಳನ್ನು ಬಾಗಿಲಿನ ಕಡೆಗೆ ಇಟ್ಟುಕೊಂಡು ಮಲಗಬಾರದು ಎಂದು ಹೇಳುವುದೇಕೆ?

ನಿಮ್ಮ ವೈಯಕ್ತಿಕ ವಸ್ತುಗಳನ್ನು ಯಾರಿಗೂ ನೀಡಬೇಡಿ:

ನವರಾತ್ರಿಯ ಸಮಯದಲ್ಲಿ ನಿಮ್ಮ ಬಟ್ಟೆ ಅಥವಾ ಯಾವುದೇ ವೈಯಕ್ತಿಕ ವಸ್ತುಗಳನ್ನು ಯಾರಿಗೂ ಬಳಸಲು ನೀಡಬೇಡಿ. ಅವುಗಳನ್ನು ನಕಾರಾತ್ಮಕ ಕರ್ಮಗಳಿಗೆ ಬಳಸುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಜಾಗರೂಕರಾಗಿರಿ.

ಕಪ್ಪು ಬಟ್ಟೆಗಳನ್ನು ಧರಿಸಬೇಡಿ:

ನವರಾತ್ರಿಯ ಸಮಯದಲ್ಲಿ ತಪ್ಪಾಗಿ ಕೂಡ ಕಪ್ಪು ಬಟ್ಟೆಗಳನ್ನು ಧರಿಸಬೇಡಿ. ಕಪ್ಪು ಬಣ್ಣವು ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ನವರಾತ್ರಿಯ ಸಮಯದಲ್ಲಿ ಈ ಬಣ್ಣವನ್ನು ಧರಿಸುವುದರಿಂದ ದುರ್ಗಾ ದೇವಿಯ ದೈವಿಕ ಶಕ್ತಿಗೆ ಅಡ್ಡಿಯಾಗುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:12 pm, Fri, 26 September 25

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ