ಮಹಿಷ ದಸರಾ ಮುಗಿಯುವವರೆಗೆ ಸಂಸದ ಪ್ರತಾಪ್ ಸಿಂಹರನ್ನ ಬಂಧಿಸಿ: ಮಾಜಿ ಮೇಯರ್ ಪುರುಷೋತ್ತಮ

ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ಹಿನ್ನೆಲೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮೇಯರ್ ಪುರುಷೋತ್ತಮ, ಅಕ್ಟೋಬರ್ 13ರಂದು ಮಹಿಷ ದಸರಾ ಆಚರಣೆ ಮಾಡುತ್ತಿದ್ದೇವೆ. ಮಹಿಷ ದಸರಾ ಮುಗಿಯುವವರಗೆ ಸಂಸದ ಪ್ರತಾಪ್ ಸಿಂಹರನ್ನು ಬಂಧಿಸಿ ಎಂದ ಹೇಳಿದ್ದಾರೆ. ಜೊತೆಗೆ ತಮ್ಮ ರಾಜಕೀಯಕ್ಕಾಗಿ ಚಾಮುಂಡಿ ಚಲೋ ಕರೆ ನೀಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಮಹಿಷ ದಸರಾ ಮುಗಿಯುವವರೆಗೆ ಸಂಸದ ಪ್ರತಾಪ್ ಸಿಂಹರನ್ನ ಬಂಧಿಸಿ: ಮಾಜಿ ಮೇಯರ್ ಪುರುಷೋತ್ತಮ
ಸಂಸದ ಪ್ರತಾಪ್ ಸಿಂಹ
Follow us
| Updated By: ಡಾ. ಭಾಸ್ಕರ ಹೆಗಡೆ

Updated on:Oct 07, 2023 | 5:10 PM

ಮೈಸೂರು, ಅಕ್ಟೋಬರ್​​ 07: ಅಕ್ಟೋಬರ್ 13ರಂದು ಮಹಿಷ ದಸರಾ ಆಚರಣೆ ಮಾಡುತ್ತಿದ್ದೇವೆ. ಮಹಿಷಾ ದಸರಾ ಮುಗಿಯುವವರಗೆ ಸಂಸದ ಪ್ರತಾಪ್ ಸಿಂಹ (Pratap Simha) ರನ್ನು ಬಂಧಿಸಿ ಎಂದು ಮಾಜಿ ಮೇಯರ್ ಪುರುಷೋತ್ತಮ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಮಿತಿ ವತಿಯಿಂದ ಅವರನ್ನು ಬಂಧಿಸಬೇಕೆಂದು ಆಗ್ರಹಿಸುತ್ತೇವೆ. ಇವರು ಸಂಘರ್ಷಕ್ಕೂ ಸಿದ್ದ ಎಂಬ ಪದ ಬಳಸಿದ್ದಾರೆ. ಅವರನ್ನು ಯಾರು ಸಂಘರ್ಷಕ್ಕೆ ಕರೆದಿದ್ದಾರೆ ಅವರೊಟ್ಟಿಗೆ ಸಂಘರ್ಷ ಮಾಡಲಿ. ಅವರ ಹೇಳಿಕೆ ನೋಡುತ್ತ ಕುಳಿತಿರುವ ಪೋಲಿಸರು ಮತ್ತು ಜಿಲ್ಲಾಡಳಿತ ಈಗಾಗಲೇ ಅವರನ್ನು ಬಂಧಿಸಬೇಕಿತ್ತು ಎಂದು ಕಿಡಿಕಾರಿದ್ದಾರೆ.

ಸಂಸದ ಪ್ರತಾಪ್ ಸಿಂಹ ತಮ್ಮ ರಾಜಕೀಯಕ್ಕಾಗಿ ಚಾಮುಂಡಿ ಚಲೋ ಕರೆ ನೀಡಿದ್ದಾರೆ. ನಾವು ಚಾಮುಂಡಿ ವಿರೋಧಿಗಳಲ್ಲ. ಪ್ರತಾಪಸಿಂಹ ಅವರಂತರಹ ಸಂಸದರನ್ನು ನಾನು ಕಂಡಿಲ್ಲ. ವೈಯಕ್ತಿಕ ದ್ವೇಷಕ್ಕಿಳಿಯುವುದು ನಮ್ಮ ಮನಸ್ಥಿತಿಯಲ್ಲ. ಹೀಗಾಗಿ ನಾವು ಯಾವ ಸಂಘರ್ಷಕ್ಕೂ ಇಳಿಯದೇ ಕಾರ್ಯಕ್ರಮ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಅ.13 ರಂದು ಮಹಿಷ ದಸರಾ, ಆಹ್ವಾನ ಪತ್ರಿಕೆ ಬಿಡುಗಡೆ, ಚಾಮುಂಡಿಬೆಟ್ಟಕ್ಕೆ ಮಹಿಷ ಬೆಟ್ಟ ಹೆಸರು

ನಾವು ಬೇರೊಬ್ಬರ ಭಾವನೆಗೆ ಧಕ್ಕೆ ತರುವ ಪ್ರಯತ್ನ ಮಾಡುವುದಿಲ್ಲ. ಅವರ ಪಾಡಿಗೆ ಅವರು ಪ್ರತಿಭಟನೆ ಮಾಡಿದರೆ ಮಾಡಿಕೊಳ್ಳಲಿ, ನಾವು ನಮ್ಮ ಪಾಡಿಗೆ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳಿದ್ದಾರೆ.

ಅ.13 ರಂದು ಮಹಿಷ ದಸರಾ ಆಚರಣೆ; ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ

ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡಿ, ಮಹಿಷ ದಸರಾವನ್ನು ಬಿ.ಟಿ.ಲಲಿತಾ ನಾಯಕ್ ಉದ್ಘಾಟನೆ ಮಾಡುತ್ತಾರೆ. ಬೆಳಗ್ಗೆ 8.30ಕ್ಕೆ ಚಾಮುಂಡಿಬೆಟ್ಟದ ಮಹಿಷಾಸುರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಗುವುದು. ಅಂದು ಅಶೋಕಪುರಂ ಉದ್ಯಾನವನದಿಂದ ಬೈಕ್​ ​ರ‍್ಯಾಲಿ ಹೊರಡಲಿದೆ. ಬೆಳಗ್ಗೆ ಮಹಿಷಾಸುರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ವಾಪಸಾಗುತ್ತೇವೆ. ಅಂದು ಬೆಳಗ್ಗೆ 11 ಗಂಟೆಗೆ ಟೌನ್​ಹಾಲ್​ನಲ್ಲಿ ಕಾರ್ಯಕ್ರಮ ನಡೆಯಲಿದೆ.

ಮಹಿಷ ದಸರಾ ಆಚರಣೆಗೆ 50 ವರ್ಷ: ಪೋಸ್ಟರ್ ಬಿಡುಗಡೆ

ಮಹಿಷ ದಸರಾ ಆಚರಣೆಗೆ 50 ವರ್ಷ ಎಂದು ದಿಢೀರನೇ ಇತಿಹಾಸ ಸೃಷ್ಟಿ ಮಾಡಲಾಗಿದೆ. ಸದ್ಯ 50ನೇ ವರ್ಷದ ಮಹಿಷ ದಸರಾ ಆಚರಣೆ ಎಂದು ಮಹಿಷ ದಸರಾ ಆಚರಣೆ ಸಮಿತಿಯಿಂದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಸದ್ಯ ಸಮಾಜಿಕ‌ ಜಾಲಾತಾಣದಲ್ಲಿ ಪೋಸ್ಟರ್ ಹರಿದಾಡುತ್ತಿದೆ. 2015 ರಲ್ಲಿ ಮಹಿಷ ದಸರಾ ವಿವಾದ ಆರಂಭವಾಗಿದ್ದು, ವಿರೋಧಗಳನ್ನು ಬದಿಗೊತ್ತಿ ನಿಗದಿತ ಸ್ಥಳದಲ್ಲೇ ಆಚರಿಸಲು‌ ಸಿದ್ಧತೆ ಮಾಡಲಾಗುತ್ತಿದೆ. ಆಹ್ವಾನ ಪತ್ರಿಕೆಯಲ್ಲಿ ಚಾಮುಂಡಿ ಬೆಟ್ಟದ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಬಗ್ಗೆ ಮಾಹಿತಿ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:05 pm, Sat, 7 October 23

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!