Mysore Dasara 2022: ಮೈಸೂರಿನ ಅರಮನೆಯಲ್ಲಿ ಜನಿಸಿದ ಆನೆ ಮರಿಗೆ ನಾಮಕರಣ: ಶ್ರೀ ದತ್ತಾತ್ರೇಯ ಎಂದು ಹೆಸರಿಟ್ಟ ಪ್ರಮೋದಾದೇವಿ

ಇನ್ನೂ ರಾಂಪುರ ಆನೆ ಶಿಬಿರದಲ್ಲಿ ಲಕ್ಷ್ಮಿ ಅರ್ಜುನ ಆನೆ ಜೊತೆ ಸೇರಿತ್ತು. ತಾಯಿ ಆನೆ ಲಕ್ಷ್ಮಿ ಮತ್ತು ಮರಿ ಆನೆ ಎರಡು ಆರೋಗ್ಯವಾಗಿವೆ.

Mysore Dasara 2022: ಮೈಸೂರಿನ ಅರಮನೆಯಲ್ಲಿ ಜನಿಸಿದ ಆನೆ ಮರಿಗೆ ನಾಮಕರಣ: ಶ್ರೀ ದತ್ತಾತ್ರೇಯ ಎಂದು ಹೆಸರಿಟ್ಟ ಪ್ರಮೋದಾದೇವಿ
ಲಕ್ಷ್ಮೀ ಆನೆ, ಮರಿ ಆನೆಶ್ರೀ ದತ್ತಾತ್ರೇಯ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Sep 15, 2022 | 6:22 PM

ಮೈಸೂರು: ದಸರೆಗೆ ಕಾಡಿನಿಂದ ನಾಡಿಗೆ ಆಗಮಿಸಿದ್ದ ಲಕ್ಷ್ಮಿ ಎಂಬ ಆನೆ ಸೆ.13ರಂದು ಅರಮನೆ ಕೋಡಿ ಸೋಮೇಶ್ವರ ದೇಗುಲದ ಬಳಿ ಗಂಡು ಮರಿಗೆ ಜನ್ಮ ನೀಡಿದ್ದು, ಸದ್ಯ ಆನೆ ಮರಿಗೆ ಶ್ರೀ ದತ್ತಾತ್ರೇಯ ಅಂತಾ ಯದುವಂಶದ ಪ್ರಮೋದಾದೇವಿ ಒಡೆಯರ್​ರಿಂದ ನಾಮಕರಣ ಮಾಡಲಾಗಿದೆ. ವಿಶ್ವವಿಖ್ಯಾತ ಮೈಸೂರು ದಸರಾಗೆ ಆಗಮಿಸಿರುವ ಲಕ್ಷ್ಮೀ ಆನೆ, ಅರಮನೆಯಲ್ಲಿ ಗಂಡು ಮರಿಗೆ ಜನ್ಮ ನೀಡಿತ್ತು. ಇನ್ನೂ ವಿಶ್ವ ವಿಖ್ಯಾತ ದಸರೆಗೆ ಕ್ಷಣಗಣನೆ ಆರಂಭವಾಗಿದ್ದು, ವಿವಿಧೆಡೆ ಸಿದ್ಧತೆ ನಡೆಯುತ್ತಿದೆ. ಜಂಬೂ ಸವಾರಿಗೆ ಆಗಮಿಸಿರುವ ಆನೆಗಳ ಭರ್ಜರಿ ತಾಲೀಮು ನಡೆಯುತ್ತಿದೆ. ಸುರಕ್ಷತಾ ದೃಷ್ಟಿಯಿಂದ ಅರಮನೆಯಲ್ಲೇ ಲಕ್ಷ್ಮಿ ಆನೆ ಹಾಗೂ ಮರಿಯನ್ನು ಪ್ರತ್ಯೇಕವಾದ ವ್ಯವಸ್ಥೆ ಮಾಡಿ ಇರಿಸಲಾಗಿದೆ. ಮಾಧ್ಯಮದವರು ಸೇರಿ ಯಾರು ಆನೆ ಹಾಗೂ ಮರಿ ಹತ್ತಿರ ಹೋಗದಂತೆ ಅಧಿಕಾರಿಗಳು ಮನವಿ ಮಾಡಿದ್ದು, ಮುಂದಿನ ದಿನದಲ್ಲಿ ಫೋಟೋ, ವಿಡಿಯೋ ನಾವೇ ಕೊಡುವುದಾಗಿ ಡಿಸಿಎಫ್ ಡಾ. ಕರಿಕಾಳನ್ ತಿಳಿಸಿದ್ದಾರೆ.

ಇನ್ನೂ ರಾಂಪುರ ಆನೆ ಶಿಬಿರದಲ್ಲಿ ಲಕ್ಷ್ಮಿ ಅರ್ಜುನ ಆನೆ ಜೊತೆ ಸೇರಿತ್ತು. ತಾಯಿ ಆನೆ ಲಕ್ಷ್ಮಿ ಮತ್ತು ಮರಿ ಆನೆ ಎರಡು ಆರೋಗ್ಯವಾಗಿವೆ. 15 ವರ್ಷದ ಹಿಂದೆ ದಸರೆಗೆ ಬಂದಿದ್ದ ಸರಳ ಸಹಾ ಅರಮನೆಯಲ್ಲೇ ಮರಿಗೆ ಜನ್ಮ ನೀಡಿತ್ತು. ಸರಳ ಜನ್ಮ ನೀಡಿದ ಮರಿಗೆ ಚಾಮುಂಡಿ ಎಂದು ಹೆಸರಿಡಲಾಗಿತ್ತು. ಈ ಸಂಬಂಧ ಡಿಸಿಎಫ್ ಕರಿಕಾಳನ್ ಮಾತನಾಡಿದ್ದು, ಲಕ್ಷ್ಮೀ ಆನೆ ಗರ್ಭಿಣಿ ಎಂದು ಗೊತ್ತಿರಲಿಲ್ಲ. ದಸರಾಗೂ ಮುನ್ನಾ ಆನೆಗಳನ್ನ ತಪಾಸಣೆ ಮಾಡಲಾಗಿದೆ. ತಪಾಸಣೆ ವೇಳೆ ಲಕ್ಷ್ಮೀ ಆನೆ ಗರ್ಭಿಣಿ ಎಂದು ಗೊತ್ತಾಗಿಲ್ಲ. ನಿನ್ನೆ ರಾತ್ರಿ ಆನೆಯ ಚಲನವಲನ ಬದಲಾದ ಕಾರಣ ಆನೆಯ ಮೂತ್ರ ಮತ್ತು ರಕ್ತವನ್ನ ಪರೀಕ್ಷೆಗೆ ಕಳುಹಿಸಲಾಗಿದೆ. ಪರೀಕ್ಷೆಯ ವರದಿ ಬರುವ ಮುನ್ನವೇ ಲಕ್ಷ್ಮೀ ಗಂಡು ಆನೆಗೆ ಜನ್ಮ ನೀಡಿದೆ. ರಾತ್ರಿ 8.15ಕ್ಕೆ ಲಕ್ಷ್ಮೀ ಆನೆ ಗಂಡು ಮರಿ ಆನೆಗೆ ಜನ್ಮ‌ನೀಡಿದೆ. ಇಬ್ಬರು ವೈದ್ಯರು ಲಕ್ಷ್ಮೀ ಆನೆಯನ್ನು ನೋಡಿಕೊಳ್ಳುತ್ತಿದ್ದಾರೆ ಎಂದರು.

ಲಕ್ಷ್ಮೀ ಆನೆ ಕ್ಯಾಂಪ್​ನಲ್ಲಿ ಗರ್ಭಿಣಿ ಎಂದು ತಿಳಿದಿರಲಿಲ್ಲ. ಅರಮನೆಗೆ ಬಂದ ಮೇಲೆ ಒಳ್ಳೆಯ ಆಹಾರ ನೀಡಿದ್ದೇವೆ. ಪ್ರತಿನಿತ್ಯ ವಾಕಿಂಗ್ ಮಾಡಿರುವುದು ಆನೆಗೆ ಸಹಾಯವಾಗಿದೆ. ಕೇವಲ 10 ನಿಮಿಷದಲ್ಲಿ ಲಕ್ಷ್ಮೀ ಮರಿ ಆನೆಗೆ ಜನ್ಮ ನೀಡಿದೆ. ಗರ್ಭಿಣಿ ಎಂದು ಗೊತ್ತಿದ್ದರೆ ಖಂಡಿತವಾಗಿಯೂ ಆನೆಯನ್ನ ಕರೆತರುತ್ತಿರಲಿಲ್ಲ. ಕಾಡಿಗೆ ಹೋದಾಗ ಆನೆಗೆ ಕ್ರಾಸ್ ಆಗಿರಬಹುದು. ಎಲ್ಲಾ ಆನೆಗಳ ರಿಪೋರ್ಟ್ ಪಡೆದ ನಂತರ ದಸರಾಗೆ ಕರೆತರಲಾಗಿದೆ. ಪ್ರಮೋದಾದೇವಿ ಒಡೆಯರ್ ಈಗಾಗಲೇ ಆನೆಯ ಆರೋಗ್ಯ ವಿಚಾರಿಸಿದ್ದಾರೆ. ಆನೆಗೆ ಉತ್ತಮ ಹೆಸರು ಸೂಚಿಸುವಂತೆ ಪ್ರಮೋದಾದೇವಿ ಒಡೆಯರ್ ಅವರಿಗೆ ಕೇಳಿಕೊಳ್ಳಲಾಗಿದೆ. ತಾಯಿ ಮತ್ತು ಮಗ ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಅರಮನೆಯಲ್ಲಿ ಡಿಸಿಎಫ್ ಕರಿಕಾಳನ್ ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 6:21 pm, Thu, 15 September 22

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು